ಕೊಪ್ಪಳಕ್ಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಮಂಜೂರು- ಬಸವರಾಜ ರಾಯರಡ್ಡಿ

ಕೊಪ್ಪಳಕ್ಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಮಂಜೂರು- ಬಸವರಾಜ ರಾಯರಡ್ಡಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳಕ್ಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಮಂಜೂರು- ಬಸವರಾಜ ರಾಯರಡ್ಡಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳಕ್ಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಮಂಜೂರು- ಬಸವರಾಜ ರಾಯರಡ್ಡಿ
ಲಿಂಕ್ : ಕೊಪ್ಪಳಕ್ಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಮಂಜೂರು- ಬಸವರಾಜ ರಾಯರಡ್ಡಿ

ಓದಿ


ಕೊಪ್ಪಳಕ್ಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಮಂಜೂರು- ಬಸವರಾಜ ರಾಯರಡ್ಡಿ



ಕೊಪ್ಪಳ ಮೇ. 15 (ಕರ್ನಾಟಕ ವಾರ್ತೆ): ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಕೊಪ್ಪಳಕ್ಕೆ ಮಂಜೂರು ಮಾಡಲಾಗಿದ್ದು, ಇದಕ್ಕಾಗಿ 90 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.

     ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ಧಿ ಕರ್ನಾಟಕ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ ಆಕಾಂಕ್ಷಿತ ಯುವಜನರ ಬೇಡಿಕೆ ಸಮೀಕ್ಷೆ ಮತ್ತು ನೋಂದಣಿ ಕಾರ್ಯಕ್ರಮ ಕುರಿತು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಸೋಮವಾರದಂದು ವೆಬ್‍ಪೋರ್ಟಲ್ ಉದ್ಘಾಟಿಸಿ ಅವರು ಮಾತನಾಡಿದರು.

     ಜಿಲ್ಲೆಯಲ್ಲಿ ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ತಳಕಲ್‍ನಲ್ಲಿ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡಲಾಗಿದ್ದು, ಇದಕ್ಕಾಗಿ 90 ಕೋಟಿ ರೂ. ಅನುದಾನ ಒದಗಿಸಲಾಗಿದೆ.  10 ಎಕರೆ ಜಮೀನು ಹೆಚ್ಚುವರಿಯಾಗಿ ಬೇಕಾಗಿದೆ.  ತಳಕಲ್‍ನಲ್ಲಿ ಪ್ರಾರಂಭವಾಗಲಿರುವ ಇಂಜಿನಿಯರಿಂಗ್ ಕಾಲೇಜು ಜೊತೆ ಜೊತೆಗೆ ಈ ಕೌಶಲ್ಯಾಭಿವೃದ್ಧಿ ಕೇಂದ್ರ ಸಹ ನಿರ್ಮಾಣವಾಗಲಿದೆ.  ಯುವಕರು ನಮ್ಮ ದೇಶದ ಸಂಪತ್ತು.  ಜಗತ್ತಿನಲ್ಲಿ ಅತಿ ಹೆಚ್ಚು ಯುವಜನತೆಯನ್ನು ಹೊಂದಿರುವ ದೇಶ ಭಾರತ.    30 ಕೋಟಿಗೂ ಹೆಚ್ಚು ಯುವಕರು ನಮ್ಮ ದೇಶದಲ್ಲಿದ್ದಾರೆ.  ಯುವಶಕ್ತಿ ದೇಶದಲ್ಲಿ ಸಮರ್ಪಕ ಬಳಕೆಯಾದರೆ ಮಾತ್ರ ದೇಶದ ಆಂತರಿಕ ಉತ್ಪನ್ನ ಹಾಗೂ ಆರ್ಥಿಕ ವ್ಯವಸ್ಥೆ ಶಕ್ತಿಯುತವಾಗಲಿದೆ.  ಜಾಗತೀಕರಣ ಮತ್ತು ಔದ್ಯೋಗೀಕರಣ ಜಾರಿಗೆ ಬಂದ ನಂತರ ನಮ್ಮ ದೇಶದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಹಾಗೂ ಉದ್ಯಮ ಶೀಲತೆ ಹೆಚ್ಚಾಗಿದ್ದು, ಜಿಡಿಪಿ ಕೂಡ ಹೆಚ್ಚಾಗಿದೆ.  ಚೀನಾ ದೇಶ ಜಾಗತೀಕರಣ ಒಪ್ಪಿಕೊಂಡ ನಂತರ ಅಲ್ಲಿ ಆರ್ಥಿಕ ಕ್ರಾಂತಿಯಾಗಲು ಸಾಧ್ಯವಾಯಿತು.  ಇದರ ಪರಿಣಾಮವಾಗಿ ಅಲ್ಲಿ ನಿರುದ್ಯೋಗ ಸಮಸ್ಯೆ ಕಡಿಮೆಯಾಗಿದ್ದು, ನಮ್ಮ ದೇಶದಲ್ಲೂ ಇದೇ ರೀತಿ ಆಗಬೇಕಿದೆ.  ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ಮಾತ್ರವಲ್ಲ, ಉದ್ಯಮಶೀಲತೆಯನ್ನೂ ಕಲಿಸಬೇಕಿದೆ.  ಯುವ ಜನರಿಗೆ ಉದ್ಯೋಗ ಕೌಶಲ್ಯವನ್ನು ನೀಡಿ, ಅವರ ಸಬಲಿಕರಣ ಕೈಗೊಳ್ಳಲು ರಾಜ್ಯದಲ್ಲಿ ಈ ವರ್ಷ 05 ಲಕ್ಷ ಯುವಜನರಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಗುರಿಯನ್ನು ನಿಗದಿಪಡಿಸಿದೆ.  ಕೊಪ್ಪಳ ಜಿಲ್ಲೆಯಲ್ಲಿ ಈ ವರ್ಷ 11 ಸಾವಿರ ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗುವುದು.  ಇದಕ್ಕಾಗಿ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ಧಿ ಕರ್ನಾಟಕ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಯುವಜನರು ತಮ್ಮ ಹೆಸರನ್ನು ನೋಂದಾಯಿಸಲು ವೆಬ್‍ಪೋರ್ಟಲ್ ಮೇ. 15 ರಿಂದ ಪ್ರಾರಂಭಿಸಲಾಗಿದೆ.  ಯುವಜನರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.
ಕೌಶಲ್ಯಾಭಿವೃದ್ಧಿ ವಿವಿ ಸ್ಥಾಪನೆ :
************ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 80 ಸಾವಿರ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆಯುತ್ತಿದ್ದಾರೆ.  ಶಿಕ್ಷಣ ಪಡೆದ ಎಲ್ಲರಿಗೂ ಸರ್ಕಾರಿ ನೌಕರಿ ದೊರೆಯಲು ಸಾಧ್ಯವಿಲ್ಲ. ಈಗಿನ ಯುವಪೀಳಿಗೆ ಟೇಬಲ್ ವರ್ಕ್‍ಗೆ ಆದ್ಯತೆ ನೀಡುತ್ತಾರೆಯೇ ಹೊರತು, ವೃತ್ತಿ ಕೌಶಲ ಆಧಾರಿತ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ.  ಕುಂಬಾರಿಕೆ, ಕಮ್ಮಾರಿಕೆ, ಕಸೂತಿ ಕಲೆಗಳು, ಶಿಲ್ಪ ಕೆತ್ತನೆ ಹೀಗೆ ವೃತ್ತಿ ಆಧಾರಿತ ಕೌಶಲ್ಯಗಳನ್ನು ಯಾರೂ ಕಲಿಯಲು ಮುಂದಾಗುತ್ತಿಲ್ಲ.  ಆದರೆ ವಾಸ್ತವವಾಗಿ ವೃತ್ತಿ ಆಧಾರಿತ ಉದ್ಯೋಗಕ್ಕೆ ಇತ್ತೀಚೆಗೆ ವ್ಯಾಪಕ ಬೇಡಿಕೆ ಇದೆ.  5 ಸಾವಿರಕ್ಕೂ ಹೆಚ್ಚು ಗ್ರಾಮೀಣ ಕೌಶಲ್ಯ ಆಧಾರಿತ ವೃತ್ತಿಗೆ ದೇಶದಲ್ಲಿ ವಿಫುಲ ಅವಕಾಶಗಲಿವೆ.  ಯುವಜನರಿಗೆ ಕೌಶಲ್ಯ ಅಭಿವೃದ್ಧಿಗಾಗಿಯೇ 2017-18 ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯವನ್ನು ಖಾಸಗಿಯವರ ಸಹಭಾಗಿತ್ವದಲ್ಲಿ ಸ್ಥಾಪಿಸಲು ಈಗಾಗಲೆ ಟಾಟಾ ಕಂಪನಿಯಂತಹವರ ಸಹಭಾಗಿತ್ವ ಪಡೆಯಲು ಮಾತುಕತೆ ನಡೆಸಲಾಗಿದೆ.  ಇದೇ ವರ್ಷ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಂತ್ರಿಗಳು ಹೇಳಿದರು.
ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ :
*************** ರಾಜ್ಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವವರ ಸಂಖ್ಯೆ ಕಡಿಮೆ ಇದ್ದು, ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ಮೊದಲ ವರ್ಷದ ಬಿಎ, ಬಿಕಾಂ, ಬಿಎಸ್‍ಸಿ ಹೀಗೆ ಪದವಿ ಶಿಕ್ಷಣ ಪಡೆಯುವ 1. 5 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಲಿದೆ.  ಅದೇ ರೀತಿ ಯುವಕ ಮತ್ತು ಯುವತಿಯರಿಗೆ ಪ್ರತ್ಯೇಕವಾಗಿ ವಸತಿ   ಸಹಿತ ಕಾಲೇಜುಗಳನ್ನು ಈ ವರ್ಷ ರಾಜ್ಯದ 20 ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗುವುದು.  ಹೈದ್ರಾಬಾದ್-ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಇದೇ ವರ್ಷ ಪ್ರಾರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.
     ಸಂಸದ ಕರಡಿ ಸಂಗಣ್ಣ ಮಾತನಾಡಿ, ನಿರುದ್ಯೋಗ ಸಮಸ್ಯೆಯು ದೇಶಕ್ಕೆ ಸವಾಲಿನ ವಿಷಯವಾಗಿದ್ದು, ಕೌಶಲ್ಯ ತರಬೇತಿ ಪಡೆದುಕೊಂಡರೆ, ಅಂತಹವರು ಬದುಕು ಕಟ್ಟಿಕೊಳ್ಳಲು ಸಾಧ್ಯ.  ಶಿಕ್ಷಣ ಕೇವಲ ಸರ್ಕಾರಿ ನೌಕರಿಗಾಗಿ ಎಂಬ ಮನಸ್ಥಿತಿ ಬದಲಾಗಬೇಕಿದೆ. ಯಾವುದೇ ಉದ್ಯೋಗವನ್ನು ಕೀಳು ಎಂದು ಯಾರೂ ಭಾವಿಸಬಾರದು. ಕೊಪ್ಪಳಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾತಿಗೆ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಲ್ಲಿ, ಮಂಜೂರು ಮಾಡಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
     ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಮಾತನಾಡಿ ಕೌಶಲ್ಯಾಬಿವೃದ್ಧಿ ವೆಬ್‍ಪೋರ್ಟಲ್‍ನಲ್ಲಿ ನೋಂದಣಿ ಮಾಡುವ ಕುರಿತು ಮಾಹಿತಿ ನೀಡಿ, 18 ರಿಂದ 35 ವರ್ಷದೊಳಗಿನ ಯಾವುದೇ ಯುವಜನರು ಕೌಶಲ್ಯಾಭಿವೃದ್ಧಿಗೆ ನೋಂದಣಿ ಮಾಡಿಸಬಹುದು. ವಿದ್ಯಾರ್ಹತೆಯ ಯಾವುದೇ ಮಿತಿ ಇದರಲ್ಲಿ ಇಲ್ಲ.  ನಾಡಕಚೇರಿ, ನಗರಸಭೆ, ಪುರಸಭೆ, ಪ.ಪಂಚಾಯತಿ ಅಥವಾ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ ಹಾಗೂ ಮನೆ ವಿಳಾಸ ಇಷ್ಟು ನೀಡಿ, ನೋಂದಣಿ ಮಾಡಿಸಬಹುದು.  225 ವಿಷಯಗಳಲ್ಲಿ ತರಬೇತಿ ನೀಡಲು ಅವಕಾಶವಿದ್ದು, ಈ ಪೈಕಿ ಗರಿಷ್ಠ 05 ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬಹುದು.  ತರಬೇತಿಗೆ ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.  ಜಿಲ್ಲೆಯ ನಿರುದ್ಯೋಗಿ ಯುವಜನರು ಇಂತಹ ವಿಶೇಷ ಯೋಜನೆಯ ಸವಲತ್ತು ಪಡೆದುಕೊಳ್ಳಲು ಮುಂದಾಗಬೇಕು ಎಂದರು.
     ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿ ಜಿ.ಪಂ. ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ ಮೇ. 15 ರಿಂದ 22 ರವರೆಗೆ ನೋಂದಣಿ ನಡೆಯಲಿದೆ.  ಜಿಲ್ಲಾ ಉದ್ಯೋಗವಿನಿಮಯ ಕಚೇರಿಯಲ್ಲಿ ವರ್ಷಪೂರ್ತಿ ನೊಂದಣಿ ಮಾಡಿಸಲು ಅವಕಾಶವಿದೆ.  ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಉಮಾ ಮಹದೇವನ್, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ, ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಡಾ. ಪ್ರಮೋದ್ ಗಾಯಿ, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ ಉಪಸ್ಥಿತರಿದ್ದರು.  ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕಲ್ಲೇಶ್ ಸ್ವಾಗತಿಸಿದರು.


ಹೀಗಾಗಿ ಲೇಖನಗಳು ಕೊಪ್ಪಳಕ್ಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಮಂಜೂರು- ಬಸವರಾಜ ರಾಯರಡ್ಡಿ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳಕ್ಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಮಂಜೂರು- ಬಸವರಾಜ ರಾಯರಡ್ಡಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳಕ್ಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಮಂಜೂರು- ಬಸವರಾಜ ರಾಯರಡ್ಡಿ ಲಿಂಕ್ ವಿಳಾಸ https://dekalungi.blogspot.com/2017/05/blog-post_27.html

Subscribe to receive free email updates:

0 Response to "ಕೊಪ್ಪಳಕ್ಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಮಂಜೂರು- ಬಸವರಾಜ ರಾಯರಡ್ಡಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ