ಶೀರ್ಷಿಕೆ : NEWS AND PHOTOS 29-4-2017
ಲಿಂಕ್ : NEWS AND PHOTOS 29-4-2017
NEWS AND PHOTOS 29-4-2017
ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ
ಕಲಬುರಗಿ,ಏ.29.(ಕ.ವಾ.)-ಜಗಜ್ಯೋತಿ ಬಸವಣ್ಣನವರ ವಚನಸಾಹಿತ್ಯವನ್ನು ಜಗತ್ತಿಗೆ ಮತ್ತು ಮಾನವ ಸಂಕುಲಕ್ಕೆ ಪರಿಚಯಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಬಸವಕಲ್ಯಾಣದಲ್ಲಿ ಸರ್ಕಾರದ ವತಿಯಿಂದ ಅನುಭವ ಮಂಟಪವನ್ನು ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ತಿಳಿಸಿದರು.
ಅವರು ಶನಿವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಬಸವ ಜಯಂತ್ಯುತ್ಸವ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಅನುಭವ ಮಂಟಪ ನಿರ್ಮಿಸಲು ಈಗಾಗಲೇ ಗೋರೂರು ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಬಸವಾದಿ ಶರಣರ ಸಾಹಿತ್ಯ ಭಂಡಾರ ಅಪಾರವಾಗಿದೆ. ಇಂದಿನ ಯುವ ಜನಾಂಗದಲ್ಲಿ ಬಸವಾದಿ ಶರಣರ ವಚನಗಳ ಬಗ್ಗೆ ಹೆಚ್ಚಿನ ಆಸಕ್ತಿ ಕಂಡುಬರುತ್ತಿಲ್ಲ. ಅವರಲ್ಲಿ ಆಸಕ್ತಿ ಮೂಡಿಸಲು ಹಾಗೂ ಮುಂದಿನ ಪೀಳಿಗೆಗೆ ಇದನ್ನು ಪರಿಚಯಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ಬಸವಣ್ಣನವರ ಸಮಗ್ರ ವಚನ ಸಾಹಿತ್ಯವನ್ನು ಈ ಹಿಂದೆ 15 ಸಂಪುಟಗಳಲ್ಲಿ ಪ್ರಕಟಿಸಲಾಗಿತ್ತು. ವಚನ ಸಾಹಿತ್ಯವನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಅದನ್ನು ಸಂಕ್ಷಿಪ್ತಗೊಳಿಸಿ ಪುಸ್ತಕ ಪ್ರಾಧಿಕಾರದಿಂದ 2 ಸಂಪುಟಗಳಲ್ಲಿ ಪ್ರಕಟಿಸಲಾಗಿದೆ. ಬಸವಣ್ಣನವರು ಕಲಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ ಎಂಬ ವಚನದಲ್ಲಿ ಮುನಿಯಬೇಡ ಎಂದು ತಿಳಿಸಿದ್ದಾರೆ. ಎಲ್ಲರೂ ಬಸವಣ್ಣನವರ ವಚನಗಳನ್ನು ಅರ್ಥೈಸಿಕೊಂಡು ಒಬ್ಬರಮೇಲೊಬ್ಬರು ಕೋಪ ಮಾಡಿಕೊಳ್ಳದೇ ಬದುಕಬೇಕು ಎಂದು ತಿಳಿಸಿದ ಅವರು ಬಸವೇಶ್ವರ ಪುತ್ಥಳಿ ಆವರಣದಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಗ್ರಂಥಾಲಯ ನಿರ್ಮಿಸಲಾಗುವುದು. ಗ್ರಂಥಾಲಯದಲ್ಲಿ ಬಸವಣ್ಣನವರ ಮತ್ತು ಬಸವಾದಿ ಶರಣರ ಸಮಗ್ರ ಸಾಹಿತ್ಯವನ್ನು ಸಂಗ್ರಹಿಸಲಾಗುವುದು ಎಂದರು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೋ. ಟಿ.ಆರ್. ಚಂದ್ರಶೇಖರ ವಿಶೇಷ ಉಪನ್ಯಾಸ ನೀಡಿ, 250 ವರ್ಷಗಳ ಹಿಂದೆ ಬಸವಣ್ಣನವರು ಮತ್ತು ಬಸವಾದಿ ಶರಣರು ಆಹಾರ, ಕೂಲಿ, ದುಡಿಮೆ, ಕಾಯಕಕ್ಕೆ ಮಹತ್ವದ ಸ್ಥಾನ ನೀಡಿ ವೈಚಾರಿಕ ಕ್ರಾಂತಿಯನ್ನು ಮಾಡಿದ್ದಾರೆ. ದುಡಿಮೆಯಲ್ಲಿ ದೇವರನ್ನು ಕಾಣುವುದು ಬಸವ ಸಂಸ್ಕøತಿಯಾಗಿತ್ತು. ಕಾಯಕದಲ್ಲಿ ಆಧ್ಯಾತ್ಮ, ದೇವರು, ಮೌಲ್ಯ ರೂಪಿಸಿದ್ದು ಬಸವ ಸಂಸ್ಕøತಿ. ಬಸವಣ್ಣನವರು ತಮ್ಮ ಕಾಲದಲ್ಲಿ ಎಲ್ಲ ಹಕ್ಕುಗಳ ಸಂಸ್ಕøತಿಯನ್ನು ರೂಪಿಸಿದ್ದರು. ಇಂದಿನ ಸಂವಿಧಾನದಲ್ಲಿ ಮಹತ್ವದ ಸ್ಥಾನ ಪಡೆದಿರುವ ಸಮಾನತೆಯ ಹಕ್ಕನ್ನು ಆಕಾಲದಲ್ಲಿ ಎಲ್ಲರಿಗೂ ದೊಕಿಸಿಕೊಡಲು ಪ್ರಯತ್ನಿಸಿದ್ದರು. ಬಡವರು-ಶ್ರೀಮಂತರು, ಸಾಮಾಜಿಕ, ಆರ್ಥಿಕ, ಲಿಂಗ, ಪ್ರಾದೇಶಿಕ ಸಮಾನತೆ ಬಗ್ಗೆ ವಚನಕಾರರು ಚರ್ಚಿಸಿದ್ದಾರೆ. ಇಂದಿಗೂ ಬಸವಣ್ಣನವರ ವಚನಗಳ ಕುರಿತು ಅಧ್ಯಯನ ಮತ್ತು ಚರ್ಚೆ ಮಾಡಲಾಗುತ್ತಿದೆ ಎಂದು ಹೇಳಿದರು.
ಶ್ರೀಶೈಲಂ ಸಾರಂಗಮಠದ ಡಾ.ಸಾರಂಗಧರ ದೇಶಿಕೇಂದ್ರದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಿದ ಈ ಸಮಾರಂಭದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸುವರ್ಣಾ ಹಣಮಂತ ಮಾಲಾಜಿ, ಶಾಸಕ ಡಾ. ಖಮರುಲ್ ಇಸ್ಲಾಂ, ವಿಧಾನ ಪರಿಷತ್ ಶಾಸಕರುಗಳಾದ ಅಮರನಾಥ ಪಾಟೀಲ, ಬಿ.ಜಿ. ಪಾಟೀಲ, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಜಗರ್ ಚುಲಬುಲ್, ಅಲ್ಲಂ ಪ್ರಭುಪಾಟೀಲ, ಎಸ್.ಎಸ್.ಪಾಟೀಲ, ಅರುಣಕುಮಾರ ಪಾಟೀಲ, ಮಾರುತಿ ಮಾಲೆ, ಬಸವ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಶರಣಬಸಪ್ಪ ಬಿ. ಭೂಸನೂರ, ಜಿಲ್ಲಾಧಿಕಾರಿ ಉಜ್ವಲ್ ಕುಮಾರ ಘೋಷ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಜಗದೀಶ್ವರಿ ಶಿವಕೇರಿ, ಬಸವ ಜಯಂತಿ ಉತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಸಚಿವರು ಬಸವೇಶ್ವರ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರ ತರಲಾದ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಬಿಡುಗಡೆಗೊಳಿಸಿದರು. ನಂತರ 2016-17ನೇ ಸಾಲಿನ ಹೆಚ್.ಕೆ.ಆರ್.ಡಿ.ಬಿ. ಮ್ಯಾಕ್ರೋ ಅನುದಾನದಡಿ ಜಗತ್ ವೃತ್ತದಲ್ಲಿರುವ 50 ಲಕ್ಷ ರೂ. ವೆಚ್ಚದ ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನವನದ ಅಭಿವೃದ್ಧಿ ಕಾಮಗಾರಿ ಹಾಗೂ 50 ಲಕ್ಷ ರೂ. ವೆಚ್ಚದ ಬಸವೇಶ್ವರ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಭಕ್ತರ ಅನುಕೂಲಕ್ಕೆ ಯಾತ್ರಿ ನಿವಾಸ ಲೋಕಾರ್ಪಣೆ
ಕಲಬುರಗಿ,ಏ.29.(ಕ.ವಾ.)-ಕಲಬುರಗಿಯ ಶರಣ ಬಸವೇಶ್ವರ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕೆ ಏಷಿಯನ್ ಅಭಿವೃದ್ಧಿ ಬ್ಯಾಂಕ್ ಹಣಕಾಸು ನೆರವಿನ 4 ಕೋಟಿ ರೂ. ವೆಚ್ಚದಿಂದ ಶರಣ ಬಸವೇಶ್ವರ ದೇವಾಲಯದ ಜಾತ್ರಾ ಮೈದಾನದಲ್ಲಿ ನಿರ್ಮಿಸಿರುವ ಯಾತ್ರಿ ನಿವಾಸವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಶನಿವಾರ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಶರಣ ಬಸವೇಶ್ವರ ದೇವಸ್ಥಾನಕ್ಕೆ ಜಾತ್ರಾ, ಶ್ರವಣ ಹಾಗೂ ಸೋಮವಾರಗಳಂದು ಅನೇಕ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಾರೆ. ಅವರ ಅನುಕೂಲಕ್ಕೆ ಹಾಗೂ ಕಡಿಮೆ ದರದಲ್ಲಿ ವಾಸ್ತವ್ಯ ಮಾಡಲು ಯಾತ್ರಿ ನಿವಾಸ ಅನುಕೂಲವಾಗಲಿದೆ. ಸರ್ಕಾರದ ವೆಚ್ಚದಲ್ಲಿ ಸಧ್ಯ ನೆಲ ಮಹಡಿಯ ಯಾತ್ರಿ ನಿವಾಸ ನಿರ್ಮಿಸಲಾಗಿದೆ. ಇದರ ಮೇಲೆ 3-4 ಮಹಡಿಗಳನ್ನು ನಿರ್ಮಿಸಬಹುದಾಗಿದ್ದು, ಮುಂದಿನ ದಿನಗಳಲ್ಲಿ ಸಂಸ್ಥಾನದವರು ನಿರ್ಮಿಸಿಕೊಳ್ಳಬಹುದು ಎಂದರು.
ಶರಣ ಬಸವೇಶ್ವರ ಶಿಕ್ಷಣ ಸಂಸ್ಥಾನವು ಈ ಭಾಗದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದರ ಮೂಲಕ ಅಕ್ಷರ ದಾಸೋಹ ರೂಪಿಸಿದ್ದಾರೆ. ಬಸವೇಶ್ವರ ಸಂಸ್ಥಾನದ ಶಿಕ್ಷಣ ಸಂಸ್ಥೆಗಳನ್ನು ಒಳಗೊಂಡ ಖಾಸಗಿ ವಿಶ್ವವಿದ್ಯಾಲಯ ರಚಿಸಲು ಈಗಾಗಲೇ ಪರಿಶೀಲನೆ ನಡೆಸಲಾಗಿದೆ. ಪರಿಶೀಲನೆಗೆ ಆಗಮಿಸಿದ ತಂಡವು ಖಾಸಗಿ ವಿಶ್ವವಿದ್ಯಾಲಯ ರೂಪಿಸಲು ಬೇಕಾಗಿರುವ ಎಲ್ಲ ಅಂಶಗಳನ್ನು ಬಸವೇಶ್ವರ ಶಿಕ್ಷಣ ಸಂಸ್ಥೆ ಒಳಗೊಂಡಿರುವುದಾಗಿ ತಿಳಿಸಿದ್ದಾರೆ ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿದ್ದ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ. ಶರಣ ಬಸವಪ್ಪ ಅಪ್ಪ ಮಾತನಾಡಿ, ಕಲಬುರಗಿಗೆ ಇತರೆ ರಾಜ್ಯಗಳಿಂದ ಹಾಗೂ ದೇಶ ವಿದೇಶಗಳಿಂದ ಆಗಮಿಸುವ ಭಕ್ತಾದಿಗಳು ಮತ್ತು ಪ್ರವಾಸಿಗರು ಶರಣಬಸವೇಶ್ವರ ದೇವಸ್ಥಾನ ಮತ್ತು ಖಾಜಾ ಬಂದೇ ನವಾಜ್ ದರ್ಗಾಕ್ಕೆ ಭೇಟಿ ನೀಡುವರು. ಇದರಿಂದ ರಾಷ್ಟ್ರೀಯ ಭಾವೈಕ್ಯತೆ ಮೂಡಿಸಲು ಸಹಾಯಕವಾಗಿದೆ. ಶರಣ ಬಸವೇಶ್ವರ ದೇವಸ್ಥಾನ ಮತ್ತು ಖಾಜಾ ಬಂದೇ ನವಾಜ್ ದರ್ಗಾ ಕಲಬುರಗಿಗೆ ಎರಡೂ ಕಣ್ಣುಗಳಂತಿವೆ. ಬುದ್ಧ ವಿಹಾರ ನಿರ್ಮಾಣವಾಗುವ ಮೂಲಕ ಮೂರನೇ ಕಣ್ಣು ಸಹಿತ ಉದ್ಭವವಾಗಿದೆ. ಕಲಬುರಗಿಯು ಶೈಕ್ಷಣಿಕ ಕೇಂದ್ರವಾಗಿ ಬೆಳೆಯುತ್ತಿರುವುದಲ್ಲದೇ ಸಾಂಸ್ಕøತಿಕ ಮತ್ತು ಧಾರ್ಮಿಕ ಕ್ಷೇತ್ರವಾಗಿ ಬೆಳೆಯುತ್ತಿದೆ ಎಂದರು.
ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಮತ್ತು ಮಹಾನಗರಪಾಲಿಕೆ ಕಲಬುರಗಿ ಇವರ ಸಹಯೋಗದಲ್ಲಿ ಆಯೋಜಿಸಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ್ ವಹಿಸಿದ್ದರು. ಶಾಸಕ ಖಮರುಲ್ ಇಸ್ಲಾಂ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಜಗರ್ ಚುಲಬುಲ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಮಹಾನಗರ ಪಾಲಿಕೆ ಸದಸ್ಯರಾದ ಪ್ರಮೋದ ತಿವಾರಿ, ಮಲ್ಲಿಕಾರ್ಜನ ಟೇಂಗಳಿ, ಅಲಿಮೋದ್ದಿನ್ ಪಟೇಲ್, ಶಿವಸ್ವಾಮಿ, ರಮೇಶ ಕಮಕನೂರ, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ್, ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಪಿ. ಜಾಧವ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆಯ ಯೋಜನಾ ನಿರ್ದೇಶಕ ದೊಡ್ಡ ಬಸವರಾಜ, ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಎಸ್. ಪಾಟೀಲ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಂಡಪ್ಪ ಆಕಳ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.
ಮೇ 4ರಂದು ಮಾಜಿ ಸೈನಿಕರ ಕುಂದುಕೊರತೆ ಆಲಿಕೆ
ಕಲಬುರಗಿ,ಏ.29.(ಕ.ವಾ.)-ಜಿಓಸಿ ತೆಲಂಗಾಣ ಮತ್ತು ಆಂಧ್ರ ಸಬ್ ಏರಿಯಾದವರು 2017ರ ಮೇ 4ರಂದು ಬೆಳಗಿನ 8 ಗಂಟೆಗೆ ಕಲಬುರಗಿ ಎಂ.ಎಸ್.ಕೆ. ಮಿಲ್ ಕಣ್ಣಿ ಮಾರ್ಕೆಟ್ ಬಳಿ ಇರುವ ಇ.ಸಿ.ಎಸ್.ಹೆಚ್. ಪಾಲಿಕ್ಲಿನಿಕ್‍ಗೆ ಭೇಟಿ ನೀಡಿ ಮಾಜಿ ಸೈನಿಕರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ಕಲಬುರಗಿ, ಬೀದರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಮಾಜಿ ಸೈನಿಕರು/ ಮಾಜಿ ಸೈನಿಕರ ಅವಲಂಬಿತರು ಕುಂದುಕೊರತೆಗಳೇನಾದರೂ ಇದ್ದಲ್ಲಿ ಇ.ಎಸ್.ಎಸ್.ಹೆಚ್. ಪಾಲಿಕ್ಲಿನಿಕ್ಕಿಗೆ ಖುದ್ದಾಗಿ ಭೇಟಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಇ.ಎಸ್.ಎಸ್.ಹೆಚ್. ಪಾಲಿಕ್ಲಿನಿಕ್ ದೂರವಾಣಿ ಸಂಖ್ಯೆ 08472-266677ನ್ನು ಸಂಪರ್ಕಿಸಬೇಕೆಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಕೋಟ್ಪಾ ಕಾಯ್ದೆ ಕಾರ್ಯಾಚರಣೆ:1450 ರೂ.ದಂಡ
ಕಲಬುರಗಿ,ಏ.29.(ಕ.ವಾ.)-ಕಲಬುರಗಿ ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ಜಿಲ್ಲೆಯಲ್ಲಿ ಜಗಿಯುವ ತಂಬಾಕು ಪೊಟ್ಟಣಗಳನ್ನು ನಿಷೇಧಿಸಿರುವ ಪ್ರಯುಕ್ತ ಹಾಗೂ ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ತಂಬಾಕು ನಿಷೇಧ ಕೋಶದಡಿ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ|| ಶಿವಶರಣಪ್ಪ ನೇತೃತ್ವದಲ್ಲಿ ಸಮೀಕ್ಷಾಧಿಕಾರಿಗಳ ತಂಡವು ಶುಕ್ರವಾರ ಕಲಬುರ
ಗಿ ನಗರದ ಪ್ರಮುಖ ಪಾನ್‍ಶಾಪ್, ಹೋಟೆಲ್ ಹಾಗೂ ಸಾರ್ವಜನಿಕ ಪ್ರದೇಶಗಳಗೆ ಭೇಟಿ ನೀಡಲಾಯಿತು.
ಈ ಸಂದರ್ಭದಲ್ಲಿ ಧೂಮಪಾನ ಮಾಡುತ್ತಿರುವ ಹಾಗೂ ಕೋಟ್ಪಾ ಕಾಯ್ದೆ-2003ರ ಅಡಿಯಲ್ಲಿ ನಿಯಮ ಬಾಹಿರ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಹ ಅಂಗಡಿಗಳಿಗೆ ದಂಡ ವಿಧಿಸಿ, ಕೋಟ್ಪಾ ಕಾಯ್ದೆ-2003 ರ ಸೆಕ್ಷನ್-04ಕ್ಕೆ ಸಂಬಂಧಿಸಿದಂತೆ ಒಟ್ಟು 8 ಪ್ರಕರಣಗಳು ಹಾಗೂ 01 ಪ್ರಕರಣ 6(ಎ) ಸಂಬಂಧಿಸಿದಂತೆ ದಾಖಲಿಸಿ, 1450 ರೂ.ಗಳ ದಂಡ ವಿಧಿಸಲಾಯಿತು.
ಸದರಿ ತಂಡವು ಸಾರ್ವಜನಿಕರಲ್ಲಿ ತಿಳುವಳಿಕೆ ಮತ್ತು ಜನಸಾಮಾನ್ಯರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಕಾಯ್ದೆಯ ನಿಯಮ ಪಾಲನೆ ಮಾಡುವಂತೆ ಮತ್ತು ಕೋಟ್ಪಾ ಕಾಯ್ದೆ-2003ರ ಸೆಕ್ಷನ್-04ರ ಪ್ರಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಇದಲ್ಲದೆ 18 ವರ್ಷದೊಳಗಿನ ಮಕ್ಕಳು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಸೂಚಿಸಿದರು. ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಎಚ್ಚರಿಕೆಯ ನಾಮಫಲಕಗಳನ್ನು ಎಲ್ಲ ಪಾನ್‍ಶಾಪ್, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‍ಗಳ ಮಾಲೀಕರು/ಮಾರಾಟಗಾರರು ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಸೂಚಿಸಲಾಯಿತು.
ಈ ತನಿಖಾ ತಂಡದಲ್ಲಿ ಜಿಲ್ಲಾ ತಂಬಾಕು ನಿಷೇಧ ಕೋಶದ ಎಸ್.ಜೆ. ಪಾಟೀಲ್, ರವಿ, ಮಲ್ಲಿಕಾರ್ಜುನ, ಗಣೇಶ ಚಿನ್ನಾಕರ ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಹೀಗಾಗಿ ಲೇಖನಗಳು NEWS AND PHOTOS 29-4-2017
ಎಲ್ಲಾ ಲೇಖನಗಳು ಆಗಿದೆ NEWS AND PHOTOS 29-4-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTOS 29-4-2017 ಲಿಂಕ್ ವಿಳಾಸ https://dekalungi.blogspot.com/2017/04/news-and-photos-29-4-2017.html
0 Response to "NEWS AND PHOTOS 29-4-2017"
ಕಾಮೆಂಟ್ ಪೋಸ್ಟ್ ಮಾಡಿ