ಶೀರ್ಷಿಕೆ : ಕುಷ್ಟಗಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಲಿಂಕ್ : ಕುಷ್ಟಗಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕುಷ್ಟಗಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, ಮೇ. 12 (ಕರ್ನಾಟಕ ವಾರ್ತೆ): ಕುಷ್ಟಗಿ ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಣೆಯಾಗುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಅರ್ಹರಿಂದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಪ್ರವರ್ಗ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ರೂ. 44,500/- ರೊಳಗಿರಬೇಕು. ಪ್ರವರ್ಗ 1ಕ್ಕೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ರೂ. 1 ಲಕ್ಷದೊಳಗಿರಬೇಕು. ಪರಿಶಿಷ್ಟ ಜಾತಿ/ ಪ.ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ರೂ. 2 ಲಕ್ಷದೊಳಗಿರಬೇಕು. ವ್ಯಾಸಂಗ ಮಾಡುವ ಶಾಲೆಯಿಂದ 5 ಕಿ.ಮೀ ವ್ಯಾಪ್ತಿಯ ಹೊರಗೆ ಇರುವ ವಿದ್ಯಾರ್ಥಿಗಳು ಮಾತ್ರ ಸೌಲಭ್ಯಕ್ಕೆ ಅರ್ಹರಿರುತ್ತಾರೆ. ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮತ್ತು ಪ್ರವೇಶ ಮೀಸಲಾತಿ ನಿಯಮಾನುಸಾರ ಆಯ್ಕೆ ಸಮಿತಿಯ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು. ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಮುಖ್ಯೋಪಾಧ್ಯರಿಂದ ಪ್ರವೇಶ ದೃಢಿಕರಣ ಪತ್ರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ವಿದ್ಯಾರ್ಥಿ ನಿಲಯಕ್ಕೂ ಗ್ರಾಮಕ್ಕೂ ಇರುವ ಅಂತರದ (5ಕಿ.ಮೀ) ಸರ್ಟಿಫಿಕೇಟನ್ನು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು/ ಕಾರ್ಯದರ್ಶಿಗಳಿಂದ ನಮೂನೆಯಲ್ಲಿ ದಾಖಲಿಸಿ ಅರ್ಜಿಗೆ ಲಗತ್ತಿಸಬೇಕು. ಇತ್ತೀಚಿನ ಪಾಸಪೋರ್ಟ ಅಳತೆಯ ಎರಡು ಭಾವಚಿತ್ರ ಲಗತ್ತಿಸಬೇಕು.
ಅರ್ಹ ವಿದ್ಯಾರ್ಥಿಗಳು ನಿಗಧಿತ ಅರ್ಜಿ ನಮೂನೆಯನ್ನಯ ತಾಲೂಕ ಹಿಂದುಳಿದ ವರ್ಗಗಳ ವಿಸ್ತೀರ್ಣಾಧಿಕಾರಿಗಳ ಕಾರ್ಯಾಲಯ ಕುಷ್ಟಗಿ, 3ನೇ ವಾರ್ಡ (ಕಛೇರಿ ವೇಳೆಯಲ್ಲಿ) ಪಡೆದು ಭರ್ತಿ ಮಾಡಿದ ವ್ಯಾಸಂಗ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಿಂದ ದೃಢೀಕರಣ ಮಾಡಿಸಿ, ಅಗತ್ಯ ದಾಖಲೆಗಳೊಂದಿಗೆ ಮೇ. 15 ರೊಳಗಾಗಿ ಕುಷ್ಟಗಿ ತಾಲೂಕ ಹಿಂದುಳಿದ ವರ್ಗಗಳ ವಿಸ್ತೀರ್ಣಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಕುಷ್ಟಗಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕುಷ್ಟಗಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕುಷ್ಟಗಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_89.html
0 Response to "ಕುಷ್ಟಗಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ