ಮೇ. 20 ರಂದು ಹುಲಿಗೆಮ್ಮ ದೇವಿ ಮಹಾರಥೋತ್ಸವ

ಮೇ. 20 ರಂದು ಹುಲಿಗೆಮ್ಮ ದೇವಿ ಮಹಾರಥೋತ್ಸವ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮೇ. 20 ರಂದು ಹುಲಿಗೆಮ್ಮ ದೇವಿ ಮಹಾರಥೋತ್ಸವ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮೇ. 20 ರಂದು ಹುಲಿಗೆಮ್ಮ ದೇವಿ ಮಹಾರಥೋತ್ಸವ
ಲಿಂಕ್ : ಮೇ. 20 ರಂದು ಹುಲಿಗೆಮ್ಮ ದೇವಿ ಮಹಾರಥೋತ್ಸವ

ಓದಿ


ಮೇ. 20 ರಂದು ಹುಲಿಗೆಮ್ಮ ದೇವಿ ಮಹಾರಥೋತ್ಸವ


ಕೊಪ್ಪಳ ಮೇ. 19 (ಕರ್ನಾಟಕ ವಾರ್ತೆ): ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಪ್ಪಳ ತಾಲೂಕು ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ ಮೇ. 20 ರಂದು ಸಂಜೆ 5-30 ಗಂಟೆಗೆ ಹುಲಿಗಿಯಲ್ಲಿ ನೆರವೇರಲಿದೆ.
     ಹುಲಿಗೆಮ್ಮ ದೇವಿ ವಾರ್ಷಿಕ ಜಾತ್ರೆ ಅಂಗವಾಗಿ ಮೇ. 20 ರಂದು ಸಂಜೆ 5-30 ಗಂಟೆಗೆ ಹುಲಿಗೆಮ್ಮ ದೇವಿ ಮಹಾರಥೋತ್ಸವ ಜರುಗಲಿದೆ.  ಮೇ. 21 ರಂದು ಬಾಳಿಂಡಿಗೆ, ಕೊಂಡದ ಪೂಜಾ, ಗಂಗಾದೇವಿ ಪೂಜಾ, ಶ್ರೀ ದೇವಿಗೆ ಪ್ರಸಾದ ಕಟ್ಟುವುದು, ಬಾಳಿದಂಡಿಗೆ ಆರೋಹಣ ಕಾರ್ಯಕ್ರಮಗಳು ನೆರವೇರಲಿವೆ.  ಮೇ. 22 ರಂದು ಪಾಯಸ ಅಗ್ನಿಕುಂಡ, ಕೊಂಡದ ಪೂಜಾ, ಹಿಡಿದಕ್ಷಿಣೆ ವಿತರಣೆ, ಪಡಗದ ಪೂಜಾ, ಗಂಗಾದೇವಿ ಪೂಜಾ, ಶ್ರೀ ದೇವಿಗೆ ಪ್ರಸಾದ ಕಟ್ಟುವುದು ಹಾಗೂ ನಿವೇದನೆ.  ಮೇ. 23 ರಂದು ಬೆಳಿಗ್ಗೆ 6-30 ಗಂಟೆಗೆ ಅಗ್ನಿಕುಂಡ ಕಾರ್ಯಕ್ರಮ ನೆರವೇರಲಿದೆ.   ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ  ದೇವಿಯ ದರ್ಶನ ಪಡೆದು ದೇವಿಯ ಕೃಪೆಗೆ ಪಾತ್ರರಾಗುವಂತೆ ಕೋರಲಾಗಿದೆ.  ಜಾತ್ರೆಗೆ ಆಗಮಿಸಲಿರುವ ಲಕ್ಷಾಂತರ ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು,  ವಿವಿಧ ಮಾರ್ಗಗಳಿಂದ ಬರುವ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ದೇವಸ್ಥಾನ ಮತ್ತು ಗ್ರಾಮಪಂಚಾಯಿತಿ ವತಿಯಿಂದ ಟ್ಯಾಂಕರುಗಳ ಮೂಲಕ, ಅರವಟಿಗೆಗಳ ಮೂಲಕ ವ್ಯವಸ್ಥೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
     ಹುಲಿಗೆಮ್ಮ ದೇವಿಗೆ ಸಲ್ಲಿಸುವ  ಬೆಳ್ಳಿ, ಬಂಗಾರ, ಕಾಣಿಕೆ ಹಾಗೂ ಮುಡುಪುಗಳನ್ನು   ದೇವಸ್ಥಾನದ ಕಚೇರಿಯಲ್ಲಿ ಕೊಟ್ಟು ರಶೀದಿ ಪಡೆಯಬೇಕು ಅಥವಾ ಹುಂಡಿಯಲ್ಲಿ ಹಾಕಬೇಕು. ರಶೀದಿ ಪಡೆಯದೇ ಕೊಡುವ ಕಾಣಿಕೆಗಳು ದೇವಿಯ ನಿಧಿಗೆ ಸೇರುವುದಿಲ್ಲ. ಉಚಿತ ಅನ್ನ ದಾಸೋಹಕ್ಕೆ ದವಸ ಧಾನ್ಯ ನೀಡಬಯಸುವ ಭಕ್ತಾದಿಗಳು ಗಣಕೀಕೃತ ಕೌಟರ್‍ನಲ್ಲಿ ನೀಡಿ ರಸೀದಿ ಪಡೆಯಬಹುದು.
      ಜಾತ್ರೆಯ ಸಂದರ್ಭದಲ್ಲಿ ಯಾವುದೇ ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಹಾಗೂ ದಂಡ ವಿಧಿಸಲಾಗುವುದು. ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಮಹಾನಕ್ಷೆ ತಯಾರಿಸಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಭಕ್ತಾದಿಗಳು ಉದಾರವಾಗಿ ತನುಮನದಿಂದ ದೇಣಿಗೆ ನೀಡಲು ಕೋರಿದೆ.  ಜಾತ್ರೆಗೆ ಆಗಮಿಸುವ ಭಕ್ತಾದಿಗಳು ಮುನಿರಾಬಾದ್ ರೇಲ್ವೆ ನಿಲ್ದಾಣದಲ್ಲಿ ಇಳಿಯಬೇಕು, ಕೊಪ್ಪಳ,  ಗಂಗಾವತಿ ಹಾಗೂ ಹೊಸಪೇಟೆಯಿಂದ ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಲಾಗುವುದು.  ಹೆಚ್ಚಿನ ಮಾಹಿತಿಗೆ 8095679319 ಅಥವಾ 8151016891 ಕ್ಕೆ ಸಂಪರ್ಕಿಸಬಹುದು  ಎಂದು ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.



ಹೀಗಾಗಿ ಲೇಖನಗಳು ಮೇ. 20 ರಂದು ಹುಲಿಗೆಮ್ಮ ದೇವಿ ಮಹಾರಥೋತ್ಸವ

ಎಲ್ಲಾ ಲೇಖನಗಳು ಆಗಿದೆ ಮೇ. 20 ರಂದು ಹುಲಿಗೆಮ್ಮ ದೇವಿ ಮಹಾರಥೋತ್ಸವ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೇ. 20 ರಂದು ಹುಲಿಗೆಮ್ಮ ದೇವಿ ಮಹಾರಥೋತ್ಸವ ಲಿಂಕ್ ವಿಳಾಸ https://dekalungi.blogspot.com/2017/05/20_19.html

Subscribe to receive free email updates:

0 Response to "ಮೇ. 20 ರಂದು ಹುಲಿಗೆಮ್ಮ ದೇವಿ ಮಹಾರಥೋತ್ಸವ"

ಕಾಮೆಂಟ್‌‌ ಪೋಸ್ಟ್‌ ಮಾಡಿ