ಶೀರ್ಷಿಕೆ : ಡೆಂಗ್ಯೂ ಜಾಗೃತಿ : ಸಾರ್ವಜನಿಕರ ಸಹಕಾರ ಅಗತ್ಯ- ಡಾ. ರಾಮಕೃಷ್ಣ
ಲಿಂಕ್ : ಡೆಂಗ್ಯೂ ಜಾಗೃತಿ : ಸಾರ್ವಜನಿಕರ ಸಹಕಾರ ಅಗತ್ಯ- ಡಾ. ರಾಮಕೃಷ್ಣ
ಡೆಂಗ್ಯೂ ಜಾಗೃತಿ : ಸಾರ್ವಜನಿಕರ ಸಹಕಾರ ಅಗತ್ಯ- ಡಾ. ರಾಮಕೃಷ್ಣ
ಕೊಪ್ಪಳ ಮೇ. 25 (ಕರ್ನಾಟಕ ವಾರ್ತೆ): ಡೆಂಗ್ಯೂ ಜ್ವರ ಮಾರಣಾಂತಿಕ ರೋಗವಾಗಿದ್ದು, ರೋಗ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಸಾರ್ವಜನಿಕರು ಮತ್ತು ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಅವರು ಹೇಳಿದರು.
ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೊಪ್ಪಳದ ಹಳೆ ಜಿಲ್ಲಾಸ್ಪತ್ರೆ ಆವರಣದ ಸಭಾ ಭವನದಲ್ಲಿ ಮಾಧ್ಯಮದವರಿಗೆ ಏರ್ಪಡಿಸಲಾಗಿದ್ದ ಮಾಹಿತಿ ನೀಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಡೆಂಗ್ಯೂ ಜ್ವರ ರೋಗ ಈಡಿಸ್ ಸೊಳ್ಳೆಗಳಿಂದ ಹರಡುವ ರೋಗವಾಗಿದ್ದು, ಸಾಮಾನ್ಯವಾಗಿ ಇದು, ಸ್ವಚ್ಛ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ಅಥವಾ ಮನೆ ಮಾಳಿಗೆ ಇನ್ನಿತರೆ ಸ್ಥಳಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಮನೆಯ ಸುತ್ತಮುತ್ತ ಉತ್ತಮ ಪರಿಸರ ನಿರ್ಮಾಣವಾದಲ್ಲಿ, ಸೊಳ್ಳೆಗಳು ಉತ್ಪತ್ತಿಯಾಗುವುದನ್ನು ತಡೆಗಟ್ಟಬಹುದು. ಜಿಲ್ಲೆಯಲ್ಲಿ ಕಳೆದ ವರ್ಷ ಒಟ್ಟು 291 ಶಂಕಿತ ಡೆಂಗ್ಯೂ ಜ್ವರ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 55 ಪ್ರಕರಣಗಳು ಡೆಂಗ್ಯು ಜ್ವರ ಎಂದು ಖಚಿತಪಟ್ಟಿದೆ. ಈ ವರ್ಷ ಏಪ್ರಿಲ್ ಅಂತ್ಯದವರೆಗೆ 125 ಶಂಕಿತ ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 19 ಪ್ರಕರಣಗಳು ಖಚಿತಗೊಂಡಿವೆ. ಕೊಪ್ಪಳ ತಾಲೂಕಿನಲ್ಲಿ 71, ಗಂಗಾವತಿ-17, ಕುಷ್ಟಗಿ-24, ಯಲಬುರ್ಗಾ-13 ಶಂಕಿತ ಪ್ರಕರಣಗಳು ವರದಿಯಾಗಿದ್ದು, ಕೊಪ್ಪಳ-02, ಗಂಗಾವತಿ-10, ಕುಷ್ಟಗಿ-06 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 01 ಡೆಂಗ್ಯೂ ಪ್ರಕರಣಗಳು ಖಚಿತಗೊಂಡಿವೆ. ಡೆಂಗ್ಯೂ ಮತ್ತು ಚಿಕುನ್‍ಗುನ್ಯಾ ಜ್ವರಕ್ಕೆ ಕಾರಣವಾಗುವ ಈಡಿಸ್ ಸೊಳ್ಳೆಗಳು ಹೆಚ್ಚಾಗಿ ಹಗಲು ಹೊತ್ತಿನಲ್ಲಿ ಹೆಚ್ಚು ಕ್ರಿಯಾಶೀಲವಾಗಿರುತ್ತವೆ. ಯಾವುದೇ ಜ್ವರವಿರಲಿ, ಶೀಘ್ರ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಸಉಕ್ತ. ನೀರಿನ ಶೇಖರಣೆ ಸಲಕರಣೆಗಳನ್ನು ಭದ್ರವಾಗಿ ಮುಚ್ಚಬೇಕು. ಮಲಗುವಾಗ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಮನೆಯ ಸುತ್ತಮುತ್ತ ಅಥವಾ ಬಯಲಿನಲ್ಲಿ ಟೈರು, ಟ್ಯೂಬು, ಒಡೆದ ಬಕೆಟ್, ಎಳನೀರು ಚೆಪ್ಪು, ಮರದ ಪೊಟರೆ, ಹೂವಿನ ಕುಂಡ, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಡೆಂಗ್ಯೂ ಮತ್ತು ಚಿಕೂನ್‍ಗುನ್ಯಾಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬೇಕು. ರೋಗ ಹತೋಟಿಕೆಗೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆಯೊಂದೆ ಪರಿಹಾರ ಮಾರ್ಗವಾಗಿದೆ.
ಡೆಂಗ್ಯೂ ಜಾಗೃತಿ ಕುರಿತಂತೆ ಜಿಲ್ಲೆಯಲ್ಲಿ ಮೇ. 13 ರಿಂದ 25 ರವರೆಗೆ ವಿಶೇಷ ಆಂದೋಲನವನ್ನು ಇಲಾಖೆ ಹಮ್ಮಿಕೊಂಡಿದೆ. ಸಾರ್ವಜನಿಕರು ಕೂಡ ಸೊಳ್ಳೆಗಳ ನಿರ್ಮೂಲನೆಯಲ್ಲಿ ಸಹಕರಿಸಬೇಕು. ಮಾಧ್ಯಮಗಳು ಹೆಚ್ಚಿನ ಪ್ರಚಾರ ನೀಡಿ, ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಮನವಿ ಮಾಡಿದರು.
ಡಾ. ವಿರುಪಾಕ್ಷರೆಡ್ಡಿ ಮಾದಿನೂರು, ಡಾ. ಕಟ್ಟಿಮನಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಡೆಂಗ್ಯೂ ಜಾಗೃತಿ : ಸಾರ್ವಜನಿಕರ ಸಹಕಾರ ಅಗತ್ಯ- ಡಾ. ರಾಮಕೃಷ್ಣ
ಎಲ್ಲಾ ಲೇಖನಗಳು ಆಗಿದೆ ಡೆಂಗ್ಯೂ ಜಾಗೃತಿ : ಸಾರ್ವಜನಿಕರ ಸಹಕಾರ ಅಗತ್ಯ- ಡಾ. ರಾಮಕೃಷ್ಣ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಡೆಂಗ್ಯೂ ಜಾಗೃತಿ : ಸಾರ್ವಜನಿಕರ ಸಹಕಾರ ಅಗತ್ಯ- ಡಾ. ರಾಮಕೃಷ್ಣ ಲಿಂಕ್ ವಿಳಾಸ https://dekalungi.blogspot.com/2017/05/blog-post_245.html
0 Response to "ಡೆಂಗ್ಯೂ ಜಾಗೃತಿ : ಸಾರ್ವಜನಿಕರ ಸಹಕಾರ ಅಗತ್ಯ- ಡಾ. ರಾಮಕೃಷ್ಣ"
ಕಾಮೆಂಟ್ ಪೋಸ್ಟ್ ಮಾಡಿ