ಶೀರ್ಷಿಕೆ : news and photo Date: 20-05-2017
ಲಿಂಕ್ : news and photo Date: 20-05-2017
news and photo Date: 20-05-2017
ಉನ್ನತ ಶಿಕ್ಷಣ ಸಚಿವರ ಪ್ರವಾಸ
********************************
ಕಲಬುರಗಿ,ಮೇ.20.(ಕ.ವಾ.)-ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಕರ್ನಾಟಕ ಎಕ್ಸ್‍ಪ್ರೆಸ್ ರೈಲು ಮೂಲಕ ಮೇ 23ರಂದು ಬೆಳಗಿನ 5.40 ಗಂಟೆಗೆ ಕಲಬುರಗಿಗೆ ಆಗಮಿಸುವರು. ಸಚಿವರು ಅಂದು ಬೆಳಗಿನ 11 ಗಂಟೆಗೆ ಹೆಚ್‍ಕೆಆರ್‍ಡಿಬಿ ಸಭೆಯಲ್ಲಿ ಪಾಲ್ಗೊಳ್ಳುವರು. ನಂತರ ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣ ಮಾಡುವರು.
ಮೇ 22ರಂದು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಜಾಥಾ
ಕಲಬುರಗಿ,ಮೇ.20.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕಮ್ಮ ಚನ್ನಮಲ್ಲಯ್ಯ ಹಿರೇಮಠ ಅವರು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ-2017 ಅಂಗವಾಗಿ ಆಯೋಜಿಸಿದ ಜಾಥಾಕ್ಕೆ ಮೇ 22ರಂದು ಬೆಳಗಿನ 8.30 ಗಂಟೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಾಲನೆ ನೀಡುವರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಶಿವರಾಜ ಸಜ್ಜನಶೆಟ್ಟಿ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಬಾಲಚಂದ್ರ ಜೋಶಿ ಮುಖ್ಯ ಅತಿಥಿಗಳಾಗಿ ಹಾಗೂ ಜಿಲ್ಲಾ ವಿ.ಬಿ.ಡಿ. ನಿಯಂತ್ರಣಾಧಿಕಾರಿ ಡಾ|| ಬಸವರಾಜ ಗುಳಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಜಾಥಾವು ಜಿಲ್ಲಾ ಆಸ್ಪತ್ರೆಯಿಂದ ಪ್ರಾರಂಭವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಕೊನೆಗೊಳ್ಳಲಿದೆ.
ವಸತಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
**********************************************
ಕಲಬುರಗಿ,ಮೇ.20.(ಕ.ವಾ.)-ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಕೆಳಕಂಡ ಬಾಲಕ/ಬಾಲಕಿಯರ ಸರ್ಕಾರಿ ಮತ್ತು ಅನುದಾನಿತ ಮೆಟ್ರಿಕ್ ಪೂರ್ವ ವಸತಿ ನಿಲಯಗಳಲ್ಲಿ ಹಾಗೂ ಆಶ್ರಮ ಶಾಲೆಗಳಲ್ಲಿ ಖಾಲಿಯಿರುವ ಸ್ಥಾನಗಳ 2017-18ನೇ ಸಾಲಿನ ಪ್ರವೇಶಕ್ಕೆ ಅರ್ಹ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗಕ್ಕೆ ಸೇರಿದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿ ಐದÀನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಮತ್ತು ಆಶ್ರಮ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿವರೆಗೆ ಪ್ರವೇಶಾವಕಾಶವಿರುತ್ತದೆ. ಈ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಂಬಂಧಪಟ್ಟ ವಸತಿ ಶಾಲೆಗಳ ಹಾಗೂ ಆಶ್ರಮ ಶಾಲೆಗಳ ಮೇಲ್ವಿಚಾರಕರಿಂದ ಉಚಿತವಾಗಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ 2017ರ ಜೂನ್ 10ರೊಳಗಾಗಿ ಸಂಬಂಧಿಸಿದ ವಸತಿ ನಿಲಯದ ಮೇಲ್ವಿಚಾರಕರಿಗೆ ಸಲ್ಲಿಸಬೇಕು.
ಸರ್ಕಾರಿ ಮೆಟ್ರಿಕ್ ಪೂರ್ವ ವಸತಿ ನಿಲಯಗಳು ಇಂತಿವೆ: ಬಾಲಕರ ಮೆಟ್ರಿಕ್ ಪೂರ್ವ ಸರ್ಕಾರಿ ವಸತಿ ನಿಲಯ ಅಫಜಲಪುರ ಟೌನ್, ಸಾಗನೂರ, ಬಂದರವಾಡÀ, ಚೌಡಾಪುರ, ಭೈರಾಮಡಗಿ, ದೇಸಾಯಿ ಕಲ್ಲೂರ, ಘತ್ತರಗಾ, ಮಾಶ್ಯಾಳ, ಕರಜಗಿ, ಮಣ್ಣೂರ, ಬಾಲಕಿಯರ ಸರ್ಕಾರಿ ವಸತಿ ನಿಲಯ ಅಫಜಲಪುರ ಟೌನ್ ಮತ್ತು ಸರ್ಕಾರಿ ಆಶ್ರಮ ಶಾಲೆ ಅರ್ಜುಣಗಿ ತಾಂಡಾ. ಅನುದಾನಿತ ವಸತಿ ನಿಲಯಗಳು: ಲಂಬಾಣಿ ವಸತಿ ನಿಲಯ ಅಫಜಲಪುರ. ಶ್ರೀ ಢಾಕುಸಿಂಗ್ ಮಹಾರಾಜ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಗೊಬ್ಬೂರ(ಬಿ), ಡಾ.ಬಾಬು ರಾಜೇಂದ್ರಪ್ರಸಾದ ಮೆಟ್ರಿಕ್ ಪೂರ್ವ ವಸತಿ ನಿಲಯ ಹಿರೇ ಜೇವರ್ಗಿ. ಹೆಚ್ಚಿನ ಮಾಹಿತಿಗಾಗಿ ಅಫಜಲಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08470-282098ನ್ನು ಸಂಪರ್ಕಿಸಲು ಕೋರಿದೆ.
ಕಲಬುರಗಿ ಜಿಲ್ಲೆಯ 16.02 ಲಕ್ಷ ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ಸೌಲಭ್ಯ
**************************************************************************
ಕಲಬುರಗಿ,ಮೇ.20.(ಕ.ವಾ.)-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಂದ ಕಲಬುರಗಿ ಜಿಲ್ಲೆಯ 3034 ಅಂಗನವಾಡಿ ಕೇಂದ್ರಗಳ ಮೂಲಕ ಕಳೆದ ನಾಲ್ಕು ವರ್ಷಗಳಲ್ಲಿ ಆರು ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರು ಮತ್ತು ಬಾಣಂತಿಯರು, ಕಿಶೋರಿಯರು ಸೇರಿದಂತೆ ಒಟ್ಟು 16.02 ಲಕ್ಷ ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ಸೌಲಭ್ಯ ಒದಗಿಸಲಾಗಿದೆ. ಇದಕ್ಕಾಗಿ 307.77 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ ತಿಳಿಸಿದ್ದಾರೆ.
ಉದ್ಯೋಗಿನಿ ಯೋಜನೆಯಡಿ 1518 ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು 1.31 ಕೋಟಿ ರೂ. ಆರ್ಥಿಕ ನೆರವು ಒದಗಿಸಲಾಗಿದೆ. ನಿರ್ಗತಿಕ ಮಕ್ಕಳ ಪಾಲನೆಯಲ್ಲಿ ತೊಡಗಿಸಿಕೊಂಡ 10 ಸ್ವಯಂ ಸೇವಾ ಸಂಸ್ಥೆಗಳ 21 ನಿರ್ಗತಿಕ ಕುಟೀರಗಳ ನಿರ್ವಹಣೆಗಾಗಿ ಒಟ್ಟು 85.90 ಲಕ್ಷ ರೂ. ನೆರವು ನೀಡಿದ್ದು, ಒಟ್ಟು 2100 ಮಕ್ಕಳು ಪ್ರಯೋಜನ ಪಡೆದಿದ್ದಾರೆ. ನಬಾರ್ಡ್ ವಿಶೇಷ ಅಭಿವೃದ್ಧಿ ಯೋಜನೆ ಮತ್ತು ನರೇಗಾ ಯೋಜನೆಗಳ ಅಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 171 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ 16.40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
ಚೇತನಾ ಯೋಜನೆಯಡಿ 68 ಲೈಂಗಿಕ ಕಾರ್ಯಕರ್ತೆಯರ ಪುನರ್ವಸತಿಗಾಗಿ 13.30 ಲಕ್ಷ ರೂ. ಮತ್ತು 104 ಲೈಂಗಿಕ ಅಲ್ಪಸಂಖ್ಯಾತರ ಪುನರ್ವಸತಿಗಾಗಿ 15.80 ಲಕ್ಷ ರೂ. ಆರ್ಥಿಕ ಸಹಾಯಧನ ನೀಡಲಾಗಿದೆ. ಕಿರು ಸಾಲ ಯೋಜನೆಯಡಿ 63 ಸ್ವಸಹಾಯ ಗುಂಪುಗಳಿಗೆ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು 1.04 ಕೋಟಿ ರೂ. ಸಾಲ ಸೌಲಭ್ಯ ನೀಡಲಾಗಿದೆ. ಭಾಗ್ಯಲಕ್ಷ್ಮೀ ಯೋಜನೆಯಡಿ ಜಿಲ್ಲೆಯ 23304 ಹೆಣ್ಣುಮಕ್ಕಳ ಹೆಸರಿನಲ್ಲಿ ಹಣ ಠೇವಣಿ ಮಾಡಿ ಬಾಂಡ್‍ಗಳನ್ನು ವಿತರಿಸಲಾಗಿದೆ.
ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಅನುವಾಗುವಂತೆ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ತುರ್ತು ವೈದ್ಯಕೀಯ ಚಿಕಿತ್ಸೆ, ಪೊಲೀಸ್ ಮತ್ತು ಕಾನೂನು ನೆರವು ಆಪ್ತ ಸಮಾಲೋಚನೆ ವ್ಯವಸ್ಥೆ ಕಲ್ಪಿಸಲು ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾರಂಭಿಸಲಾದ ಮಹಿಳಾ ವಿಶೇಷ ಚಿಕಿತ್ಸಾ ಘಟಕದಿಂದ ಈವರೆಗೆ ಒಟ್ಟು 163 ಮಹಿಳೆಯರಿಗೆ ಚಿಕಿತ್ಸೆ, ಕಾನೂನು ಮತ್ತು ಪೊಲೀಸ್ ನೆರವು ನೀಡಲಾಗಿದೆ. ಈ ಘಟಕದ ನಿರ್ವಹಣೆಗಾಗಿ 13.35 ಲಕ್ಷ ರೂ. ಖರ್ಚು ಮಾಡಲಾಗಿದೆ.
ಅತ್ಯಾಚಾರಕ್ಕೊಳಗಾದ ಮಹಿಳೆಯರಿಗೆ ತುರ್ತು ಚಿಕಿತ್ಸೆ ಹಾಗೂ ಪರಿಹಾರ ನೀಡುವ “ಸ್ಥೈರ್ಯ ನಿಧಿ” ಯೋಜನೆಯನ್ನು 2015-16ರಲ್ಲಿ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಜಿಲ್ಲೆಗೆ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಆ್ಯಸಿಡ್ ದಾಳಿ/ದೌರ್ಜನ್ಯ/ಅತ್ಯಾಚಾರ ಮುಂತಾದ ತೀವ್ರ ದೌರ್ಜನ್ಯಕೊಳ್ಳಪಟ್ಟ ಮಹಿಳೆಯರು ಮರಣ ಹೊಂದಿದಲ್ಲಿ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ದೌರ್ಜನ್ಯಕ್ಕೊಳಗಾದ ಓರ್ವ ಮಹಿಳೆಗೆ 25000 ರೂ. ಪರಿಹಾರ ಮಂಜೂರು ಮಾಡಲಾಗಿದೆ. ಬಾಲ ಸಂಜೀವಿನಿ ಯೋಜನೆಯಡಿ 18 ತೀವ್ರತರ ಕಾಯಿಲೆಗಳಿಂದ ಬಳಲುತ್ತಿರುವ ಜಿಲ್ಲೆಯ 1168 ಮಕ್ಕಳ ನಿಗದಿತ ವೈದ್ಯಕೀಯ ಚಿಕಿತ್ಸೆಗಾಗಿ 2.61 ಕೋಟಿ ರೂ. ಖರ್ಚು ಮಾಡಲಾಗಿದೆ.
ಜಿಲ್ಲೆಯ ಚಿಂಚೋಳಿ ತಾಲೂಕಿನ 10 ಗ್ರಾಮ ಪಂಚಾಯಿತಿಗಳಲ್ಲಿ “ಪೂರ್ಣ ಶಕ್ತಿ” ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಜಾಗೃತಿ, ಬಾಲ್ಯ ವಿವಾಹ ತಡೆ, ದೌರ್ಜನ್ಯಪೀಡಿತ ಮಹಿಳೆಯರಿಗೆ ರಕ್ಷಣೆ, ಮಹಿಳೆಯರಿಗೆ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನ, ಕೌಶಲ್ಯ ತರಬೇತಿಯ ಸಹಾಯ ಕೋರಿದ 1339 ಮಹಿಳೆಯರಿಗೆ ಪ್ರಯೋಜನ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 1445 ದೇವದಾಸಿಯರಿದ್ದು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ದೇವದಾಸಿ ಪುನರ್ವಸತಿ ಯೋಜನೆಯಡಿ ಜಿಲ್ಲೆಯ 554 ದೇವದಾಸಿಯರು ಹೈನುಗಾರಿಕೆ, ಪಾನ್ ಶಾಪ್, ಕುರಿ ಸಾಕಾಣಿಕೆ, ತರಕಾರಿ ವ್ಯಾಪಾರ, ಕಿರಾಣಿ ಅಂಗಡಿ ಮುಂತಾದ ವಿವಿಧ ಆದಾಯೋತ್ಪನ್ನ ಚಟುವಟಿಕೆಗಳ ಪ್ರಯೋಜನ ಪಡೆದಿದ್ದಾರೆ. ಈ ಮಹಿಳೆಯರಿಗೆ ತಲಾ 10000 ರೂ. ದಂತೆ ಒಟ್ಟು 90.65 ಲಕ್ಷ ರೂ. ಸಹಾಯಧನ ಮಂಜೂರು ಮಾಡಲಾಗಿದೆ. ಜಿಲ್ಲೆಯಲ್ಲಿನ ಜಿಲ್ಲೆಯಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ 1028 ಮಾಜಿ ದೇವದಾಸಿ ಮಹಿಳೆಯರಿಗೆ ತಲಾ 1000ರೂ.ದಂತೆ ಒಟ್ಟು 3.61 ಕೋಟಿ ರೂ. ಮಾಸಾಶನ ಸೌಲಭ್ಯ ಮಂಜೂರು ಮಾಡಲಾಗಿದೆ. ರಾಜೀವಗಾಂಧಿ ವಸತಿ ನಿಗಮದ ಮೂಲಕ 15ಘಿ20 ಅಡಿ ಸ್ವಂತ ನಿವೇಶನ ಹೊಂದಿದ ಜಿಲ್ಲೆಯ 162 ಮಾಜಿ ದೇವದಾಸಿಯರಿಗೆ ತಲಾ 1.20 ಲಕ್ಷ ರೂ. ವೆಚ್ಚದಿಂದ ಮನೆ ನಿರ್ಮಿಸಿಕೊಡುವ ಒಟ್ಟು 1.89 ಕೋಟಿ ರೂ. ಪ್ರಸ್ತಾವನೆಯನÀ್ನು ನಿಗಮಕ್ಕೆ ಕಳುಹಿಸಲಾಗಿದೆ.
ಮೆಟ್ರಿಕ್ ಪೂರ್ವ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*****************************************************
ಕಲಬುರಗಿ,ಮೇ.20.(ಕ.ವಾ.)-ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಕೆಳಕಂಡ ಬಾಲಕ/ಬಾಲಕಿಯರ ಸರ್ಕಾರಿ ಮತ್ತು ಅನುದಾನಿತ ಮೆಟ್ರಿಕ್ ಪೂರ್ವ ವಸತಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳ 2017-18ನೇ ಸಾಲಿನ ಪ್ರವೇಶಕ್ಕೆ ಅರ್ಹ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗಕ್ಕೆ ಸೇರಿದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿ ಐದÀನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಪ್ರವೇಶಾವಕಾಶವಿರುತ್ತದೆ. ಈ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಂಬಂಧಪಟ್ಟ ವಸತಿ ಶಾಲೆಗಳ ಮೇಲ್ವಿಚಾರಕರಿಂದ ಉಚಿತವಾಗಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ 2017ರ ಜೂನ್ 15ರೊಳಗಾಗಿ ಸಂಬಂಧಿಸಿದ ವಸತಿ ನಿಲಯದ ಮೇಲ್ವಿಚಾರಕರಿಗೆ ಸಲ್ಲಿಸಬೇಕು.
ಸರ್ಕಾರಿ ಮೆಟ್ರಿಕ್ ಪೂರ್ವ ವಸತಿ ನಿಲಯಗಳು ಇಂತಿವೆ: ಬಾಲಕರ ಮೆಟ್ರಿಕ್ ಪೂರ್ವ ಸರ್ಕಾರಿ ವಸತಿ ನಿಲಯ ಜೇವರ್ಗಿ, ನೆಲೋಗಿ, ಹಿಪ್ಪರಗಾ(ಎಸ್.ಎನ್.), ಬಿರಾಳ(ಬಿ), ಯಡ್ರಾಮಿ, ವಡಗೇರಾ, ಮಳ್ಳಿ, ಮಂದೇವಾಲ, ಸೊನ್ನ, ಅಂಕಲಗಾ, ಜೇರಟಗಿ, ಬಾಲಕಿಯರ ಸರ್ಕಾರಿ ವಸತಿ ನಿಲಯ ಜೇವರ್ಗಿ. ಅನುದಾನಿತ ವಸತಿ ನಿಲಯಗಳು: ಪ್ರಭುಲಿಂಗ ಶಿಕ್ಷಣ ಸಂಸ್ಥೆಯ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯ ಜೇವರ್ಗಿ. ಕಡಕೋಳ ಮಡಿವಾಳೇಶ್ವರ ಶಿಕ್ಷಣ ಸಂಸ್ಥೆಯ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯ ಯಡ್ರಾಮಿ. ಶ್ರೀ ಶಿವನಗುಂಡೇಶ್ವರ ವಿದ್ಯಾವರ್ಧಕ ಸಂಸ್ಥೆ ಜವಳಿ ರಾಜೀವಗಾಂಧಿ ವಸತಿ ನಿಲಯ ಜೇವರ್ಗಿ ಮತ್ತು ಚಿಗರಳ್ಳಿ. ಕಡಕೋಳ ಮಡಿವಾಳೇಶ್ವರ ಶಿಕ್ಷಣ ಸಂಸ್ಥೆಯ ಬಾಬು ಜಗಜೀವನರಾಂ ವಸತಿ ನಿಲಯ ಜೇವರ್ಗಿ. ಹೆಚ್ಚಿನ ಮಾಹಿತಿಗಾಗಿ ಜೇವರ್ಗಿ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08442-236661ನ್ನು ಸಂಪರ್ಕಿಸಲು ಕೋರಿದೆ.
ಮೆಟ್ರಿಕ್ ನಂತರ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
******************************************************
ಕಲಬುರಗಿ,ಮೇ.20.(ಕ.ವಾ.)-ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಬಾಲಕ ಮತ್ತು ಬಾಲಕಿಯರ ಸರ್ಕಾರಿ ಮೆಟ್ರಿಕ್ ನಂತರದ ಹಾಸ್ಟೆಲ್‍ಗಳಲ್ಲಿ 2017-18ನೇ ಸಾಲಿನ ಪ್ರವೇಶಕ್ಕೆ ಅರ್ಹ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಂಬಂಧಪಟ್ಟ ವಸತಿ ಶಾಲೆಗಳ ವಾರ್ಡನ್‍ಗಳಿಂದ ಉಚಿತವಾಗಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ 2017ರ ಜೂನ್ 30ರೊಳಗಾಗಿ ಸಂಬಂಧಿಸಿದ ವಸತಿ ನಿಲಯದ ಮೇಲ್ವಿಚಾರಕರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜೇವರ್ಗಿ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08442-236661ನ್ನು ಸಂಪರ್ಕಿಸಲು ಕೋರಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ
***********************************************
ಕಲಬುರಗಿ,ಮೇ.20.(ಕ.ವಾ.)-ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಮೇ 23ರಂದು ಮಧ್ಯಾಹ್ನ 3.30 ಗಂಟೆಗೆ ಬಾಗಲಕೋಟೆಗೆ ಆಗಮಿಸಿ, ಸಂಜೆ 5 ಗಂಟೆಗೆ ಬಾಗಲಕೋಟೆ ಜಿಲ್ಲೆಯಲ್ಲಿನ ವಿವಿಧ ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸಿ, ವಾಸ್ತವ್ಯ ಮಾಡುವರು. ಮೇ 24ರಂದು ಬೆಳಗಿನ 10 ಗಂಟೆಗೆ ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಹಾಗೂ ಬೆಳಗಿನ 11.30 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಬಾಗಲಕೋಟೆಯಿಂದ ರಸ್ತೆ ಮೂಲಕ ಕಲಬುರಗಿಗೆ ಸಂಜೆ 7.30 ಗಂಟೆಗೆ ಆಗಮಿಸಿ ವಾಸ್ತವ್ಯ ಮಾಡುವರು.
ಮೇ 25ರಂದು ಬೆಳಗಿನ 9.30 ಗಂಟೆಗೆ ಐವಾನ್-ಎ-ಶಾಹಿ ಅತಿಥಿ ಗೃಹದಲ್ಲಿ ಕಲಬುರಗಿ ಜಿಲ್ಲೆಯಲ್ಲಿನ ವಿವಿಧ ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸುವರು. ಬೆಳಗಿನ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಹಾಗೂ ಬೆಳಗಿನ 11.30 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು. ಮಧ್ಯಾಹ್ನ 12.30 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಕೈಗೊಳ್ಳುವರು. ಮಧ್ಯಾಹ್ನ 3.30 ಗಂಟೆಗೆ ಕಲಬುರಗಿಯಿಂದ ರಾಯಚೂರಿಗೆ ಸಂಜೆ 6.30 ಗಂಟೆಗೆ ಆಗಮಿಸಿ ವಾಸ್ತವ್ಯ ಮಾಡುವರು.
ಮೇ 26ರಂದು ಬೆಳಗಿನ 9.30 ಗಂಟೆಗೆ ಸರ್ಕಾರಿ ಅತಿಥಿ ಗೃಹದಲ್ಲಿ ರಾಯಚೂರು ಜಿಲ್ಲೆಯಲ್ಲಿನ ವಿವಿಧ ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸುವರು. ಬೆಳಗಿನ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಹಾಗೂ ಮಧ್ಯಾಹ್ನ 12.30 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು. ಮಧ್ಯಾಹ್ನ 2.30 ಗಂಟೆಗೆ ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡುವರು.
ವಿವಿಧ ದತ್ತಿ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
**************************************
ಕಲಬುರಗಿ,ಮೇ.20.(ಕ.ವಾ.)-ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ 48 ದತ್ತಿ ಪ್ರಶಸ್ತಿಗಳಿಗಾಗಿ 2016ನೇ ಸಾಲಿನಲ್ಲಿ ಪ್ರಕಟವಾದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ತಿಳಿಸಿದ್ದಾರೆ.
ಪ್ರತಿ ಪ್ರವೇಶಕ್ಕೆ ಮೂರು ಪುಸ್ತಕಗಳನ್ನು ಕಳುಹಿಸಬೇಕು. ಸ್ಪರ್ಧೆಗೆ ಬರುವ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಬಹುಮಾನದ ಬಗ್ಗೆ ಪರಿಷತ್ತು ನೇಮಿಸುವ ತೀರ್ಪುಗಾರರು ನೀಡುವ ಶಿಫಾರಸ್ಸು ಗಮನಿಸಿ ಪರಿಷತ್ತು ಅಂತಿಮ ನಿರ್ಧಾರ ಕೈಗೊಳ್ಳುತ್ತ್ತದೆ. ಒಂದಕ್ಕಿಂತ ಹೆಚ್ಚು ಪುಸ್ತಕಗಳು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗಿರುತ್ತದೆ. ಪಿ.ಹೆಚ್.ಡಿ. ಗ್ರಂಥಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು. ಹೆಚ್ಚಿನ ವಿವರಗಳಿಗೆ ಸ್ವ-ವಿಳಾಸದ ಸ್ಟ್ಯಾಂಪ್ ಹಚ್ಚಿದ ಲಕೋಟೆ ಇಟ್ಟು ಪತ್ರ ಬರೆಯಬೇಕು.
ಸ್ಪರ್ಧೆಗೆ ಪುಸ್ತಕಗಳನ್ನು ಕಳುಹಿಸಲು ಜೂನ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-18 ದೂರವಾಣಿ ಸಂಖ್ಯೆ: 080-26623584 ಗೆ ಸಂಪರ್ಕಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ
*********************************************
ಕಲಬುರಗಿ,ಮೇ.20.(ಕ.ವಾ.)-ಕರ್ನಾಟಕ ಮಾಧ್ಯಮ ಅಕಾಡೆಮಿಯು ಪ್ರಸಕ್ತ ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ಪತ್ರಿಕೋದ್ಯಮ ತರಬೇತಿಗಾಗಿ ಸ್ನಾತಕೋತ್ತರ ಪದವಿಧರರಿಂದ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಅಕಾಡೆಮಿಯ ಅಧ್ಯಕ್ಷ ಎಂ. ಸಿದ್ದರಾಜು ಅವರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 05 ಹಾಗೂ ಇತರೆ ವರ್ಗಗಳ 05 ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಧರರು ಸೇರಿದಂತೆ ಒಟ್ಟು 10 ಅಭ್ಯರ್ಥಿಗಳಿಗೆ ಪ್ರಮುಖ ದಿನಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಕಚೇರಿಗಳಲ್ಲಿ ತರಬೇತಿ ನೀಡಲಾಗುವುದು. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 10 ತಿಂಗಳ ಕಾಲ ಮಾಸಿಕ ತಲಾ 10000ರೂ. ಗೌರವಧನ ನೀಡಲಾಗುವುದು. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 ವರ್ಷದೊಳಗಿನ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಸ್ವವಿವರ, ವಿದ್ಯಾರ್ಹತೆ, ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಛಾಯಾಚಿತ್ರಗಳನ್ನು ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ ಣಡಿಚಿiಟಿeeಞmಚಿ@gmಚಿiಟ.ಛಿom ಮೂಲಕ ಅಥವಾ ಅಂಚೆ ಮೂಲಕ ಮೇ 30ರೊಳಗಾಗಿ ಅಧ್ಯಕ್ಷರು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-01 ಕಚೇರಿಗೆ ಕಳುಹಿಸಬೇಕೆಂದು ಕೋರಲಾಗಿದೆ.
ಪ್ರಥಮ ಪಿ.ಯು.ಸಿ. ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*******************************************************
ಕಲಬುರಗಿ,ಮೇ.20.(ಕ.ವಾ.)-ಸಮಾಜ ಕಲ್ಯಾಣ ಇಲಾಖೆಯಿಂದ ಕಲಬುರಗಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ 2017-18ನೇ ಸಾಲಿನ ಪ್ರಥಮ ಪಿ.ಯು.ಸಿ. ವಿಜ್ಞಾನ ಕೋರ್ಸಿನ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ. ಪಾಸಾದ ಮೇರಿಟ್ ಬಾಲಕ/ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
ಈ ವಸತಿ ಕಾಲೇಜಿನಲ್ಲಿ ಪಿ.ಸಿ.ಎಂ.ಬಿ.-40 ಹಾಗೂ ಪಿ.ಸಿ.ಎಂ.ಸಿಎಸ್.-40 ಸೀಟುಗಳು ಸೇರಿದಂತೆ ಒಟ್ಟು 80 ಸೀಟುಗಳ ಲಭ್ಯವಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದರಿಗೆ ಶೇ.75 ರಷ್ಟು ಹಾಗೂ ಇತರೆ ಪ್ರವರ್ಗದವರಿಗೆ ಶೇ.25ರಷ್ಟು ಸೀಟು ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ. ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರನ್ನು ಮತ್ತು ಮೊಬೈಲ್ ಸಂಖ್ಯೆ 9538988452 ಹಾಗೂ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಲಾಗಿದೆ.
ಹೀಗಾಗಿ ಲೇಖನಗಳು news and photo Date: 20-05-2017
ಎಲ್ಲಾ ಲೇಖನಗಳು ಆಗಿದೆ news and photo Date: 20-05-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ news and photo Date: 20-05-2017 ಲಿಂಕ್ ವಿಳಾಸ https://dekalungi.blogspot.com/2017/05/news-and-photo-date-20-05-2017.html
0 Response to "news and photo Date: 20-05-2017"
ಕಾಮೆಂಟ್ ಪೋಸ್ಟ್ ಮಾಡಿ