ಶೀರ್ಷಿಕೆ : NEWS AND PHOTO DATE: 02-05-2017
ಲಿಂಕ್ : NEWS AND PHOTO DATE: 02-05-2017
NEWS AND PHOTO DATE: 02-05-2017
ಪರಶಿವನನ್ನು ಗೆದ್ದ ಭಗೀರಥ ಮಹರ್ಷಿ
ಕಲಬುರಗಿ,ಮೇ.02.(ಕ.ವಾ.)-ಭಗೀರಥ ಮಹರ್ಷಿ ಕಠೋರ ತಪಸ್ಸು ಮಾಡುವ ಮೂಲಕ ಪರಶಿವನನ್ನು ಗೆದ್ದು ಗಂಗಾ ಮಾತೆಯನ್ನು ಭೂಲೋಕಕ್ಕೆ ತರುವಲ್ಲಿ ಯಶಸ್ವಿಯಾದ ಮಹಾಪುರುಷರಾಗಿದ್ದಾರೆ ಎಂದು ಶಾಸಕ ದತ್ತಾತ್ರೆಯ ಸಿ. ಪಾಟೀಲ ರೆವೂರ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಶ್ರೀ ಭಗೀರಥ ಮಹರ್ಷಿ ಜಯಂತ್ಯುತ್ಸವ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಎಸ್. ಎಂ. ಪಂಡಿತ ರಂಗಮಂದಿರದಲ್ಲಿ ಆಯೋಜಿಸಿದ ಭಗೀರಥ ಮಹರ್ಷಿಗಳ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಗಂಗಾ ಮಾತೆಯನ್ನು ಸ್ವರ್ಗಲೋಕದಿಂದ ಭೂಲೋಕಕ್ಕೆ ತರದೇ ಹೋಗಿದ್ದರೆ ಇಲ್ಲಿ ಯಾರೂ ಜೀವಿಸುತ್ತಿರಲಿಲ್ಲ. ಗಂಗಾ ನದಿಯು ಇಂದು ದೇಶದ ಜೀವ ನದಿಯಾಗಿದೆ. ರೈತರಿಗೆ ಹಾಗೂ ಉದ್ಯೋಗಕ್ಕೆ ಇದು ಹೆಚ್ಚು ಸಹಾಯಕವಾಗಿದೆ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿರುವಂತೆ ಉಪ್ಪಾರ ಸಮಾಜದ ಬಾಂಧವರು ಕಾಯಕದಲ್ಲಿ ತೊಡಗಿ ಆರ್ಥಿಕ ಸಬಲರಾಗಬೇಕು. ಸರ್ಕಾರ ರೂಪಿಸಿರುವ ಯೋಜನೆಗಳ ಪ್ರಯೋಜನ ಪಡೆಯಬೇಕೆಂದರು.
ವಿಧಾನ ಪರಿಷತ್ ಶಾಸಕ ಅಮರನಾಥ ಪಾಟೀಲ ಮಾತನಾಡಿ, ಭೂಲೋಕಕ್ಕೆ ವರದಾನವಾಗಿರುವ ಗಂಗಾ ಮಾತೆಯನ್ನು ಎಲ್ಲರೂ ಆರಾಧಿಸುವ ಮೂಲಕ ಮಿತವಾಗಿ ಬಳಿಸಿ ಸದ್ಬಳಕೆ ಮಾಡಿಕೊಳ್ಳಬೇಕು. ಮಾನವನ ದುರ್ಬಳಕೆಯಿಂದ ಗಂಗಾ ನದಿಯು ಕಲುಷಿತವಾಗಿದ್ದು, ಕೇಂದ್ರ ಸರ್ಕಾರವು ಗಂಗಾ ನದಿಯ ಪಾವಿತ್ರತೆಯನ್ನು ಕಾಪಾಡುವಲ್ಲಿ ಪ್ರಯತ್ನಿಸುತ್ತಿದೆ ಎಂದರು.
ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ ಮಾತನಾಡಿ, ಯಾವುದೇ ಸಮಾಜ ಮುಂದುವರೆಯಬೇಕಾದರೆ ಶಿಕ್ಷಣ ಮುಖ್ಯ. ಉಪ್ಪಾರ ಸಮಾಜ ಬಾಂಧವರು ಶಿಕ್ಷಣ ಪಡೆದು ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆಯಬೇಕೆಂದರು.
ಜೇವರ್ಗಿ ಕಾಲೋನಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಡಾ|| ಗೀತಾಂಜಲಿ ಜಿ. ಉಪ್ಪಾರ ಉಪನ್ಯಾಸ ನೀಡಿ, ಭಗೀರಥ ಎಂದಾಕ್ಷಣ ಸ್ವರ್ಗದಿಂದ ಗಂಗೆಯನ್ನು ಪಾತಾಳಕ್ಕೆ ಕರೆದೊಯ್ದದ್ದು ಹಾಗೂ ಅಚಲ ಪ್ರಯತ್ನ ನೆನಪಿಗೆ ಬರುತ್ತದೆ. ಕಷ್ಟಪಟ್ಟು ಪ್ರಯತ್ನಿಸಿದರೆ ಅಸಾಧ್ಯವಾದುದು ಯಾವುದು ಇಲ್ಲ ಎಂಬ ಸಂದೇಶವನ್ನು ಭಗೀರಥ ಮಹರ್ಷಿಗಳು ಮನುಕುಲಕ್ಕೆ ನೀಡಿದ್ದಾರೆ. ಉಪ್ಪರ ಸಮಾಜದವರು ಎಲ್ಲರೂ ಒಗ್ಗಟ್ಟಾಗಿ ಪ್ರಾಮಾಣಿಕವಾಗಿ ಒಳ್ಳೆಯ ಸಮಾಜ ನಿರ್ಮಾಣದಲ್ಲಿ ತೊಡಗಬೇಕು ಎಂದರು.
ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಶ್ರೀನಿವಾಸ ಸಗರ, ಜಿಲ್ಲಾ ಪಂಚಾಯತಿ ಸದಸ್ಯ ಅಶೋಕ ಸಗರ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಜಗದೀಶ್ವರಿ ಶಿವಕೇರಿ ಸ್ವಾಗತಿಸಿದರು. ಶಿವಾನಂದ ಅಣಜಗಿ ಕಾರ್ಯಕ್ರಮ ನಿರೂಪಿಸಿದರು. ರಂಗನಾಥ ಜಡಿ ರಾವೂರ ವಂದಿಸಿದರು.
ಇದೇ ಸಂದರ್ಭದಲ್ಲಿ ಕಲಾವಿದೆ ರೇಣುಕಾ ಹಾಗರಗುಂಡಗಿ ಮತ್ತು ತಂಡದವರು ವಚನ ಗಾಯನ ಹಾಗೂ ನಾಡಗೀತೆಯನ್ನು ಸುಮಧುರವಾಗಿ ಹಾಡಿದರು. ಜಯಂತ್ಯೋತ್ಸವದ ಅಂಗವಾಗಿ ಕಲಬುರಗಿ ಮಕ್ತಂಪುರದ ಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ಸರಾಫ್‍ಬಜಾರ್, ಚೌಕ್ ಪೊಲೀಸ್ ಸ್ಟೇಶನ್, ಸೂಪರ್ ಮಾರ್ಕೆಟ್, ಜಗತ್ ವೃತ್ತದ ಮೂಲಕ ಡಾ. ಎಸ್.ಎಂ. ಪಂಡಿತ ರಂಗಮಂದಿರದವರೆಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಶ್ರೀ ಭಗೀರಥ ಮಹರ್ಷಿಗಳ ಭಾವಚಿತ್ರದ ಭವ್ಯ ಮತ್ತು ಆಕರ್ಷಕ ಮೆರವಣಿಗೆ ಜರುಗಿತು.
ಮೇ 6ರಂದು ಕಿಣ್ಣಿಸಡಕ ಗ್ರಾಮದಲ್ಲಿ ಜನಸ್ಪಂದನ ಸಭೆ
ಕಲಬುರಗಿ,ಮೇ.02.(ಕ.ವಾ.)-ಕಲಬುರಗಿ ತಾಲೂಕಿನ ಕಿಣ್ಣಿಸಡಕ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ 2017ರ ಮೇ 6ರಂದು ಬೆಳಿಗ್ಗೆ 11 ಗಂಟೆಗೆ ಜನಸ್ಪಂದನ ಸಭೆ ನಡೆಸಲಾಗುವುದು ಎಂದು ಗ್ರೇಡ್-2 ತಹಶೀಲ್ದಾರ್ ಜಗನ್ನಾಥ ತಿಳಿಸಿದ್ದಾರೆ. ಕಿಣ್ಣಿಸಡಕ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಟ್ಟ ಜನಪ್ರತಿನಿಧಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಖುದ್ದಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ.
ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಕಲಬುರಗಿ,ಮೇ.02.(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18ನೇ ಸಾಲಿಗೆ ಐ.ಎ.ಎಸ್., ಕೆ.ಎ.ಎಸ್. ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಕಲಬುರಗಿ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಮತ್ತು 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನ್ನು ಸಂಪರ್ಕಿಸಬೇಕೆಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಮೇ 4ರಂದು ಮಾಜಿ ಸೈನಿಕರ ಕುಂದುಕೊರತೆ ಆಲಿಕೆ
ಕಲಬುರಗಿ,ಮೇ.02.(ಕ.ವಾ.)-ಜಿಓಸಿ ತೆಲಂಗಾಣ ಮತ್ತು ಆಂಧ್ರ ಸಬ್ ಏರಿಯಾದವರು 2017ರ ಮೇ 4ರಂದು ಬೆಳಗಿನ 8 ಗಂಟೆಗೆ ಕಲಬುರಗಿ ಎಂ.ಎಸ್.ಕೆ. ಮಿಲ್ ಕಣ್ಣಿ ಮಾರ್ಕೆಟ್ ಬಳಿ ಇರುವ ಇ.ಸಿ.ಎಸ್.ಹೆಚ್. ಪಾಲಿಕ್ಲಿನಿಕ್‍ಗೆ ಭೇಟಿ ನೀಡಿ ಮಾಜಿ ಸೈನಿಕರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ಕಲಬುರಗಿ, ಬೀದರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಮಾಜಿ ಸೈನಿಕರು/ ಮಾಜಿ ಸೈನಿಕರ ಅವಲಂಬಿತರು ಕುಂದುಕೊರತೆಗಳೇನಾದರೂ ಇದ್ದಲ್ಲಿ ಇ.ಎಸ್.ಎಸ್.ಹೆಚ್. ಪಾಲಿಕ್ಲಿನಿಕ್ಕಿಗೆ ಖುದ್ದಾಗಿ ಭೇಟಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಇ.ಎಸ್.ಎಸ್.ಹೆಚ್. ಪಾಲಿಕ್ಲಿನಿಕ್ ದೂರವಾಣಿ ಸಂಖ್ಯೆ 08472-266677ನ್ನು ಸಂಪರ್ಕಿಸಬೇಕೆಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ರಾಜೀವಗಾಂಧಿ ಮಾನಸ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಮೇ.02.(ಕ.ವಾ.)-ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ, ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚಿನ ಸೇವೆಯನ್ನು ಸಲ್ಲಿಸಿರುವಂತಹ ವ್ಯಕ್ತಿ ಮತ್ತು ಸಂಸ್ಥೆಗಳನ್ನು ಗುರುತಿಸಿ ರಾಜೀವಗಾಂಧಿ ಮಾನವ ಸೇವಾ ಪ್ರಶಸ್ತಿಯನ್ನು 03 ವ್ಯಕ್ತಿಗಳಿಗೆ ಹಾಗೂ 05 ಸಂಸ್ಥೆಗಳಿಗೆ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು 1,00,000 ರೂ. ನಗದು ಮತ್ತು ಪ್ರಶಸ್ತಿ ಪತ್ರ ಹಾಗೂ ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿಯು 3,00,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಸಂಘ ಸಂಸ್ಥೆಗಳಲ್ಲಿ ವೇತನ ಪಡೆಯುತ್ತಿರುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಈ ಪ್ರಶಸ್ತಿಗೆ ಆಯ್ಕೆ ಮಾಡಲು ಇರುವ ಒಂದೇ ಮಾನದಂಡ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಮಾಡಿರುವ ಕೆಲಸದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ.
ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದ ಎದುರುಗಡೆಯಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಇದೇ ಕಚೇರಿಯಲ್ಲಿ ಮೇ 10ರ ಮಧ್ಯಾಹ್ನ 1 ಗಂಟೆಯೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278659ನ್ನು ಸಂಪರ್ಕಿಸಲು ಕೋರಲಾಗಿದೆ.
ನೀರು ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ಮೇ.02.(ಕ.ವಾ.)-ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಭೀಮಾ ನದಿಯ ಸರಡಗಿ ಮೂಲ ಸ್ಥಾವರದಲ್ಲಿರುವ 1200 ಹೆಚ್.ಪಿ. ಮೋಟಾರ್ ಕೆಟ್ಟು ಹೋಗಿರುತ್ತದೆ. ತುರ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಮೋಟಾರು ದುರಸ್ತಿ ಆಗುವವರೆಗೆ ಭೀಮಾ ನದಿಯಿಂದ ಸರಬರಾಜಾಗುವ ಬಡಾವಣೆಗಳಿಗೆ ಈಗ ಸದ್ಯಕ್ಕೆ ಚಾಲ್ತಿಯಲ್ಲಿರುವ ಮೋಟಾರ್‍ದಿಂದ ನಗರಕ್ಕೆ 5 ರಿಂದ 6 ದಿವಸಕ್ಕೊಮ್ಮೆ ನೀರು ಸರಬರಾಜು ಮಾಡಲಾಗುವುದು.
ಸದರಿ ಮೋಟಾರ್ ದುರಸ್ತಿ ಮಾಡಲು ಸುಮಾರು 10 ರಿಂದ 12 ದಿವಸ ತಗಲಬಹುದು. ಇದಕ್ಕೆ ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ
ಸರಳ ವಿವಾಹಯೋಜನೆಯಡಿ ಆರ್ಥಿಕ ಸಹಾಯ
ಕಲಬುರಗಿ,ಮೇ.02.(ಕ.ವಾ.)-ಕಲಬುರಗಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳವಾಗಿ ವಿವಾಹ ಮಾಡಿಕೊಳ್ಳುವ ಒಂದು ಬಾರಿಗೆ 50,000 ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಅಲ್ಲದೇ ಖಾಸಗಿ ಟ್ರಸ್ಟ್‍ಗಳು(ಮಠ, ಇತ್ಯಾದಿ),/ದೇವಸ್ಥಾನದ ಟ್ರಸ್ಟ್‍ಗಳು/ ಸಂಘ ಸಂಸ್ಥೆಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಅಥವಾ ಸಮಾಜ ಸೇವಕರು, ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹಗಳಲ್ಲಿ ವಿವಾಹವಾದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ವಿವಾಹಿತ ದಂಪತಿಗಳು ಉಪ ನೊಂದಣಾಧಿಕಾರಿಗಳ ಕಛೇರಿಯಲ್ಲಿ ವಿವಾಹವಾದ ಬಗ್ಗೆ ನೋಂದಣಿ ಮಾಡಿರುವುದು ಹಾಗೂ ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 2000 ರೂ.ಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕಲಬುರಗಿ ಕಚೆÉೀರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ
ಕಲಬುರಗಿ,ಮೇ.02.(ಕ.ವಾ.)-ತೋಟಗಾರಿಕೆ ಇಲಾಖೆಯ 2017-18ನೇ ಸಾಲಿನ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಕಲಬುರಗಿ ತಾಲೂಕಿನ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಕೃಷಿ ಭಾಗ್ಯ ಯೋಜನೆಯಡಿ ನೆರಳು ಪರದೆ ಮತ್ತು ಹಸಿರು ಮನೆ, ರಾಷ್ಟ್ರೀಯ ಸೂಕ್ಷ್ಮ ಹನಿ ನೀರಾವರಿ, ರಾಷ್ಟ್ರೀಯ ಕೃಷಿ ವಿಕಾಸ, ತೋಟಗಾರಿಕೆ ಯಾಂತ್ರಿಕರಣ, ಸಮಗ್ರ ತೋಟಗಾರಿಕೆ ಅಭಿವೃದ್ಧಿ, ರಾಷ್ಟ್ರೀಯ ಕೃಷಿ ವಿಕಾಸ. ಬಾಳೆ ನಿಖರ ಬೇಸಾಯ ಮತ್ತು ಸರ್ವತೋಮುಖ ಅಭಿವೃದ್ಧಿ, ಮಧುವನ ಮತ್ತು ಜೇನು ಸಾಕಾಣಿಕೆ, ತೋಟಗಾರಿಕೆ ಬೆಳೆಗಳ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಮುಂತಾದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ರೈತರು ಅರ್ಜಿಯೊಂದಿಗೆ ಪಹಣಿ, ಹೋಲ್ಡಿಂಗ್, ಜಾತಿ ಪ್ರಮಾಣಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ), ಚುನಾವಣಾ ಗುರುತಿನ ಚೀಟಿ, ಆಧಾರ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜಿರಾಕ್ಸ್, ನೀರುಬಳಕೆ/ಪತ್ರ ದಾಖಲಾತಿಗಳೊಂದಿಗೆ ಜೂನ್ 10ರೊಳಗಾಗಿ ಹೋಬಳಿ ಮತ್ತು ತಾಲೂಕು ತೋಟಗಾರಿಕೆ ಕಚೇರಿಗೆ ಸಲ್ಲಿಸಬೇಕು.
ರೈತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಹೋಬಳಿ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಹೆಸರು ಹಾಗೂ ಮೊಬೈಲ್ ಸಂಖ್ಯೆಗಳ ವಿವರ ಇಂತಿದೆ. ಕಲಬುರಗಿ ಹೋಬಳಿ ಗುರುಲಿಂಗಪ್ಪ ಬಗಲಿ-9611646548, ಅವರಾದ(ಬಿ) ಹೋಬಳಿ ಬಸವರಾಜ ಗೊಬ್ಬೂರಕರ್-9008101303, ಮಹಾಗಾಂವ ಹೋಬಳಿ ಪ್ರಸನ್ನ ಜಿ.ಸಜ್ಜನ್-9900970770, ಪಟ್ಟಣ ಹೋಬಳಿ ಅವಿನಾಶ ರ್ಯಾಗಿ-7760393107, ಫರಹತಾಬಾದ ಹೋಬಳಿ-ಶಿವಕುಮಾರ 8277944278, ಕಮಲಾಪುರ ಹೋಬಳಿ-ಕುಮಾರಿ ಸುಲಭಾ 8277944276.
ಮೇ 3ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ಮೇ.02.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11 ಕೆ.ವಿ. ರಾಘವೇಂದ್ರ ಕಾಲೋನಿ ಫೀಡರ್ ವ್ಯಾಪ್ತಿಯ ಅನ್ನಪೂರ್ಣ ಕ್ರಾಸಿನಿಂದ ಜಿಲ್ಲಾ ವೈದ್ಯಕೀಯ ಆಸ್ಪತ್ರೆವರೆಗಿನ ರಸ್ತೆ ಅಗಲೀಕರಣ ಮತ್ತು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯ ಕೈಗೊಳ್ಳುವ ಪ್ರಯುಕ್ತ ಹಾಗೂ 11 ಕೆ.ವಿ. ಉಮರ್ ಕಾಲೋನಿ ಫೀಡರುಗಳ ವ್ಯಾಪ್ತಿಯಲ್ಲಿನ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಮೇ 3ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಫೀಡರುಗಳ ವ್ಯಾಪ್ತಿಯ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ. ವಿದ್ಯುತ್ ವ್ಯತ್ಯಯದ ಬಡಾವಣೆಗಳ ವಿವರ ಇಂತಿದೆ.
11 ಕೆ.ವಿ. ರಾಘವೇಂದ್ರ ಕಾಲೋನಿ ಫೀಡರ್: ಬೆಳಗಿನ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪಿ.ಎಲ್.ಡಿ. ಬ್ಯಾಂಕ್, ಗೊಲ್ಲರಗಲ್ಲಿ, ಜಗತ್, ಜಗತ್ ಅಪ್ಪರ್ ಮತ್ತು ಲೋವರ್ ಲೆನ್, ಮಹಾನಗರ ಪಾಲಿಕೆಯ ಆಯುಕ್ತರ ವಸತಿ ಗೃಹ, ತಿರಂದಾಜ್ ಟಾಕೀಸ್ ಎದುರುಗಡೆ ಮೈಲಾರಲಿಂಗ ದೇವಸ್ಥಾನ, ಆದಿತ್ಯ ಹೋಟೆಲ್, ಎಸ್.ಪಿ. ಕಚೇರಿ ಪ್ರದೇಶ, ಏಷಿಯನ್ ಮಾಲ್, ಆಮಂತ್ರಣ ಹೋಟೆಲ್, ಕಕ್ಕೇರಿ ಕಾಂಪ್ಲೆಕ್ಸ್, ಪಶು ವೈದ್ಯಕೀಯ ಆಸ್ಪತ್ರೆ ಟ್ರೈನಿಂಗ್ ಸೆಂಟರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ. ಉಮರ್ ಕಾಲೋನಿ ಫೀಡರ್: ಅಂದು ಬೆಳಿಗಿನ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಮರ ಕಾಲೋನಿ, ಅಬುಬಕರ್ ಕಾಲೋನಿ, ಆಜಾದಪುರ ರಸ್ತೆ, ಅಹ್ಮದ್‍ನಗರ್, ಮಕ್ಕಾ ಕಾಲೋನಿ, ಮಹಾರಾಜಾ ಹೋಟೆಲ್, ವಾಟರ್ ಟ್ಯಾಂಕ್, ಯಾದ್ದುಲ್ಲಾ ಕಾಲೋನಿ, ಕಮಾಲ-ಎ-ಮುಜರತ್, ಮಹಬೂಬ ನಗರ, ವೀರಭದ್ರೇಶ್ವರ ದೇವಾಲಯ, ಖಾನ್ ಕಂಪೌಂಡ್, ಟಿಪ್ಪು ಸುಲ್ತಾನ ಚೌಕ್, ಸನಾ ಹೋಟೆಲ್, ಅಕ್ಬರ್ ಭಾಗ್, ರಾಮಜೀ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಹಿಂದುಳಿದ ವರ್ಗದವರಿಗೆ ಉದ್ಯೋಗ ಸಾಲ ಸೌಲಭ್ಯ
ಕಲಬುರಗಿ,ಮೇ.02(ಕ.ವಾ.)-ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗಕ್ಕಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಹಿಂದುಳಿದ ವರ್ಗದ ಜನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಚೈತನ್ಯ ಸಬ್ಸಿಡಿ ಕಂ ಸಾಫ್ಟಲೋನ್, ಅರಿವು-ಶೈಕ್ಷಣಿಕ ನೇರ ಸಾಲ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ, ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಕಿರುಸಾಲ ಯೋಜನೆಗಳಡಿ ಸೌಲಭ್ಯ, ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಮತ್ತು ಸಹಾಯಧನ, ವೈಯಕ್ತಿಕ ಕೊಳವೆಬಾವಿ ಮತ್ತು ಸಾಮೂಹಿಕ ನೀರಾವರಿಯ ಗಂಗಾ ಕಲ್ಯಾಣ ಯೋಜನೆ, 2016-17ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಮಡಿವಾಳ, ಸವಿತ, ತಿಗಳ ಮತ್ತು ಕುಂಬಾರ ಸಮುದಾಯಗಳ ಸಂಪ್ರದಾಯಿಕ ವೃತ್ತಿಗಳಿಗೆ, ಸರಾಯಿ ಮಾರಾಟ ನಿಷೇಧದಿಂದ ಉದ್ಯೋಗ ಕಳೆದುಕೊಂಡಿರುವವರಿಗೆ ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು, ಅತ್ಯಂತ/ ಅತೀ ಹಿಂದುಳಿದ ತಾಲೂಕುಗಳಲ್ಲಿ ಯುವಜನರ ಆರ್ಥಿಕ ಸಶಕ್ತೀಕರಣಕ್ಕಾಗಿ ಆರ್ಥಿಕ ನೆರವು, ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಾಲ ಯೋಜನೆಯಡಿಯ ಅವಧಿ ಸಾಲ ಯೋಜನೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ, ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮೈಕ್ರೋ ಫೈನಾನ್ಸ್ ಸಾಲ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ ಮತ್ತು ಅದರ ಉಪ ಸಮುದಾಯಗಳನ್ನು ಹೊರತುಪಡಿಸಿ). ರಾಜ್ಯ ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 40,000 ರೂ.ಗಳು ಹಾಗೂ ಪಟ್ಟಣ ಪ್ರದೇಶದವರಿಗೆ 55,000 ರೂ.ಗಳ ಒಳಗಿರಬೇಕು. ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಮತ್ತು ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ.ಗಳು ಮತ್ತು ಪಟ್ಟಣ ಪ್ರದೇಶದವರಿಗೆ 1,20,000 ರೂ.ಗಳನ್ನು ಮೀರಿರಬಾರದು ಹಾಗೂ ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಮತ್ತು ಆಯಾ
ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಚೇರಿಯಿಂದ 2017ರ ಮೇ 31 ರೊಳಗೆ ಉಚಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ 3ನೇ ಮಹಡಿ, ಕೋಣೆ ಸಂಖ್ಯೆ-22 ವಿಕಾಸ ಭವನ ಕಲಬುರಗಿ-585102 ಕಚೇರಿಗೆ ಅಗತ್ಯ ದಾಖಲಾತಿಗಳೊಂದಿಗೆ 2017ರ ಜೂನ್ 09ರೊಳಗೆ ಸಲ್ಲಿಸಬೇಕೆಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ವೆಬ್‍ಸೈಟ್‍ನ್ನು ಹಾಗೂ ದೂರವಾಣಿ ಸಂಖ್ಯೆ 08472-278635ನ್ನು ಸಂಪರ್ಕಿಸಲು ಕೋರಿದೆ
ಮೇ 3ರಂದು ಜನಸ್ಪಂದನ ನೇರ ಫೋನ್-ಇನ್ ಕಾರ್ಯಕ್ರಮ
ಕಲಬುರಗಿ,ಮೇ.02(ಕ.ವಾ.)-ಗುಲಬರ್ಗಾ ದೂರದರ್ಶನ ಕೇಂದ್ರವು ಮೇ 3 ರಂದು ಸಂಜೆ 5.30 ರಿಂದ 6 ಗಂಟೆಯವರೆಗೆ ಜನಸ್ಪಂದನÀ ನೇರ ಫೋನ್–ಇನ್ ಕಾರ್ಯಕ್ರಮವನ್ನು ಆಯೋಜಿಸಿದೆ. ಜನಸ್ಪಂದನದ ವಿಷಯ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯಗಳು ಇರುತ್ತದೆ.
ಕಲಬುರಗಿ ಕೃಷಿ ಇಲಾಖೆಯ ಉಪನಿರ್ದೇಶಕ ಬಾಲರಾಜ ರಂಗರಾವ ಮತ್ತು ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಸುನೀಲಕುಮಾರ ಭಾಗವಹಿಸುವರು. ದೂರದರ್ಶನ ಕೇಂದ್ರದ ಪ್ರಕಾಶ ಕೆ. ಮುಜಮದಾರ್ ಕಾರ್ಯಕ್ರಮ ಪ್ರಸ್ತುತ ಪಡಿಸುವರು. ರೈತರು ಹಾಗೂ ಸಾರ್ವಜನಿಕರು ದೂರವಾಣಿ ಸಂಖ್ಯೆ 08472- 220491, 220492ಗಳನ್ನು ಸಂಪರ್ಕಿಸಿ ತಮ್ಮ ಪ್ರಶ್ನೆಗಳಿಗೆ ತಜ್ಞರಿಂದ ಪರಿಹಾರ ಕಂಡುಕೊಳ್ಳಬಹುದು.
ಹೀಗಾಗಿ ಲೇಖನಗಳು NEWS AND PHOTO DATE: 02-05-2017
ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 02-05-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 02-05-2017 ಲಿಂಕ್ ವಿಳಾಸ https://dekalungi.blogspot.com/2017/05/news-and-photo-date-02-05-2017.html
0 Response to "NEWS AND PHOTO DATE: 02-05-2017"
ಕಾಮೆಂಟ್ ಪೋಸ್ಟ್ ಮಾಡಿ