ಶೀರ್ಷಿಕೆ : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ
ಕೊಪ್ಪಳ, ಮೇ. 25 (ಕರ್ನಾಟಕ ವಾರ್ತೆ): ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪ್ರವೇಶ ಪಡೆದು, ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಸೀಟು ಪಡೆದು ಬಿ.ಇ., ಎಂ.ಬಿ.ಬಿ.ಎಸ್., ಬಿ.ಯು.ಎಂ.ಎಸ್., ಬಿ.ಡಿ.ಎಸ್., ಬಿ.ಎ.ಎಂ.ಎಸ್., ಬಿ.ಹೆಚ್.ಎಂ.ಎಸ್., ಎಂ.ಸಿ.ಎ., ಎಂ.ಎಸ್ಸಿ(ಅಗ್ರಿ)., ಮುಂತಾದ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ವಾರ್ಷಿಕ ಗರಿಷ್ಠ ರೂ. 1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗಿದೆ.
ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ. ಗೆ ಪಾವತಿಸಬೇಕಾದ ಶುಲ್ಕವನ್ನು ಸಿ.ಇ.ಟಿ ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪಾವತಿಸಿದ ಮುಂಗಡ ಹಣದ ಮೊತ್ತದಲ್ಲಿ ಜಮಾ ಮಾಡಲಾಗುತ್ತದೆ. ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪ್ರ-1, ಪ್ರ-2ಎ (ವಿಶ್ವಕರ್ಮ ಮತ್ತು ಉಪ ಜಾತಿಗಳನ್ನು ಹಾಗೂ ಅಲ್ಪಸಂಖ್ಯಾತರನ್ನು ಹೊರತುಪಡಿಸಿ), ಪ್ರ-3ಎ ಗೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳ ಮಿತಿಯಲ್ಲಿರಬೇಕು.
ಅರ್ಜಿ ಸಲ್ಲಿಸಲು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್‍ಸೈಟ್ http://ift.tt/2rXHMBJ ರಲ್ಲಿ ಅರ್ಜಿಯನ್ನು ಆನ್‍ಲೈನ್ ನಲ್ಲಿ ಭರ್ತಿ ಮಾಡಬೇಕು. ಹಾಗೂ ಜಾತಿ & ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಆಧಾರ್ ಕಾರ್ಡ್ ಸಂಖ್ಯೆ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಸಿ.ಇ.ಟಿ ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಅರ್ಜಿಯೊಂದಿಗೆ ಆನ್‍ಲೈನ್ ನಲ್ಲಿ ಜೂನ್. 20 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ನಿಗಮದ ಜಿಲ್ಲಾ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_936.html
0 Response to "ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ