ಶೀರ್ಷಿಕೆ : ಯು.ಪಿ.ಎಸ್.ಸಿ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಯು.ಪಿ.ಎಸ್.ಸಿ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ : ಅರ್ಜಿ ಆಹ್ವಾನ
ಯು.ಪಿ.ಎಸ್.ಸಿ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ, ಮೇ. 09 (ಕರ್ನಾಟಕ ವಾರ್ತೆ): ಯು.ಪಿ.ಎಸ್.ಸಿ ಹುದ್ದೆಗಳಿಗೆ ನಡೆಯುವ ಪರೀಕ್ಷಾ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಆಯ್ಕೆಮಾಡಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯುಪಿಎಸ್ಸಿ ಹುದ್ದೆಗಳ ಪರೀಕ್ಷೆ ತೆಗೆದುಕೊಳ್ಳುವ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲು ಉದ್ದೇಶಿಸಲಾಗಿದ್ದು, ಈ ತರಬೇತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮೆರಿಟ್ ಆಧಾರದ ಮೇಲೆ ಆಯ್ಕೆಮಾಡಿ, ಉಚಿತವಾಗಿ 7 ರಿಂದ 9 ತಿಂಗಳ ಅವಧಿಯ ತರಬೇತಿ ನೀಡಲಾಗುವುದು.
ಯು.ಪಿ.ಎಸ್.ಸಿ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವಭಾವಿ ತರಬೇತಿ ಪಡೆಯುವ ಅಭ್ಯರ್ಥಿಗಳು, 21 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು. ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ರಾಜ್ಯದವರಾಗಿರಬೇಕು. ಪರೀಕ್ಷೆಗಳಿಗೆ ವಿಧಿಸುವ ಎಲ್ಲಾ ನಿಬಂಧನೆಗಳನ್ನು ಪೂರೈಸಬೇಕು. ಅಭ್ಯರ್ಥಿಯು/ ಪೋಷಕರ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. 6 ಲಕ್ಷ ಮೀರಿರಬಾರದು. ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಹಾಗೂ ವಿವಿಧ ಸಂಸ್ಥೆಗಳಲ್ಲಿ ಲಭ್ಯವಿರುವ ಸೀಟುಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ವೆಬ್ಸೈಟ್ www.sw.kar.nic.in ನಲ್ಲಿ ಮೇ.20ರ ಸಂಜೆ 5-30 ಗಂಟೆಯೊಳಗಾಗಿ ಸಲ್ಲಿಸಲು ಕೋರಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖೆ ವೆಬ್ಸೈಟ್ನಲ್ಲಿ ನೋಡಬಹುದು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಯು.ಪಿ.ಎಸ್.ಸಿ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಯು.ಪಿ.ಎಸ್.ಸಿ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಯು.ಪಿ.ಎಸ್.ಸಿ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_20.html
0 Response to "ಯು.ಪಿ.ಎಸ್.ಸಿ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ