ಶೀರ್ಷಿಕೆ : ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ
ಲಿಂಕ್ : ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ
ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ
ಕೊಪ್ಪಳ, ಮೇ. 18 (ಕರ್ನಾಟಕ ವಾರ್ತೆ): ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ರಾಜ್ಯ ಸರ್ಕಾರದ ಹಾಗೂ ಎನ್.ಬಿ.ಸಿ.ಎಫ್.ಡಿ..ಸಿಯ ಯೋಜನೆಗಳಲ್ಲಿ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ಯೋಜನೆ : ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು. ಸ್ವಯಂ ಉದ್ಯೋಗ ನೇರಸಾಲ ಯೋಜನೆ. ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ. ಅರಿವು-ಶೈಕ್ಷಣಿಕ ಸಾಲ ಯೋಜನೆ. ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ. ಮಹಿಳೆಯರ ಕಿರುಸಾಲ ಯೋಜನೆ. ಕಮ್ಮಾರಿಕೆ, ಅಕ್ಕಸಾಲಿ ಮತ್ತು ಬಡಗಿ ಉದ್ಯಮಿಗಳಿಗೆ ವಿಶೇಷ ಪ್ಯಾಕೇಜ್. ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಸಾಲ ಪಡೆಯುವರ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ. 40,000/-ಗಳಿಗಿಂತ ಹಾಗೂ ಪಟ್ಟಣ ಪ್ರದೇಶದವರಿಗೆ ರೂ.55,000/- ಗಳಿಗಿಂತ ಕಡಿಮೆ ಇರಬೇಕು. ಅರಿವು ಯೋಜನೆಗೆ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು.
ಎನ್.ಬಿ.ಸಿ.ಎಫ್.ಡಿ.ಸಿ ಯೋಜನೆ : ಅವಧಿ ಸಾಲ ಯೋಜನೆ- ಕೃಷಿವಲಯ, ಸಣ್ಣ ವ್ಯಾಪಾರ, ಸೇವಾವಲಯ, ಸಾರಿಗೆ ವಲಯ. ಶೈಕ್ಷಣಿಕ ಸಾಲ ಯೋಜನೆ- ಭಾರತದಲ್ಲಿ, ವಿದೇಶದಲ್ಲಿ. ನ್ಯೂಸ್ವರ್ಣಿಮಾ ಸಾಲ (ಮಹಿಳಾ ಸಾಲ). ಶಿಲ್ಪಸಂಪದ. ಸ್ವಯಂ ಸಕ್ಷಮ ಸಾಲ. ಮೈಕ್ರೋಫೈನಾನ್ಸ್. ಕೃಷಿಸಂಪದ. ಮಹಿಳಾ ಸಮೃದ್ಧಿ ಯೋಜನೆ (ಮಹಿಳಾ ಸ್ವಸಹಾಯ ಗುಂಪುಗಳಿಗೆ ಮತ್ತು ವೈಯಕ್ತಿಕ ಸಾಲ). ಎನ್.ಬಿ.ಸಿ.ಎಫ್.ಡಿ..ಸಿಯ ಯೋಜನೆಗಳಲ್ಲಿ ಸಾಲ ಪಡೆಯುವರ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ. 98,000/-ಗಳಿಗಿಂತ ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/- ಗಳಿಗಿಂತ ಕಡಿಮೆ ಇರಬೇಕು.
ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಆಯಾ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆದು, ಅರ್ಜಿಗಳನ್ನು ಜೂನ್. 02 ರೊಳಗೆ ಪಡೆಯಬೇಕು. ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್. 17 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಆಯಾ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕ ಕಛೇರಿ ಮತ್ತು ಕೇಂದ್ರ ಕಛೇರಿಯಲ್ಲಿ ಸಂಪರ್ಕಿಸಬಹುದು. ನಿಗಮದ ವೆಬ್‍ಸೈಟ್ www.kvcdcl.com ರಲ್ಲಿ (ಕೈಪಿಡಿಯಲ್ಲಿ) ಜಿಲ್ಲಾ ವ್ಯವಸ್ಥಾಪಕರ ಕಛೇರಿಯ ವಿಳಾಸ ವೀಕ್ಷಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_781.html
0 Response to "ವಿಶ್ವಕರ್ಮ ಸಮುದಾಯದವರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ