NEWS AND PHOTO DATE 05-05-2017

NEWS AND PHOTO DATE 05-05-2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE 05-05-2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE 05-05-2017
ಲಿಂಕ್ : NEWS AND PHOTO DATE 05-05-2017

ಓದಿ


NEWS AND PHOTO DATE 05-05-2017

ಜಿಲ್ಲಾ ಪಂಚಾಯತ್ 1210 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ 




ಕಲಬುರಗಿ,ಮೇ.05.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿಯ 2017-18ನೇ ಸಾಲಿಗಾಗಿ ಒಟ್ಟು 1210.73 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಶುಕ್ರವಾರ ಕಲಬುರಗಿ

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಆರನೇ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಒಮ್ಮತದ ಅನುಮೋದನೆ ನೀಡಲಾಯಿತು.
ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳಿಗೆ 370.60 ಕೋಟಿ ರೂ., ತಾಲೂಕು ಪಂಚಾಯಿತಿ ಕಾರ್ಯಕ್ರಮಗಳಿಗೆ 811.42 ಕೋಟಿ ರೂ. ಹಾಗೂ ಗ್ರಾಮ ಪಂಚಾಯಿತಿ ಕಾರ್ಯಕ್ರಮಗಳಿಗೆ 28.70 ಕೋಟಿ ರೂ. ಗಳನ್ನು ಹಂಚಿಕೆ ಮಾಡಲಾಗಿದೆ. ಪ್ರಸಕ್ತ ವರ್ಷ ಯೋಜನೆ ಮತ್ತು ಯೋಜನೇತರ ಶೀರ್ಷಿಕೆ ಒಗ್ಗೂಡಿಸಿ ಅನುದಾನ ನೀಡಲಾಗಿದ್ದು, ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರು ಕೂಡಲೇ ಕಾಮಗಾರಿಗಳ ಕ್ರಿಯಾ ಯೋಜನೆಗಳನ್ನು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕೆಂದು ಅಧ್ಯಕ್ಷರು ತಿಳಿಸಿದರು. 
ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 466 ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದೆ. ಸುಮಾರು 64 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕಾಗಬಹುದು. ಈ ಗ್ರಾಮಗಳಲ್ಲಿ ಕುಡಿಯುವ ನೀರಿನ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಟಾಸ್ಕ್‍ಫೋರ್ಸ್ ಸಮಿತಿಗೆ ಅಧಿಕಾರ ನೀಡಲಾಗಿದೆ. ಟಾಸ್ಕ್‍ಫೋರ್ಸ್ ಸಮಿತಿ ಅನುಮೋದಿಸಿದ ಕಾಮಗಾರಿಗಳನ್ನು ತಕ್ಷಣ ಪ್ರಾರಂಭಿಸಲಾಗುತ್ತದೆ. ಫೆಬ್ರವರಿ ಮಾಹೆಯಲ್ಲಿ ಪ್ರತಿ ಮತಕ್ಷೇತ್ರದಲ್ಲಿರುವ ಟಾಸ್ಕ್‍ಫೋರ್ಸ್ ಸಮಿತಿಗಳಿಗೆ ತಲಾ 40 ಲಕ್ಷ ರೂ.ಗಳ ಅನುದಾನ ಸರ್ಕಾರ ನೀಡಿದೆ. ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲೇಬೇಕಾದಲ್ಲಿ ಜಿಲ್ಲಾಧಿಕಾರಿಗಳಿಂದ ಪರವಾನಿಗೆ ಪಡೆದು ನೀರು ಸರಬರಾಜು ಮಾಡಬಹುದಾಗಿದೆ ಎಂದು ಸಭೆ ನಿರ್ಣಯಿಸಿತು. ಜಿಲ್ಲಾ ಪಂಚಾಯಿತಿ ಸದಸ್ಯರು ತಮ್ಮ ಮತಕ್ಷೇತ್ರಗಳಲ್ಲಿ ಕನಿಷ್ಠ 5 ಬೋರವೇಲ್‍ಗಳನ್ನು ಕೊರೆಯಿಸಲು ಕೋರಿದ ಹಿನ್ನೆಲೆಯಲ್ಲಿ ಸದಸ್ಯರು ಬೋರವೇಲ್ ಕೊರೆಯಿಸಲು ಪ್ರಸ್ತಾವನೆ ಸಲ್ಲಿಸಬೇಕು. ಇದಕ್ಕಾಗಿ ಬೇಕಾಗುವ ಅನುದಾನಕ್ಕಾಗಿ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ತಿಳಿಸಿದರು. 
ಕಲಬುರಗಿ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 47 ಸದಸ್ಯರಿದ್ದು, ಈ ಪೈಕಿ 24 ಮಹಿಳಾ ಸದಸ್ಯರಿದ್ದಾರೆ. ಅವರು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತಮ್ಮ ಮತಕ್ಷೇತ್ರದ ತೊಂದರೆಗಳನ್ನು ಹಾಗೂ ಅವಶ್ಯಕ ವಿಷಯಗಳನ್ನು ಚರ್ಚಿಸಲು ಅನುಕೂಲವಾಗುವಂತೆ ಸಾಮಾನ್ಯ ಸಭೆಯ ಮೊದಲನೇ ಒಂದು ಗಂಟೆ ಸಮಯವನ್ನು ಮಹಿಳಾ ಸದಸ್ಯರಿಗಾಗಿ ಮೀಸಲಿರಿಸಲಾಗಿದೆ. ಮುಂದಿನ ಸಾಮಾನ್ಯ ಸಭೆಗಳಲ್ಲಿ ಮೊದಲು ಒಂದು ಗಂಟೆ ಮಹಿಳಾ ಸದಸ್ಯರ ಸಮಸ್ಯೆಗಳನ್ನು ಆಲಿಸಲಾಗುವುದು ಎಂದು ಅಧ್ಯಕ್ಷರು ಹೇಳಿದರು. 
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ನಿಯಮ 1993ರಲ್ಲಿ 284ನೇ ಸೆಕ್ಷನ್ ಪ್ರಕಾರ ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳಿಗೆ  ಯಾವುದೇ ಮಾಹಿತಿ ನೀಡಲು ತಿಳಿಸಿದಾಗ ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ಮಾಹಿತಿ     ನೀಡಬೇಕಾಗುತ್ತದೆ. ತಪ್ಪಿದಲ್ಲಿ ದಂಡ ಮತ್ತು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಕಾರಣ ಅಧಿಕಾರಿಗಳೆಲ್ಲರೂ ಜಿಲ್ಲಾ ಪಂಚಾಯಿತಿ ಸದಸ್ಯರು ಕೇಳುವ ಮಾಹಿತಿಗಳಿಗೆ ಒಂದು ವಾರದಲ್ಲಿ ಉತ್ತರ ನೀಡಬೇಕು. ಇದಕ್ಕಾಗಿ 284ನೇ ಸೆಕ್ಷನ್ ಸಮರ್ಪಕವಾಗಿ ಜಾರಿಗೊಳಿಸಬೇಕೆಂದು ಅಧ್ಯಕ್ಷರು ತಿಳಿಸಿದರು. 
ಕಲಬುರಗಿ ಜಿಲ್ಲೆಯಲ್ಲಿ ಕಳೆದ ಹಂಗಾಮಿನಲ್ಲಿ ಸುಮಾರು 30 ಲಕ್ಷ ಕ್ವಿಂಟಲ್ ತೊಗರಿಯನ್ನು ಬೆಳೆಯಲಾಗಿದೆ. ತೊಗರಿ ಬೆಳೆಯ ಬೆಲೆ ಕುಸಿದಿದ್ದರಿಂದ ಸರ್ಕಾರ ಮಾರುಕಟ್ಟೆ ಮಧ್ಯ ಪ್ರವೇಶಿಸಿ ಬೆಂಬಲ ಬೆಲೆಯಲ್ಲಿ 11.68 ಲಕ್ಷ ಕ್ವಿಂಟಲ್ ತೊಗರಿಯನ್ನು ಖರೀದಿಸಿದೆ. ಇದಕ್ಕಾಗಿ ಕೇಂದ್ರ ಸರ್ಕಾರ 590 ಕೋಟಿ ಮತ್ತು ರಾಜ್ಯ ಸರ್ಕಾರ 52.58 ಕೋಟಿ ರೂ.ಗಳ ಅನುದಾನ ನೀಡಿದೆ. ಅಲ್ಲದೇ ಎ.ಪಿ.ಎಂ.ಸಿ. ಗಳಲ್ಲಿ  ಸುಮಾರು 7-8 ಲಕ್ಷ  ಕ್ವಿಂಟಲ್  ತೊಗರಿ  ಮಾರಾಟ  ಮಾಡಲಾಗಿದೆ. ಸಧ್ಯ  6-7 ಲಕ್ಷ ಕ್ವಿಂಟಲ್ 
ತೊಗರಿ ರೈತರ ಬಳಿ ಇದೆ. ಸರ್ಕಾರವು ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸಲು ಏಪ್ರಿಲ್ 15ರಿಂದ 22 ರವರೆಗೆ ಅವಧಿ ವಿಸ್ತರಣೆ ಮಾಡಿತ್ತು. ರೈತರ ಬಳಿಯಿರುವ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ಒಂದು ತಿಂಗಳ ಕಾಲ ತೊಗರಿ ಖರೀದಿ ಪ್ರಕ್ರಿಯೆಯನ್ನು ಪುನ: ಪ್ರಾರಂಭಿಸಲು ಜಿಲ್ಲಾ ಪಂಚಾಯಿತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸಭೆಗೆ ತಿಳಿಸಿದರು. 
ಸರ್ಕಾರಿ ಆಸ್ತಿಗಳ  ಮತ್ತು ಅವುಗಳ ಒತ್ತುವರಿ ಕುರಿತ ವರದಿಯನ್ನು ಪಡೆಯಲಾಗಿದೆ. ಸರ್ಕಾರಿ ಆಸ್ತಿಗಳ ಒತ್ತುವರಿಯಲ್ಲಿ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. 
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ 
ಕಲಬುರಗಿ,ಮೇ.05.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ಅವರು ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಮೇ 6ರಂದು ಬೆಳಿಗ್ಗೆ 5.39 ಗಂಟೆಗೆ ಕಲಬುರಗಿಗೆ ಆಗಮಿಸಿ, ಅಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. 
ಮೇ 7ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಅಂದು ರಾತ್ರಿ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಅಬಕಾರಿ ರಕ್ಷಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ: ತೀವ್ರ ಕಟ್ಟೆಚ್ಚರಕ್ಕೆ ಸೂಚನೆ
ಕಲಬುರಗಿ,ಮೇ.05.(ಕ.ವಾ.)-ಕಲಬುರಗಿ ಜಿಲ್ಲೆಯ 43 ಪರೀಕ್ಷಾ ಕೇಂದ್ರಗಳಲ್ಲಿ 2017ರ ಮೇ 7ರಂದು ಬೆಳಗಿನ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಾಯಂಕಾಲ 4 ಗಂಟೆಯವರೆಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯುವ ಅಬಕಾರಿ ಇಲಾಖೆಯಲ್ಲಿನ ಅಬಕಾರಿ ರಕ್ಷಕರ (ಪುರುಷ ಮತ್ತು ಮಹಿಳೆ) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ತೀವ್ರ ಕಟ್ಟೆಚ್ಚರ ಮತ್ತು ಜವಾಬ್ದಾರಿಯಿಂದ ನಡೆಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಇಲಿಯಾಸ್ ಅಹ್ಮದ್ ಇಸಾಮದಿ ಹೇಳಿದರು. 
ಅವರು ಶುಕ್ರವಾರ ಕಲಬುರಗಿಯಲ್ಲಿ ಅಬಕಾರಿ ರಕ್ಷಕರ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಪರೀಕ್ಷೆಗೆ ಒಟ್ಟು 10832 ಅಭ್ಯರ್ಥಿಗಳು ಹಾಜರಾಗಲಿದ್ದಾರೆ. ಈ ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಯಾವುದೇ ಅವ್ಯವಹಾರ ನಡೆಯದಂತೆ ನೋಡಿಕೊಳ್ಳುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳಿಗೆ 11 ಜನ ಮಾರ್ಗಾಧಿಕಾರಿ ಹಾಗೂ 5 ಪರೀಕ್ಷಾ ಕೇಂದ್ರಗಳಿಗೊಬ್ಬರಂತೆ ಒಟ್ಟು 9 ಜನ ವೀಕ್ಷಕರನ್ನು (ರೂಟ್ ಆಫೀಸರ್ಸ್ ಕಮ್ ಆಬ್ಜರ್ವರ್) ನೇಮಿಸಲಾಗಿದೆ. 
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಹಾಗೂ ಮತ್ತಿತರ ಇಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷೆಗೆ ಬರುವಾಗ ಮೂಲ ಅಥವಾ ಜಿರಾಕ್ಸ್ ಪ್ರತಿಯ ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಪಾಸ್‍ಪೋರ್ಟ್ ಅಥವಾ ಸರ್ಕಾರಿ ನೌಕರರ ಗುರುತಿನ ಚೀಟಿಯನ್ನು ತರಬೇಕು. ಅಭ್ಯರ್ಥಿಗಳು ಗುರುತಿನ ಚೀಟಿಯನ್ನು ತರದಿದ್ದಲ್ಲಿ ಪರೀಕ್ಷೆ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದಿಲ್ಲ.  



ಪರೀಕ್ಷಾ ಕೇಂದ್ರಗಳ ಚಿತ್ರೀಕರಣ ಮಾಡಲು ವಿಡಿಯೋಗ್ರಾಫರ್‍ನ್ನು ನೇಮಿಸಲಾಗುವುದು. ಈ ಪರೀಕ್ಷೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ನೇಮಕಗೊಂಡ ಮಾರ್ಗಾಧಿಕಾರಿ ಹಾಗೂ ವೀಕ್ಷಕರು (ರೂಟ್ ಆಫೀಸರ್ಸ್ ಕಮ್ ಆಬ್ಜರ್ವರ್) ತಮಗೆ ವಹಿಸಿಕೊಂಡ ಪರೀಕ್ಷಾ ಕೇಂದ್ರಗಳಿಗೆ ಒಂದು ದಿನ ಮೊದಲು ಭೇಟಿ ನೀಡಿ ಪರೀಕ್ಷಾ ಕೇಂದ್ರದಲ್ಲಿನ ಬೆಳಕಿನ ವ್ಯವಸ್ಥೆ, ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮತ್ತಿತರ ವ್ಯವಸ್ಥೆ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕೆಂದರು. ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್, ಮಾರ್ಗಾಧಿಕಾರಿಗಳು, ವೀಕ್ಷಕರು ಮತ್ತಿತರರು ಸಭೆಯಲ್ಲಿ ಹಾಜರಿದ್ದರು. 
ಅಬಕಾರಿ ರಕ್ಷಕರ ಹುದ್ದೆಗಳ ನೇಮಕಾತಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ  
ಕಲಬುರಗಿ,ಮೇ.05.(ಕ.ವಾ.)-ಅಬಕಾರಿ ಇಲಾಖೆಯಲ್ಲಿನ ಅಬಕಾರಿ ರಕ್ಷಕರ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು 2017ರ ಮೇ 7ರಂದು ಬೆಳಗಿನ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಾಯಂಕಾಲ 4 ಗಂಟೆಯವರೆಗೆ ಕಲಬುರಗಿ ನಗರದ ಒಟ್ಟು 43 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 


ಈ ಪರೀಕ್ಷೆಗಳಲ್ಲಿ ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶÀದಲ್ಲಿ 1973ರ ಸಿಆರ್.ಪಿ.ಸಿ. ಕಾಯ್ದೆಯ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿರಾಕ್ಸ್/ಪುಸ್ತಕ ಅಂಗಡಿಗಳನ್ನು ಮುಚ್ಚುವಂತೆ ಕಲಬುರಗಿ ತಹಶೀಲ್ದಾರ್ ಅಶೋಕ ಹಿರೋಳೆ ಅವರು ಆದೇಶ ಹೊರಡಿಸಿದ್ದಾರೆ.  
ಪರೀಕ್ಷಾ ಕೋಣೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮೊಬೈಲ್ ಹಾಗೂ ಇತರೆ ಚಿಕ್ಕ ಎಲೆಕ್ಟ್ರಾನಿಕ್ಸ್ ವಸ್ತು ಮತ್ತು ಚಿಕ್ಕಗಾತ್ರದ ಪುಸ್ತಕಗಳು ಸೇರಿದಂತೆ ಮತ್ತಿತರ ಯಾವುದೇ ವಸ್ತುಗಳನ್ನು ತರಕೂಡದು ಎಂದು ಸೂಚಿಸಿದ್ದಾರೆ. 
ಕೋಟ್ಪಾ ಕಾಯ್ದೆ ಕಾರ್ಯಾಚರಣೆ:2150 ರೂ.ದಂಡ   
    ಕಲಬುರಗಿ,ಮೇ.05.(ಕ.ವಾ.)-ಬೆಂಗಳೂರಿನ ಆಹಾರ ಸಂರಕ್ಷಣಾ ಆಯುಕ್ತರ ಹಾಗೂ ಕಲಬುರಗಿ ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ಜಿಲ್ಲೆಯಲ್ಲಿ ಜಗಿಯುವ ತಂಬಾಕು ಪೊಟ್ಟಣಗಳನ್ನು ನಿಷೇಧಿಸಿರುವ ಪ್ರಯುಕ್ತ ಹಾಗೂ ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ತಂಬಾಕು ನಿಷೇಧ ಕೋಶದಡಿ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ|| ಶಿವಶರಣಪ್ಪ ನೇತೃತ್ವದಲ್ಲಿ ಸಮೀಕ್ಷಾಧಿಕಾರಿಗಳ ನೇತೃತ್ವದ ಎನ್.ಟಿ.ಸಿ.ಪಿ. ತಂಡವು ಗುರುವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರÀದಲ್ಲಿ ಮಾರ್ಕೆಟ್ ಪ್ರದೇಶ ಪ್ರಮುಖ ಪಾನ್‍ಶಾಪ್, ಹೋಟೆಲ್ ಹಾಗೂ ಸಾರ್ವಜನಿಕ ಪ್ರದೇಶಗಳಗೆ ಭೇಟಿ ನೀಡಲಾಯಿತು.
ಈ ಸಂದರ್ಭದಲ್ಲಿ ಧೂಮಪಾನ ಮಾಡುತ್ತಿರುವ ಹಾಗೂ ಕೋಟ್ಪಾ ಕಾಯ್ದೆ-2003ರ ಅಡಿಯಲ್ಲಿ ನಿಯಮ ಬಾಹಿರ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಹ ಅಂಗಡಿಗಳಿಗೆ ದಂಡ ವಿಧಿಸಿ, ಸುಮಾರು 200 ಜಗಿಯುವ ತಂಬಾಕು ಚೀಟಿಗಳನ್ನು ಜಪ್ತಿ ಮಾಡಿ, ಕೋಟ್ಪಾ ಕಾಯ್ದೆ-2003 ರ ಸೆಕ್ಷನ್-04 ಮತ್ತು 05 ಕ್ಕೆ ಸಂಬಂಧಿಸಿದಂತೆ ಒಟ್ಟು 12 ಪ್ರಕರಣಗಳು ದಾಖಲಿಸಿ, 2150 ರೂ.ಗಳ ದಂಡ ವಿಧಿಸಲಾಯಿತು.
ಸದರಿ ತಂಡವು ಸಾರ್ವಜನಿಕರಲ್ಲಿ ತಿಳುವಳಿಕೆ ಮತ್ತು ಜನಸಾಮಾನ್ಯರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ  ಕಾಯ್ದೆಯ ನಿಯಮ ಪಾಲನೆ ಮಾಡುವಂತೆ ಮತ್ತು  ಕೋಟ್ಪಾ ಕಾಯ್ದೆ-2003ರ ಸೆಕ್ಷನ್-04ರ ಪ್ರಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಇದಲ್ಲದೆ 18 ವರ್ಷದೊಳಗಿನ ಮಕ್ಕಳು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಸೂಚಿಸಿದರು. ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಎಚ್ಚರಿಕೆಯ ನಾಮಫಲಕಗಳನ್ನು ಎಲ್ಲ ಪಾನ್‍ಶಾಪ್, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‍ಗಳ ಮಾಲೀಕರು/ಮಾರಾಟಗಾರರು ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಸೂಚಿಸಲಾಯಿತು.  
ಜಿಲ್ಲಾ ತಂಬಾಕು ನಿಷೇಧ ಕೋಶದ ಎಸ್.ಜೆ. ಪಾಟೀಲ್, ಆರೋಗ್ಯ ಇಲಾಖೆಯ ಗಣೇಶ ಚಿನ್ನಾಕರ, ಮಲ್ಲಿಕಾರ್ಜುನ, ಚಿತ್ತಾಪುರ ಪುರಸಭೆಯ ಪ್ರಕಾಶ, ಪೊಲೀಸ್ ಠಾಣೆ ಹಾಗೂ ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.  
ಮೇ 6ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ಮೇ.05.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11 ಕೆ.ವಿ. ವಿಠ್ಠಲನಗರ ಪೀಡರ ವ್ಯಾಪ್ತಿಯ ನಿರ್ವಹಣಾ ಕಾರ್ಯ ಕೈಗೊಳ್ಳುವ ಪ್ರಯುಕ್ತ ಮೇ 6ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಫೀಡರುಗಳ ವ್ಯಾಪ್ತಿಯ ಬಡಾವಣೆಗಳಲ್ಲಿ ಬೆಳಗಿನ 9 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ. ವಿದ್ಯುತ್ ವ್ಯತ್ಯಯದ ಬಡಾವಣೆಗಳ ವಿವರ ಇಂತಿದೆ. 
11 ಕೆ.ವಿ. ವಿಠ್ಠಲನಗರ ಫೀಡರ್: ಡಿ.ಡಿ.ಪಿ.ಐ. ಕಚೇರಿ, ವಿಜಯ ವಿದ್ಯಾಲಯ ಕÀಂಪೌಂಡ್, ಐ-ವಾನ್-ಶಾಹಿ ಅಥಿತಿಗೃಹ, ಗುಲ್ಲಾಬೌಡಿ, ಲಾಹೋಟಿ ಪೆಟ್ರೋಲ್ ಪಂಪ್, ಕೆ.ಬಿ.ಎನ್.ಆಸ್ಪತ್ರೆ, ಖೂಬಾ ಪ್ಲಾಟ್, ವಿಠ್ಠಲನಗರ, ಆನಂದ ನಗರ, ವಿವೇಕಾನಂದ ನಗರ, ರಾಮನಗರ, ಇಂದಿರಾನಗರ, ವಿದ್ಯಾನಗರ, ಬಲಘಟ ಕಂಪೌಂಡ್, ಮೇಹತಾ ಕಾಂಪೌಂಡ್, ಮಿನಿ ವಿಧಾನಸೌಧ, ಜಿಲ್ಲಾ ನ್ಯಾಯಾಲಯ, ಸಂಗಮೇಶ್ವರ ಕಾಲೋನಿ, ಆನಂದ ಹೋಟೆಲ್ ಮತ್ತು ಜೆಸ್ಕಾಂ ಕಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.



ಹೀಗಾಗಿ ಲೇಖನಗಳು NEWS AND PHOTO DATE 05-05-2017

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE 05-05-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE 05-05-2017 ಲಿಂಕ್ ವಿಳಾಸ https://dekalungi.blogspot.com/2017/05/news-and-photo-date-05-05-2017.html

Subscribe to receive free email updates:

0 Response to "NEWS AND PHOTO DATE 05-05-2017"

ಕಾಮೆಂಟ್‌‌ ಪೋಸ್ಟ್‌ ಮಾಡಿ