ಮೇ. 07 ರಂದು ಅಬಕಾರಿ ರಕ್ಷಕರ ಹುದ್ದೆಗೆ ಪರೀಕ್ಷೆ : ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ಡಾ. ರುದ್ರೇಶ್ ಘಾಳಿ

ಮೇ. 07 ರಂದು ಅಬಕಾರಿ ರಕ್ಷಕರ ಹುದ್ದೆಗೆ ಪರೀಕ್ಷೆ : ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ಡಾ. ರುದ್ರೇಶ್ ಘಾಳಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮೇ. 07 ರಂದು ಅಬಕಾರಿ ರಕ್ಷಕರ ಹುದ್ದೆಗೆ ಪರೀಕ್ಷೆ : ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ಡಾ. ರುದ್ರೇಶ್ ಘಾಳಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮೇ. 07 ರಂದು ಅಬಕಾರಿ ರಕ್ಷಕರ ಹುದ್ದೆಗೆ ಪರೀಕ್ಷೆ : ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ಡಾ. ರುದ್ರೇಶ್ ಘಾಳಿ
ಲಿಂಕ್ : ಮೇ. 07 ರಂದು ಅಬಕಾರಿ ರಕ್ಷಕರ ಹುದ್ದೆಗೆ ಪರೀಕ್ಷೆ : ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ಡಾ. ರುದ್ರೇಶ್ ಘಾಳಿ

ಓದಿ


ಮೇ. 07 ರಂದು ಅಬಕಾರಿ ರಕ್ಷಕರ ಹುದ್ದೆಗೆ ಪರೀಕ್ಷೆ : ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ಡಾ. ರುದ್ರೇಶ್ ಘಾಳಿ


ಕೊಪ್ಪಳ ಮೇ. 04 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯಲ್ಲಿನ 1003 ಅಬಕಾರಿ ರಕ್ಷಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಮೇ. 07 ರಂದು ಏರ್ಪಡಿಸಿರುವ ಸ್ಪರ್ಧಾತ್ಮಕ ಪರೀಕ್ಷೆ ಕೊಪ್ಪಳ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಸೂಚನೆ ನೀಡಿದರು.
     ಅಬಕಾರಿ ರಕ್ಷಕರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
      ಕರ್ನಾಟಕ ಲೋಕಸೇವಾ ಆಯೋಗವು ಅಬಕಾರಿ ರಕ್ಷಕರ ಪುರುಷ-952 ಹಾಗೂ ಮಹಿಳೆ-51 ಸೇರಿದಂತೆ ಒಟ್ಟು 1003 ಹುದ್ದೆಗಳ ಭರ್ತಿಗಾಗಿ ಮೇ.07 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.  ಜಿಲ್ಲೆಯ 8256 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ.  ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಬೇಕು.  ಈ ನಿಟ್ಟಿನಲ್ಲಿ ಪ್ರಶ್ನೆಪತ್ರಿಕೆ ಖಜಾನೆ ಇಲಾಖೆಗೆ ಠೇವಣಿಯಾಗುವುದರಿಂದ ಮೊದಲುಗೊಂಡು, ವಿತರಣೆಯಾಗುವವರೆಗೂ ಎಲ್ಲವನ್ನೂ ವಿಡಿಯೋ ಚಿತ್ರೀಕರಣ ಆಗಬೇಕು.  ಇದಕ್ಕಾಗಿ ಮೂವರು ಹಿರಿಯ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದ್ದು, ಇವರು ಇದರ ಮೇಲ್ವಿಚಾರಣೆ ನಡೆಸಬೇಕು.  ಖಜಾನೆಯಿಂದ   ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾರ್ಗಾಧಿಕಾರಿಗಳಿಗೆ ವಹಿಸಲಾಗಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆಪತ್ರಿಕೆಯನ್ನು ನಿಗದಿತ ಅವಧಿಯೊಳಗೆ ತಲುಪಿಸಬೇಕು.  ಪರೀಕ್ಷೆ ಪ್ರಾರಂಭದ ನಂತರ ಪರೀಕ್ಷಾ ಕೊಠಡಿಯೊಳಗೆ ಮಾಧ್ಯಮದವರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.  ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.  ಅಲ್ಲದೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಬ್ಯಾಗ್, ಪುಸ್ತಕ ತರುವಂತಿಲ್ಲ.  ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅಲ್ಲದೆ ಪರೀಕ್ಷಾ ದಿನದಂದು ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು.  ಪ್ರತಿ ಕೇಂದ್ರಕ್ಕೆ ಕಡ್ಡಾಯವಾಗಿ ಒಬ್ಬರು ಮಹಿಳಾ ಪೊಲೀಸ್ ಪೇದೆಯನ್ನು ನಿಯೋಜಿಸಬೇಕು.  ಕೇಂದ್ರದ 200 ಮೀ. ವ್ಯಾಪ್ತಿ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು.  ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗವು ನೀಡಿರುವ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು.  ಯಾವುದೇ ಅಕ್ರಮಗಳಿಗೆ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಹೊಣೆಯಾಗಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
     ಪರೀಕ್ಷೆಯ ನೋಡಲ್ ಅಧಿಕಾರಿ ಆರ್.ಟಿ. ನಾಯಕ್ ಮಾತನಾಡಿ, ಅಬಕಾರಿ ಉಪನಿರೀಕ್ಷಕರ ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳು ಕೊಪ್ಪಳದ 14 ಹಾಗೂ ಗಂಗಾವತಿಯ 09 ಸೇರಿದಂಟೆ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿವೆ. ಕೊಪ್ಪಳದ ಗವಿಸಿದ್ದೇಶ್ವರ ಪಿಯು ಕಾಲೇಜು, ಗವಿಸಿದ್ದೇಶ್ವರ ಸಂಯುಕ್ತ ಪ್ರೌಢಶಾಲೆ, ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು, ಭಾಗ್ಯನಗರದ ಸರ್ಕಾರಿ ಪ.ಪೂ. ಕಾಲೇಜು, ಬಾಲಕರ ಸರ್ಕಾರಿ ಪ.ಪೂ. ಕಾಲೇಜು, ಭಾಗ್ಯನಗರದ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾಳಿದಾಸ ಪ್ರೌಢಶಾಲೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ, ಮಿಲೇನಿಯಂ ಪಬ್ಲಿಕ್ ಸ್ಕೂಲ್, ಎಸ್.ಎಫ್.ಎಸ್. ಶಾಲೆ, ಕುವೆಂಪು ಪ್ರಾಥಮಿಕ ಶಾಲೆ, ಕುವೆಂಪು ಪ್ರೌಢಶಾಲೆ, ನಿವೇಧಿತಾ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ನಡೆಯಲಿದ್ದು, 4272 ಅಭ್ಯರ್ಥಿಗಳು ಕೊಪ್ಪಳದಲ್ಲಿ ಪರೀಕ್ಷೆ ಬರೆಯಲಿದ್ದಾರೆ.
     ಗಂಗಾವತಿಯಲ್ಲಿ ಬಾಲಕರ ಸರ್ಕಾರಿ ಪ.ಪೂ. ಕಾಲೇಜು, ಲಯನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆ, ಎಂ.ಎನ್.ಎಂ. ಬಾಲಕಿಯರ ಸ.ಪ.ಪೂ. ಕಾಲೇಜು.  ಲಿಟಲ್ ಹಾಟ್ರ್ಸ್ ಸ್ಕೂಲ್, ಜನತಾ ಸೇವಾ ಅನುದಾನಿತ ಪ್ರೌಢಶಾಲೆ, ಬೇಥಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕೊಟ್ಟೂರೇಶ್ವರ ಪ.ಪೂ. ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದ್ದು, 3984 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಮೇ. 07 ರಂದು ಬೆಳಿಗ್ಗೆ 10 ರಿಂದ 12 ರವರೆಗೆ  ವಸ್ತುನಿಷ್ಟ ಬಹು ಆಯ್ಕೆ ಮಾದರಿ ಪತ್ರಿಕೆ ಹಾಗೂ ಮಧ್ಯಾಹ್ನ 2 ರಿಂದ 04 ರವರೆಗೆ ವಸ್ತುನಿಷ್ಟ ಬಹು ಆಯ್ಕೆ ಮಾದರಿ ಪರೀಕ್ಷೆ ನಡೆಯಲಿದೆ.  ಪರೀಕ್ಷೆ ಪ್ರಾರಂಭವಾದ 10 ನಿಮಿಷಗಳ ನಂತರ ಬರುವ ಅಂದರೆ ವಿಳಂಬವಾಗಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ.  ಪರೀಕ್ಷಾ ಅವಧಿ ಮುಗಿಯುವವರೆಗೂ, ಯಾವುದೇ ಅಭ್ಯರ್ಥಿ ಪರೀಕ್ಷಾ ಕೇಂದ್ರದಿಂದ ಹೊರಗೆ ಬರುವಂತಿಲ್ಲ ಎಂದರು.
    ಸಭೆಯಲ್ಲಿ ಡಿಡಿಪಿಐ ಎ. ಶ್ಯಾಮಸುಂದರ್, ಖಜಾನೆ ಇಲಾಖೆ ಅಧಿಕಾರಿ ಕಳ್ಳೇರ್, ಪೊಲೀಸ್ ಇಲಾಖೆಯ ಸತೀಶ್ ಪಾಟೀಲ್ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು ಮೇ. 07 ರಂದು ಅಬಕಾರಿ ರಕ್ಷಕರ ಹುದ್ದೆಗೆ ಪರೀಕ್ಷೆ : ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ಡಾ. ರುದ್ರೇಶ್ ಘಾಳಿ

ಎಲ್ಲಾ ಲೇಖನಗಳು ಆಗಿದೆ ಮೇ. 07 ರಂದು ಅಬಕಾರಿ ರಕ್ಷಕರ ಹುದ್ದೆಗೆ ಪರೀಕ್ಷೆ : ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ಡಾ. ರುದ್ರೇಶ್ ಘಾಳಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೇ. 07 ರಂದು ಅಬಕಾರಿ ರಕ್ಷಕರ ಹುದ್ದೆಗೆ ಪರೀಕ್ಷೆ : ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ಡಾ. ರುದ್ರೇಶ್ ಘಾಳಿ ಲಿಂಕ್ ವಿಳಾಸ https://dekalungi.blogspot.com/2017/05/07.html

Subscribe to receive free email updates:

0 Response to "ಮೇ. 07 ರಂದು ಅಬಕಾರಿ ರಕ್ಷಕರ ಹುದ್ದೆಗೆ ಪರೀಕ್ಷೆ : ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ಡಾ. ರುದ್ರೇಶ್ ಘಾಳಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ