ಶೀರ್ಷಿಕೆ : ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ
ಲಿಂಕ್ : ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ
ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ
ಕೊಪ್ಪಳ, ಏ. 28 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರವು ಕರ್ನಾಟಕ ಪೊಲೀಸ್ ಕಾಯ್ದೆ 2012 ರ ತಿದ್ದುಪಡಿ ಪ್ರಕಾರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮೇಲಿನ ದೂರುಗಳ ವಿಚಾರಣೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ದೂರು ಪ್ರಾಧಿಕಾರಗಳನ್ನು ರಚಿಸಿದ್ದು, ಜಿಲ್ಲೆಯ ಪೊಲೀಸ್ ಅಧಿಕಾರಿ ಅಥವಾ ಸಿಬ್ಬಂದಿಗಳ ವಿರುದ್ಧ ದೂರುಗಳಿದ್ದಲ್ಲಿ, ಸಾರ್ವಜನಿಕರು ಪ್ರಾಧಿಕಾರಕ್ಕೆ ದೂರು ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ತ್ಯಾಗರಾಜ್ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರವು ಡಿಎಸ್‍ಪಿ ಮತ್ತು ಅದಕ್ಕಿಂತ ಕೆಳದರ್ಜೆ ಅಧಿಕಾರಿ/ಸಿಬ್ಬಂದಿಗಳ ವಿರುದ್ಧದ ಆರೋಪ ಅಂದರೆ ಯಾವುದೇ ಸಾರ್ವಜನಿಕ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವಂತಹ, ಪೊಲೀಸ್ ವಶದಲ್ಲಿದ್ದಾಗ ಮರಣ, ಐಪಿಸಿ ಸೆಕ್ಷನ್-320 ರಲ್ಲಿ ತಿಳಿಸಲಾದಂತಹ ಗಂಭೀರ ಗಾಯ, ಮಾನಭಂಗ, ಅಥವಾ ಮಾನಭಂಗಕ್ಕೆ ಯತ್ನ ಅಥವಾ ಕಾನೂನು ಪ್ರಕಾರವಲ್ಲದ ಬಂಧನ ಇಲ್ಲವೇ ವಶದಲ್ಲಿರಿಸಿಕೊಳ್ಳುವುದು, ಇತರ ಗಂಭೀರ ದುರ್ನಡತೆ ದೂರುಗಳ ವಿಚಾರಣೆ ಮಾಡಲಿದೆ.
ಪೊಲೀಸ್ ಉಪಾಧೀಕ್ಷರು ಮತ್ತು ಅದಕ್ಕಿಂತ ಕೆಳ ಹಂತದ ಅಧಿಕಾರಿ/ಸಿಬ್ಬಂಧಿಗಳ ವಿರುದ್ದದ ದೂರುಗಳನ್ನು, ಸಾರ್ವಜನಿಕರು ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರಿಗೆ ಸಲ್ಲಿಸಬಹುದು.
ಡಿಎಸ್‍ಪಿ ಹುದ್ದೆಯ ಅಧಿಕಾರಿಗಿಂತ ಮೇಲಿನ ದರ್ಜೆಯ ಅಧಿಕಾರಿಗಳ ವಿರುದ್ದದ ದೂರುಗಳನ್ನು ಅಧ್ಯಕ್ಷರು, ರಾಜ್ಯ ಪೊಲೀಸ್ ದೂರು ಪ್ರಾಧಿಕಾರ, ಕೊಠಡಿ ಸಂ.36, ನೆಲಮಹಡಿ, ವಿಕಾಸ ಸೌಧ, ಬೆಂಗಳೂರು-01, ದೂರವಾಣಿ- 080-22386063 ಅಥವಾ 22034220 ಇಲ್ಲಿಗೆ ಸಲ್ಲಿಸಬಹುದಾಗಿದೆ.
ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದಿಂದ ಸಾರ್ವಜನಿಕರಿಗಾಗಿ ವೆಬ್‍ಸೈಟ್ ಪ್ರಾರಂಭಿಸಿದೆ http://ift.tt/2oPdQFU ಸಾರ್ವಜಿನಿಕರು ವೀಕ್ಷಿಸಬಹುದು. ಹಾಗೂ ಕೊಪ್ಪಳ ಪೊಲೀಸ್ ದೂರು ಪ್ರಾಧಿಕಾರದ ಇ-ಮೇಲ್ dpcakpl@karnataka.gov.in ಮೂಲಕ ಸಂಪರ್ಕಿಸಿ ದೂರು ಸಲ್ಲಿಸಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ
ಎಲ್ಲಾ ಲೇಖನಗಳು ಆಗಿದೆ ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ ಲಿಂಕ್ ವಿಳಾಸ https://dekalungi.blogspot.com/2017/04/blog-post_42.html
0 Response to "ಪೊಲೀಸ್ ವಿರುದ್ಧ ದೂರಿದ್ದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಸಿ"
ಕಾಮೆಂಟ್ ಪೋಸ್ಟ್ ಮಾಡಿ