ಶೀರ್ಷಿಕೆ : ಕೆಎಎಸ್ ಹುದ್ದೆಗಳ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಕೆಎಎಸ್ ಹುದ್ದೆಗಳ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ
ಕೆಎಎಸ್ ಹುದ್ದೆಗಳ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ, ಮೇ. 10 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಕೆ.ಎ.ಎಸ್. ಹಾಗೂ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ನಡೆಯುವ ಪರೀಕ್ಷಾ ಪೂರ್ವಭಾವಿ ತರಬೇತಿಗೆ ಆಯ್ಕೆಮಾಡಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆಮಾಡಿ, ಉಚಿತವಾಗಿ 5-7 ತಿಂಗಳ ತರಬೇತಿಯನ್ನು ನೀಡಲಾಗುವುದು.
ಕೆ.ಎ.ಎಸ್. ಮತ್ತು ಎ&ಬಿ ವೃಂದದ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವಭಾವಿ ತರಬೇತಿ ಪಡೆಯುವ ಅಭ್ಯರ್ಥಿಗಳು, 21 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು. ಪದವಿ ಉತ್ತೀರ್ಣರಾಗಿರಬೇಕು. ಕರ್ನಾಟಕ ರಾಜ್ಯದವರಾಗಿರಬೇಕು. ಪರೀಕ್ಷೆಗಳಿಗೆ ವಿಧಿಸುವ ಎಲ್ಲಾ ನಿಬಂಧನೆಗಳನ್ನು ಪೂರೈಸಬೇಕು. ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಹಾಗೂ ವಿವಿಧ ಸಂಸ್ಥೆಗಳಲ್ಲಿ ಲಭ್ಯವಿರುವ ಸೀಟುಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ವೆಬ್‍ಸೈಟ್ www.sw.kar.nic.in ನಲ್ಲಿ ಮೇ.20ರ ಸಂಜೆ 5-30 ಗಂಟೆಯೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಇಲಾಖೆ ವೆಬ್‍ಸೈಟ್ ನೋಡಬಹುದು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕೆಎಎಸ್ ಹುದ್ದೆಗಳ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕೆಎಎಸ್ ಹುದ್ದೆಗಳ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೆಎಎಸ್ ಹುದ್ದೆಗಳ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_0.html
0 Response to "ಕೆಎಎಸ್ ಹುದ್ದೆಗಳ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ