ಶೀರ್ಷಿಕೆ : ಗಂಗಾವತಿ : ವಿದ್ಯಾರ್ಥಿಗಳಿಗೆ ಸಹಾಯ ಧನ ಯೋಜನೆಗೆ ಅರ್ಜಿ ಆಹ್ವಾನ
ಲಿಂಕ್ : ಗಂಗಾವತಿ : ವಿದ್ಯಾರ್ಥಿಗಳಿಗೆ ಸಹಾಯ ಧನ ಯೋಜನೆಗೆ ಅರ್ಜಿ ಆಹ್ವಾನ
ಗಂಗಾವತಿ : ವಿದ್ಯಾರ್ಥಿಗಳಿಗೆ ಸಹಾಯ ಧನ ಯೋಜನೆಗೆ ಅರ್ಜಿ ಆಹ್ವಾನ
ಕೊಪ್ಪಳ, ಮೇ. 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆಯಿಂದ ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ ಮತ್ತು ಪ.ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಗೂ ವಿಕಲಚೇತನರಿಗೆ ಸಹಾಯ ಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಗಂಗಾವತಿ ನಗರಸಭೆಯ ಶೇ.24.10 ರ ಯೋಜನೆಯ ಎಸ್.ಎಫ್.ಸಿ. ಅನುದಾನದಲ್ಲಿ ಎಸ್.ಸಿ/ಎಸ್.ಟಿ. ಅಭ್ಯರ್ಥಿಗಳಿಗಾಗಿ ಎಂ.ಎ./ ಎಂ.ಕಾಂ/ ಎಂ.ಎಸ್.ಸಿ/ ಎಂ.ಎಸ್.ಡಬ್ಲ್ಯೂ/ ಎಂ.ಸಿ.ಎ/ ಎಲ್.ಎಲ್.ಬಿ ಹಾಗೂ ಬಿ.ಇ/ ಎಂ.ಬಿ.ಬಿ.ಎಸ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಶೇ.7.25 ಯೋಜನೆ ಅಡಿಯಲ್ಲಿ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗಾಗಿ ಬಿ.ಇ/ ಎಂ.ಬಿ.ಬಿ.ಎಸ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯ ಧನವನ್ನು ಹಾಗೂ ಶೇ.3ರ ಅನುದಾನದಲ್ಲಿ ವಿಕಲಚೇತನರಿಗಾಗಿ ಮಾತ್ರ ಯಂತ್ರಚಾಲಿತ ತ್ರಿಚಕ್ರ ವಾಹನ, ಸ್ವಯಂ ಉದ್ಯೋಗಕ್ಕಾಗಿ ಶ್ರವಣ ಸಾಧನ ಖರೀದಿಗಾಗಿ ಸಹಾಯ ಧನ ಒದಗಿಸಲಾಗುತ್ತಿದೆ.
ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್, ಐಡಿ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ವಿಕಲಚೇತನ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳನ್ನು ಗಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ, ಜೂ. 21 ರೊಳಗಾಗಿ ಗಂಗಾವತಿ ನಗರಸಭೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗಂಗಾವತಿ : ವಿದ್ಯಾರ್ಥಿಗಳಿಗೆ ಸಹಾಯ ಧನ ಯೋಜನೆಗೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಗಂಗಾವತಿ : ವಿದ್ಯಾರ್ಥಿಗಳಿಗೆ ಸಹಾಯ ಧನ ಯೋಜನೆಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ : ವಿದ್ಯಾರ್ಥಿಗಳಿಗೆ ಸಹಾಯ ಧನ ಯೋಜನೆಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_530.html
0 Response to "ಗಂಗಾವತಿ : ವಿದ್ಯಾರ್ಥಿಗಳಿಗೆ ಸಹಾಯ ಧನ ಯೋಜನೆಗೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ