ಶೀರ್ಷಿಕೆ : ಮೇ. 20 ರಂದು ಜನ-ಮನ’ ಕಾರ್ಯಕ್ರಮ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
ಲಿಂಕ್ : ಮೇ. 20 ರಂದು ಜನ-ಮನ’ ಕಾರ್ಯಕ್ರಮ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
ಮೇ. 20 ರಂದು ಜನ-ಮನ’ ಕಾರ್ಯಕ್ರಮ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
ಕೊಪ್ಪಳ ಮೇ. 15 (ಕರ್ನಾಟಕ ವಾರ್ತೆ): ಸರ್ಕಾರ ಜಾರಿಗೊಳಿಸಿರುವ ಹಲವು ಜನಪರ ಯೋಜನೆಗಳ ಬಗ್ಗೆ ಫಲಾನುಭವಿಗಳ ಅನಿಸಿಕೆ ಅಭಿಪ್ರಾಯ ಸಂಗ್ರಹ ಮಾಡುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಫಲಾನುಭವಿಗಳ ಅನಿಸಿಕೆಗಳನ್ನು ಪಡೆಯುವ ‘ಜನ-ಮನ’ ಕಾರ್ಯಕ್ರಮ ಮೇ. 20 ರಂದು ಕೊಪ್ಪಳದಲ್ಲಿ ನಡೆಸಲು ದಿನಾಂಕ ನಿಗದಿಪಡಿಸಲಾಗಿದ್ದು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
‘ಜನ-ಮನ’ ಹಾಗೂ ಅನ್ನಭಾಗ್ಯ ಯೋಜನೆ ಕಾರ್ಯಕ್ರಮದ ಸಿದ್ಧತೆಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದ ಮುಖ್ಯಮಂತ್ರಿಗಳ ಆಶಯದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ‘ಜನ-ಮನ’ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಮೇ. 20 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಏರ್ಪಡಿಸಲು ನಿದಗಿಪಡಿಸಲಾಗಿದೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಯೋಜನೆಗಳ ಕುರಿತು ಫಲಾನುಭವಿಗಳ ಅಭಿಪ್ರಾಯ- ಅನಿಸಿಕೆಗಳನ್ನು ಆಲಿಸಲಿದ್ದಾರೆ. ಪ್ರಸ್ತುತ ಸರ್ಕಾರ ಹಲವಾರು ಅನ್ನಭಾಗ್ಯ, ಕ್ಷೀರಭಾಗ್ಯ, ಪಶುಭಾಗ್ಯ, ಕೃಷಿಭಾಗ್ಯ, ಬಿದಾಯಿ, ರಾಜೀವ್ ಆರೋಗ್ಯ ಭಾಗ್ಯ, ಹರೀಶ್ ಸಾಂತ್ವನ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ಮನಸ್ವಿನಿ, ಮೈತ್ರಿ, ವಸತಿ ಭಾಗ್ಯ ಹೀಗೆ ಅನೇಕ ಜನಪರ ಯೋಜನೆಗಳು ಜಾರಿಗೊಂಡಿವೆ. ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಫಲಾನುಭವಿಗಳಿಂದಲೇ ನೇರವಾಗಿ ಕೇಳಿ ತಿಳಿದುಕೊಳ್ಳುವ ಸಲುವಾಗಿ ಜನ-ಮನ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕೊಪ್ಪಳಕ್ಕೆ ಕರೆತರುವ ಜವಾಬ್ದಾರಿ ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ವಹಿಸಲಾಗಿದೆ. ಅನ್ನಭಾಗ್ಯ- ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕ್ಷೀರಭಾಗ್ಯ- ಸಾರ್ವಜನಿಕ ಶಿಕ್ಷಣ ಇಲಾಖೆ, ವಿದ್ಯಾಸಿರಿ- ಹಿಂದುಳಿದ ವರ್ಗಗಳ ಕಲ್ಯಾಣ, ರಾಜೀವ್ ಆರೋಗ್ಯಭಾಗ್ಯ- ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮನಸ್ವಿನಿ-ಮೈತ್ರಿ- ಕಂದಾಯ, ಪಸು ಭಾಗ್ಯ- ಪಶುಸಂಗೋಪನೆ, ಕೃಷಿಭಾಗ್ಯ- ಕೃಷಿ ಇಲಾಖೆ ಹೀಗೆ ವಿವಿಧ ಇಲಾಖೆಗಳು ಸಂಬಂಧಪಟ್ಟ ಫಲಾನುಭವಿಗಳನ್ನು ಕೊಪ್ಪಳಕ್ಕೆ ಕರೆತರುವ ವ್ಯವಸ್ಥೆ ಮಾಡಬೇಕು, ಇದರ ಸಂಪೂರ್ಣ ಹೊಣೆಗಾರಿಕೆ ಆಯಾ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳದ್ದಾಗಿರುತ್ತದೆ. ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಮಹಿಳೆಯರಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮುತುವರ್ಜಿ ವಹಿಸಿ, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಬೇಕು. ವಿವಿಧ ಇಲಾಖೆಗಳೊಂದಿಗೆ ಸಮನ್ವಯತೆಯನ್ನು ಸಾಧಿಸಿ, ಫಲಾನುಭವಿಗಳನ್ನು ತಾಲೂಕುಗಳಿಂದ ಕೊಪ್ಪಳಕ್ಕೆ ಕರೆತರಲು ಆಯಾ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಆಯಾ ಇಲಾಖಾ ಅಧಿಕಾರಿಗಳಿಗೆ ವಹಿಸಿಕೊಡುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅನ್ನಭಾಗ್ಯ : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರ ಪ್ರತಿ ಸದಸ್ಯರಿಗೆ ಉಚಿತವಾಗಿ ನೀಡಲಾಗುತ್ತಿದ್ದ ಅಕ್ಕಿಯ ಪ್ರಮಾಣವನ್ನು 05 ಕೆ.ಜಿ. ಯಿಂದ 07 ಕೆ.ಜಿ.ಗೆ ಹೆಚ್ಚಿಸಲಾಗಿದ್ದು, ಈ ಯೋಜನೆಯ ಸಾಂಕೇತಿಕ ಉದ್ಘಾಟನೆ ಕಾರ್ಯಕ್ರಮವನ್ನು ಕೂಡ ಜನ-ಮನ ಕಾರ್ಯಕ್ರಮದ ಸಂದರ್ಭದಲ್ಲೇ ನೆರವೇರಿಸಲಾಗುವುದು. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಬಿಪಿಎಲ್ ಕುಟುಂಬದವರಿಗೆ ಉಚಿತವಾಗಿ ಅಕ್ಕಿ ನೀಡುವ ಮೂಲಕ ಉದ್ಘಾಟನೆ ನೆರವೇರಿಸುವರು. ಈ ಕಾರ್ಯಕ್ರಮ ಕುರಿತು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.
ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು, ಜನ-ಮನ ಕಾರ್ಯಕ್ರಮದ ಕುರಿತು ಸಭೆಗೆ ವಿವರಣೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸಿ.ಡಿ. ಗೀತಾ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಬಂಡಿವಡ್ಡರ್, ಉಪಕೃಷಿ ನಿರ್ದೇಶಕ ವೀರೇಶ್ ಹುನಗುಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮೆಹಮೂದ್, ಸರ್ವ ಶಿಕ್ಷಣ ಅಭಿಯಾನದ ಡಿವೈಪಿಸಿ ವೆಂಕಟೇಶ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಮೇ. 20 ರಂದು ಜನ-ಮನ’ ಕಾರ್ಯಕ್ರಮ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
ಎಲ್ಲಾ ಲೇಖನಗಳು ಆಗಿದೆ ಮೇ. 20 ರಂದು ಜನ-ಮನ’ ಕಾರ್ಯಕ್ರಮ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೇ. 20 ರಂದು ಜನ-ಮನ’ ಕಾರ್ಯಕ್ರಮ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/05/20_15.html
0 Response to "ಮೇ. 20 ರಂದು ಜನ-ಮನ’ ಕಾರ್ಯಕ್ರಮ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ