ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅವಶ್ಯಕ : ವಸಂತ ಪ್ರೇಮಾ

ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅವಶ್ಯಕ : ವಸಂತ ಪ್ರೇಮಾ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅವಶ್ಯಕ : ವಸಂತ ಪ್ರೇಮಾ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅವಶ್ಯಕ : ವಸಂತ ಪ್ರೇಮಾ
ಲಿಂಕ್ : ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅವಶ್ಯಕ : ವಸಂತ ಪ್ರೇಮಾ

ಓದಿ


ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅವಶ್ಯಕ : ವಸಂತ ಪ್ರೇಮಾ


ಕೊಪ್ಪಳ, ಮೇ. 04 (ಕರ್ನಾಟಕ ವಾರ್ತೆ): ಸುಧಾರಣಾ ಸಂಸ್ಥೆಗಳ ನಿವಾಸಿಗಳಿಗೆ ವ್ಯಕ್ತಿತ್ವ ವಿಕಾಸನ ಶಿಬಿರ ಎಂಬುವುದು ಮಕ್ಕಳ ವ್ಯಕ್ತಿತ್ವ ವಿಕಾಸನಕ್ಕೆ ಪೂರಕವಾಗಿದ್ದು,  ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸಲು ಅವಶ್ಯಕವಾಗಿದೆ ಎಂದು ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ನಾಗರೀಕರ ಮತ್ತು ವಿಕಲಚೇತನ ಇಲಾಖೆ ಜಂಟಿ ನಿರ್ದೇಶಕಿ ವಸಂತ ಪ್ರೇಮಾ ಅವರು ಹೇಳಿದರು.
    ಧಾರವಾಡ ಬಾಲ ವಿಕಾಸ ಅಕಾಡೆಮಿ, ಕೊಪ್ಪಳ ಮಹಿಳಾ  ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಸ್ಥೆಗಳ ಸಹಯೋಗದಲ್ಲಿ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ವ್ಯಕ್ತಿತ್ವ ವಿಕಾಸನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
    ಸಾಮಾನ್ಯ ಮಕ್ಕಳಿಗೆ ಅವರ ತಂದೆ-ತಾಯಿಗಳು ಅಜ್ಜ-ಅಜ್ಜಿಯ ಮನೆಗೆ ಕಳುಹಿಸಿ ಅಲ್ಲಿ ಅವರಿಗೆ ಸಾಮಾಜೀಕರಣ ಪ್ರಕ್ರಿಯೆಗಳ ಬಗ್ಗೆ ಹಾಗೂ ಪರಿಸರದ ಬಗ್ಗೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಅವಶ್ಯವಾದ ಪರಿಸರವನ್ನು ನಿರ್ಮಿಸುತ್ತಾರೆ.  ಆದರೆ ಈ ಶಿಬಿರವನ್ನು ಆರೈಕೆ ಮತ್ತು ಪೋಷಣೆ ಅವಶ್ಯವಿರುವ ಮಕ್ಕಳಿಗಾಗಿ ಅವರ ಅಗತ್ಯಕ್ಕನುಗುಣವಾಗಿ ಮಕ್ಕಳಿಗೆ ಪೂರಕವಾಗಿ ಆಯೋಜಿಸಿದ್ದು,  ಎಲ್ಲರು ಸಕ್ರೀಯವಾಗಿ ಭಾಗವಹಿಸಿ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
    ಕೊಪ್ಪಳ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಮಹಾಲಿಂಗಪ್ಪ ದೋಟಿಹಾಳ ಅವರು ಮಾತನಾಡಿ, ಸುಧಾರಣಾ ಸಂಸ್ಥೆಗಳ ಮಕ್ಕಳಿಗೆ ವ್ಯಕ್ತಿತ್ವ ವಿಕಾಸನ ಶಿಬಿರವು ಅತ್ಯವಶ್ಯಕವಾಗಿದ್ದು, ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವುದರೊಂದಿಗೆ ಮಕ್ಕಳ ಹಕ್ಕುಗಳ ಕುರಿತು ತಿಳುವಳಿಕೆ ಮೂಡಿಸಿ, ಅವರನ್ನು ದೇಶದ ಸತ್ಪ್ರಜೆಯನ್ನಾಗಿ ರೂಪಿಸಲು ಅತ್ಯವಶ್ಯಕವಾಗಿದೆ ಎಂದರು. 
    ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀದೇವಿ ಗದ್ದನಕೇರಿ ರವರು ಮಾತನಾಡಿ, ವ್ಯಕ್ತಿತ್ವ ವಿಕಾಸನ ಶಿಬಿರವನ್ನು ಧಾರವಾಡ ಬಾಲ ವಿಕಾಸ ಅಕಾಡೆಮಿ ಸಹಯೋಗದಲ್ಲಿ 7 ದಿನಗಳವರೆಗೆ ಆಯೋಜಿಸಲಾಗುತ್ತಿದ್ದು,  ಮಕ್ಕಳಿಗೆ ಯೋಗ, ದೈಹಿಕ ಶಿಕ್ಷಣ, ಸಂವಹನ ಕೌಶಲ್ಯ, ಮಕ್ಕಳ ಹಕ್ಕುಗಳ ಹಾಗೂ ಸಾಫ್ಟ್ ಸ್ಕಿಲ್ ಅಭಿವೃದ್ಧಿಯ ಬಗ್ಗೆ ವಿಶೇಷ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತಿದೆ. ಮಕ್ಕಳು ಸಕ್ರಿಯವಾಗಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
    ಸಮಾರಂಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಸಂಗಮೇಶ್ವರಗೌಡ ಪಾಟೀಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ, ಬಾಲಕಿಯರ ಬಾಲಮಂದಿರದ ಅಧೀಕ್ಷಕಿ ನಾಗಮ್ಮ, ಆಪ್ತ ಸಮಾಲೋಚಕ ರವಿ ಗುಡ್ಡದಮನಿ, ರವಿಕುಮಾರ ಪವಾರ, ಮಹೇಶ ಸೇರಿದಂತೆ ಸುಧಾರಣಾ ಸಂಸ್ಥೆಗಳ ಸದಸ್ಯರು, ಸಿಬ್ಬಂದಿಗಳು ಮತ್ತು ಬಾಲಮಂದಿರದ ಮಕ್ಕಳು ಪಾಲ್ಗೊಂಡಿದ್ದರು. 


ಹೀಗಾಗಿ ಲೇಖನಗಳು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅವಶ್ಯಕ : ವಸಂತ ಪ್ರೇಮಾ

ಎಲ್ಲಾ ಲೇಖನಗಳು ಆಗಿದೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅವಶ್ಯಕ : ವಸಂತ ಪ್ರೇಮಾ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅವಶ್ಯಕ : ವಸಂತ ಪ್ರೇಮಾ ಲಿಂಕ್ ವಿಳಾಸ https://dekalungi.blogspot.com/2017/05/blog-post_32.html

Subscribe to receive free email updates:

0 Response to "ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅವಶ್ಯಕ : ವಸಂತ ಪ್ರೇಮಾ"

ಕಾಮೆಂಟ್‌‌ ಪೋಸ್ಟ್‌ ಮಾಡಿ