ಬಾಲ್ಯ ವಿವಾಹ ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ : ಕನಗವಲ್ಲಿ ಸೂಚನೆ

ಬಾಲ್ಯ ವಿವಾಹ ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ : ಕನಗವಲ್ಲಿ ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಬಾಲ್ಯ ವಿವಾಹ ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ : ಕನಗವಲ್ಲಿ ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಬಾಲ್ಯ ವಿವಾಹ ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ : ಕನಗವಲ್ಲಿ ಸೂಚನೆ
ಲಿಂಕ್ : ಬಾಲ್ಯ ವಿವಾಹ ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ : ಕನಗವಲ್ಲಿ ಸೂಚನೆ

ಓದಿ


ಬಾಲ್ಯ ವಿವಾಹ ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ : ಕನಗವಲ್ಲಿ ಸೂಚನೆ


ಕೊಪ್ಪಳ, ಮೇ. 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗುತ್ತಿದ್ದು, 18 ವರ್ಷದೊಳಗಿನ ಯಾವುದೇ ಹೆಣ್ಣು ಮಕ್ಕಳಿಗೆ ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹ ಮಾಡದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
“ಜಿಲ್ಲಾ ಮಕ್ಕಳ ರಕ್ಷಣಾ ಸೂಸೈಟಿ” ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ  ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹವನ್ನು ತಡೆಯುವ ಸಂದರ್ಭದಲ್ಲಿ ಒಂದು ವೇಳೆ ಯಾವುದೇ ಪ್ರಭಾವ ಅಥವಾ ಒತ್ತಡ ಬಂದಲ್ಲಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಕಲಂ 13 ರಡಿಯಲ್ಲಿ ಪ್ರಥಮ ದರ್ಜೆ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ಹೊರಡಿಸಬಹುದಾಗಿದ್ದು, ಎಲ್ಲರು ಈ ಕ್ರಮವನ್ನು ಬಳಸಿಕೊಂಡು ಬಾಲ್ಯ ವಿವಾಹವನ್ನು ತಡೆಗಟ್ಟಬೇಕು.  ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಕಟಿಬದ್ಧವಾಗಿ ಕಾರ್ಯನಿರ್ವಹಿಸಬೇಕು.  ಬಾಲ್ಯ ವಿವಾಹ ಪ್ರಕರಣಗಳನ್ನು ನಿರ್ವಹಿಸಲು ವಿಫಲರಾದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು.  ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ರಡಿಯಲ್ಲಿ ನೊಂದಾಯಿತವಾದ ಸಂಸ್ಥೆಗಳಲ್ಲಿ ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ದಾಖಲಾಗಿರುವ ಮಕ್ಕಳ ಪೋಷಣೆ ಮತ್ತು ರಕ್ಷಣೆಗಾಗಿ ಕೈಗೊಂಡಿರುವ ಕ್ರಮಗಳನ್ನು ಕಾಲ ಕಾಲಕ್ಕೆ ಪರಿಶೀಲಿಸಿ, ವರದಿಯನ್ನು ನೀಡಬೇಕು.
ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ತೊರೆದು ಹೋದ 10 ಮಕ್ಕಳ ಪ್ರಕರಣಗಳು ಹಾಗೂ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳನ್ನು ಆಧ್ಯಾರ್ಪಣೆ ಮಾಡಿದ 09 ಪ್ರಕರಣಗಳು ವರದಿಯಾಗಿವೆ.  ಜಿಲ್ಲೆಯಲ್ಲಿ “ಮಮತೆಯ ತೊಟ್ಟಿಲು” ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಪಾಲಕರು ತಮಗೆ ಬೇಡವಾದ ಮಕ್ಕಳನ್ನು ಎಲ್ಲೆಂದರಲ್ಲಿ ಬಿಸಾಡದೇ ಈ ಮಮತೆಯ ತೊಟ್ಟಿಲಲ್ಲಿ ಹಾಕಿದಲ್ಲಿ ಸರ್ಕಾರವೇ ಆ ಮಗುವಿನ ಪೋಷಣೆ ಮತ್ತು ರಕ್ಷಣೆಯ ಜವಾಬ್ದಾರಿಯನ್ನು ವಹಿಸಿ, ಮಗುವಿಗೆ ಸೂಕ್ತ ಪುರ್ನವಸತಿಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಹೇಳಿದರು. 
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀದೇವಿ ಗದ್ದನಕೇರಿ, ನಿರೂಪಣಾಧಿಕಾರಿ ಮಂಜುನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಟಿ. ರಾಮಕೃಷ್ಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರತಿನಿಧಿಗಳು, ಮಕ್ಕಳ ಕಲ್ಯಾಣ ಸಮಿತಿಯ ಸರ್ವ ಸದಸ್ಯರು, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಕಾಣೆಯಾದ ಮಕ್ಕಳ ಬ್ಯೂರೋದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು ಬಾಲ್ಯ ವಿವಾಹ ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ : ಕನಗವಲ್ಲಿ ಸೂಚನೆ

ಎಲ್ಲಾ ಲೇಖನಗಳು ಆಗಿದೆ ಬಾಲ್ಯ ವಿವಾಹ ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ : ಕನಗವಲ್ಲಿ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಾಲ್ಯ ವಿವಾಹ ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ : ಕನಗವಲ್ಲಿ ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/05/blog-post_15.html

Subscribe to receive free email updates:

0 Response to "ಬಾಲ್ಯ ವಿವಾಹ ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ : ಕನಗವಲ್ಲಿ ಸೂಚನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ