ಕುಷ್ಟಗಿ-ಯಲಬುರ್ಗಾ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು : ಬೃಹತ್ ಯೋಜನೆ ಕಾಮಗಾರಿ ಜೂನ್ ನಲ್ಲಿ ಪ್ರಾರಂಭ- ಬಸವರಾಜ ರಾಯರಡ್ಡಿ

ಕುಷ್ಟಗಿ-ಯಲಬುರ್ಗಾ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು : ಬೃಹತ್ ಯೋಜನೆ ಕಾಮಗಾರಿ ಜೂನ್ ನಲ್ಲಿ ಪ್ರಾರಂಭ- ಬಸವರಾಜ ರಾಯರಡ್ಡಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕುಷ್ಟಗಿ-ಯಲಬುರ್ಗಾ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು : ಬೃಹತ್ ಯೋಜನೆ ಕಾಮಗಾರಿ ಜೂನ್ ನಲ್ಲಿ ಪ್ರಾರಂಭ- ಬಸವರಾಜ ರಾಯರಡ್ಡಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕುಷ್ಟಗಿ-ಯಲಬುರ್ಗಾ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು : ಬೃಹತ್ ಯೋಜನೆ ಕಾಮಗಾರಿ ಜೂನ್ ನಲ್ಲಿ ಪ್ರಾರಂಭ- ಬಸವರಾಜ ರಾಯರಡ್ಡಿ
ಲಿಂಕ್ : ಕುಷ್ಟಗಿ-ಯಲಬುರ್ಗಾ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು : ಬೃಹತ್ ಯೋಜನೆ ಕಾಮಗಾರಿ ಜೂನ್ ನಲ್ಲಿ ಪ್ರಾರಂಭ- ಬಸವರಾಜ ರಾಯರಡ್ಡಿ

ಓದಿ


ಕುಷ್ಟಗಿ-ಯಲಬುರ್ಗಾ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು : ಬೃಹತ್ ಯೋಜನೆ ಕಾಮಗಾರಿ ಜೂನ್ ನಲ್ಲಿ ಪ್ರಾರಂಭ- ಬಸವರಾಜ ರಾಯರಡ್ಡಿ


ಕೊಪ್ಪಳ ಏ. 27 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ಶುದ್ಧ ಕುಡಿಯುವ ನೀರು ಪೂರೈಸುವ ಸುಮಾರು 670 ಕೋಟಿ ರೂ. ಗಳ ಬೃಹತ್ ಯೋಜನೆಯ ಕಾಮಗಾರಿ ಜೂನ್ ತಿಂಗಳಿನಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.

     ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕುಗಳು ತೀವ್ರ ನೀರಿನ ಸಮಸ್ಯೆ ಎದುರಿಸುವ ಪ್ರದೇಶವಾಗಿದ್ದು, ಇಲ್ಲಿನ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಶಾಶ್ವತ ಯೋಜನೆ ರೂಪಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ.  ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ಶುದ್ಧ ಕುಡಿಯುವ ನೀರು ಪೂರೈಸುವ ಸುಮಾರು 670 ಕೋಟಿ ರೂ. ಗಳ ಬೃಹತ್ ಯೋಜನೆಗೆ ಈಗಾಗಲೆ ಟೆಂಡರ್ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, 15 ದಿನಗಳೊಳಗೆ ಅರ್ಹ ಕಂಪನಿಗೆ ಕಾಮಗಾರಿಯ ಕಾರ್ಯಾದೇಶ ನೀಡಲಾಗುವುದು. ಸುಮಾರು 8 ಲಕ್ಷ ಜನರಿಗೆ ನಿತ್ಯ 85 ಲೀ. ನೀರು ಒದಗಿಸುವ ರೀತಿಯಲ್ಲಿ ಯೋಜನೆ ರೂಪಿಸಲಾಗಿದೆ. ಜೂನ್ ಮೊದಲ ವಾರದಲ್ಲಿ ಮುಖ್ಯಮಂತ್ರಿಗಳನ್ನು ಆಹ್ವಾನಿಸಿ, ಕಾಮಗಾರಿಗೆ ಚಾಲನೆ ನೀಡಲಾಗುವುದು.  ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಲಾಗುವುದು.  ಕಾಮಗಾರಿ ಪೂರ್ಣಗೊಂಡ ನಂತರ 05 ವರ್ಷಗಳ ಕಾಲ ಕಂಪನಿಯೇ ನಿರ್ವಹಣೆ ಮಾಡಲಿದೆ.  ತ್ವರಿತವಾಗಿ ಕಾಮಗಾರಿ ಪೂರ್ಣಗೊಂಡಲ್ಲಿ, ಎರಡೂ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ನೀಗಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.
ಪಟ್ಟಣಗಳಿಗೂ ಉದ್ಯೋಗಖಾತ್ರಿ ವಿಸ್ತರಣೆಗೆ ಪ್ರಸ್ತಾವನೆ :
****************** ಪಟ್ಟಣ ಪಂಚಾಯತಿ ಹಾಗೂ ಪುರಸಭೆಗಳಾಗಿ ಇತ್ತೀಚೆಗಷ್ಟೇ ಮೇಲ್ದರ್ಜೆಗೇರಿರುವ ಪಟ್ಟಣಗಳ ಕೂಲಿ ಕಾರ್ಮಿಕರಿಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ಕೊಡಲು ಅವಕಾಶ ಕಲ್ಪಿಸುವಂತೆ ಉದ್ಯೋಗಖಾತ್ರಿ ಯೋಜನೆ ನಿಯಮಗಳಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಚಿಂತನೆ ನಡೆಸಿದ್ದು, ಈ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಶೀಘ್ರವೇ ಚರ್ಚಿಸಲಾಗುವುದು.  ಮೇಲ್ದರ್ಜೆಗೇರಿರುವ ಪಟ್ಟಣಗಳು ಇನ್ನೂ ಗ್ರಾಮೀಣ ಪ್ರದೇಶದ ಸ್ವರೂಪವೇ ಹೊಂದಿದ್ದು, ಇದುವರೆಗೂ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕೈಗೊಳ್ಳುತ್ತಿದ್ದು, ಈ ಭಾಗದ ಬಡ ಕೂಲಿ ಕಾರ್ಮಿಕರು ಇದೀಗ ಉದ್ಯೋಗಕ್ಕಾಗಿ ತೊಂದರೆ ಎದುರಿಸುತ್ತಿದ್ದಾರೆ.  ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪಟ್ಟಣ ಪ್ರದೇಶದ ಕೂಲಿಕಾರರಿಗೆ ಉದ್ಯೋಗ ಒದಗಿಸಲು ನಿಯಮಗಳಲ್ಲಿ ಅವಕಾಶ ಇಲ್ಲ.  ಕಳೆದ 20 ವರ್ಷಗಳ ಅಂಕಿ-ಅಂಶ ನೋಡಿದಾಗ, ಜಿಲ್ಲೆಯಲ್ಲಿ ಸುಮಾರು 12 ವರ್ಷ ಬರ ಪರಿಸ್ಥಿತಿ ತಲೆದೋರಿದೆ.  ಇಲ್ಲಿನ ರೈತರು, ಕೂಲಿಕಾರರು ಸಂಕಷ್ಟದಲ್ಲಿದ್ದಾರೆ.  ಮೇಲಾಗಿ, ಈ ಭಾಗ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಈ ಎಲ್ಲ ಅಂಶಗಳನ್ನು ಪ್ರಸ್ತಾವನೆಯಲ್ಲಿ ವಿವರಿಸಿ, ಪಟ್ಟಣಗಳ ಕೂಲಿ ಕಾರ್ಮಿಕರಿಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕನಿಷ್ಟ ವರ್ಷಕ್ಕೆ 100 ದಿನಗಳ ಕೂಲಿ ಕೆಲಸ ಕೊಡಲು ಅವಕಾಶ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು.  ಕೊಪ್ಪಳ ಜಿಲ್ಲಾಧಿಕಾರಿಗಳು ಕೂಡ, ಜಿಲ್ಲೆಯ ಅಂಕಿ-ಅಂಶಗಳನ್ನು ವಿವರಿಸಿ, ಸರ್ಕಾರಕ್ಕೆ ತಮ್ಮ ಕೋರಿಕೆಯನ್ನು ಸಲ್ಲಿಸುವಂತೆ ತಿಳಿಸಿದರು.
     ಸಭೆಯಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್, ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, , ಜಿ.ಪಂ. ಸದಸ್ಯರುಗಳಾದ ಕೆ. ಮಹೇಶ್, ಭೀಮಪ್ಪ ಅಗಸಿಮುಂದಿನ, ನೇಮಣ್ಣ ಮೇಲುಸಕ್ರಿ, ವಿಜಯ ನಾಯಕ್, ಕುಷ್ಟಗಿ ಪುರಸಭೆ ಅಧ್ಯಕ್ಷ ಮೊಯ್ನುದ್ದೀನ್ ಮುಲ್ಲ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಟ್ಟೂರ, ತಹಸಿಲ್ದಾರ್ ಗಂಗಪ್ಪ, ಸಹಾಯಕ ಕೃಷಿ ನಿರ್ದೇಶಕ ವಿ. ಕಮತರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು ಕುಷ್ಟಗಿ-ಯಲಬುರ್ಗಾ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು : ಬೃಹತ್ ಯೋಜನೆ ಕಾಮಗಾರಿ ಜೂನ್ ನಲ್ಲಿ ಪ್ರಾರಂಭ- ಬಸವರಾಜ ರಾಯರಡ್ಡಿ

ಎಲ್ಲಾ ಲೇಖನಗಳು ಆಗಿದೆ ಕುಷ್ಟಗಿ-ಯಲಬುರ್ಗಾ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು : ಬೃಹತ್ ಯೋಜನೆ ಕಾಮಗಾರಿ ಜೂನ್ ನಲ್ಲಿ ಪ್ರಾರಂಭ- ಬಸವರಾಜ ರಾಯರಡ್ಡಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕುಷ್ಟಗಿ-ಯಲಬುರ್ಗಾ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು : ಬೃಹತ್ ಯೋಜನೆ ಕಾಮಗಾರಿ ಜೂನ್ ನಲ್ಲಿ ಪ್ರಾರಂಭ- ಬಸವರಾಜ ರಾಯರಡ್ಡಿ ಲಿಂಕ್ ವಿಳಾಸ https://dekalungi.blogspot.com/2017/04/357.html

Subscribe to receive free email updates:

0 Response to "ಕುಷ್ಟಗಿ-ಯಲಬುರ್ಗಾ ತಾಲೂಕುಗಳ 357 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು : ಬೃಹತ್ ಯೋಜನೆ ಕಾಮಗಾರಿ ಜೂನ್ ನಲ್ಲಿ ಪ್ರಾರಂಭ- ಬಸವರಾಜ ರಾಯರಡ್ಡಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ