ಶೀರ್ಷಿಕೆ : ಮೇ. 15 ರಿಂದ 22 ರವರೆಗೆ ಕೌಶಲ ತರಬೇತಿಗೆ ನಿರುದ್ಯೋಗಿ ಯುವಕರ ನೊಂದಣಿ : ಕೌಶಲ್ಯ ಮೇಳ ಮೇ. 15 ಕ್ಕೆ ವೆಬ್ ಪೋರ್ಟಲ್ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಉದ್ಘಾಟನೆ
ಲಿಂಕ್ : ಮೇ. 15 ರಿಂದ 22 ರವರೆಗೆ ಕೌಶಲ ತರಬೇತಿಗೆ ನಿರುದ್ಯೋಗಿ ಯುವಕರ ನೊಂದಣಿ : ಕೌಶಲ್ಯ ಮೇಳ ಮೇ. 15 ಕ್ಕೆ ವೆಬ್ ಪೋರ್ಟಲ್ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಉದ್ಘಾಟನೆ
ಮೇ. 15 ರಿಂದ 22 ರವರೆಗೆ ಕೌಶಲ ತರಬೇತಿಗೆ ನಿರುದ್ಯೋಗಿ ಯುವಕರ ನೊಂದಣಿ : ಕೌಶಲ್ಯ ಮೇಳ ಮೇ. 15 ಕ್ಕೆ ವೆಬ್ ಪೋರ್ಟಲ್ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಉದ್ಘಾಟನೆ
ಕೊಪ್ಪಳ ಮೇ. 13 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳ ಮಹತ್ವಕಾಂಕ್ಷಿಯ ಕೌಶಲ ಕರ್ನಾಟಕ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ಮೇ. 15 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಚಾಲನೆ ನೀಡುವರು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದ್ದಾರೆ.
ಕೌಶಲ್ಯ ಮೇಳ ಕುರಿತಂತೆ ಜಿಲ್ಲಾ ಪಂಚಾಯತಿಯ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿರುದ್ಯೋಗವು ದೇಶದ ಜ್ವಲಂತ ಸಮಸ್ಯೆಗಳಲ್ಲಿ ಒಂದಾಗಿದ್ದು, ಇದು ಭಾರತದ ಪ್ರಗತಿಯ ವೇಗಕ್ಕೆ ಪ್ರಮುಖ ತಡೆಯಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರಕಾರವು ಸಹ ಗುರುತರವಾದ ಜವಾಬ್ದಾರಿಯನ್ನು ಹೊಂದಿದ್ದು, ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತಿದೆ ಹಾಗೂ ದೇಶದ ಅಭಿವೃದ್ಧಿಗೆ ಕೈಜೋಡಿಸುತ್ತಿದೆ. ಇದರ ಒಂದು ಭಾಗವಾಗಿ ವಿವಿಧ ಯೋಜನೆಗಳ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಒಂದೇ ಇಲಾಖೆಯ ಸೂರಿನಡಿ ತರುವುದರ ಮೂಲಕ “ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ” ಯನ್ನು ಪ್ರಾರಂಭಿಸಿರುತ್ತಾರೆ. ಸದರಿ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ಧಿ ಕರ್ನಾಟಕ ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೊಳಿಸಿರುತ್ತಾರೆ. ನಿರುದ್ಯೋಗಿ ಯುವಕ-ಯುವತಿಯರು ಮೇ. 15 ರಿಂದ 22 ರವರೆಗೆ kaushalkar.com ವೆಬ್ ಪೋರ್ಟಲ್ ಮೂಲಕ ನೊಂದಣಿ ಮಾಡಿಕೊಳ್ಳಬಹುದಾಗಿದೆ. ಆಧುನಿಕ ಸಮಾಜದಲ್ಲಿ ಮಹತ್ವಕಾಂಕ್ಷಿಯೊಂದಿಗೆ ಮುನ್ನಡೆಯುತ್ತಿರುವ ಯುವಜನತೆ ಸ್ವಾವಲಂಬಿ ಜೀವನ ನಡೆಸುವ ನಿಟ್ಟಿನಲ್ಲಿ ನೆರವಾಗುವುದು ಸರ್ಕಾರದ ಉದ್ದೇಶವಾಗಿದೆ. ಬದಲಾವಣೆಯ ಕಾಲದಲ್ಲಿ ಯುವ ಜನತೆ ಉದ್ಯೋಗದ ಅವಕಾಶಗಳನ್ನು ಪಡೆಯಲು ಅವರನ್ನು ಅವಶ್ಯಕ ಕೌಶಲ ಮತ್ತು ಸಾಮಥ್ರ್ಯದೊಂದಿಗೆ ಸನ್ನದ್ಧಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಕೌಶಲ ಕರ್ನಾಟಕ ಕಾರ್ಯಕ್ರಮಕ್ಕೆ ಮೇ. 15 ರಂದು ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದರೆ, ಕೊಪ್ಪಳ ಜಿಲ್ಲೆಯಲ್ಲಿ ಅಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳು ಚಾಲನೆ ನೀಡುವರು. ಕೌಶಲ ತರಬೇತಿ ಬಯಸಿ ನೊಂದಣಿ ಮಾಡಿಕೊಳ್ಳಲು ಬಯಸುವ ಯುವಕ, ಯುವತಿಯರಿಗೆ ಅವಕಾಶವಿದೆ. ಕೌಶಲ ತರಬೇತಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಆಗಮಿಸಿ, ನೊಂದಣಿ ಮಾಡಿಕೊಳ್ಳುವ ಮೂಲಕ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಕೌಶಲ ತರಬೇತಿ ಪಡೆಯಲು 18 ರಿಂದ 35 ವರ್ಷ ವಯೋಮಿತಿಯೊಳಗಿರಬೇಕು. ಯಾವುದೇ ವಿದ್ಯಾರ್ಹತೆಯ ಮಿತಿ ಇದಕ್ಕಿಲ್ಲ. ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‍ನಲ್ಲಿ ಜರುಗುವ ಕೌಶಲ್ಯ ಮೇಳ ಕಾರ್ಯಕ್ರಮದಲ್ಲಿ ಆಸಕ್ತ ಅಭ್ಯರ್ಥಿಗಳು ಭಾಗವಹಿಸಿ ತಮ್ಮ ಹೆಸರನ್ನು ಆಧಾರ ನಂಬರ್ ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬೇಕು.
ಕೊಪ್ಪಳ ಜಿಲ್ಲೆಯ ಉಳಿದ ತಾಲೂಕು ಕೇಂದ್ರಗಳಲ್ಲಿ ಆಯಾ ಶಾಸಕರ ನೇತೃತ್ವದಲ್ಲಿ ವೆಬ್ ಪೋರ್ಟಲನ್ನು ಮೇ. 15 ರಂದೇ ಚಾಲನೆ ದೊರಕಿಸಲು ಹಾಗೂ ನಿರುದ್ಯೋಗ ಯುವಕ ಯುವತಿಯರಿಗೆ ನೋಂದಣಿಗಾಗಿ ಅನುವು ಮಾಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಕಛೇರಿಗಳಲ್ಲಿ ಹಾಗೂ ಎಲ್ಲಾ ನಾಡ ಕಛೇರಿಗಳಲ್ಲಿ 18 ರಿಂದ 35 ವರ್ಷದೊಳಗಿನ ನಿರುದ್ಯೋಗ ಯುವಜನರು kaushalkar.com ಪೋರ್ಟಲ್‍ನಲ್ಲಿ ಆನ್ ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಬಯಸಿ ಬರುವ ಅಭ್ಯರ್ಥಿಗಳು ಆಧಾರ ಯುಐಡಿ ನಂಬರ್ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ಮೇ. 15 ರಿಂದ 22 ರವರೆಗೆ ಕೌಶಲ ತರಬೇತಿಗೆ ನಿರುದ್ಯೋಗಿ ಯುವಕರ ನೊಂದಣಿ : ಕೌಶಲ್ಯ ಮೇಳ ಮೇ. 15 ಕ್ಕೆ ವೆಬ್ ಪೋರ್ಟಲ್ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಉದ್ಘಾಟನೆ
ಎಲ್ಲಾ ಲೇಖನಗಳು ಆಗಿದೆ ಮೇ. 15 ರಿಂದ 22 ರವರೆಗೆ ಕೌಶಲ ತರಬೇತಿಗೆ ನಿರುದ್ಯೋಗಿ ಯುವಕರ ನೊಂದಣಿ : ಕೌಶಲ್ಯ ಮೇಳ ಮೇ. 15 ಕ್ಕೆ ವೆಬ್ ಪೋರ್ಟಲ್ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಉದ್ಘಾಟನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೇ. 15 ರಿಂದ 22 ರವರೆಗೆ ಕೌಶಲ ತರಬೇತಿಗೆ ನಿರುದ್ಯೋಗಿ ಯುವಕರ ನೊಂದಣಿ : ಕೌಶಲ್ಯ ಮೇಳ ಮೇ. 15 ಕ್ಕೆ ವೆಬ್ ಪೋರ್ಟಲ್ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಉದ್ಘಾಟನೆ ಲಿಂಕ್ ವಿಳಾಸ https://dekalungi.blogspot.com/2017/05/15-22-15.html
0 Response to "ಮೇ. 15 ರಿಂದ 22 ರವರೆಗೆ ಕೌಶಲ ತರಬೇತಿಗೆ ನಿರುದ್ಯೋಗಿ ಯುವಕರ ನೊಂದಣಿ : ಕೌಶಲ್ಯ ಮೇಳ ಮೇ. 15 ಕ್ಕೆ ವೆಬ್ ಪೋರ್ಟಲ್ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಉದ್ಘಾಟನೆ"
ಕಾಮೆಂಟ್ ಪೋಸ್ಟ್ ಮಾಡಿ