ಮೇ. 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ

ಮೇ. 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮೇ. 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮೇ. 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ
ಲಿಂಕ್ : ಮೇ. 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ

ಓದಿ


ಮೇ. 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ


ಕೊಪ್ಪಳ ಮೇ. 03 (ಕರ್ನಾಟಕ ವಾರ್ತೆ): ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಸರ್ಕಾರಿ ಆದೇಶದನ್ವಯ ಇದೇ ಮೊದಲ ಬಾರಿಗೆ ಸರ್ಕಾರಿ ಕಾರ್ಯಕ್ರಮವನ್ನಾಗಿ ಮೇ. 10 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು.
     ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಸಂಬಂಧ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತ್ಯುತ್ಸವವನ್ನು ಸರ್ಕಾರದ ಆದೇಶದಂತೆ ಇದೇ ಮೊದಲ ಬಾರಿಗೆ ಸರ್ಕಾರಿ ಕಾರ್ಯಕ್ರಮವನ್ನಾಗಿ ಮೇ. 10 ರಂದು ಆಚರಿಸಲಾಗುವುದು.  ಕಾರ್ಯಕ್ರಮದ ಅಂಗವಾಗಿ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರದ ಮೆರವಣಿಗೆ ಅಂದು ಬೆಳಿಗ್ಗೆ 8 ಗಂಟೆಗೆ ನಗರದ ಗವಿಮಠ ಆವರಣದಿಂದ ಪ್ರಾರಂಭಿಸಲಾಗುವುದು.  ಮೆರವಣಿಗೆಯು ಗವಿಮಠ ರಸ್ತೆ, ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ವೃತ್ತ, ಕಿನ್ನಾಳ ರಸ್ತೆ ಮೂಲಕ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದವರೆಗೆ ನೆರವೇರಲಿದೆ.  ಮೆರವಣಿಗೆಯಲ್ಲಿ ವಿವಿಧ ಸಾಂಸ್ಕøತಿಕ ಕಲಾತಂಡಗಳು ಭಾಗವಹಿಸಲಿವೆ.  ಮಧ್ಯಾಹ್ನ 12 ಗಂಟೆಗೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ನಿರ್ಮಿಸಲಾಗುವ ಬೃಹತ್ ಪೆಂಡಾಲ್‍ನಲ್ಲಿ ವೇದಿಕೆ ಸಮಾರಂಭ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ತಿಳಿಸಿದರು.
     ಮೆರವಣಿಗೆ ಸಾಗಿ ಬರುವ ರಸ್ತೆಯ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಲು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.  ಅಲ್ಲದೆ ಕಾರ್ಯಕ್ರಮದಲ್ಲಿ ಗಣ್ಯಮಾನ್ಯರಿಗೆ ಮಾಲಾರ್ಪಣೆಯ ಬದಲಿಗೆ ಹೇಮರೆಡ್ಡಿ ಮಲ್ಲಮ್ಮ ಅವರ ಕುರಿತ ಪುಸ್ತಕಗಳನ್ನು ವಿತರಿಸಲು ನಿರ್ಧರಿಸಲಾಯಿತು.  ಹೇಮರೆಡ್ಡಿ ಮಲ್ಲಮ್ಮ ಅವರ ಕುರಿತು ವಿಶೇಷ ಉಪನ್ಯಾಸ ನೀಡಲು ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿ.ವಿ. ಸಹಾಯಕ ಪ್ರಾಧ್ಯಾಪಕರಾದ ಡಾ. ಮೈತ್ರಾಯಿಣಿ ಗದಿಗೆಪ್ಪಗೌಡರ ಅವರನ್ನು ಆಹ್ವಾನಿಸಲು ತೀರ್ಮಾನ ಕೈಗೊಳ್ಳಲಾಯಿತು. 
     ಸಭೆಯಲ್ಲಿ ಭಾಗವಹಿಸಿದ್ದ ಸಮಾಜದ ಮುಖಂಡರು ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು ಸರ್ಕಾರ ಕೈಗೊಂಡ ನಿರ್ಧಾರಕ್ಕೆ ಹರ್ಷ ವ್ಯಕ್ತಪಡಿಸಿ, ಸರ್ಕಾರವನ್ನು ಅಭಿನಂದಿಸಿದರು.  ಅಲ್ಲದೆ ಜಯಂತಿಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಹಕರಿಸಲಾಗುವುದು.  ಕಾರ್ಯಕ್ರಮಕ್ಕೆ ಎಲ್ಲ ಸಮಾಜದವರು ಭಾಗವಹಿಸುವಂತೆ ಮನವಿ ಮಾಡಿಕೊಂಡರು.
     ಸಭೆಯಲ್ಲಿ  ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರಾದ ಪ್ರಭು ಹೆಬ್ಬಾಳ, ಜಿ. ವೀರಪ್ಪ ಕೇಸರಹಟ್ಟಿ, ಸಿ.ವಿ. ಚಂದ್ರಶೇಖರ್, ಸಂಗಪ್ಪ ವಕ್ಕಳದ, ವಿರುಪಾಕ್ಷಪ್ಪ ನವೋದಯ, ಜಗದೀಶಪ್ಪ ಸಿಂಗನಾಳ, ಶಂಕರಗೌಡ್ರ ಹಿರೇಗೌಡ್ರ, ಸಂಧ್ಯಾಮಾದಿನೂರ, ಶಾರದಾ ಕೆಳಗಿನಗೌಡರ್, ಆರ್.ಪಿ. ರೆಡ್ಡಿ, ಸೋಮರೆಡ್ಡಿ ಅಳವಂಡಿ, ಗಣ್ಯರಾದ ಶಿವಾನಂದ ಹೊದ್ಲೂರ್, ಮಂಜುನಾಥ ಗೊಂಡಬಾಳ ಮುಂತಾದವರು ಭಾಗವಹಿಸಿದ್ದರು.


ಹೀಗಾಗಿ ಲೇಖನಗಳು ಮೇ. 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ

ಎಲ್ಲಾ ಲೇಖನಗಳು ಆಗಿದೆ ಮೇ. 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೇ. 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ ಲಿಂಕ್ ವಿಳಾಸ https://dekalungi.blogspot.com/2017/05/10.html

Subscribe to receive free email updates:

0 Response to "ಮೇ. 10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ