ತಂಬಾಕು ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕ : ವಿಜಯಲಕ್ಷ್ಮೀ ಉಪನಾಳ

ತಂಬಾಕು ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕ : ವಿಜಯಲಕ್ಷ್ಮೀ ಉಪನಾಳ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ತಂಬಾಕು ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕ : ವಿಜಯಲಕ್ಷ್ಮೀ ಉಪನಾಳ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ತಂಬಾಕು ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕ : ವಿಜಯಲಕ್ಷ್ಮೀ ಉಪನಾಳ
ಲಿಂಕ್ : ತಂಬಾಕು ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕ : ವಿಜಯಲಕ್ಷ್ಮೀ ಉಪನಾಳ

ಓದಿ


ತಂಬಾಕು ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕ : ವಿಜಯಲಕ್ಷ್ಮೀ ಉಪನಾಳ


ಕೊಪ್ಪಳ, ಮೇ. 31 (ಕರ್ನಾಟಕ ವಾರ್ತೆ): ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಹಾಗೂ ಅಭಿವೃದ್ಧಿಗೆ ಮಾರಕವಾಗಿದ್ದು, ತಂಬಾಕು ನಿಯಂತ್ರಣ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವಿಜಯಲಕ್ಷ್ಮೀ ಎಸ್. ಉಪನಾಳ ಹೇಳಿದರು.
    ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಇವರ ಸಹಯೋಗದಲ್ಲಿ ಬುಧವಾರದಂದು ಜಿಲ್ಲಾ ನ್ಯಾಯಾಲಯದ ಸಾಕ್ಷಿದಾರರ ಮೊಗಸಾಲೆ ಆವರಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಸಮಾಜದಲ್ಲಿ ನಾವು ವಿದ್ಯಾವಂತರಾಗಿದ್ದೇವೆ ಅಂದುಕೊಂಡರೆ ಸಾಲದು, ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ, ಕುಟುಂಬ, ಸಮಾಜದ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ತಂಬಾಕು ಸೇವೇನೆಯನ್ನು ತಡೆಗಟ್ಟಲು ಸಹಕರಿಸಬೇಕು.  ಅಂದಾಗ ಮಾತ್ರ ನಾವು ವಿದ್ಯಾವಂತರು ಎನಿಸಿಕೊಳ್ಳಲು ಸಾಧ್ಯ.  ಒಬ್ಬರು ಕನಿಷ್ಠ 2 ವ್ಯಕ್ತಿಗಳನ್ನು ಸುಧಾರಿಸುವ ಕಾರ್ಯವೆಸಗಿದಲ್ಲಿ, ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ತ್ವರಿತವಾಗಿ ಸುಧಾರಿಸಬಹುದು.  ಜೀವನ ಆಯ್ದುಕೊಳ್ಳಿ ತಂಬಾಕನ್ನಲ್ಲ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವಿಜಯಲಕ್ಷ್ಮೀ ಎಸ್. ಉಪನಾಳ ಹೇಳಿದರು.
    ತಂಬಾಕು ಉತ್ಪನ್ನಗಳ ಅಧಿನಿಯಮ-2003 ಹಾಗೂ ತಂಬಾಕು ಸೇವೆನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಎಂ.ಎಂ. ಕಟ್ಟಿಮನಿ ಅವರು ವಿಶೇಷ ಉಪನ್ಯಾಸ ನೀಡಿ, ತಂಬಾಕು ಸೇವನೆಯಲ್ಲಿ ಹೊಗೆ ರಹಿತ ಹಾಗೂ ಹೊಗೆ ಸಹಿತ ಎರಡು ಪ್ರಕಾರಗಳಲ್ಲಿವೆ.  ಹೊಗೆ ರಹಿತ ತಂಬಾಕು ಸೇವನೆಗಳಲ್ಲಿ ತಂಬಾಕು, ಗುಟ್ಕಾ, ಇತ್ಯಾದಿ, ಹಾಗೂ ಹೊಗೆ ಸಹಿತ ತಂಬಾಕು ಸೇವನೆಯಲ್ಲಿ ಬೀಡಿ, ಸಿಗ್‍ರೇಟ್ ಇತ್ಯಾದಿಗಳ ಸೇವನೆಯಾಗಿವೆ.  ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಖಾಯಿಲೆಗಳಿಗೆ ತಂಬಾಕು ಸೇವನೆಯೇ ಪ್ರಮುಖ ಕಾರಣವಾಗಿದೆ.  ತಂಬಾಕು ಸೇವನೆಯಿಂದ ಪ್ರತಿದಿನ ಸುಮಾರು 6 ಲಕ್ಷ ಜನರು ಸಾವನ್ನಪ್ಪುತ್ತಾರೆ.    ಇದರ ನಿಯಂತ್ರಣಕ್ಕಾಗಿ ತಂಬಾಕು ನಿಯಂತ್ರಣ ಕಾನೂನು- ಕೋಟ್ಪಾ 2003 ಕಾಯ್ದೆ ಜಾರಿಗೆ ಬಂದಿದೆ.  ಸೆಕ್ಷನ್-4 ಸಾರ್ವಜನಿಕ ಸ್ಥಳಗಲ್ಲಿ ಧೂಮಪಾನ ಮಾಡುವುದು ನಿóಷೇಧ.  ಸೆಕ್ಷನ್-5 ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು, ಉತ್ತೇಜನ, ಪ್ರಾಯೋಜಕತೆ ನಿಷೇಧ.  ಸೆಕ್ಷನ್-6 ತಂಬಾಕು ಉತ್ಪನ್ನಗಳು ಅಪ್ರಾಪ್ತ ವಯಸ್ಕರಿಗೆ (18 ವರ್ಷದೊಳಗಿನ ಮಕ್ಕಳಿಗೆ) ಸಿಗದಂತೆ ನಿಯಂತ್ರಣ ಮಾಡುವುದು.  ಹಾಗೂ ಧೂಮಪಾನ ಮಾಡುವುದರಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ರಾಮಕೃಷ್ಣ ಅವರು ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಶ್ರೀನಿವಾಸ, ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ವಿಜಯ ಕುಮಾರ ಕನ್ನೂರು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ದಾನರಡ್ಡಿ, ಡಾ. ಜಂಬಯ್ಯ, ಡಾ. ಯುವರಾಜ ಸೇರಿದಂತೆ   ಇತರರು ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು ತಂಬಾಕು ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕ : ವಿಜಯಲಕ್ಷ್ಮೀ ಉಪನಾಳ

ಎಲ್ಲಾ ಲೇಖನಗಳು ಆಗಿದೆ ತಂಬಾಕು ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕ : ವಿಜಯಲಕ್ಷ್ಮೀ ಉಪನಾಳ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ತಂಬಾಕು ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕ : ವಿಜಯಲಕ್ಷ್ಮೀ ಉಪನಾಳ ಲಿಂಕ್ ವಿಳಾಸ https://dekalungi.blogspot.com/2017/05/blog-post_195.html

Subscribe to receive free email updates:

0 Response to "ತಂಬಾಕು ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕ : ವಿಜಯಲಕ್ಷ್ಮೀ ಉಪನಾಳ"

ಕಾಮೆಂಟ್‌‌ ಪೋಸ್ಟ್‌ ಮಾಡಿ