ಶೀರ್ಷಿಕೆ : ಯಲಬುರ್ಗಾ : ವಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ
ಲಿಂಕ್ : ಯಲಬುರ್ಗಾ : ವಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ
ಯಲಬುರ್ಗಾ : ವಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ
ಕೊಪ್ಪಳ, ಮೇ. 26 (ಕರ್ನಾಟಕ ವಾರ್ತೆ): ಸ್ವಚ್ಛ ಭಾರತ ಯೋಜನೆ ಅಡಿಯಲ್ಲಿ ಆಯ್ಕೆಗೊಂಡ ಯಲಬುರ್ಗಾ ಪಟ್ಟಣದ ನಿವಾಸಿಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಹಾಗೂ ಪಟ್ಟಣ ಪಂಚಾಯತ ನಿಧಿ ಶೇ.24.10, 7.25, 3ರ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಸ್ವಚ್ಛ ಭಾರತ ಯೋಜನೆ ಅಡಿಯಲ್ಲಿ ಆಯ್ಕೆಗೊಂಡ ಫಲಾನುಭವಿಗಳಿಗೆ ರೂ. 5,333 ಹಾಗೂ ಎಸ್.ಎಫ್.ಸಿ ಮತ್ತು ಪಟ್ಟಣ ಪಂಚಾಯತ ನಿಧಿಯಲ್ಲಿ ರೂ. 10,000 ಗಳಂತೆ ಒಟ್ಟು ರೂ. 15,333 ಗಳಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಬಹುದು. ಅರ್ಜಿಯನ್ನು ಸಲ್ಲಿಸಲು ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ಅರ್ಜಿದಾರರ ಪೋಟೋ, ಆಸ್ತಿ ದಾಖಲಾತಿ, ಇತ್ಯಾದಿ ದಾಖಲೆಗಳನ್ನು ದೃಢೀಕರಿಸಿ, ಪ್ರಕಟಣೆಗೊಂಡ 15 ದಿನಗಳೊಳಗಾಗಿ ಯಲಬುರ್ಗಾ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ಯಲಬುರ್ಗಾ ಪ.ಪಂ. ಕಾರ್ಯಾಲಯಕ್ಕೆ ಭೇಟಿ ನೀಟಿ ಮಾಹಿತಿ ಪಡೆಯಬಹುದು ಎಂದು ಪ.ಪಂ. ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಯಲಬುರ್ಗಾ : ವಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಯಲಬುರ್ಗಾ : ವಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಯಲಬುರ್ಗಾ : ವಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_728.html
0 Response to "ಯಲಬುರ್ಗಾ : ವಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ