NEWS AND PHOTO DATE; 09--05--2017

NEWS AND PHOTO DATE; 09--05--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE; 09--05--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE; 09--05--2017
ಲಿಂಕ್ : NEWS AND PHOTO DATE; 09--05--2017

ಓದಿ


NEWS AND PHOTO DATE; 09--05--2017

ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
ಕಲಬುರಗಿ,ಮೇ.09.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ಅವರು ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಮೇ 10ರಂದು ಬೆಳಿಗ್ಗೆ 5.39 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಅಂದು ಸಚಿವರು ಬೆಳಗಿನ 11 ಗಂಟೆಗೆ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯೋತ್ಸವ ಸಮಿತಿ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮಹಾಸಾಧ್ವಿ ಶಿರಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯೋತ್ಸವÀನ್ನು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಮೇ 11 ಹಾಗೂ 12ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಮೇ 13ರಂದು ಬೆಳಗಿನ 10.30 ಗಂಟೆಗೆ ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಏರ್ಪಡಿಸಿರುವ “ಜನಮನ” ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಮೇ 14ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಮೇ 15ರಂದು ಕಲಬುರಗಿ ಹಾಗೂ ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಅಂದು ರಾತ್ರಿ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ಮೇ 15ರಂದು ಯುವ ಜನತೆಗೆ ತರಬೇತಿ ಮತ್ತು 
ಉದ್ಯೋಗ ನೀಡಲು ವೆಬ್‍ಸೈಟ್ ಪ್ರಾರಂಭ
ಕಲಬುರಗಿ,ಮೇ.09.(ಕ.ವಾ.)-ನಿರುದ್ಯೋಗಿ ಯುವಕ-ಯುವತಿಯರಿಗೆ ಬೇಡಿಕೆ ಆಧಾರಿತ ತರಬೇತಿಗಳನ್ನು ನೀಡಿ ಉದ್ಯೋಗ ಒದಗಿಸಲು ಕೌಶಲ್ಯ ಅಭಿವೃದ್ಧಿ ಇಲಾಖೆ ರೂಪಿಸಿರುವ ತಿತಿತಿ.ಞಚಿushಚಿಟಞಚಿಡಿ.ಛಿom ವೆಬ್‍ಸೈಟ್‍ನ್ನು ಕಲಬುರಗಿ ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಮೇ 15ರಂದು ಬೆಳಿಗ್ಗೆ 11 ಗಂಟೆಗೆ ವೈದ್ಯಕೀಯ ಶಿಕ್ಷಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಡಾ|| ಶರಣಪ್ರಕಾಶ ಪಾಟೀಲ ಅವರು ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಉಜ್ವಲ್ ಕುಮಾರ ಘೋಷ್ ತಿಳಿಸಿದ್ದಾರೆ.
ಈ ಪೋರ್ಟಲ್ ಮತ್ತು ಮೊಬೈಲ್ ಆಪ್‍ನ್ನು ಮೇ 15ರÀಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರು ಉದ್ಘಾಟಿಸುವರು. ತಾಲೂಕುಗಳಲ್ಲಿ ಈ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರು ಉದ್ಘಾಟಿಸಲಿದ್ದಾರೆ. ರಾಜ್ಯದಲ್ಲಿ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಮುಖ್ಯಮಂತ್ರಿಗಳ ಕೌಶಲ್ಯ ಅಭಿವೃದ್ಧಿ ಇಲಾಖೆ ಸ್ಥಾಪಿಸಲಾಗಿದೆ. ಇದರ ಮೂಲಕ ವಿವಿಧ ಯೋಜನೆಗಳಲ್ಲಿ ನಿರುದ್ಯೋಗಿಗಳಿಗೆ ತರಬೇತಿ ಮತ್ತು ಉದ್ಯೋಗವನ್ನು ದೊರಕಿಸಿಕೊಡಲಾಗುತ್ತದೆ. ಈ ರೀತಿ 2017-18ನೇ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 5 ಲಕ್ಷ ಜನರಿಗೆ ಅವಕಾಶ ಸಿಗುವಂತೆ ಮಾಡಲಾಗುತ್ತದೆ. ನಿರುದ್ಯೋಗಿ ಯುವಕ, ಯುವತಿಯರು ತಮ್ಮ ಹೆಸರು ನೋಂದಾಯಿಸಿಕೊಂಡು ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು.
ಈ ಪೋರ್ಟಲ್ ಮುಖಾಂತರ ನಿರುದ್ಯೋಗಿಗಳ ಹೆಸರು ನೋಂದಣಿ ಅಭಿಯಾನ ಮೇ 15 ರಂದು ಆರಂಭಿಸಲಾಗುವುದು. 18 ರಿಂದ 35 ವಯಸ್ಸಿನ ನಿರುದ್ಯೋಗಿ ಯುವಕ, ಯುವತಿಯರಿಗೆ ಕೌಶಲ್ಯಾಧಾರಿತ ತರಬೇತಿ ನೀಡಿ ಉದ್ಯೋಗ ನೀಡಲಾಗುವುದು. ಶೇ.70 ರಷ್ಟು ತರಬೇತಿ ಹೊಂದಿದವರಿಗೆ ಕಡ್ಡಾಯವಾಗಿ ಉದ್ಯೋಗ ಒದಗಿಸುವ ಕಾರ್ಯಕ್ರಮ ಇದಾಗಿದೆ. ಉದ್ಘಾಟನಾ ದಿನದಂದು ಸ್ಥಳದಲ್ಲಿಯೇ ನೋಂದಣೆ ಮಾಡಿಕೊಳ್ಳಲಾಗುತ್ತಿದ್ದು,  ಅಭ್ಯರ್ಥಿಗಳು ತಮ್ಮ ಹೆಸರು ನೋಂದಣಿಗಾಗಿ ಆಧಾರ ಕಾರ್ಡ್‍ದೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಬೇಕು.
ಕಲಬುರಗಿ ಜಿಲ್ಲೆಯಲ್ಲಿರುವ ನಿರುದ್ಯೋಗಿ ಯುವಕ, ಯುವತಿಯವರು ಮೇ 15ರಂದು ಆಯಾ ತಾಲೂಕು ಮಟ್ಟದಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಹೆಚ್ಚಿನ ಸಂಖೆಯಲ್ಲಿ ಭಾಗವಹಿಸಿ ವೆಬ್‍ಸೈಟ್‍ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡು ಈ ಯೋಜನೆಯ ಸುದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಉದ್ಯೋಗ ಸೃಜನಾ ಯೋಜನೆಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಮೇ.09.(ಕ.ವಾ.)-ಮುಖ್ಯಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯಡಿ 2017-18ನೇ ಸಾಲಿನಲ್ಲಿ ಜಿಲ್ಲೆಯ ವಿವಿಧ ಬ್ಯಾಂಕುಗಳಿಂದ ಸಾಲ ಸೌಲಭ್ಯ ಪಡೆದು ಗ್ರಾಮೀಣ ಪ್ರದೇಶದಲ್ಲಿ ಅತೀ ಸಣ್ಣ ಕೈಗಾರಿಕೆ ಸ್ಥಾಪಿಸಿ ಸ್ವಯಂ ಉದ್ಯೋಗ ಕೈಗೊಳ್ಳಲು ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ ತಿಳಿಸಿದ್ದಾರೆ.
  ಗ್ರಾಮೀಣ ಪ್ರದೇಶಗಳಲ್ಲಿ ಯುವಕ/ಯುವತಿಯರು ಸ್ವಯಂ ಉದ್ಯೋಗ ಕೈಗೊಳ್ಳಲು ವಿವಿಧ ಬ್ಯಾಂಕುಗಳಿಂದ ಗರಿಷ್ಠ 10 ಲಕ್ಷ ರೂ. ಮೊತ್ತದವರೆಗೆ ಸಾಲ ಪಡೆದು ಅತಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಬಹುದಾಗಿದೆ. ಇದಕ್ಕಾಗಿ ಕÀನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಸಾಮಾನ್ಯ ವರ್ಗದವರಿಗೆ ಕನಿಷ್ಟ 21 ವರ್ಷ ಮತ್ತು ಗರಿಷ್ಠ 35 ವರ್ಷ ಮತ್ತು ವಿಶೇಷ ವರ್ಗದವರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಮಾಜಿಸೈನಿಕರು ಮತ್ತು ಅಂಗವಿಕಲರು ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು. ಈ ಯೋಜನೆಯಡಿ ಸಣ್ಣ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯಾವುದೇ ಆದಾಯ ಮಿತಿ ಇರುವುದಿಲ್ಲ.
ಸಾಲ ಪಡೆಯಲಿಚ್ಛಿಸುವ ಗ್ರಾಮೀಣ ಅಭ್ಯರ್ಥಿಗಳು ಛಿmegಠಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ದಲ್ಲಿ ಮೇ 10 ರಿಂದ ಜೂನ್ 12ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ, ಆನ್‍ಲೈನ್ ಮೂಲಕ ಪಡೆದ ಮುದ್ರಿತ ಅರ್ಜಿಯ ಜೊತೆಗೆ ಪಾಸ್‍ಪೋರ್ಟ್ ಸೈಜ್ ಭಾವಚಿತ್ರ, ಯೋಜನಾ ವರದಿ, ಜನ್ಮ ದಿನಾಂಕ ದಾಖಲಾತಿ, ವಿದ್ಯಾರ್ಹತೆ ಪ್ರಮಾಣಪತ್ರ, ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ತರಬೇತಿ ಪಡೆದ ಪ್ರಮಾಣಪತ್ರ, ಚುನಾವಣಾ ಗುರುತಿನ ಚೀಟಿ/ಪಡಿತರ ಚೀಟಿ, ಆಧಾರ್ ಕಾರ್ಡ್, ಖರೀದಿಸುವ ಯಂತ್ರೋಪಕರಣಗಳ ಪಟ್ಟಿ, ಜಾತಿ, ಪ.ಜಾ./ಪ.ಪಂ./ಓ.ಬಿ.ಸಿ./ಅ.ಸಂ., ಅಂಗವಿಕಲರ ಮತ್ತು ಮಾಜಿ ಸೈನಿಕರ ಪ್ರಮಾಣಪತ್ರಗಳ ದ್ವಿಪ್ರತಿಯನ್ನು ಲಗತ್ತಿಸಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಜೇವರ್ಗಿ ಕ್ರಾಸ್, ಕಲಬುರಗಿ ಕಚೇರಿಗೆ ಸಲ್ಲಿಸಬೇಕು.

ಈ ಯೋಜನೆಯಲ್ಲಿ ಹೊಸದಾಗಿ ಸಾಲ ಮಂಜೂರಾತಿ ಪಡೆದು ಪ್ರಾರಂಭಿಸುವ ಹೊಸ ಘಟಕಗಳಿಗೆ ಮಾತ್ರ ಸಹಾಯಧನ ಲಭ್ಯವಿರುತ್ತದೆ. ವಿಸ್ತರಣೆ, ಆಧುನೀಕರಣ, ವೈವಿದ್ಧೀಕರಣ ಘಟಕಗಳಿಗೆ ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹತೆ ಇರುವುದಿಲ್ಲ.  ಇತರೆ ಯೋಜನೆಗಳಲ್ಲಿ ಅಥವಾ ಪಿ.ಎಂ.ಇ.ಜಿ.ಪಿ., ಕೆ.ಎಸ್.ಇ.ಎಸ್. ಯೋಜನೆಯಲ್ಲಿ ಸಾಲ ಸೌಲಭ್ಯಗಳನ್ನು ಪಡೆದಿದ್ದಲ್ಲಿ ಅರ್ಹತೆ ಇರುವುದಿಲ.್ಲ ಷರತ್ತು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯನ್ನು ಹಾಗೂ ದೂರವಾಣಿ ಸಂ. 08472-223988, 221637ಗಳನ್ನು ಸಂಪರ್ಕಿಸಲು ಕೋರಿದೆ.
ವಿಶ್ವಕರ್ಮ ಸಮುದಾಯದವರಿಂದ ವಿವಿಧ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕಲಬುರಗಿ,ಮೇ.09.(ಕ.ವಾ.)-ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ರಾಜ್ಯ ಸರ್ಕಾರದ ಹಾಗೂ ಎನ್.ಬಿ.ಸಿ.ಎಫ್.ಡಿ.ಸಿ. ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಕಲಬುರಗಿ ಜಿಲ್ಲೆಯ ವಿಶ್ವಕರ್ಮ ಸಮುದಾಯದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ಯೋಜನೆಗಳ ವಿವರ: ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರ ಕಿರುಸಾಲ ಯೋಜನೆ, ಕಮ್ಮಾರಿಕೆ, ಅಕ್ಕಸಾಲಿ ಮತ್ತು ಬಡಗಿ ಉದ್ಯಮಿಗಳಿಗೆ ವಿಶೇಷ ಪ್ಯಾಕೇಜ್‍ಗಳಡಿ  ಸಾಲ ಪಡೆಯುವರ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ 40,000 ರೂ.ಗಳ ಹಾಗೂ ಪಟ್ಟಣ ಪ್ರದೇಶದವರಿಗೆ 55,000 ರೂ. ಗಳಿಗಿಂತ ಕಡಿಮೆ ಇರಬೇಕು.  ಅದರಂತೆ ಅರಿವು ಯೋಜನೆಗೆ ವಾರ್ಷಿಕ ವರಮಾನವು ರೂ.3.50ಲಕ್ಷ ರೂ. ಗಳ ಮಿತಿ ಇರಬೇಕು.
ಎನ್.ಬಿ.ಸಿ.ಎಫ್.ಡಿ.ಸಿ.ಯೋಜನೆಗಳ ವಿವರ: ಅವಧಿ ಸಾಲ ಯೋಜನೆಗಳಡಿ ಕೃಷಿ ವಲಯ, ಸಣ್ಣ ವ್ಯಾಪಾರ, ಸೇವಾ ವಲಯ, ಸಾರಿಗೆ ವಲಯ, ಶೈಕ್ಷಣಿಕ ಸಾಲ ಯೋಜನೆಗಳಡಿ ಭಾರತದಲ್ಲಿ ಮತ್ತು ವಿದೇಶದಲ್ಲಿ ವ್ಯಾಸಂಗಕ್ಕಾಗಿ,  ನ್ಯೂ ಸ್ವರ್ಣಿಮಾ ಸಾಲ (ಮಹಿಳಾ ಯೋಜನೆ), ಶಿಲ್ಪಸಂಪದ, ಸ್ವಯಂ ಸಕ್ಷಮ ಸಾಲ, ಮೈಕ್ರೋ ಫೈನಾನ್ಸ್, ಕೃಷಿ ಸಂಪದ, ಮಹಿಳಾ ಸಮೃದ್ಧಿ ಯೋಜನೆ (ಮಹಿಳಾ ಸ್ವಸಹಾಯ ಗುಂಪುಗಳಿಗೆ ಮತ್ತು ವೈಯಕ್ತಿಕ ಸಾಲ ಯೋಜನೆಗಳಡಿ ಸಾಲ) ಪಡೆಯುವ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ 98,000 ರೂ.ಗಳ ಹಾಗೂ ಪಟ್ಟಣ ಪ್ರದೇಶದವರಿಗೆ 1,20,000 ರೂ.ಗಳಿಗಿಂತ ಕಡಿಮೆ ಇರಬೇಕು.
ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ದಿ: 30-03-2002ರನ್ವಯ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿದಾರರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು ಹಾಗೂ ಒಂದೇ ಕಡೆ ಹೊಂದಿಕೊಂಡಿರುವಂತೆ 2 ಎಕರೆ ಜಮೀನು ಹೊಂದಿರಬೇಕು. ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು. ಶೈಕ್ಷಣಿಕ ಸಾಲಕ್ಕೆ 18ರಿಂದ 30ವರ್ಷದೊಳಗಿರÀಬೇಕು.
ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ವಿಶ್ವಕರ್ಮ ಸಮುದಾಯಗಳ  ಅಭಿವೃದ್ಧಿ ನಿಗಮ, 3ನೇ ಮಹಡಿ, ಕೋಣೆ ಸಂಖ್ಯೆ-22 ವಿಕಾಸ ಭವನ ಕಲಬುರಗಿ ಅಥವಾ ಸಂಬಂಧಪಟ್ಟ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಿಂದ ಜೂನ್ 2ರೊಳಗೆ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ ಜೂನ್ 17ರೊಳಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಸದರಿ ಕಚೇರಿಯನ್ನು ಅಥವಾ ನಿಗಮದ ತಿತಿತಿ.ಞvಛಿಜಛಿಟ.ಛಿomವೆಬ್‍ಸೈಟ್‍ನ್ನು ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ದೂರವಾಣಿ ಸಂಖ್ಯೆ 08472-278635ನ್ನು ಸಂಪರ್ಕಿಸಲು ಕೋರಿದೆ.
ಮೇ 10ರಂದು ಅಫಜಲಪುರದಲ್ಲಿ ಎ.ಸಿ.ಬಿ.ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಕಲಬುರಗಿ,ಮೇ.09.(ಕ.ವಾ.)-ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಮಲ್ಲಿಕಾರ್ಜುನ ಡಪ್ಪಿನ್ ಅವರು ಮೇ 10ರಂದು ಅಫಜಲಪುರಕ್ಕೆ ಭೇಟಿ ನೀಡಿ, ಅಫಜಲಪುರ ಪ್ರವಾಸಿ ಮಂದಿರದಲ್ಲಿ ಅಂದು ಬೆಳಗಿನ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಲಿದ್ದಾರೆ. ಅವರ ಮೊಬೈಲ್ ಸಂಖ್ಯೆ  9480803609, 9663548820 ಇರುತ್ತದೆ ಎಂದು ಕಲಬುರಗಿ ಭ್ರಷ್ಟಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಪೊಲೀಸ್ ಉಪ ಅಧೀಕ್ಷಕರು ತಿಳಿಸಿದ್ದಾರೆ.
ಕೃಷಿ ಸಾಲದ ಅಸಲು ಮರುಪಾವತಿಸಿದರೆ ಬಡ್ಡಿ ಮನ್ನಾ
ಕಲಬುರಗಿ,ಮೇ.09.(ಕ.ವಾ.)- ರಾಜ್ಯದಲ್ಲಿ ಉದ್ಭವಿಸಿರುವ ತೀವ್ರ ಬರ ಪರಸ್ಥಿತಿ ಹಿನ್ನಲ್ಲೆಯಲ್ಲಿ ರಾಜ್ಯ ಸರ್ಕಾರವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಖಾಂತರ ಅಲ್ಪಾವಧಿ ಮತ್ತು ಮಧ್ಯಮಾವಧಿ ಕೃಷಿ ಸಾಲ ಪಡೆದ ರೈತರು ದಿನಾಂಕ 30-09-2015 ರ ಮೇಲೆ ಸುಸ್ತಿ ಬಾಕಿಯಾಗಿರುವ ಮತ್ತು ದಿನಾಂಕ 01-10-2015 ರಿಂದ ದಿನಾಂಕ 15-04-2017 ರ ಅವಧಿಯಲ್ಲಿ ಸುಸ್ತಿಯಾಗಿರುವ ಸದಸ್ಯರಿಗೆ ಬಡ್ಡಿ ಮನ್ನಾ ಮಾಡಿರುತ್ತದೆ. ದಿನಾಂಕ 30-06-2017 ರ ವರೆಗೆ ಅಸಲು ಮರುಪಾವತಿಸಿದ ಸದಸ್ಯರಿಗೆ ಬಡ್ಡಿ ಮನ್ನಾ ಯೋಜನೆಯ ಅವಕಾಶ ದೊರೆಯುತ್ತಿದ್ದು, ಕೂಡಲೇ ಸಂಬಂಧಪಟ್ಟ ಸಹಕಾರ ಸಂಘಗಳಲ್ಲಿ ತಮ್ಮ ಬಾಕಿ ಕಂತುಗಳು ದಿನಾಂಕ 30-06-2017 ರ ವರೆಗೆ ಮರುಪಾವತಿಸಿ ರಾಜ್ಯ ಸರ್ಕಾರದ ಬಡ್ಡಿ ಮನ್ನಾ ಯೋಜನೆಯ ಲಾಭ ಪಡೆಯುವಂತೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.



ಹೀಗಾಗಿ ಲೇಖನಗಳು NEWS AND PHOTO DATE; 09--05--2017

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE; 09--05--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE; 09--05--2017 ಲಿಂಕ್ ವಿಳಾಸ https://dekalungi.blogspot.com/2017/05/news-and-photo-date-09-05-2017.html

Subscribe to receive free email updates:

0 Response to "NEWS AND PHOTO DATE; 09--05--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ