ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ

ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ
ಲಿಂಕ್ : ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ

ಓದಿ


ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ


ಕೊಪ್ಪಳ, ಮೇ. 12 (ಕರ್ನಾಟಕ ವಾರ್ತೆ): ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ ರಾಜ್ ಅಧಿನಿಯಮ 1993 ಪ್ರಕರಣ 310 ಪ್ರಕಾರ ಜಿಲ್ಲಾ ಯೋಜನಾ ಸಮಿತಿ ರಚಿಸಬೇಕಾಗಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ) ನಿಯಮಗಳು 1996ರ 8ರ ನಿಯಮದ ಪ್ರಕಾರ ಕೊಪ್ಪಳ ಜಿಲ್ಲಾ ಯೋಜನಾ ಸಮಿತಿಗೆ ಪಂಚಾಯತಿ ಮತಕ್ಷೇತ್ರ ಹಾಗೂ ಪುರಸಭಾ ಮತ ಕ್ಷೇತ್ರಗಳಿಂದ ಪ್ರತ್ಯೆಕವಾಗಿ ಸದಸ್ಯರ ಆಯ್ಕೆ ಕುರಿತು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿ ಹಾಗೂ ಕೊಪ್ಪಳ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    ಜಿಲ್ಲಾ ಪಂಚಾಯತಿ ಹಾಗೂ ತಾಲೂಕ ಪಂಚಾಯಿತಿ ಮತಕ್ಷೇತ್ರದಿಂದ 33 ಸದಸ್ಯರುಗಳು, ಹಾಗೂ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿ ಮತಕ್ಷೇತ್ರಗಳಿಂದ 7 ಸದಸ್ಯರುಗಳನ್ನು ಚುನಾಯಿಸಬೇಕಾಗಿರುತ್ತದೆ.  ನಾಮಪತ್ರಗಳನ್ನು ಸಲ್ಲಿಸಲು ಮೇ. 15 ರಿಂದ 24ರ ಬೆಳಿಗ್ಗೆ 11-00 ಗಂಟೆಯಿಂದ ಮಧ್ಯಾಹ್ನ 3-00 ಗಂಟೆಯವರೆಗೆ ಕಾಲಾವಕಾಶವಿದ್ದು, ಯೋಜನಾ ವಿಭಾಗ, ಜಿಲ್ಲಾ ಪಂಚಾಯಿತಿ, ಕೊಪ್ಪಳ (ಪಂಚಾಯತಿ ಮತ ಕ್ಷೇತ್ರ).  ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ (ಪುರಸಭಾ ಮತ ಕ್ಷೇತ್ರ) ಇಲ್ಲಿ ನಾಮಪತ್ರಗಳನ್ನು ಸ್ವೀಕರಿಸಲಾಗುವುದು.  ಮೇ. 26 ರಂದು ಬೆಳಿಗ್ಗೆ 11-00 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಾಮಪತ್ರಗಳನ್ನು ಪರಿಶೀಲಿಸಲಾಗುವುದು.  ನಾಮಪತ್ರಗಳನ್ನು ಹಿಂಪಡೆಯಲು ಮೇ. 29 ರಂದು ಮಧ್ಯಹ್ನ 3-00 ಗಂಟೆಗೆ ಕೊನೆಯ ದಿನವಾಗಿರುತ್ತದೆ.  ಜೂನ್. 03 ರಂದು ಬೆಳಿಗ್ಗೆ 11-00 ಗಂಟೆಯಿಂದ ಮಧ್ಯಾಹ್ನ 3-00 ಗಂಟೆಯವರೆಗೆ ಮತದಾನ, ಹಾಗೂ 4-00 ಗಂಟೆಗೆ ಮತಗಳ ಎಣಿಕೆಯನ್ನು ಜಿ.ಪಂ. ಸಭಾಂಗಣದಲ್ಲಿ ನಡೆಸಲಾಗುವುದು.  ಜೂನ್. 03 ರಂದು ಮಧ್ಯಹ್ನ 5-00 ಗಂಟೆಗೆ ಚುನಾವಣೆ ಪೂರ್ಣಗೊಳ್ಳುತ್ತದೆ.
    ಜಿಲ್ಲಾ ಪಂಚಾಯತಿ ಮತ್ತು ತಾಲೂಕ ಪಂಚಾಯತಿಯ ಎಲ್ಲ ಚುನಾಯಿತ ಸದಸ್ಯರು ಪಂಚಾಯತಿ ಮತ ಕ್ಷೇತ್ರಕ್ಕೆ ಮತದಾರರಾಗಿರುತ್ತಾರೆ.  ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆ (ಮಹಾನಗರ ಪಾಲಿಕೆ/ ನಗರ ಸಭೆ/ ಪುರಸಭೆ/ ಪಟ್ಟಣ ಪಂಚಾಯತಿ) ಗಳ ಚುನಾಯಿತ ಸದಸ್ಯರು ಪುರಸಭಾ ಮತಕ್ಷೇತ್ರದ ಮತದಾರರಾಗಿರುತ್ತಾರೆ.  ಚುನಾವಣಾ ನಾಮ ಪತ್ರಗಳನ್ನು ಮೇ. 15 ರಿಂದ 24 ರವರೆಗೆ ಬೆಳಿಗ್ಗೆ 11-00 ಗಂಟೆಯಿಂದ ಮಧ್ಯಹ್ನ 3-00 ಗಂಟೆಯವರೆಗೆ ಚುನಾವಣಾಧಿಕಾರಿ ಮತ್ತು ಕೊಪ್ಪಳ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರಿಂದ ಅಥವಾ ಅವರಿಂದ ನಾಮ ನಿರ್ದೇಶಿಸಲ್ಪಟ್ಟ ಸಹಾಯಕ ಚುನಾವಣಾಧಿಕಾರಿಗಳಿಂದ ಪಡೆಯಬಹುದಾಗಿದೆ.  ನಾಮ ಪತ್ರಗಳನ್ನು ಪ್ರತಿಯೊಬ್ಬ ಅಭ್ಯರ್ಥಿಯು ಸ್ವತಃ ಅಥವಾ ತನ್ನ ಹೆಸರು ಸೂಚಿಸುವ ಸೂಚಕರ ಮೂಲಕ ಚುನಾವಣಾ ಅಧಿಕಾರಿಗೆ ಸಲ್ಲಿಸಬೇಕು.  ಉಮೇದುವಾರಿಕೆಯನ್ನು ಹಿಂತಗೆದುಕೊಳ್ಳುವ ಯಾವುದೇ ಅಭ್ಯರ್ಥಿಯು ತಾನು ಸಹಿ ಹಾಕಿದ ಲಿಖಿತ ನೋಟೀಸನ್ನು ಸ್ವತಃ ಅಥವಾ ತನ್ನ ಹೆಸರು ಸೂಚಿಸಿದವರ ಮೂಲಕ ಚುನಾವಣಾಧಿಕಾರಿಗೆ ನಿಗಧಿಪಡಿಸಿದ ಸಮಯ ಮತ್ತು ದಿನಾಂಕದ ಮೊದಲು ನೀಡುವ ನಾಮಪತ್ರವನ್ನು ವಾಪಸ್ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ ಲಿಂಕ್ ವಿಳಾಸ https://dekalungi.blogspot.com/2017/05/blog-post_39.html

Subscribe to receive free email updates:

0 Response to "ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ