news and photo date: 06-05-2017

news and photo date: 06-05-2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು news and photo date: 06-05-2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : news and photo date: 06-05-2017
ಲಿಂಕ್ : news and photo date: 06-05-2017

ಓದಿ


news and photo date: 06-05-2017

ಕೇಂದ್ರೀಯ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಸೂಚನೆ 
ಕಲಬುರಗಿ,ಮೇ.06.(ಕ.ವಾ.)-ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿವಿಧ ಹಂತಗಳಲ್ಲಿ ಕೈಗೊಳ್ಳಲಾದ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಇದಕ್ಕೆ ಯಾವುದೇ ಹಣಕಾಸಿನ ತೊಂದರೆಯಿಲ್ಲ ಎಂದು  ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. 
ಅವರು ಶನಿವಾರ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ ಕೆಲಸಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಈಗಾಗಲೇ ರೈಟ್ಸ್ ಕಂಪನಿಯ ವ್ಯವಸ್ಥಾಪಕರೊಂದಿಗೆ ಮಾತನಾಡಲಾಗಿದೆ. ನಿರ್ಮಾಣ ಕಾಮಗಾರಿಗಳನ್ನು ತೀವ್ರಗೊಳಿಸಿ 2017ರ ಅಕ್ಟೋಬರ್‍ರೊಳಗಾಗಿ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಕಟ್ಟಡಗಳು ಪೂರ್ಣಗೊಂಡ ನಂತರ ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳನ್ನು ಪ್ರಾರಂಭಿಸಬೇಕೆಂದು ತಿಳಿಸಿದರು. 
ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಯು.ಜಿ.ಸಿ. ಯಿಂದ ಕಳೆದ ಸಾಲಿಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಈ ವರ್ಷ ಯು.ಜಿ.ಸಿ.ಗೆ ಸಲ್ಲಿಸಲಾದ 160 ಕೋಟಿ ರೂ.ಗಳ ಅನುದಾನ ಪಡೆಯಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳಿಗೆ ಮತ್ತು ವಿಶ್ವವಿದ್ಯಾಯದ ಬೋಧಕ ಸಿಬ್ಬಂದಿಗಳಿಗೆ ವಿಶ್ವವಿದ್ಯಾಲಯದ ಆವರಣದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಬೇಕು ಮತ್ತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಗೊಳಿಸಬೇಕು. ವಿಶ್ವವಿದ್ಯಾಲಯದ ಆವರಣದಲ್ಲಿ ಹೆಚ್ಚಿನ ಗಿಡಮರಗಳನ್ನು ಬೆಳೆಸುವ ಮೂಲಕ ಹಸಿರನ್ನಾಗಿ ಮಾರ್ಪಡಿಸಬೇಕು. ವಿಶ್ವವಿದ್ಯಾಲಯದಲ್ಲಿ ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಖಾಯಂ ನೇಮಕ ಮಾಡಿಕೊಳ್ಳಬೇಕೆಂದು ತಿಳಿಸಿದರು. 
ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದೇಶದ ನಾನಾ ರಾಜ್ಯಗಳ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸ್ಕಾಲರ್‍ಶಿಫ್ ನೀಡಲಾಗುವುದು. ಅದೇ ರೀತಿ ಇತರೆ ರಾಜ್ಯಗಳಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್‍ಶಿಫ್ ನೀಡುವ ಸಲುವಾಗಿ ಕೇಂದ್ರದ ಸೋಶಿಯಲ್ ವೆಲ್‍ಫೇರ್ ಸೆಕ್ರೆಟರಿಗೆ ಪತ್ರ ಬರೆಯಬೇಕು. ಕೇಂದ್ರೀಯ ವಿಶ್ವವಿದ್ಯಾಲಯವನ್ನು ಒಳ್ಳೆಯ ಗುಣಮಟ್ಟದಲ್ಲಿ ಅಭಿವೃದ್ಧಿಗೊಳಿಸಿ ಬೇರೆ ರಾಷ್ಟ್ರದ ವಿದ್ಯಾರ್ಥಿಗಳು ಇಲ್ಲಿಗೆ ಅಧ್ಯಯನ ಮಾಡಲು ಬರುವಂತಾಗಬೇಕು. ಇದರಿಂದ ಶೈಕ್ಷಣಿಕ ಪರಿಸರ ಅಭಿವೃದ್ಧಿ ಹೊಂದುವುದು ಎಂದರು. 
ಸಧ್ಯಕ್ಕೆ ವಿಶ್ವವಿದ್ಯಾಲಯದಲ್ಲಿ ಕುಡಿಯುವ ನೀರಿನ ತೊಂದರೆಯನ್ನು ನಿವಾರಿಸಲಾಗಿದೆ. ಆದರೂ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಕೈಗೊಳ್ಳಬೇಕು. ವಿಶ್ವವಿದ್ಯಾಲಯದ ಆವರಣದಲ್ಲಿರುವ ಕೆರೆಯನ್ನು ಅಭಿವೃದ್ಧಿಪಡಿಸಬೇಕೆಂದು ಹೇಳಿದರು. 
ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಮಾತನಾಡಿ, ವಿಶ್ವವಿದ್ಯಾಲಯಕ್ಕೆ ಶಾಶ್ವತ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು 3-4 ಯೋಜನೆಗಳನ್ನು ರೂಪಿಸಲಾಗಿದೆ. ಈಗಾಗಲೇ ಕಲಬುರಗಿ ನಗರಕ್ಕೆ 24ಘಿ7 ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಸುಲ್ತಾನಪುರದಲ್ಲಿರುವ 24ಘಿ7 ಕುಡಿಯುವ ನೀರಿನ ಫಿಲ್ಟರ್‍ಬೆಡ್‍ದಿಂದ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ನೀರು ಸರಬರಾಜು ಮಾಡುವ 24 ಕೋಟಿ ರೂ. ಕಾಮಗಾರಿಯ ಕ್ರಿಯಾ ಯೋಜನೆಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯವರು ರೂಪಿಸಿ ಮುಖ್ಯ ಇಂಜಿನಿಯರಿಗೆ ಸಲ್ಲಿಸಿದ್ದಾರೆ. ಈ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಜರುಗಿಸಲಾಗುವುದು ಎಂದರು. 
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಹೆಚ್.ಎಂ. ಮಹೇಶ್ವರಯ್ಯ ಮಾತನಾಡಿ, ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಈವರೆಗೆ 462.25 ಕೋಟಿ ರೂ. ಅನುದಾನ ದೊರೆತಿದೆ. ಈ ಪೈಕಿ 408.46 ಕೋಟಿ ರೂ. ಖರ್ಚು ಮಾಡಲಾಗಿದೆ. ರೈಟ್ಸ್ ಕಂಪನಿಯವರಿಗೆ 40 ಕೋಟಿ ರೂ.ಗಳನ್ನು ನೀಡಬೇಕಾಗಿದೆ. ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ಟೆಕ್ನಾಲಜಿ ಹಾಗೂ ಇಂಜಿನಿಯರಿಂಗ್ ವಿಭಾಗಗಳಿಗೆ ಉಪಕರಣಗಳನ್ನು ಖರೀದಿಸಲಾಗಿದೆ. ಈ ವರ್ಷ 160 ಕೋಟಿ ರೂ.ಗಳ ಅನುದಾನದ ಬೇಡಿಕೆಯನ್ನು ಸಲ್ಲಿಸಲಾಗಿದೆ. ವಿಶ್ವವಿದ್ಯಾಲಯಕ್ಕೆ 1500 ವಿದ್ಯಾರ್ಥಿಗಳಿಗನುಗುಣವಾಗಿ  140  ಬೋಧಕ ಸಿಬ್ಬಂದಿಗಳ ಮಂಜೂರಾದ ಹುದ್ದೆಗಳಿವೆ. ಇದರಲ್ಲಿ 101 ಹುದ್ದೆಗಳು ಖಾಲಿ ಇವೆ. ಈ ಪೈಕಿ 15 ಪ್ರೊಫೇಸರ್, 33 ಅಸೋಸಿಯೇಟ್ ಪ್ರೊಫೇಸರ್ ಹಾಗೂ 53 ಅಸಿಸ್ಟಂಟ್ ಪ್ರೊಫೇಸರ್ ಹುದ್ದೆಗಳಾಗಿವೆ. ಅಸಿಸ್ಟಂಟ್ ಪ್ರೊಫೇಸರ್ ಹುದ್ದೆಗಳನ್ನು 2 ತಿಂಗಳುಗಳಲ್ಲಿ ಭರ್ತಿ ಮಾಡಲಾಗುವುದು. ಅಸೋಸಿಯೇಟ್ ಪ್ರೊಫೇಸರ್‍ಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು ಎಂದರು. 
ಸಭೆಯಲ್ಲಿ ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಕೇಂದ್ರೀಯ ವಿಶ್ವವಿದ್ಯಾಲಯದ ಸಮ ಕುಲಪತಿ ಪ್ರೊ. ಜಿ.ಆರ್. ನಾಯಕ, ಕುಲಸಚಿವ ಪ್ರೊ. ಚಂದ್ರಕಾಂತ ಯಾತನೂರ, ಹಣಕಾಸು ಅಧಿಕಾರಿ ಶಿವಾನಂದಂ, ವಿವಿಧ ನಿಕಾಯಗಳ ಡೀನ್‍ರು, ವಿಭಾಗದ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು. 
ಮೇ 10ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಜಯಂತ್ಯೋತ್ಸವ 
ಕಲಬುರಗಿ,ಮೇ.06.(ಕ.ವಾ.)-ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಉತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಮಹಾಸಾಧ್ವಿ ಶಿರಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯೋತ್ಸವÀನ್ನು ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಮೇ 10ರಂದು ಬುಧವಾರ ಬೆಳಗಿನ 11 ಗಂಟೆಗೆ ಆಯೋಜಿಸಲಾಗಿದೆ. 
ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಹೇಮರೆಡ್ಡಿ ಮಲ್ಲಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ್ ಅಧÀ್ಯಕ್ಷತೆಯಲ್ಲಿ ಜರುಗುವ ಈ ಸಮಾರಂಭಕ್ಕೆ ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ,  ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವ್ಹಿ.ಗುತ್ತೇದಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. 
ವಿಧಾನಸಭಾ ಶಾಸಕರುಗಳಾದ ಡಾ. ಖಮರುಲ್ ಇಸ್ಲಾಂ, ಜಿ.ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಜಗರ ಚುಲಬುಲ್, ಮಾಜಿ ಸಚಿವರು ಹಾಗೂ ಕಲಬುರಗಿ ಜಿಲ್ಲಾ ರೆಡ್ಡಿ ಸಮಾಜದ ಗೌರವಾಧ್ಯಕ್ಷ ಶರಣಬಸಪ್ಪಗೌಡ ದರ್ಶನಾಪುರ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಕಲಬುರಗಿ ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಈಶ್ವರಯ್ಯ ಮಠ ವಿಶೇಷ ಉಪನ್ಯಾಸಕರಾಗಿ ಆಗಮಿಸಲಿದ್ದಾರೆ. 
ಜಯಂತ್ಯೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಯಿಂದ ಕಲಬುರಗಿ  ನಗರದ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದಿಂದ ಡಾ. ಎಂ.ಎಸ್. ಪಂಡಿತ ರಂಗಮಂದಿರದವರೆಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಮಹಾಸಾದ್ಧಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಭಾವಚಿತ್ರದ ಭವ್ಯ ಮೆರವಣಿಗೆ ಜರುಗಲಿದೆ.
ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ
ಕಲಬುರಗಿ,ಮೇ.06.(ಕ.ವಾ.)-ಬುದ್ಧ ಪೂರ್ಣಿಮಾ ಮೇ 10ರಂದು ಆಚರಿಸುತ್ತಿರುವ ಪ್ರಯುಕ್ತ ಸದರಿ ದಿನದಂದು ಕಲಬುರಗಿ ನಗರದಲ್ಲಿರುವ ಎಲ್ಲ ಕಸಾಯಿಖಾನೆ ಮತ್ತು ಮಾಂಸ ಮಾರಾಟ ಮಾಡುವ ಅಂಗಡಿಗಳ ಮಾಲೀಕರು ಯಾವುದೇ ರೀತಿಯ ಪ್ರಾಣಿ ವಧೆ ಅಥವಾ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಈ ಆದೇಶ ಉಲ್ಲಂಘಿಸಿದ್ದÀಲ್ಲಿ ಕೆ.ಎಂ.ಸಿ. ಕಾಯ್ದೆ 1976ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತ ಪಿ. ಸುನೀಲಕುಮಾರ್ ತಿಳಿಸಿದ್ದಾರೆ.
ಮೇ 15ರಂದು ಮಾಸಿಕ ಕೆ.ಡಿ.ಪಿ.ಸಭೆ
ಕಲಬುರಗಿ,ಮೇ.06.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರ ಅಧ್ಯಕ್ಷತೆಯಲ್ಲಿ ಮಾಸಿಕ ಕೆ.ಡಿ.ಪಿ., ಎಸ್.ಡಿ.ಪಿ. ಮತ್ತು ನಬಾರ್ಡ್ ಯೋಜನೆ ಪ್ರಗತಿ ಪರಿಶೀಲನಾ ಸಭೆಯು ಮೇ 15ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಜಿಲ್ಲಾ ಪಂಚಾಯತ್ ಹೊಸ ಸಭಾಂಗಣದಲ್ಲಿ ಜರುಗಲಿದೆ. 
ಸಂಬಂಧಪಟ್ಟ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಸಂಬಂಧಿಸಿದ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಸದರಿ ಸಭೆಗೆ ಖುದ್ದಾಗಿ ಹಾಜರಾಗುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.
ಮರಗಳ ಬಹಿರಂಗ ಹರಾಜು
ಕಲಬುರಗಿ,ಮೇ.06.(ಕ.ವಾ.)-ಕಲಬುರಗಿ ಪ್ರಾದೇಶಿಕ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಬರುವ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೃಷಿ ಬೀಜೋತ್ಪಾದನಾ ಕೇಂದ್ರದಲ್ಲಿನ ಬೇವು, ಅಶೋಕ, ನೀಲಿಗಿರಿ ಜಾತಿಯ 25 ಮರಗಳ ಬಹಿರಂಗ ಹರಾಜು 2017ರ ಮೇ 22ರಂದು ಬೆಳಿಗ್ಗೆ 11.30 ಗಂಟೆಗೆÀ ಕಲಬುರಗಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ. ಮೇ 22ರಂದು ಬಹಿರಂಗ ಹರಾಜು ನಡೆಯದಿದ್ದಲ್ಲಿ ಮೇ 23ರಂದು ಮರು ಬಹಿರಂಗ ಹರಾಜು ಮಾಡಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಇ.ಎಂ.ಡಿ. ಮೊತ್ತ, ಷರತ್ತು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
ಸುಧಾರಿತ ಗಸ್ತು ವ್ಯವಸ್ಥೆ ಸಮಾವೇಶ ಹಾಗೂ
 ಆರೋಗ್ಯ ತಪಾಸಣೆ ಚೀಟಿ ವ್ಯವಸ್ಥೆಗೆ ಚಾಲನೆ   
ಕಲಬುರಗಿ,ಮೇ.06.(ಕ.ವಾ.)-ಕಲಬುರಗಿ ಈಶಾನ್ಯ ವಲಯದಿಂದ ಸುಧಾರಿತ ಗಸ್ತು ವ್ಯವಸ್ಥೆ ಸಮಾವೇಶ ಹಾಗೂ ಆರೋಗ್ಯ ತಪಾಸಣೆ ಚೀಟಿ ವ್ಯವಸ್ಥೆಯ ಚಾಲನಾ ಕಾರ್ಯಕ್ರಮವನ್ನು ಮೇ 7ರಂದು ಸಂಜೆ 5 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಮಹಾ ನಿರ್ದೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕ ರೂಪಕ್ ಕುಮಾರ್ ದತ್ತಾ ಉದ್ಘಾಟಿಸುವರು. s
ಈಶಾನ್ಯ ವಲಯದ ಆರಕ್ಷಕ ಮಹಾನಿರೀಕ್ಷಕ ಅಲೋಕ ಕುಮಾರ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹಾಗೂ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕಮ್ ಪ್ರಕಾಶ ಅಮೃತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 
ಮೇ 8ರಂದು ಪರಿವೀಕ್ಷಣಾ ಕವಾಯತು  
ಕಲಬುರಗಿ,ಮೇ.06.(ಕ.ವಾ.)-ಕಲಬುರಗಿ ಈಶಾನ್ಯ ವಲಯದ ಪರಿವೀಕ್ಷಣಾ ಕವಾಯತು ಸಮಾರಂಭವನ್ನು ಕಲಬುರಗಿ ಡಿ.ಎ.ಆರ್. ಮೈದಾನದಲ್ಲಿ ಮೇ 8ರಂದು ಬೆಳಗಿನ 7.30 ಗಂಟೆಗೆ ಜರುಗಲಿದೆ. 
ಕರ್ನಾಟಕ ರಾಜ್ಯ ಮಹಾ ನಿರ್ದೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕ ರೂಪಕ್ ಕುಮಾರ್ ದತ್ತಾ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಈಶಾನ್ಯ ವಲಯದ ಆರಕ್ಷಕ ಮಹಾನಿರೀಕ್ಷಕ ಅಲೋಕ ಕುಮಾರ ಅಧ್ಯಕ್ಷತೆ ವಹಿಸಲಿದ್ದಾರೆ. 
ಮೇ 8ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ 
ಕಲಬುರಗಿ,ಮೇ.06.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11ಕೆ.ವಿ. ಸಿದ್ದೇಶ್ವರ ಕಾಲೋನಿ ಫೀಡರ್ ವ್ಯಾಪ್ತಿಯ ರಸ್ತೆ ಅಗಲೀಕರಣ ಮತ್ತು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯ ಕೈಗೊಳ್ಳುವ ಪ್ರಯುಕ್ತ ಮೇ 8ರಂದು ಬೆಳಗಿನ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಫೀಡರುಗಳ ವ್ಯಾಪ್ತಿಯ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ. ವಿದ್ಯುತ್ ವ್ಯತ್ಯಯದ ಸಮಯ ಮತ್ತು ಬಡಾವಣೆಗಳ ವಿವರ ಇಂತಿದೆ. 
11 ಕೆ.ವಿ.ಸಿದ್ದೇಶ್ವರ: ಓಂ ನಗರ, ಕೆ.ಹೆಚ್.ಬಿ. ಕಾಂಪ್ಲೆಕ್ಸ್, ಪ್ರಗತಿ ಕಾಲೋನಿ, ಸಂತ್ರಾಸವಾಡಿ ಜಿ.ಡಿ.ಎ., ಸ್ವಸ್ತಿಕ ನಗರ, ಎಂ.ಜಿ. ರೋಡ್, ದರ್ಶನಾಪುರ ಲೇಔಟ್, ಬಾಪುನಗರ, ಸುಂದರನಗರ, ಬಸವೇಶ್ವರ ಕಾಲೋನಿ, ಸಿದ್ದೇಶ್ವರ ಕಾಲೋನಿ, ಗುಬ್ಬಿ ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಕಾರ್ಮಿಕರು ವಿವಿಧ ಕಾನೂನಿನ ಜ್ಞಾನ ಹೊಂದುವುದು ಅವಶ್ಯಕ 
ಕಲಬುರಗಿ,ಮೇ.06.(ಕ.ವಾ.)-ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡಲು ಇರುವ ಕಾಯ್ದೆಗಳಲ್ಲಿ ಮುಖ್ಯವಾಗಿ ಕೈಗಾರಿಕಾ ವಿವಾದ ಕಾಯ್ದೆ, ಕನಿಷ್ಠ ವೇತನ ಕಾಯ್ದೆ ಮತ್ತು ಬೋನಸ್ ಕಾಯ್ದೆಗಳ ಇವುಗಳ ಬಗ್ಗೆ ಅರಿವು ಹೊಂದುವುದರ ಜೊತೆಗೆ ತಮಗೆ ದಿನನಿತ್ಯ ಬೇಕಾಗುವ ಕಾನೂನುಗಳಾದ ಜನನ-ಮರಣ ನೋಂದಣಿ ಕಾಯ್ದೆ, ಮೋಟಾರ ವಾಹನ ಕಾಯ್ದೆ, ಗ್ರಾಹಕರ ಹಿತರಕ್ಷಣಾ ಕಾಯ್ದೆ, ಸ್ವತ್ತು ಹಸ್ತಾಂತರ ಕಾಯ್ದೆ, ವಾರಸಾ ಕಾಯ್ದೆ ಬಗ್ಗೆ ಜ್ಞಾನ ಹೊಂದುವುದು ಅವಶ್ಯಕವಾಗಿದೆ. ಇದಕ್ಕಾಗಿ ಈ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ತಿಳಿಸಿದರು.





ಶುಕ್ರವಾರ ಶಹಾಬಾದಿನ ಜಿ.ಇ. ಪವರ್ ಲಿಮಿಟೆಡ್ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಕಲಬುರಗಿ, ತಾಲೂಕು ನ್ಯಾಯವಾದಿಗಳ ಸಂಘ ಶಹಾಬಾದ, ಕಾರ್ಮಿಕ ಇಲಾಖೆ ಕಲಬುರಗಿ ಹಾಗೂ ಜಿ.ಇ. ಪವರ್ ಲಿಮಿಟೆಡ್ ಶಹಾಬಾದ್ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 
ಮಾಲೀಕರ ಮತ್ತು ಕಾರ್ಮಿಕರ ಸಂಬಂಧ ಸುಸೂತ್ರವಾಗಿ ನಡೆಯಬೇಕಾದಲ್ಲಿ ಕಾರ್ಮಿಕರಿಗೆ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಇರುವ ಕಾಯ್ದೆಗಳ ಬಗ್ಗೆ ಜ್ಞಾನ ಹೊಂದುವುದು ಅವಶ್ಯಕವಾಗಿದೆ. ಕಾನೂನಿನ ಪರಿಪಾಲನೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ವಾಹನ ಚಾಲನೆ ಮಾಡುವ ಎಲ್ಲ ವ್ಯಕ್ತಿಗಳು ಅಗತ್ಯವಾದ ಚಾಲನಾ ಪರವಾನಿಗೆ ಹೊಂದಿರುವುದಲ್ಲದೇ ಕಡ್ಡಾಯವಾಗಿ ವಾಹನಕ್ಕೆ ವಿಮೆ ಮಾಡಿಸಬೇಕು.  ಯಾವುದೇ ಸ್ವತ್ತು ಕೊಳ್ಳುವಾಗ ಪತ್ರಗಳಲ್ಲಿ ಆಸ್ತಿಯ ಹಿನ್ನೆಲೆಗಳನ್ನು ನಮೂದಿಸುವುದು ಅವಶ್ಯಕವಾಗಿದೆ. ಮಹಿಳೆಯರು ತಮ್ಮ ಹಕ್ಕುಗಳನ್ನು ಸಂರಕ್ಷಿಸಿಕೊಳ್ಳಲು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ, ಜೀವನಾಂಶ ಕಾಯ್ದೆಗಳ ಮುಖ್ಯ ಅಂಶಗಳನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿದೆ. ವಸ್ತುಗಳನ್ನು ಖರೀದಿಸಿ ಅವುಗಳಲ್ಲಿ ನೂನ್ಯತೆ ಕಂಡು ಬಂದಲ್ಲಿ ಗ್ರಾಹಕರ ಹಿತರಕ್ಷಣಾ ಕಾಯ್ದೆ ಅಡಿಯಲ್ಲಿ ಪರಿಹಾರ ಪಡೆಯಲು ಅವಕಾಶ ಇರುತ್ತದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಅಗತ್ಯವಿರುವ ಎಲ್ಲ ವ್ಯಕ್ತಿಗಳಿಗೆ ಕಾನೂನಿನ ಸಹಾಯ ನೀಡಲು ಪ್ರಯತ್ನಿಸುತ್ತ ಬಂದಿದೆ. ಈ ನಿಟ್ಟಿನಲ್ಲಿ ಈ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಮಿಕರು ಇದರ ಸದುಪಯೋಗ ಪಡೆಯಬೇಕೆಂದರು. 
ಸಂಪನ್ಮೂಲ ವ್ಯಕ್ತಿಯಾಗಿ ಕಲಬುರಗಿ ಸಹಾಯಕ ಕಾರ್ಮಿಕ ಅಧಿಕಾರಿ ವೆಂಕಟೇಶ ಸಿಂಧಿಹತ್ತಿ ಮಾತನಾಡಿ, ಪ್ರತಿಯೊಂದು ಕಾರ್ಖಾನೆಯಲ್ಲಿ ಕಾರ್ಮಿಕರ ಸಂಘವನ್ನು ರಚಿಸಿಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ. ಪ್ರತಿ ಮೂರು ವರ್ಷಕೊಮ್ಮೆ ಸಂಘಗಳ ಚುನಾವಣೆ ನಡೆಸಬೇಕಾಗಿರುತ್ತದೆ. ಕೈಗಾರಿಕಾ ವಿವಾದ ಕಾಯ್ದೆಯಡಿ ಕಾರ್ಮಿಕ ಮತ್ತು ಮಾಲೀಕರ ವಿವಾದವನ್ನು ಪರಿಹರಿಸಿಕೊಳ್ಳಲು ಅವಕಾಶವಿದೆ. ಸಮಾನ ವೇತನ ಕಾಯ್ದೆಯಡಿ ಸಹ ಪ್ರತಿಯೊಬ್ಬ ದುಡಿಮೆಗೆ ಸಮಾನವಾದ ವೇತನ ನೀಡಲು ಹಾಗೂ ಪುರುಷ ಮತ್ತು ಮಹಿಳೆಯರಿಗೆ ಸಮಾನ ವೇತನ ನೀಡಲು ಅವಕಾಶವಿದೆ. ಕಾರ್ಮಿಕ ಪರಿಹಾರ ಕಾಯ್ದೆ ಅಡಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಪಘಾತವಾಗಿ ಮರಣ ಹೊಂದಿದ್ದಲ್ಲಿ ಅಥವಾ ಗಾಯಗೊಂಡಲ್ಲಿ ಅಥವಾ ಶಾಶ್ವತವಾಗಿ ಅಂಗವಿಕಲರಾದಾಗ ಪರಿಹಾರ ಪಡೆಯಲು ಅವಕಾಶ ಇರುತ್ತದೆ ಎಂದು ತಿಳಿಸಿದರು. 
ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ರಮೇಶ ರಾಠೋಡ ಜನನ-ಮರಣ ನೋಂದಣಿ ಕಾಯ್ದೆ ಕುರಿತು ಮಾತನಾಡಿದರು. ಶಹಾಬಾದ್ ಸಿವಿಲ್ ನ್ಯಾಯಾಧೀಶ (ಕೀ.ಶ್ರೇ) ಮುತಾಲಿಕ ರಮೇಶ ದೇಸಾಯಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಶಹಾಬಾದ್  ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅತುಲ್ ಎಲ್. ಶೆಟ್ಟಿ, ಶಹಾಬಾದ ಜಿ.ಇ. ಪವರ ಲಿಮಿಟೆಡ್ ನಿರ್ದೇಶಕ ಅಶೋಕ ಕುಮಾರ ಕೆ. ಅಧ್ಯಕ್ಷತೆ ವಹಿಸಿದ್ದರು. ಕಲಬುರಗಿ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಸ್ವಾಗತಿಸಿದರು. ಚಿತ್ತಾಪುರ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ ವಂದಿಸಿದರು. ಹಿರಿಯ ಕಾರ್ಮಿಕ ನಿರೀಕ್ಷಕ ರವಿಕುಮಾರ ಕಾರ್ಯಕ್ರಮ ನಿರೂಪಿಸಿದರು. 



ಹೀಗಾಗಿ ಲೇಖನಗಳು news and photo date: 06-05-2017

ಎಲ್ಲಾ ಲೇಖನಗಳು ಆಗಿದೆ news and photo date: 06-05-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo date: 06-05-2017 ಲಿಂಕ್ ವಿಳಾಸ https://dekalungi.blogspot.com/2017/05/news-and-photo-date-06-05-2017.html

Subscribe to receive free email updates:

0 Response to "news and photo date: 06-05-2017"

ಕಾಮೆಂಟ್‌‌ ಪೋಸ್ಟ್‌ ಮಾಡಿ