ಶೀರ್ಷಿಕೆ : News and photo 11-5-2017
ಲಿಂಕ್ : News and photo 11-5-2017
News and photo 11-5-2017
ಪ್ರಸಕ್ತ ವರ್ಷ 4000 ಜನರಿಗೆ ಮನೆ ಅಥವಾ ನಿವೇಶನ ದೊರಕಿಸಲು ಕ್ರಮ
ಕಲಬುರಗಿ,ಮೇ.11.(ಕ.ವಾ.)-ಮಹಾನಗರ ಪಾಲಿಕೆಯವರು ಕೈಗೊಂಡ ಬೇಡಿಕೆ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ ಮನೆ ಮತ್ತು ನಿವೇಶನರಹಿತ ಸುಮಾರು 8000ಕ್ಕೂ ಹೆಚ್ಚು ಜನ ಇದ್ದಾರೆ. ಇವರಿಗೆ ಮನೆ ಅಥವಾ ನಿವೇಶನ ದೊರಕಿಸಲು ಕ್ರಮ ವಹಿಸಬೇಕೆಂದು ಲೋಕಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಅವರು ಗುರುವಾರ ನಗರದ ಹೊರ ವಲಯದ ಕೆಸರಟಗಿ ಹತ್ತಿರ ಮಹಾನಗರ ಪಾಲಿಕೆಯ ವಾಜಪೇಯಿ ನಗರ ವಸತಿ ಯೋಜನೆ ಮತ್ತು ಆಶ್ರಯ ವಸತಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ 800 ಮನೆಗಳ ಹಕ್ಕುಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿ, ಈ ವರ್ಷದಲ್ಲಿ ಸುಮಾರು 4000 ಜನರಿಗೆ ಮನೆ ಮತ್ತು ನಿವೇಶನಗಳನ್ನು ಕಲ್ಪಿಸಲು ಸರ್ಕಾರಿ ಜಮೀನುಗಳನ್ನು ಗುರುತಿಸಿ ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ವಾಜಪೇಯಿ ನಗರ ವಸತಿ ಯೋಜನೆ 2002ರಲ್ಲಿ ಪ್ರಾರಂಭವಾಗಿದ್ದು, ಫಲಾನುಭವಿಗಳು ವಂತಿಕೆ ಹಣ ತುಂಬದೇ ಇರುವುದರಿಂದ ಮನೆಗಳ ನಿರ್ಮಾಣ ವಿಳಂಬವಾಯಿತು. ಈಗಾಗಲೇ 568 ಲಕ್ಷ ರೂ.ಗಳ ವೆಚ್ಚದಲ್ಲಿ 594 ಮನೆಗಳನ್ನು ನಿರ್ಮಿಸಲಾಗಿದೆ. ಎರಡನೇ ಹಂತದ 780 ಮನೆಗಳ ಪೈಕಿ 235 ಮನೆಗಳು ಪೂರ್ಣಗೊಂಡಿವೆ. ಹೀಗಾಗಿ ಒಟ್ಟು ಸುಮಾರು 800 ಮನೆಗಳು ಪೂರ್ಣಗೊಂಡಿದ್ದು, ಇನ್ನುಳಿದ ಮನೆಗಳನ್ನು 2-3 ತಿಂಗಳಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದರು.
ಕೆಸರಟಗಿ ಹತ್ತಿರ ಮಹಾನಗರ ಪಾಲಿಕೆಯ ವಾಜಪೇಯಿ ನಗರ ವಸತಿ ಯೋಜನೆ ಮತ್ತು ಆಶ್ರಯ ವಸತಿ ಯೋಜನೆ ಹೊಸ ಬಡಾವಣೆಗೆ ರಸ್ತೆ, ಶಾಲೆ, ಅಂಗನವಾಡಿ ಕೇಂದ್ರ ಮತ್ತು ಸಮುದಾಯ ಭವನ ನಿರ್ಮಿಸಿ ಇಲ್ಲಿನ ನಿವಾಸಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದ ಅವರು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸುಮಾರು 63,000 ಜನರು ಮನೆ, ನಿವೇಶನ, ಕಟ್ಟಡ ದುರಸ್ತಿ, ತಮ್ಮ ನಿವೇಶನದಲ್ಲಿ ಮನೆ ನಿರ್ಮಿಸಿಕೊಳ್ಳುವ ಯೋಜನೆಗಳ ಪ್ರಯೋಜನ ಪಡೆದಿದ್ದಾರೆ. ಜಫರಾಬಾದ್ ಮತ್ತು ಕೋಟನೂರನಲ್ಲಿ ಕೊಳಚೆ ಪುನರ್ವಸತಿ ಯೋಜನೆಯ ರಾಜೀವ ಆವಾಸ್ ಯೋಜನೆಯಡಿ ಮೂರು ಮಹಡಿಯ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಈ ಮನೆಗಳನ್ನು ಮುಂದಿನ 2-3 ತಿಂಗಳಲ್ಲಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಮಾತನಾಡಿ, ರಾಜೀವ ಆವಾಸ್ ಯೋಜನೆಯಡಿ ಸುಮಾರು 1000ಕ್ಕಿಂತ ಹೆಚ್ಚಿನ ಮನೆಗಳನ್ನು ಜೂನ್ ಮಾಹೆಯೊಳಗಾಗಿ ಪೂರ್ಣಗೊಳಿಸಲಾಗುವುದು. ತಮ್ಮ ನಿವೇಶನದಲ್ಲಿ ಮನೆ ನಿರ್ಮಿಸುವ ಯೋಜನೆಯಡಿ 6 ತಿಂಗಳುಗಳಲ್ಲಿ ಮನೆಗಳನ್ನು ನಿರ್ಮಿಸಲಾಗುವುದು ಎಂದರು.
ಹೆಚ್.ಕೆ.ಆರ್.ಡಿ.ಬಿ.ಯಿಂದ ಇಂದು ಲೋರ್ಕಾಪಣೆ ಮಾಡಿದ ಕೆಸರಟಗಿ ವಸತಿ ಯೋಜನೆಗೆ ರಸ್ತೆ ನಿರ್ಮಿಸಲಾಗುವುದು. ನಗರ ರಸ್ತೆ ಸಾರಿಗೆಯ ಬಸ್ ಸೌಕರ್ಯ ಕಲ್ಪಿಸಲಾಗುವುದು. ಫಲಾನುಭವಿಗಳು ಆದಷ್ಟು ಬೇಗ ಇಲ್ಲಿಗೆ ಬಂದು ವಾಸಿಸಬೇಕು. ಇಲ್ಲಿ ಶಾಲೆ, ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಲಾಗುವುದು ಎಂದರು.
ಶಾಸಕ ಖಮರುಲ್ ಇಸ್ಲಾಂ, ವಿಧಾನ ಪರಿಷತ್ ಸದಸ್ಯ ಇಕ್ಬಾಲ್ ಅಹ್ಮದ್ ಸರಡಗಿ, ತೊಗರಿ ಮಂಡಳಿ ಅಧ್ಯಕ್ಷ ಭಾಗಣಗೌಡ ಸಂಕನೂರ, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಜಗರ್ ಅಹ್ಮದ್ ಚುಲಬುಲ್, ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಆಶ್ರಯ ಸಮಿತಿ ಸದಸ್ಯರುಗಳಾದ ಅಬ್ದುಲ್ ರಹೀಮ್ ಮಿರ್ಚಿ, ಶಿವಾಜಿ ಅಂಬರಾಯ, ಅಶೋಕ ಮಾನಸಿಂಗ್ ಹಾಗೂ ಗಂಗೂಬಾಯಿ ಶಂಕರ್, ಮಹಾನಗರ ಪಾಲಿಕೆ ಕಾರ್ಯಪಾಲಕ ಇಂಜಿನಿಯರ್ ಆರ್.ಪಿ. ಜಾಧವ, ವಸತಿ ಯೋಜನೆಯ ವಿಜಯಲಕ್ಷ್ಮೀ ಪಟ್ಟೇದಾರ್, ಲೀಡ್ ಬ್ಯಾಂಕ್ ಮ್ಯಾನೇಜರ್ ಮತ್ತಿತರರು ಪಾಲ್ಗೊಂಡಿದ್ದರು.
ಮೇ 13ಕ್ಕೆ ಜಿಲ್ಲಾ ಸಚಿವರಿಂದ ಫಲಾನುಭವಿಗಳೊಂದಿಗೆ “ಜನಮನ” ಸಂವಾದ
ಕಲಬುರಗಿ,ಮೇ.11.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ಕಲಬುರಗಿಯ ಡಾ. ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಮೇ 13ರಂದು ಶನಿವಾರ ಬೆಳಗಿನ 10.30 ಗಂಟೆಯಿಂದ “ಜನಮನ” ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನಡೆಸುವ ನೇರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸುವ ಫಲಾನುಭವಿಗಳೊಂದಿಗೆ ಯೋಜನೆಗಳಿಂದಾದ ಅನುಕೂಲತೆ, ಪರಿಣಾಮಕಾರಿಯಾಗಿ ಅನುಷ್ಠಾನ ಮತ್ತು ಮತ್ತಷ್ಟು ಸುಧಾರಣಾ ಕ್ರಮಗಳ ಬಗ್ಗೆ ಜಿಲ್ಲಾ ಸಚಿವರೇ ನೇರವಾಗಿ ಸಂವಾದ ನಡೆಸುವ ಮೂಲಕ ಉತ್ತರವನ್ನು ಕೇಳಿ ತಿಳಿದುಕೊಳ್ಳುವ ಪ್ರಯತ್ನ ಮಾಡುವರು. ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ, ಋಣಮುಕ್ತ, ಮೈತ್ರಿ, ಮನಸ್ವಿನಿ, ವಿದ್ಯಾಸಿರಿ ಮತ್ತು ಬಿದಾಯಿ ಯೋಜನೆಗಳ ಫಲಾನುಭವಿಗಳು ಈ “ಜನಮನ” ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅಧÀ್ಯಕ್ಷತೆ ವಹಿಸುವರು. ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವ್ಹಿ.ಗುತ್ತೇದಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭಾ ಶಾಸಕರುಗಳಾದ ಡಾ. ಖಮರುಲ್ ಇಸ್ಲಾಂ, ಜಿ.ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಜಗರ್ ಚುಲಬುಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೇ 12ರಂದು ಜೆಎನ್-ನರ್ಮ ಯೋಜನೆಯಡಿ ನೂತನ ಬಸ್ಸುಗಳಿಗೆ ಚಾಲನೆ
ಕಲಬುರಗಿ,ಮೇ.11.(ಕ.ವಾ.)-ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿ ವಿಭಾಗ-1ರಿಂದ ಜೆಎನ್-ನರ್ಮ ಯೋಜನೆ ಅಡಿಯಲ್ಲಿ ಸಂಸ್ಥೆಗೆ ನೀಡಲಾದ 36 ನಗರ ಸಾರಿಗೆ ನೂತನ ಬಸ್ಸುಗಳಿಗೆ ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಮೇ 12ರಂದು ಸಂಜೆ 5 ಗಂಟೆಗೆ ಕಲಬುರಗಿ ಕೇಂದ್ರ ಬಸ್‍ನಿಲ್ದಾಣದ ಆವರಣದಲ್ಲಿ ಚಾಲನೆ ನೀಡುವರು
ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಹಾಗೂ ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅಧÀ್ಯಕ್ಷತೆ ವಹಿಸುವರು. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್ ಜ್ಯೋತಿ ಬೆಳಗಿಸುವರು.
ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವ್ಹಿ.ಗುತ್ತೇದಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭಾ ಶಾಸಕರುಗಳಾದ ಡಾ. ಖಮರುಲ್ ಇಸ್ಲಾಂ, ಜಿ.ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್
ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಜಗರ್ ಚುಲಬುಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಬೀದಿನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ಕಲಬುರಗಿ,ಮೇ.11.(ಕ.ವಾ.)-ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2017-18ನೇ ಸಾಲಿನಲ್ಲಿ ಹಮ್ಮಿಕೊಳ್ಳಲಾಗುವ ಗ್ರಾಮ ಸಂಪರ್ಕ ಕಾರ್ಯಕ್ರಮಕ್ಕಾಗಿ ಕಲಬುರಗಿ ಜಿಲ್ಲೆಯ ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರತಿಯೊಂದು ಬೀದಿ ನಾಟಕ ತಂಡದಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳಾ ಕಲಾವಿದರು ಸೇರಿದಂತೆ ಒಟ್ಟು ಹತ್ತು(10) ಜನ ಕಲಾವಿದರು ಕಲಬುರಗಿ ಜಿಲ್ಲೆಯವರಾಗಿರಬೇಕು. ಬೀದಿನಾಟಕ ಕಲಾ ತಂಡಗಳ ಹೆಸರಿನಲ್ಲಿ ಬ್ಯಾಂಕ್ ಖಾತೆ ಮತ್ತು ಪಾನ್‍ಕಾರ್ಡ ಹಾಗೂ ಹತ್ತು ಜನ ಕಲಾವಿದರ ಬ್ಯಾಂಕ್ ಖಾತೆ ಮತ್ತು ಪಾನ್‍ಕಾರ್ಡ ಹೊಂದಿರುವುದು ಕಡ್ಡಾಯವಾಗಿದೆ. ತಂಡವು ನೋಂದಾಯಿಸಿದ ನೋಂದಣಿ ಪ್ರತಿ ಮತ್ತು ಕಳೆದ ಮೂರು ವರ್ಷದ ಅಡಿಟ್ ಪ್ರತಿ ಹಾಗೂ 10 ಜನ ಸದಸ್ಯರನ್ನೊಳಗೊಂಡ 4x6 ಆಳತೆಯ 2 ಭಾವಚಿತ್ರ ಅರ್ಜಿಯೊಂದಿಗೆ ಲಗತ್ತಿಸುವುದು ಕಡ್ಡಾಯ. ಸರ್ಕಾರದ ವಿವಿಧ ಅಭಿವೃದ್ದಿ ಯೋಜನೆಗಳ ಹಾಗೂ ಕಾರ್ಯಕ್ರಮಗಳನ್ನು ಬೀದಿನಾಟಕ ಕಲಾ ತಂಡಗಳ ತಮ್ಮ ಕಲೆಯ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ವಿವಿಧ ಅಭಿವೃದ್ದಿ ಯೋಜನೆಗಳ ಕುರಿತು ಅರಿವು ಮುಟ್ಟಿಸಬೇಕಾಗುತ್ತದೆ. ಕಾರಣ ತಂಡಗಳನ್ನು ಆಯ್ಕೆ ಮಾಡುವಾಗ ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ತಂಡಗಳಿಗೆ ಪ್ರಾಶಸ್ತ್ಯ ನೀಡಲಾಗುವುದು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ತಂಡಗಳ ಮುಖ್ಯಸ್ಥರು ಕಲಬುರಗಿ ವಾರ್ತಾ ಮತ್ತು ಸಂಪರ್ಕ ಇಲಾಖೆ ಉಪ ನಿರ್ದೇಶಕರ ಕಚೆÉೀರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, 2017ರ ಮೇ 25 ರೊಳಗಾಗಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಬೀದಿನಾಟಕ ಕಲಾ ತಂಡಗಳ ಹೆಸರಿನಲ್ಲಿ ಬ್ಯಾಂಕ್ ಖಾತೆಯ ಝರಾಕ್ಸ್ ಪ್ರತಿ ಮತ್ತು ಪಾನ್‍ಕಾರ್ಡ ಝರಾಕ್ಸ್ ಪ್ರತಿ ಹಾಗೂ ಹತ್ತು ಜನ ಕಲಾವಿದರ ಬ್ಯಾಂಕ್ ಖಾತೆ ಝರಾಕ್ಸ್ ಪ್ರತಿ ಮತ್ತು ಪಾನ್‍ಕಾರ್ಡ ಝರಾಕ್ಸ್ ಪ್ರತಿ ಹಾಗೂ ಆಧಾರ ಕಾರ್ಡ ಝರಾಕ್ಸ್ ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಂಡಗಳಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಸಮಿತಿಯ ಮುಂದೆ ಹಾಜರಾಗಿ ಕಾರ್ಯಕ್ರಮ ನೀಡಬೇಕಾಗುತ್ತದೆ. ಆಯ್ಕೆಗಾಗಿ ಬರುವ ಸಂದರ್ಭದಲ್ಲಿ ಕಲಾವಿದರು ತಮ್ಮ ಸ್ವಂತ ಖರ್ಚಿನಲ್ಲಿಯೇ ಬರಬೇಕು ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಿಕಾಸ ಭವನ ಆವರಣ, ಲೋಕಸಭಾ ಸದಸ್ಯರ ಕಚೇರಿ ಹತ್ತಿರ, ಕಲಬುರಗಿ–585102 ಕಛೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-223133 ಯನ್ನು ಸಂಪರ್ಕಿಸಲು ಕೋರಲಾಗಿದೆ.
ರಜಾ ದಿನಗಳಂದು ಸಹ ಆಸ್ತಿ ತೆರಿಗೆ ಪಾವತಿಸಲು ವ್ಯವಸ್ಥೆ
ಕಲಬುರಗಿ,ಮೇ.11.(ಕ.ವಾ.)-ಕಲಬುರಗಿ ನಗರ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮಾಲೀಕರು ದಂಡ ರಹಿತ ಆಸ್ತಿ ತೆರಿಗೆ ಪಾವತಿಸಲು ಸರ್ಕಾರದಿಂದ ನೀಡಲಾದ ಕಾಲಾವಕಾಶದ ಸದುಪಯೋಗ ಪಡೆದುಕೊಂಡು ತಮ್ಮ ಆಸ್ತಿಗಳ ತೆರಿಗೆಯನ್ನು ಪಾವತಿಸಿ ತೆರಿಗೆ ಹಾಗೂ ದಂಡದಿಂದ ಮುಕ್ತರಾಗಬೇಕೆಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ತಿಳಿಸಿದ್ದಾರೆ.
ಸಾರ್ವಜನಿಕರ ಅನುಕೂಲಕ್ಕಾಗಿ ಮೇ 13 ಹಾಗೂ 14 ಎರಡು ದಿನಗಳ ರಜಾದಿನಗಳಂದು ಸಹ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಮಹಾನಗರ ಪಾಲಿಕೆಯ ವಲಯ ಕಚೇರಿ-3ರ ಆವರಣ ಹಾಗೂ ಖರ್ಗೆ ಪೆಟ್ರೋಲ್ ಬಂಕ್ ಹತ್ತಿರದ ಹೌಸಿಂಗ್ ಬೋರ್ಡ್ ಕಾಂಪ್ಲೆಕ್ಸ್‍ನಲ್ಲಿರುವ ಗುಲಬರ್ಗಾ ಒನ್ ಶಾಖೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಉದ್ಯೋಗ ಸೃಜನಾ ಯೋಜನೆಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಮೇ.11.(ಕ.ವಾ.)-ಮುಖ್ಯಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯಡಿ 2017-18ನೇ ಸಾಲಿನಲ್ಲಿ ಜಿಲ್ಲೆಯ ವಿವಿಧ ಬ್ಯಾಂಕುಗಳಿಂದ ಸಾಲ ಸೌಲಭ್ಯ ಪಡೆದು ಗ್ರಾಮೀಣ ಪ್ರದೇಶದಲ್ಲಿ ಅತೀ ಸಣ್ಣ ಕೈಗಾರಿಕೆ ಸ್ಥಾಪಿಸಿ ಸ್ವಯಂ ಉದ್ಯೋಗ ಕೈಗೊಳ್ಳಲು ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಖಾದಿ ಗ್ರಾಮೋದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಯುವಕ/ಯುವತಿಯರು ಸ್ವಯಂ ಉದ್ಯೋಗ ಕೈಗೊಳ್ಳಲು ವಿವಿಧ ಬ್ಯಾಂಕುಗಳಿಂದ ಗರಿಷ್ಠ 10 ಲಕ್ಷ ರೂ. ಮೊತ್ತದವರೆಗೆ ಸಾಲ ಪಡೆದು ಅತಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಬಹುದಾಗಿದೆ. ಇದಕ್ಕಾಗಿ ಕÀನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಸಾಮಾನ್ಯ ವರ್ಗದವರಿಗೆ ಕನಿಷ್ಟ 21 ವರ್ಷ ಮತ್ತು ಗರಿಷ್ಠ 35 ವರ್ಷ ಮತ್ತು ವಿಶೇಷ ವರ್ಗದವರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಮಾಜಿಸೈನಿಕರು ಮತ್ತು ಅಂಗವಿಕಲರು ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು. ಈ ಯೋಜನೆಯಡಿ ಸಣ್ಣ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯಾವುದೇ ಆದಾಯ ಮಿತಿ ಇರುವುದಿಲ್ಲ.
ಸಾಲ ಪಡೆಯಲಿಚ್ಛಿಸುವ ಗ್ರಾಮೀಣ ಅಭ್ಯರ್ಥಿಗಳು ಛಿmegಠಿ.ಞಚಿಡಿ.ಟಿiಛಿ.iಟಿವೆಬ್‍ಸೈಟ್‍ದಲ್ಲಿ ಮೇ 10 ರಿಂದ ಜೂನ್ 12ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ, ಆನ್‍ಲೈನ್ ಮೂಲಕ ಪಡೆದ ಮುದ್ರಿತ ಅರ್ಜಿಯ ಜೊತೆಗೆ ಪಾಸ್‍ಪೋರ್ಟ್ ಸೈಜ್ ಭಾವಚಿತ್ರ, ಯೋಜನಾ ವರದಿ, ಜನ್ಮ ದಿನಾಂಕ ದಾಖಲಾತಿ, ವಿದ್ಯಾರ್ಹತೆ ಪ್ರಮಾಣಪತ್ರ, ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ತರಬೇತಿ ಪಡೆದ ಪ್ರಮಾಣಪತ್ರ, ಚುನಾವಣಾ ಗುರುತಿನ ಚೀಟಿ/ಪಡಿತರ ಚೀಟಿ, ಆಧಾರ್ ಕಾರ್ಡ್, ಖರೀದಿಸುವ ಯಂತ್ರೋಪಕರಣಗಳ ಪಟ್ಟಿ, ಜಾತಿ, ಪ.ಜಾ./ಪ.ಪಂ./ಓ.ಬಿ.ಸಿ./ಅ.ಸಂ., ಅಂಗವಿಕಲರ ಮತ್ತು ಮಾಜಿ ಸೈನಿಕರ ಪ್ರಮಾಣಪತ್ರಗಳ ದ್ವಿಪ್ರತಿಯನ್ನು ಲಗತ್ತಿಸಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ, ಎಲ್-1 ಮತ್ತು ಎಲ್-2, ಇಂಡಸ್ಟ್ರೀಯಲ್ ಎಸ್ಟೇಟ್, ಜೇವರ್ಗಿ ಕ್ರಾಸ್ ಕಲಬುರಗಿ-585102 ಕಚೇರಿಯಲ್ಲಿ ಸಲ್ಲಿಸಬೇಕು.
ಈ ಯೋಜನೆಯಲ್ಲಿ ಹೊಸದಾಗಿ ಸಾಲ ಮಂಜೂರಾತಿ ಪಡೆದು ಪ್ರಾರಂಭಿಸುವ ಹೊಸ ಘಟಕಗಳಿಗೆ ಮಾತ್ರ ಸಹಾಯಧನ ಲಭ್ಯವಿರುತ್ತದೆ. ವಿಸ್ತರಣೆ, ಆಧುನೀಕರಣ, ವೈವಿದ್ಧೀಕರಣ ಘಟಕಗಳಿಗೆ ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹತೆ ಇರುವುದಿಲ್ಲ. ಇತರೆ ಯೋಜನೆಗಳಲ್ಲಿ ಅಥವಾ ಪಿ.ಎಂ.ಇ.ಜಿ.ಪಿ., ಕೆ.ಎಸ್.ಇ.ಎಸ್. ಯೋಜನೆಯಲ್ಲಿ ಸಾಲ ಸೌಲಭ್ಯಗಳನ್ನು ಪಡೆದಿದ್ದಲ್ಲಿ ಅರ್ಹತೆ ಇರುವುದಿಲ.್ಲ ಷರತ್ತು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕಚೇರಿಯನ್ನು ಹಾಗೂ ದೂರವಾಣಿ ಸಂ. 08472-220275ಗಳನ್ನು ಸಂಪರ್ಕಿಸಲು ಕೋರಿದೆ.
ಮೇ 12ರಂದು ಕಾನೂನು ಅರಿವು ನೆರವು ಕಾರ್ಯಕ್ರಮ
ಕಲಬುರಗಿ,ಮೇ.11.(ಕ.ವಾ.)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಕೇಂದ್ರ ಕಾರಾಗೃಹ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಮೇ 12ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ ಎಂ. ಸೋಮಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಬುರಗಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಿ.ಆರ್. ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕೇಂದ್ರ ಕಾರಾಗೃಹದ ಉಚಿತ ಕಾನೂನು ಸಲಹಾ ಕೇಂದ್ರದ ಪೆನಲ್ ವಕೀಲ ಎಲ್.ಎಸ್. ವಾಗೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸುವರು.
ಉದ್ಯೋಗ ವಿನಿಮಯ ಕಚೇರಿಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೋಂದಣಿ ಕೇಂದ್ರ
ಕಲಬುರಗಿ,ಮೇ.11.(ಕ.ವಾ.)-ರಾಜ್ಯದಲ್ಲಿ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಮುಖ್ಯಮಂತ್ರಿಗಳ ಕೌಶಲ್ಯ ಅಭಿವೃದ್ಧಿ ಇಲಾಖೆ ಸ್ಥಾಪಿಸಲಾಗಿದೆ. ಇದರ ಮೂಲಕ ವಿವಿಧ ಯೋಜನೆಗಳಲ್ಲಿ ನಿರುದ್ಯೋಗಿಗಳಿಗೆ ತರಬೇತಿ ಮತ್ತು ಉದ್ಯೋಗವನ್ನು ದೊರಕಿಸಿಕೊಡಲಾಗುತ್ತದೆ. ನಿರುದ್ಯೋಗಿ ಯುವಕ/ಯುವತಿಯರ ನೋಂದಣಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 15ರಿಂದ ನೋಂದಣಿ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ಯುವತಿಯರಿಗೆ ಕೌಶಲ್ಯಾಧಾರಿತ ತರಬೇತಿ ನೀಡುವುದು ಇದರ ಉದ್ದೇಶವಾಗಿದೆ. ಕೌಶಲ್ಯ ಅಭಿವೃದ್ಧಿ ಇಲಾಖೆ ರೂಪಿಸಿರುವ ತಿತಿತಿ.ಞಚಿushಟಞಚಿಡಿ.ಛಿom ವೆಬ್‍ಸೈಟ್‍ನಲ್ಲಿ ಹೆಸರು ನೋಂದಾಯಿಸಬಹುದಾಗಿದೆ. ಕೌಶಲ್ಯ ಅಭಿವೃದ್ಧಿ ಇಲಾಖೆ ರೂಪಿಸಿರುವ ವೆಬ್‍ಸೈಟ್‍ನ್ನು ಕಲಬುರಗಿ ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಮೇ 15ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣ ಪ್ರಕಾಶ ಪಾಟೀಲ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ
ಕಲಬುರಗಿ,ಮೇ.11.(ಕ.ವಾ.)-ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಸೇಡಂ ಪಟ್ಟಣದಲ್ಲಿ ಯು.ಜಿ.ಡಿ. ಕಾಮಗಾರಿಗಾಗಿ 2 ವೆಟ್‍ವೆಲ್‍ಗಳ ಅಗತ್ಯವಿದ್ದು, ಸದರಿ ವೆಟ್‍ವೆಲ್ ಸಂಖ್ಯೆ 2 ನಿರ್ಮಿಸಲು ತಾಂತ್ರಿಕವಾಗಿ ರಹೆಮತನಗರÀದಲ್ಲಿ ಬರುವ ಸರ್ವೆ ನಂಬರ 910ರ ಅನುಮೋದಿತ ರೂಪರೇಷೆಯಲ್ಲಿ ಸಾರ್ವಜನಿಕ ಸೌಲಭ್ಯಕ್ಕೆ ಮೀಸಲಿಟ್ಟ ನಿವೇಶನದಲ್ಲಿ 72ಘಿ45 ಮಿಟರ ಅಳತೆಯ ಪೈಕಿ 30ಘಿ30 ಮಿ ಅಳತೆಯ ನಿವೇಶನವನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ವೆಟ್‍ವೆಲ್ ನಿರ್ಮಾಣಕ್ಕಾಗಿ ತುರ್ತು ಸಭೆಯಲ್ಲಿ ನಿರ್ಣಯಸಲಾಗಿದೆ ಎಂದು ಸೇಡಂ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಅದ್ದರಂತೆ ಸೇಡಂ ಪಟ್ಟಣದ ಯು.ಜಿ.ಡಿ. ಜೊನ-3 ರ ಸಿವೇಝ ನೀರನ್ನು ಪಂಪು ಮಾಡಲು ವೆಟ್‍ವೆಲ್ ನಿರ್ಮಾಣಕ್ಕಾಗಿ ಸರ್ವೆ ನಂಬರ 910ರ ಅನುಮೋದಿತ ರೂಪರೇಷೆÀಯಲ್ಲಿ ಸಾರ್ವಜನಿಕ ಸೌಲಭ್ಯ ಮೀಸಲಿಟ್ಟ ನಿವೇಶನದಲ್ಲಿ 72ಘಿ45 ಮೀಟರ ಅಳತೆಯ ನಿವೇಶನವನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ನೀಡಲು ದಿನಾಂಕ 18-03-2017 ರಂದು ತುರ್ತು ಸಭೆಯ ನಡಾವಳಿ ಸಂಖ್ಯೆ: 37-2 ರನ್ವಯ ಠರಾವು ಮಾಡಿ ನಿರ್ಣಯಿಸಿರುತ್ತಾರೆ.
ಸದರಿ ವೆಟ್‍ವೆಲ್‍ಗಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ ಏನಾದರೂ ಆಕ್ಷೇಪಣೆಗಳಿದ್ದಲ್ಲಿ 2017ರ ಮೇ 25ರೊಳಗಾಗಿ ಸೇಡಂ ಪುರಸಭೆ ಮುಖ್ಯಾಧಿಕಾರಿ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಹೀಗಾಗಿ ಲೇಖನಗಳು News and photo 11-5-2017
ಎಲ್ಲಾ ಲೇಖನಗಳು ಆಗಿದೆ News and photo 11-5-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo 11-5-2017 ಲಿಂಕ್ ವಿಳಾಸ https://dekalungi.blogspot.com/2017/05/news-and-photo-11-5-2017.html
0 Response to "News and photo 11-5-2017"
ಕಾಮೆಂಟ್ ಪೋಸ್ಟ್ ಮಾಡಿ