ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರ

ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರ
ಲಿಂಕ್ : ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರ

ಓದಿ


ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರ


ಕೊಪ್ಪಳ, ಮೇ. 02 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಹಾಗೂ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯದ ಉದಯೋನ್ಮುಖ ವಿಜ್ಞಾನ ಬರಹಗಾರರಿಗೆ, ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು- ವರದಿಗಾರರಿಗೆ ಜನಪ್ರಿಯ ವಿನ್ಞಾನ ಬರವಣಿಗೆಯ, 31ನೇ ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರವನ್ನು ಮೇ. ತಿಂಗಳ ಕೊನೆಯ ವಾರದಲ್ಲಿ ಹಮ್ಮಿಕೊಳ್ಳಲಾಗಿದೆ.
    ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿ ಇರುವ ವಿಜ್ಞಾನ ಶಿಕ್ಷಕರು, ಯುವ ಪತ್ರಿಕಾ ವರದಿಗಾರರು, ಪತ್ರಿಕೋದ್ಯಮ ವಿದ್ಯಾರ್ಥಿಗಳು, ಚಿತ್ರ ನಿರೂಪಕರು, ರೇಡಿಯೋ ಭಾಷಣಕಾರರು, ಶಿಬಿರದಲ್ಲಿ ಭಾಗವಹಿಸಬಹುದು.  ಶಿಬಿರವನ್ನು ಮೇ ತಿಂಗಳ ಕೊನೆಯ ವಾರದಲ್ಲಿ ಆಯೋಜಿಸಲಾಗುತ್ತಿದ್ದು,  ಶಿಬಿರದಲ್ಲಿ ನುರಿತ ವಿಜ್ಞಾನ ಬರಹಗಾರರು, ಸಂವಹನಕಾರರಿಂದ ಶಿಬಿರಾರ್ಥಿಗಳಿಗೆ ವಿಜ್ಞಾನ ಬರವಣಿಗೆಯ ಕುರಿತು ವಿವಿಧ ಕೌಶಲ್ಯ, ಆಕರ, ಶಬ್ದ ಬಳಕೆ, ಅನುವಾದ, ವಿಜ್ಞಾನ ಪತ್ರಿಕೋದ್ಯಮ ಮುಂತಾದ ಅಂಶಗಳಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದೆ. 
    ಶಿಬಿರಾರ್ಥಿಗಳಾಗಿ ಭಾಗವಹಿಸಲಿಚ್ಛಿಸುವವರು ವಿಜ್ಞಾನ ಸಂವಹನದಲ್ಲಿ ಆಸಕ್ತಿ ಹೊಂದಿರುವುದು ಅಪೇಕ್ಷಣೀಯ.  ಆಸಕ್ತರು ತಮ್ಮ ಕಿರುಪರಿಚಯ, ಸಂಪರ್ಕ ವಿಳಾಸ, ದೂರವಾಣಿ ಸಂಖ್ಯೆ, ಇ-ಮೇಲ್ ಐಡಿ ಇತ್ಯಾದಿ ವಿವರಗಳು ಮತ್ತು ಎಲ್ಲೂ ಪ್ರಕಟಗೊಳ್ಳದ 800 ಮತ್ತು 250 ಪದಗಳ 2 ಕನ್ನಡ ವೈಜ್ಞಾನಿಕ ಲೇಖನಗಳ ಸ್ವ ರಚಿತ ಪತ್ರಿಯೊಂದಿಗೆ ಅರ್ಜಿಯನ್ನು ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಭವನ, ನಂ.24/2, 21ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು 560070 ಇ-ಮೇಲ್  krvp.info@gmail.com ಈ ವಿಳಾಸಕ್ಕೆ ಮೇ. 05 ರೊಳಗಾಗಿ ಸಲ್ಲಿಸಬೇಕು. 
ಶಿಬಿರದಲ್ಲಿ ಭಾಗವಹಿಸಲು 20 ರಿಂದ 45 ವಯೋಮಾನದವರಿಗೆ ಆದ್ಯತೆ.  ಆಯ್ಕೆಯಾದ ಅಭ್ಯರ್ಥಿಗಳಿಗೆ ನೋಂದಣಿ ಉಚಿತವಾಗಿದ್ದು, ವಿಜ್ಞಾನ ಪರಿಷತ್ತಿನಿಂದ ಊಟೋಪಚಾರ, ವಾಸ್ತವ್ಯ ಹಾಗೂ ಕರ್ತವ್ಯಸಹಿತ ರಜೆ (ಓ.ಓ.ಡಿ.) ಸೌಲಭ್ಯವನ್ನು ಒದಗಿಸಲಾಗುವುದು.  ಶಿಬಿರದ ನಿಖರವಾದ ದಿನಾಂಕ ಮತ್ತು ಸ್ಥಳವನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.  ಹೆಚ್ಚಿನ ಮಾಹಿತಿಗಾಗಿ ಪರಿಷತ್ತಿನ ಕಛೇರಿ (080- 26718939 / 26718962) ಅಥವಾ 31ನೇ ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರದ ರಾಜ್ಯ ಸಂಯೋಜಕ ದಾನಿ ಬಾಬುರಾವ್ 9448568360 ಇವರಿಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ. 


ಹೀಗಾಗಿ ಲೇಖನಗಳು ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರ

ಎಲ್ಲಾ ಲೇಖನಗಳು ಆಗಿದೆ ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರ ಲಿಂಕ್ ವಿಳಾಸ https://dekalungi.blogspot.com/2017/05/blog-post_86.html

Subscribe to receive free email updates:

0 Response to "ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರ"

ಕಾಮೆಂಟ್‌‌ ಪೋಸ್ಟ್‌ ಮಾಡಿ