ಶೀರ್ಷಿಕೆ : ಜನ-ಮನ ಕಾರ್ಯಕ್ರಮ : ಅನ್ನಭಾಗ್ಯದಿಂದ ಹಸಿವುಮುಕ್ತ ಕರ್ನಾಟಕ ನಿರ್ಮಾಣ ಸಾಧ್ಯವಾಗಿದೆ- ಬಸವರಾಜ ರಾಯರಡ್ಡಿ
ಲಿಂಕ್ : ಜನ-ಮನ ಕಾರ್ಯಕ್ರಮ : ಅನ್ನಭಾಗ್ಯದಿಂದ ಹಸಿವುಮುಕ್ತ ಕರ್ನಾಟಕ ನಿರ್ಮಾಣ ಸಾಧ್ಯವಾಗಿದೆ- ಬಸವರಾಜ ರಾಯರಡ್ಡಿ
ಜನ-ಮನ ಕಾರ್ಯಕ್ರಮ : ಅನ್ನಭಾಗ್ಯದಿಂದ ಹಸಿವುಮುಕ್ತ ಕರ್ನಾಟಕ ನಿರ್ಮಾಣ ಸಾಧ್ಯವಾಗಿದೆ- ಬಸವರಾಜ ರಾಯರಡ್ಡಿ
ಕೊಪ್ಪಳ, ಮೇ. 20 (ಕರ್ನಾಟಕ ವಾರ್ತೆ) : ಬಡ ಕುಟುಂಬಗಳಿಗೆ ಉಚಿತ ಅಕ್ಕಿ, ಧಾನ್ಯ ನೀಡುವ ‘ಅನ್ನಭಾಗ್ಯ’ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೊಳಿಸಿರುವುದರಿಂದ, ಹಸಿವುಮುಕ್ತ ಕರ್ನಾಟಕ ನಿರ್ಮಾಣ ಸಾಧ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇವರ ಸಹಯೋಗದಲ್ಲಿ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಶನಿವಾರದಂದು ವಿವಿಧ ಯೋಜನೆಗಳ ಫಲಾನುಭವಿಗಳ ಅಭಿಪ್ರಾಯ ಪಡೆಯುವ ಸಲುವಾಗಿ ಏರ್ಪಡಿಸಲಾಗಿದ್ದ ಜನ-ಮನ ಕಾರ್ಯಕ್ರಮದ ಉದ್ಘಾಟನೆ ಹಾಗೂ ಅನ್ನಭಾಗ್ಯ ಯೋಜನೆ ವಿಸ್ತರಣೆಯಡಿ ಫಲಾನುಭವಿಗಳಿಗೆ ಅಕ್ಕಿ ವಿತರಣೆ ನೆರವೇರಿಸಿ, ಅವರು ಮಾತನಾಡಿದರು.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅಧಿಕಾರ ಸ್ವೀಕರಿಸಿದ ಕೂಡಲೆ, ಬಡ ಜನರಿಗೆ ಪಡಿತರ ವ್ಯವಸ್ಥೆಯಲ್ಲಿ ಅಕ್ಕಿ,ಧಾನ್ಯ ನೀಡುವ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದರು. ಇದು ಹಸಿವು ಮುಕ್ತ ಕರ್ನಾಟಕ ನಿರ್ಮಾಣಕ್ಕೆ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ 05 ಕೆ.ಜಿ. ಉಚಿತವಾಗಿ ಅಕ್ಕಿ ನೀಡುವ ಯೋಜನೆಯನ್ನು ಜಾರಿಗೊಳಿಸಲಾಯಿತು. ಇದೀಗ ಪ್ರತಿ ಸದಸ್ಯರಿಗೆ ತಿಂಗಳಿಗೆ 07 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ತೀವ್ರ ಬರ ಪರಿಸ್ಥಿತಿಯ ಹೊರತಾಗಿಯೂ ನಮ್ಮ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಿಂದಾಗಿ, ಯಾವ ಕುಟುಂಬಗಳೂ ಹಸಿವಿನ ತೊಂದರೆ ಅನುಭವಿಸಲಿಲ್ಲ. ಕೊಪ್ಪಳ ಜಿಲ್ಲೆಯಲ್ಲಿ 238047 ಬಿಪಿಎಲ್ ಹಾಗೂ 37398 ಅಂತ್ಯೋದಯ ಪಡಿತರ ಚೀಟಿಗಳಿದ್ದು, ಸುಮಾರು 973735 ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಇದಕ್ಕಗಿಯೇ ಜಿಲ್ಲೆಯಲ್ಲಿ 179. 41 ಕೋಟಿ ರೂ. ಸಹಾಯಧನವನ್ನು ಸರ್ಕಾರ ಭರಿಸಿದೆ. ಈ ವರ್ಷ ರಾಜ್ಯದಲ್ಲಿ ವೃದ್ಧಾಶ್ರಮ ಮತ್ತು ಅನಾಥಾಶ್ರಮಗಳಿಗೂ ಸಹ ಉಚಿತವಾಗಿ ಆಹಾರಧಾನ್ಯ ಕೊಡುವ ‘ದಾಸೋಹ’ ಯೋಜನೆಯನ್ನು ಸರ್ಕಾರ ಶೀಘ್ರದಲ್ಲಿಯೇ ಜಾರಿಗೆ ತರಲಿದೆ ಎಂದು ಮಂತ್ರಿಗಳು ಹೇಳಿದರು.
ರಾಜಸ್ಥಾನ ರಾಜ್ಯ ಬಿಟ್ಟರೆ, ಅತಿ ಹೆಚ್ಚು ಒಣ ಬೇಸಾಯವನ್ನು ಹೊಂದಿರುವ ರಾಜ್ಯ ಕರ್ನಾಟಕವಾಗಿದ್ದು, ಮಳೆ ನೀರು ಸಂಗ್ರಹಿಸಿ, ಬೆಳೆಗಳನ್ನು ಉಳಿಸಿಕೊಳ್ಳಬಹುದಾದ ರೀತಿಯಲ್ಲಿ ನಮ್ಮ ಸರ್ಕಾರ ‘ಕೃಷಿ ಭಾಗ್ಯ’ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಲು ಸಹಾಯಧನ ನೀಡುತ್ತಿದೆ. ರಾಜ್ಯದಲ್ಲಿಯೇ ಕೊಪ್ಪಳ ಜಿಲ್ಲೆಯಲ್ಲಿ ಅತಿ ಹೆಚ್ಚು ಕೃಷಿ ಹೊಂಡಗಳ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ 5734 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದ್ದು, 5177. 59 ಲಕ್ಷ ರೂ. ಅನುದಾನ ಸರ್ಕಾರ ಒದಗಿಸಿದೆ. ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ 4000 ಕೃಷಿ ಹೊಂಡಗಳ ನಿರ್ಮಾಣದ ಗುರಿ ಹೊಂದಲಾಗಿದೆ ಎಂದರು.
1. 5 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ : ರಾಜ್ಯದಲ್ಲಿ ಉನ್ನತ ವ್ಯಾಸಂಗಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಿಸುವ ಯೋಜನೆಯನ್ನು ಸರ್ಕಾರ ಶೀಘ್ರ ಜಾರಿಗೆ ತರಲಿದ್ದು, ಈ ವರ್ಷ 1.5 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್ ವಿತರಿಸುವ ಗುರಿ ಹೊಂದಲಾಗಿದೆ ಎಂದರು. ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ 07 ಕೆ.ಜಿ. ಅಕ್ಕಿ ನೀಡುವ ಕಾರ್ಯಕ್ರಮವನ್ನು, ಫಲಾನುಭವಿಗಳಿಗೆ ಅಕ್ಕಿ ವಿತರಿಸುವ ಮೂಲಕ ಸಾಂಕೇತಿಕವಾಗಿ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಬಡವರ, ಶೋಷಿತ ವರ್ಗದವರ ಆಶಾಕಿರಣದಂತೆ ನಮ್ಮ ಸರ್ಕಾರ ಹಲವು ಮಹತ್ವಪೂರ್ಣ ಯೋಜನೆಗಳನ್ನು ಜಾರಿಗೊಳಿಸಿದೆ. ಸರ್ಕಾರ ರಚನೆ ಸಂದರ್ಭದಲ್ಲಿ ಜನರಿಗೆ ನೀಡಿದ್ದ ಭರವಸೆಗಳ ಪೈಕಿ ಬಹುತೇಕ ಭರವಸೆಗಳನ್ನು ಈಗಾಗಲೆ ಈಡೇರಿಸಲಾಗಿದೆ. ಅನ್ನಭಾಗ್ಯ ಯೋಜನೆಯಿಂದ ಬರ ಪರಿಸ್ಥಿತಿ ಸಮರ್ಥವಾಗಿ ಎದುರಿಸಲಾಗಿದ್ದು, ಗುಳೆ ತಡೆಗೂ ಯೋಜನೆ ಸಹಕಾರವಾಗಿದೆ. ಮಕ್ಕಳ ಶಿಕ್ಷಣಕ್ಕೆ ಹೇಗೆ ಆದ್ಯತೆ ನೀಡಲಾಗುತ್ತಿದೆಯೋ, ಅದೇ ರೀತಿ ಮಕ್ಕಳ ಪೌಷ್ಠಿಕತೆ ಹೆಚ್ಚಿಸಲೂ ಸಹ ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ್ ಖಾದ್ರಿ, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ ಉಪಸ್ಥಿತರಿದ್ದರು. ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸಿ.ಡಿ. ಗೀತಾ ವಂದಿಸಿದರು. ಸದಾಶಿವ ಪಾಟೀಲ್ ಅವರ ತಂಡ ನಾಡಗೀತೆ ಮತ್ತು ರೈತಗೀತೆಯನ್ನು ಪ್ರಸ್ತುತಪಡಿಸಿದರು.
ಹೀಗಾಗಿ ಲೇಖನಗಳು ಜನ-ಮನ ಕಾರ್ಯಕ್ರಮ : ಅನ್ನಭಾಗ್ಯದಿಂದ ಹಸಿವುಮುಕ್ತ ಕರ್ನಾಟಕ ನಿರ್ಮಾಣ ಸಾಧ್ಯವಾಗಿದೆ- ಬಸವರಾಜ ರಾಯರಡ್ಡಿ
ಎಲ್ಲಾ ಲೇಖನಗಳು ಆಗಿದೆ ಜನ-ಮನ ಕಾರ್ಯಕ್ರಮ : ಅನ್ನಭಾಗ್ಯದಿಂದ ಹಸಿವುಮುಕ್ತ ಕರ್ನಾಟಕ ನಿರ್ಮಾಣ ಸಾಧ್ಯವಾಗಿದೆ- ಬಸವರಾಜ ರಾಯರಡ್ಡಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜನ-ಮನ ಕಾರ್ಯಕ್ರಮ : ಅನ್ನಭಾಗ್ಯದಿಂದ ಹಸಿವುಮುಕ್ತ ಕರ್ನಾಟಕ ನಿರ್ಮಾಣ ಸಾಧ್ಯವಾಗಿದೆ- ಬಸವರಾಜ ರಾಯರಡ್ಡಿ ಲಿಂಕ್ ವಿಳಾಸ https://dekalungi.blogspot.com/2017/05/blog-post_213.html
0 Response to "ಜನ-ಮನ ಕಾರ್ಯಕ್ರಮ : ಅನ್ನಭಾಗ್ಯದಿಂದ ಹಸಿವುಮುಕ್ತ ಕರ್ನಾಟಕ ನಿರ್ಮಾಣ ಸಾಧ್ಯವಾಗಿದೆ- ಬಸವರಾಜ ರಾಯರಡ್ಡಿ"
ಕಾಮೆಂಟ್ ಪೋಸ್ಟ್ ಮಾಡಿ