ಶೀರ್ಷಿಕೆ : ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಲಿಂಕ್ : ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಕೊಪ್ಪಳ, ಮೇ. 02 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮತಿಯ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಭೌದ್ಧರು, ಸಿಖ್ಖರು, ಫಾರ್ಸಿಗಳು, ಮತ್ತು ಆಂಗ್ಲೋ ಇಂಡಿಯನ್ ಅಲ್ಪಸಂಖ್ಯಾತರ ಸಮುದಾಯದ ಫ್ರೇಶ್/ ಸಿಇಟಿ/ ನೀಟ್ ಮೂಲಕ ವೃತ್ತಿಪರ ಕೋರ್ಸಗಳಿಗೆ ಪ್ರವೇಶ ಪಡೆಯಬಯಸುವ, ವಿದ್ಯಾರ್ಥಿಗಳಿಗೆ ನಿಗಮದಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಿಗಮದ ವೆಬ್‍ಸೈಟ್ : http://ift.tt/2prh71v; ಅನ್ನು ಸಂಪರ್ಕಿಸಬಹುದು. ಅಥವಾ http://ift.tt/2qtbqi9 ಲಿಂಕ್‍ಗೆ ಕ್ಲಿಕ್ ಮಾಡಬೇಕು. ನಂತರ ಅರ್ಜಿಯನ್ನು ತುಂಬಿ ನೇರವಾಗಿ ನಿಗಮಕ್ಕೆ ಸಲ್ಲಿಸಬೇಕು. ಅಂತಹ ವಿದ್ಯಾರ್ಥಿಗಳು ಭರಿಸಬೇಕಾದ ಭೋಧನಾ ಶುಲ್ಕಕ್ಕಾಗಿ ನಿಗಮದಿಂದ ಮಂಜೂರು ಮಾಡುವ ಸಾಲವನ್ನು ಅವರು ವ್ಯಾಸಂಗ ಮಾಡುವ ಕಾಲೇಜಿಗೆ ನೇರವಾಗಿ ಹಣ ಪಾವತಿ ಮಾಡಲಾಗುವುದು.
ಆನ್‍ಲೈನ್ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿಮಾಡಿದ ಕೂಡಲೇ ಅರ್ಜಿಯ ಪ್ರಿಂಟ್ ಪ್ರತಿಯನ್ನು ತೆಗೆದುಕೊಂಡು ಅಥವಾ ಕೋಡ್‍ನೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ ಕಾರ್ಡ್, ಜಾತಿ ಮತ್ತು ಆಧಾಯ ಪ್ರಮಾಣ ಪತ್ರ, ಐಡಿ/ ರೆಶನ್‍ಕಾರ್ಡ್, ಪೋಟೋ, ಸಿಇಟಿ/ ಆಲ್ ಕಾಪಿ & ಹಾಲ್ ಟಿಕೇಟ್, ಎಲ್ಲಾ ದಾಖಲೆಗಳೊಂದಿಗೆ ಕೊಪ್ಪಳ ಜಿಲ್ಲಾ ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 08539-225008 ಮತ್ತು ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_5.html
0 Response to "ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ