ಶೀರ್ಷಿಕೆ : ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ
ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ
ಕೊಪ್ಪಳ, ಮೇ. 10 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರವು ಗ್ರಾಮೀಣ ನಿರುದ್ಯೋಗ ವಿದ್ಯಾವಂತ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ (ಸಿಎಂಎಸ್‍ಇಜಿಪಿ) ಯನ್ನು ಪ್ರಸಕ್ತ ಸಾಲಿಗೂ ಮುಂದುವರೆಸಲಾಗಿದ್ದು ಸೌಲಭ್ಯ ಪಡೆಯಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯ ಗರಿಷ್ಠ ವೆಚ್ಚ ರೂ.10 ಲಕ್ಷ ಇರುವ ತಯಾರಿಕಾ ಮತ್ತು ಸೇವಾ ಚಟುವಟಿಕೆಗಳಿಗೆ, ಬ್ಯಾಂಕುಗಳು ನೀಡುವ ಸಾಲದ ಮೊತ್ತದ ಮೇಲೆ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 25% (ಗರಿಷ್ಠ ಮೊತ್ತ ರೂ.2.50 ಲಕ್ಷ) ಮತ್ತು ವಿಶೇಷ ವರ್ಗದ (ಪ.ಜಾತಿ/ ಪ.ಪಂಗಡ/ ಹಿಂದುಳಿದ ವರ್ಗ/ ಅಲ್ಪಸಂಖ್ಯಾತರು/ ಮಾಜಿ ಸೈನಿಕ/ಮಹಿಳೆ) ಫಲಾನುಭವಿಗಳಿಗೆ ಶೇ. 35% (ಗರಿಷ್ಠ ಮೊತ್ತ ರೂ.3.50 ಲಕ್ಷ) ಸಹಾಯಧನ ಸೌಲಭ್ಯ ಇರುತ್ತದೆ. ಉದ್ದಿಮೆಯನ್ನು ಪ್ರಾರಂಭ ಮಾಡುವ ಸಾಮಾನ್ಯ ವರ್ಗದವರು ಯೋಜನೆಯ ವೆಚ್ಚದ ಶೇ. 10% ಮತ್ತು ವಿಶೇಷ ವರ್ಗದವರಿಗೆ ಶೇ. 5% ರಷ್ಟು ಸ್ವಂತ ಭಂಡವಾಳ ಹೂಡಬೇಕಾಗಿರುತ್ತದೆ.
ಅರ್ಜಿ ಸಲ್ಲಿಸಲು ವಯೋಮಿತಿ 21 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರಿಗೆ ಗರಿಷ್ಠ 35 ವರ್ಷ, ವಿಶೇಷ ವರ್ಗದವರಿಗೆ (ಪ.ಜಾತಿ/ ಪ.ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಮಾಜಿ ಸೈನಿಕ ಮತ್ತು ಮಹಿಳೆಯರು) ಗರಿಷ್ಠ 45 ವರ್ಷ. ಯೋಜನೆಯು ಹೊಸ ಘಟಕಗಳಿಗೆ ಮಾತ್ರ ಲಭ್ಯವಿರುತ್ತದೆ. ವಿದ್ಯಾರ್ಹತೆ 8ನೇ ತರಗತಿ ಪಾಸಾಗಿರಬೇಕು, ಅಥವಾ ಗುರುತಿಸಿದ ಶಿಕ್ಷಣ ಸಂಸ್ಥೆಗಳಿಂದ ವೃತ್ತಿಪರ ತರಬೇತಿ ಸಂಸ್ಥೆಯಿಂದ ವೃತ್ತಿಪರ ತರಬೇತಿ, ಐಟಿಐ, ಡಿಪ್ಲೋಮಾ ಪದವಿ ಹೊಂದಿರಬೇಕು. ಆಸಕ್ತರು ಅರ್ಜಿಗಳನ್ನು ಜೂನ್. 12 ರೊಳಗಾಗಿ ವೆಬ್‍ಸೈಟ್ http://cmegp.kar.nic.in ನಲ್ಲಿ ಸಲ್ಲಿಸಿ, ಅರ್ಜಿಯ ಪ್ರತಿ ಹಾಗೂ ನಿಗಧಿತ ದಾಖಲಾತಿಯೊಂದಿಗೆ ಜಂಟಿನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ನಗರಸಭೆ ಕಚೇರಿ ಎದುರುಗಡೆ, ಕೊಪ್ಪಳ ಇವರ ಕಛೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_82.html
0 Response to "ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ