NEWS AND PHOTO DATE: 25--05--2017

NEWS AND PHOTO DATE: 25--05--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE: 25--05--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE: 25--05--2017
ಲಿಂಕ್ : NEWS AND PHOTO DATE: 25--05--2017

ಓದಿ


NEWS AND PHOTO DATE: 25--05--2017

ಹೆಚ್.ಕೆ.ಆರ್.ಡಿ.ಬಿ.ಗೆ 2080 ಕೋಟಿ ರೂ. ಬಿಡುಗಡೆ
**************************************************
ಕಲಬುರಗಿ,ಮೇ.25.(ಕ.ವಾ.)-ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಖರ್ಚು 1000 ಕೋಟಿ ರೂ. ದಾಟಿರುವ ಪ್ರಯುಕ್ತ ರಾಜ್ಯ ಸರ್ಕಾರ ಈಗ ಮಂಡಳಿಗೆ 2080 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ಹೇಳಿದರು.
ಅವರು ಗುರುವಾರ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬರುವ ಜೂನ್‍ವರೆಗೆ ಮಂಡಳಿಯ ಆರ್ಥಿಕ ಸಾಧನೆ 1800 ಕೋಟಿ ರೂ. ದಾಟುವ ಸಂಭವವಿದ್ದು, ಬರುವ ಮೇ 2018ರೊಳಗೆ ಮಂಡಳಿಗೆ ಒದಗಿಸಿದ ಎಲ್ಲ ಅನುದಾನ ಖರ್ಚು ಮಾಡಲು ಕಾಲಮಿತಿ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.
ಇಂದು ಜರುಗಿದ 2017-18ನೇ ಸಾಲಿನ ಮಂಡಳಿಯ ಪ್ರಥಮ ಸಭೆಯಲ್ಲಿ ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಮತ್ತು ಅಂಗನವಾಡಿ ಅಭಿವೃದ್ಧಿ ಮತ್ತು ಸುಧಾರಣೆಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಮಂಡಳಿ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ ಅವಶ್ಯಕತೆಗನುಗುಣವಾಗಿ ತಲಾ 50-60 ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳನ್ನು ಮಂಡಳಿಯಿಂದಲೇ ಪ್ರಾರಂಭಿಸಲು ಹಾಗೂ 3 ವರ್ಷದವರೆಗೆ ನಿರ್ವಹಣೆ ಮಾಡುವ ಹೊಸ ಹೆಜ್ಜೆ ಇಡಲಾಗಿದೆ. ಈ ಕುರಿತು ಆರ್ಥಿಕ ಮತ್ತು ಶಿಕ್ಷಣ ಇಲಾಖೆಗಳೊಂದಿಗೆ ಚರ್ಚಿಸಲಾಗುವುದೆಂದರು.
ಮಂಡಳಿ ವ್ಯಾಪ್ತಿಯಲ್ಲಿ ಉದ್ಯೋಗ ಮೇಳ, ಕೈಗಾರಿಕಾ ಮೇಳ ಮತ್ತು ಸಾಂಸ್ಕøತಿಕ ಮೇಳಗಳನ್ನು ನಡೆಸಲು, ಆರು ಜಿಲ್ಲೆಗಳ ಎಲ್ಲ ಗ್ರಾಮ, ತಾಂಡಾ, ಹಟ್ಟಿಗಳಿಗೆ ಪಕ್ಕಾ ಡಾಂಬರ ರಸ್ತೆ ಸೌಲಭ್ಯ ಕಲ್ಪಿಸಲು, ನಮ್ಮ ಹೊಲ ನಮ್ಮ ರಸ್ತೆ ನಿರ್ಮಾಣ ಹಾಗೂ ನೀರಾವರಿ ಕಾಲುವೆಗಳ ಸುಧಾರಣೆ ಮಾಡಲು, ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಿಸಲು, ಆರೋಗ್ಯ ವಿಸ್ತರಣಾ ಕೇಂದ್ರಗಳನ್ನು ಪ್ರಾರಂಭಿಸಲು, ಇನ್‍ಫೆಂಟ್ ಮತ್ತು ಮಾಟ್ರ್ಯಾಲಿಟಿ ಪ್ರಮಾಣ ಸುಧಾರಿಸಲು, ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಬೇಡಿಕೆ ಆಧಾರಿತ ರಸ್ತೆ ಮತ್ತು ವರ್ತುಲ ರಸ್ತೆಗಳ ನಿರ್ಮಾಣ ಕಾರ್ಯಕೈಗೊಳ್ಳಲು ಸಹ ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಪೌರಾಡಳಿತ ಸಚಿವ ಈಶ್ವರ ಖಂಡ್ರೆ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಂ ಖಾನ್, ಶಾಸಕ ಅಶೋಕ ಖೇಣಿ, ಬೀದರ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತತಾಯಿ ಮಲ್ಲಿನಾಥ ಶೇರಿಕಾರ, ಮಂಡಳಿಯ ಕಾರ್ಯದರ್ಶಿ ಹರ್ಷ ಗುಪ್ತಾ, ಜಂಟಿ ನಿರ್ದೇಶಕ ಎಸ್. ಬಸವರಾಜ, ಉಪ ಕಾರ್ಯದರ್ಶಿ ಗಂಗೂಬಾಯಿ ಮಾನಕರ್ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೇ 27ರಂದು ಮುಖಮಂತ್ರಿಗಳಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಲೋಕಾರ್ಪಣೆ
***************************************************************************
ಕಲಬುರಗಿ,ಮೇ.25.(ಕ.ವಾ.)-ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಬೋಧನಾ ಆಸ್ಪತ್ರೆ ಕಟ್ಟಡದ ಹಿಂಭಾಗದಲ್ಲಿ ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಿಂದ 80 ಹಾಸಿಗೆಗಳ ಸಾಮಥ್ರ್ಯದ ನವೀಕರಿಸಿದ ವಿ.ಟಿ.ಎಸ್.ಎಂ. ಫೆರಿಫರೆಲ್ ಕ್ಯಾನ್ಸರ್ ಕೇಂದ್ರ ಕಲಬುರಗಿ ಶಾಖೆಯ ಹಾಗೂ ಲಿನಿಯರ್ ಎಕ್ಸೆಲರೇಟರ್ ಯಂತ್ರದ ಲೋಕಾರ್ಪಣೆ ಮತ್ತು ಇನ್ಫೋಸಿಸ್ ಫೌಂಡೇಶನ್‍ರವರು ದೇಣಿಗೆಯಾಗಿ ನೀಡುತ್ತಿರುವ ಇನ್ಫೋಸಿಸ್ ಧರ್ಮಶಾಲೆಯ ಶಿಲ್ಯಾನಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 27ರಂದು ಶನಿವಾರ ಬೆಳಗಿನ 11.30 ಗಂಟೆಗೆ ಕಲಬುರಗಿ ಸೇಡಂ ರಸ್ತೆಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೆರವೇರಿಸುವರು.
 ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ, ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಹಾಗೂ ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ಲೋಕಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹಾಗೂ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ್ ಅಧÀ್ಯಕ್ಷತೆ ವಹಿಸಲಿದ್ದಾರೆ. ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವ್ಹಿ.ಗುತ್ತೇದಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ವಿಧಾನಸಭಾ ಶಾಸಕರುಗಳಾದ ಡಾ. ಖಮರುಲ್ ಇಸ್ಲಾಂ, ಜಿ.ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಮಹಾನಗರ ಪಾಲಿಕೆ ಸದಸ್ಯ ವಿಶಾಲ ದರ್ಗಿ, ರಮಾನಂದ ಉಪಾಧ್ಯ ಹಾಗೂ ಇನ್ಫೋಸಿಸ್ ಫೌಂಡೇಶನ್ ಟ್ರಸ್ಟಿ ಬಿನೋದ್ ಹಂಪಾಪುರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
 ವೈದ್ಯಕೀಯ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ. ಮಂಜುಳ, ಪ್ರಾದೇಶಿಕ ಆಯುಕ್ತ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಹರ್ಷ ಗುಪ್ತಾ, ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಅಲೋಕ ಕುಮಾರ, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಡಾ|| ಕೆ.ಎಸ್. ರವೀಂದ್ರನಾಥ್, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ|| ಮಂಜುನಾಥ ಸಿ.ಎನ್. ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಕನ್ನಡ ಪ್ರಾಧಿಕಾರದ ಸಭೆಗೆ ಗೈರಾದ 4 ಅಧಿಕಾರಿಗಳಿಗೆ ನೋಟೀಸು ನೀಡಲು ಸೂಚನೆ
*********************************************************************************
ಕಲಬುರಗಿ,ಮೇ.25.(ಕ.ವಾ.)-ಜಿಲ್ಲಾ ಮಟ್ಟದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾದ ಲೀಡ್ ಬ್ಯಾಂಕ್ ಮ್ಯಾನೇಜರ್, ಮೀನುಗಾರಿಕೆ, ಕಲಬುರಗಿ ಮತ್ತು ಸೇಡಂ ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಕಾರಣ ಕೇಳುವ ನೋಟೀಸು ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಸೂಚಿಸಿದರು.
ಅವರು ಗುರುವಾರ ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕಲಬುರಗಿಯ ವಿವಿಧ ಕನ್ನಡಪರ ಸಂಘಟನೆಗಳೊಂದಿಗೆ ಪ್ರಾಧಿಕಾರವು ನಡೆಸುವ ಸಭೆಯ ಬಗ್ಗೆ ಮಾಹಿತಿ ನೀಡದೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳು ಅಕ್ಷಮ್ಯ ಅಪರಾಧ ಹಾಗೂ ಕರ್ತವ್ಯ ಲೋಪವೆಸಗಿದ್ದಾರೆ. ಜಿಲ್ಲಾಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಗೆ ಎಚ್ಚರಿಕೆ ಪತ್ರ ನೀಡಬೇಕಲ್ಲದೆ, ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿ ವರದಿ ಸಲ್ಲಿಸಬೇಕೆಂದು ಸೂಚಿಸಿದರು.
ಕನ್ನಡ ಅನುಷ್ಠಾನದ ದೊಡ್ಡ ಜವಾಬ್ದಾರಿ ಹೊಂದಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕನ್ನಡ ಜಾಗೃತಿ ಸಮಿತಿ ಸಭೆ ಸಹ ನಡೆಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರವು ಈ ಅಧಿಕಾರಿ ವಿರುದ್ಧ ಕ್ರಮಕ್ಕೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಶಿಫಾರಸ್ಸು ಪತ್ರ ಕಳುಹಿಸಲಿದೆ ಎಂದರು.
ಕನ್ನಡವು ರಾಜ್ಯದ ಬದುಕಿನ ಭಾಷೆಯಾಗಿದ್ದು, ಶಿಕ್ಷಣ ಮತ್ತು ಆಡಳಿತದ ಎಲ್ಲ ಹಂತಗಳಲ್ಲಿ ಕನ್ನಡ ಅನುಷ್ಠಾನಗೊಂಡಾಗ ಮಾತ್ರ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೆಲದ ಭಾಷೆಯಲ್ಲಿ ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ಮುಟ್ಟಲು ಸಹ ಅನುವಾಗುತ್ತದೆ. ಸರ್ಕಾರದ ಪ್ರತಿ ಇಲಾಖೆಯ ಎಲ್ಲ ಹಂತದ ಆಡಳಿತದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ಕಲಬುರಗಿ ನಗರದ ವ್ಯಾಪ್ತಿಯಲ್ಲಿ ಸುಮಾರು 10,000 ಮೇಲ್ಪಟ್ಟು ಅಂಗಡಿ ಮುಂಗಟ್ಟು, ಖಾಸಗಿ ಶಾಲಾ ಕಾಲೇಜುಗಳ ನಾಮಫಲಕಗಳು ಆಂಗ್ಲ ಭಾಷೆಯಲ್ಲೇ ಇದ್ದು, ನಾಮಫಲಕಗಳಲ್ಲಿ 2002ರ ಆದೇಶ ಪ್ರಕಾರ ಶೇ. 60ರಷ್ಟು ಅಗ್ರಣೀಯ ಕನ್ನಡ ಹಾಗೂ ಶೇ. 40 ರಷ್ಟು ಇತರೆ ಭಾಷೆಗಳಲ್ಲಿ ಬರೆಸಬೇಕು. ಅಗ್ರಸ್ಥಾನದಲ್ಲಿ ಕನ್ನಡ ಬಳಸದಿದ್ದರೆ ಮಹಾನಗರ ಪಾಲಿಕೆ ಮತ್ತು ಕಾರ್ಮಿಕ ಇಲಾಖೆಯಿಂದ ನಿರ್ದಾಕ್ಷಿಣ್ಯವಾಗಿ ಪರವಾನಿಗೆ ರದ್ದು ಪಡಿಸಬೇಕು. ಇದನ್ನು 15 ದಿನದೊಳಗೆ ಸರಿಪಡಿಸಿ ವರದಿ ಸಲ್ಲಿಸಲು ಸೂಚಿಸಿದರು.
ಜಿಲ್ಲಾ ಮಟ್ಟದಲ್ಲಿ ಜರುಗುವ ಕೆ.ಡಿ.ಪಿ. ಸಭೆಯಲ್ಲಿ ವಿವಿಧ ಇಲಾಖೆಗಳ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆಯನ್ನು ಕಡ್ಡಾಯವಾಗಿ ಮಾಡಿ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು. ಲೋಕೋಪಯೋಗಿ ಇಲಾಖೆಯ ಸ್ಟೋರ್‍ಗಳಲ್ಲಿಯೂ ಹಾಗೂ ಮೈಲಿಗಲ್ಲು ಮತ್ತು ಟಾಲ್‍ಗೇಟ್ ಫಲಕಗಳಲ್ಲಿ ಕನ್ನಡವನ್ನು ಬಳಸದಿರುವ ಹಾಗೂ ಕನ್ನಡ ಪತ್ರಿಕೆಗಳಿಗೆ ಕನ್ನಡದಲ್ಲಿ ಜಾಹೀರಾತು ನೀಡದಿರುವ ಬಗ್ಗೆ ತೀವ್ರ ಅತೃಪ್ತಿಪಡಿಸಿ ಬರುವ ಒಂದು ತಿಂಗಳಲ್ಲಿ ಇದನ್ನು ಅನುಷ್ಠಾನಗೊಳಿಸಿ ಪ್ರಾಧಿಕಾರಕ್ಕೆ ವರದಿ ನೀಡಬೇಕು. ಕೈಗಾರಿಕೆಗಳಲ್ಲಿ ಡಾ. ಸರೋಜಿನಿ ಮಹರ್ಷಿ ವರದಿ ಅನುಷ್ಠಾನಗೊಂಡರೆ ಕನ್ನಡಿಗರ ಉದ್ಯೋಗ ಸಮಸ್ಯೆ ಪರಿಹಾರವಾಗುತ್ತದೆ. ಈ ಬಗ್ಗೆ ಪ್ರತಿ 3 ತಿಂಗಳಿಗೊಮ್ಮೆ ಪರಿಶೀಲನೆ ಮಾಡಿ ವರದಿ ನೀಡಬೇಕು.
ಬ್ಯಾಂಕುಗಳಲ್ಲಿ ತ್ರಿಭಾಷಾ ಸೂತ್ರ ಅನುಸರಿಸುವುದು ಹಾಗೂ ಗ್ರಾಮೀಣ ಬ್ಯಾಂಕುಗಳಲ್ಲಿ ನೇಮಕಗೊಳ್ಳುವ ಕನ್ನಡೇತರರು 6 ತಿಂಗಳೊಳಗೆ ಕನ್ನಡ ಕಲಿಯಬೇಕು. ಈ ಕುರಿತು ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗಳು ಕ್ರಮ ಜರುಗಿಸಬೇಕು. ಶಿಕ್ಷಣ ಕ್ಷೇತ್ರದಲ್ಲಿ ಶಾಲಾ ಸಬಲೀಕರಣಕ್ಕೆ ಸಂಬಂಧಿಸಿಂತೆ ಪ್ರಾಧಿಕಾರದಿಂದ ಕಳುಹಿಸಿದ 11 ಅಂಶಗಳ ಅನುಷ್ಠಾನದ ಬಗ್ಗೆ ತೀವ್ರ ಗಮನ ಹರಿಸಬೇಕು. ಶಾಲೆಗಳ ಸಂಪನ್ಮೂಲ ಸುಧಾರಣೆ, ಎಸ್.ಡಿ.ಎಂ.ಸಿ.ಯಿಂದ ಶಾಲಾ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಹೆಚ್ಚು ಪ್ರಯತ್ನಿಸಬೇಕು. ಆರ್.ಟಿ.ಓ. ಕಚೇರಿಗಳಲ್ಲಿ ವಾಹನ ಚಾಲನಾ ಲೈಸೆನ್ಸ್ ಕನ್ನಡದಲ್ಲಿ ಒದಗಿಸಬೇಕು. ಪೊಲೀಸ್ ಇಲಾಖೆಯಲ್ಲಿ ಟಿಪ್ಪಣಿ, ಎಫ್.ಐ.ಆರ್., ಸಂಚಾರಿ ಪೊಲೀಸ್ ವ್ಯವಸ್ಥೆಯಲ್ಲಿ ಬರುವ 15 ದಿನದಲ್ಲಿ ಬದಲಾವಣೆ ತರಬೇಕು. ಎ.ಪಿ.ಎಂ.ಸಿ.ಯಲ್ಲಿ ರೈತರಿಗೆ ನೀಡುವ ರಸೀದಿ, ಜೆಸ್ಕಾಂದಿಂದ ಪರವಾನಿಗೆ ಹಾಗೂ ಅನುಮೋದನೆ ಪತ್ರಗಳನ್ನು ಕನ್ನಡದಲ್ಲಿಯೇ ನೀಡಬೇಕೆಂದು ಸೂಚಿಸಿದರು.
ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷರು ಕಲಬುರಗಿ ನಗರದಲ್ಲಿ ಆಂಗ್ಲಭಾಷೆಯಲ್ಲಿರುವ 10,000 ಹೆಚ್ಚು ನಾಮಫಲಕಗಳನ್ನು ಒಂದು ತಿಂಗಳೊಳಗೆ ಸರಿಪಡಿಸಲು ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಕಾರ್ಮಿಕ ಇಲಾಖೆಗೆ ಸೂಚಿಸಲಾಗಿದೆ. ಇದಕ್ಕಾಗಿ ಪ್ರಾಧಿಕಾರದ ಸದಸ್ಯ ಮಹಾಂತೇಶ ಹಟ್ಟಿ ಅವರಿಗೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಉಸ್ತುವಾರಿ ವಹಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯ ಮಹಾಂತೇಶ ಹಟ್ಟಿ, ಕಾರ್ಯದರ್ಶಿ ಡಾ. ಕೆ. ಮುರಳೀಧರ್, ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ನಾಗರಾಜ ಮಾಳಗೆ ಸರ್ವರನ್ನು ಸ್ವಾಗತಿಸಿದರು.
ಆರ್ಥಿಕ ನೆರವಿಗಾಗಿ ಅರ್ಜಿ ಆಹ್ವಾನ
**********************************
ಕಲಬುರಗಿ,ಮೇ.25.(ಕ.ವಾ.)-ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2017-18ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ/ಸರಕು ಸಾಗಾಣಿಕೆ ವಾಹನ ಖರೀದಿಸಲು ಸಹಾಯಧನ ಯೋಜನೆ ಹಾಗೂ ಹಿಂದುಳಿದ ವರ್ಗಗಳ ವಿಧವೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಯೋಜನೆಗಳಡಿ ಸೌಲಭ್ಯ ಪಡೆಯಲು ಕಲಬುರಗಿ ಜಿಲ್ಲೆಯ ಅರ್ಹ ಹಿಂದುಳಿದ ವರ್ಗದ ಜನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.(ವಿಶ್ವಕರ್ಮ ಅದರ ಉಪ ಸಮುದಾಯಗಳನ್ನು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ). ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 40,000 ರೂ.ಗಳು ಹಾಗೂ ಪಟ್ಟಣ ಪ್ರದೇಶದವರಿಗೆ 55,000 ರೂ.ಗಳ ಒಳಗಿರಬೇಕು. ಅರ್ಜಿದಾರರು ಆಧಾರ್ ಸಂಖ್ಯೆ ಹಾಗೂ ಐ.ಎಫ್.ಸಿ. ಕೋಡ್ ಹೊಂದಿರುವ ರಾಷ್ಟ್ರೀಕೃತ/ಗ್ರಾಮೀಣ ಬ್ಯಾಂಕ್ ಖಾತೆಗಳನ್ನು ಹೊಂದಿರಬೇಕು. ಟೂರಿಸ್ಟ್ ಟ್ಯಾಕ್ಸಿ/ಸರಕು ಸಾಗಾಣಿಕೆ ವಾಹನ ಖರೀದಿಸಲು ಸಹಾಯಧನ ಯೋಜನೆಯಡಿ ಅರ್ಜಿದಾರರು ವಾಹನ ಚಾಲನ ಪರವಾನಿಗೆ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಹಿಂದುಳಿದ ವರ್ಗಗಳ ವಿಧವೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಯೋಜನೆಯಡಿ ಅರ್ಜಿದಾರರ ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು. ವಿಧವೆಯಾಗಿರುವ ಬಗ್ಗೆ ಕಂದಾಯ ಅಧಿಕಾರಿಗಳು ನೀಡುವ ಮಾಸಾಶನ ಪ್ರಮಾಣಪತ್ರದ ದೃಢೀಕೃತ ಪ್ರತಿ ಒದಗಿಸುವುದು.
ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ http://ift.tt/2r0bLvy ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೆÉೀರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಕೋಣೆ ಸಂಖ್ಯೆ: 22, ಮೂರನೇ ಮಹಡಿ, ವಿಕಾಸ ಭವನ, ಮಿನಿ ವಿಧಾನ ಸೌಧ ಕಲಬುರಗಿ ಹಾಗೂ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ 2017ರ ಜೂನ್ 24ರೊಳಗಾಗಿ ಸಲ್ಲಿಸಬೇಕು. ಅವಧಿ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್‍ನ್ನು ಹಾಗೂ ಜಿಲ್ಲಾ ನಿಗಮದ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
ಮೇ 29ರಿಂದ ಅನುತ್ತೀರ್ಣ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ
********************************************************************************
ಕಲಬುರಗಿ,ಮೇ.25.(ಕ.ವಾ.)-ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ 2017ರ ಜೂನ್ 19 ರಿಂದ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಲಾಗಿರುವ ಹಿನ್ನೆಲೆಯಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಮೇ 29ರಿಂದ ಜೂನ್ 17ರವರೆಗೆ ವಿಶೇಷ ತರಗತಿಗಳನ್ನು ಆಯಾ ಸರ್ಕಾರಿ ಪ್ರೌಢಶಾಲೆಗಳಲ್ಲಿಯೇ ಹಮ್ಮಿಕೊಳ್ಳಲಾಗಿದೆ ಎಂದು ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಹರ್ಷ ಗುಪ್ತಾ ಅವರು ತಿಳಿಸಿದ್ದಾರೆ.
ಪ್ರಸ್ತುತ ಸಾಲಿನ ಫಲಿತಾಂಶದಲ್ಲಿ ಗಣನೀಯ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಅನುತ್ತೀರ್ಣರಾದ ವಿಧ್ಯಾರ್ಥಿಗಳು ಪುನಃ ಪರೀಕ್ಷೆಯನ್ನು ಬರೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಅವಕಾಶವಿರುತ್ತದೆ. ಈ ಸಾಲಿನಲ್ಲಿ ಅನುತ್ತೀರ್ಣರಾದ ಮಕ್ಕಳು ಪೂರಕ ಪರೀಕ್ಷೆಯನ್ನು ಬರೆಯಲು ಮನವರಿಕೆ ಮಾಡಿ, ವಿಧ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ತರಬೇತಿಯನ್ನು ಮತ್ತು ವಿಷಯವಾರು ಪಠ್ಯಕ್ರಮದ ಅಭ್ಯಾಸ ಕಲ್ಪಿಸಿ, ಫಲಿತಾಂಶವನ್ನು ಸುಧಾರಿಸಲು ಈ ಕ್ರಮ ಅನುಕೂಲವಾಗುತ್ತದೆ.
ಈ ನಿಟ್ಟಿನಲ್ಲಿ ಶಾಲಾ ಪ್ರಾರಂಭದ ದಿನದಿಂದಲೇ ಪ್ರತಿ ಶಾಲೆಯಲ್ಲಿ ವಿಷಯವಾರು ಶಿಕ್ಷಕರಿಂದ ಪೂರಕ ಪರೀಕ್ಷೆಯನ್ನು ಬರೆಯಲಿರುವ ಮಕ್ಕಳಿಗೆ ವಿಶೇಷ ತರಬೇತಿಯನ್ನು ಶಾಲೆಯಲ್ಲಿ ಲಭ್ಯವಿರುವ ಕೋಣೆಯೊಂದರಲ್ಲಿ ಮೇ 29 ರಿಂದ ನಡೆಸಲು ಕ್ರಮ ಜರುಗಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶಾಲಾ ವೇಳಾಪಟ್ಟಿಯ ಅನುಗುಣವಾಗಿ ವಿದ್ಯಾರ್ಥಿಗಳ ಅಗತ್ಯತೆಯನುಸಾರವಾಗಿ ವಿಷಯವಾರು ವಿಶೇಷ ಬೋಧನಾ ವ್ಯವಸ್ಥೆಯನ್ನು ಮೇ 29 ರಿಂದ ಜೂನ್ 17 ರವರೆಗೆ ನಡೆಸಬೇಕು. ವಿಶೇಷ ತರಬೇತಿಗೆ ಪೂರಕವಾಗಿ ಪ್ರತಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಅನುತ್ತೀರ್ಣರಾದ ಮಕ್ಕಳ/ಪಾಲಕರ ಸಭೆಯನ್ನು ಆಯಾ ಶಾಲಾ ಮುಖ್ಯೋಪಾಧ್ಯಾಯರು ನಡೆಸಿ, ಅವರಿಗೆ ಪೂರಕ ಪರೀಕ್ಷೆಯ ಪ್ರಾಮುಖ್ಯತೆಯ ಅರಿವು ಮೂಡಿಸಿವುದು ಹಾಗೂ ಮಕ್ಕಳಲ್ಲಿ ಅರಿವು ಮೂಡಿಸುವತ್ತ ಗಮನ ಹರಿಸತಕ್ಕದೆಂದು ಅವರು ತಿಳಿಸಿದ್ದಾರೆ.
ಪ್ರತಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪೂರಕ ಪರೀಕ್ಷೆಗೆ ಅಗತ್ಯ ವಿರುವ ವಿಷಯವಾರು ವಿಶೇಷ ತರಬೇತಿ ಆಯೋಜಿಸತಕ್ಕದ್ದು. ಒಂದು ವೇಳೆ ವಿಷಯವಾರು ಶಿಕ್ಷಕರು ಲಭ್ಯವಿಲ್ಲದ ಸಂದರ್ಭದಲ್ಲಿ ಅಕ್ಕಪಕ್ಕದಲ್ಲಿ ಲಭ್ಯವಿರುವ ಶಾಲಾ ಶಿಕ್ಷಕರ ಸಹಕಾರವನ್ನು ಪಡೆಯುವುದು. ಈ ತರಬೇತಿಯಲ್ಲಿ ವಿಧ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಸಫಲತೆಗೆ ಹೆಚ್ಚಿನ ಶ್ರಮ ವಹಿಸಿ, ಫಲಿತಾಂಶವನ್ನು ವೃದ್ಧಿಸಲು ಕ್ರಮ ಜರುಗಿಸಬೇಕೆಂದು ಸೂಚಿಸಿದ್ದಾರೆ.
ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
**********************************************************
ಕಲಬುರಗಿ,ಮೇ.25.(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಚಿತ್ತಾಪುರ ತಾಲೂಕಿನಲ್ಲಿ ನಡೆಸಲಾಗುತ್ತಿರುವ ಕೆಳಕಂಡ ಮೆಟ್ರಿಕ್ ಪೂರ್ವ ಸರ್ಕಾರಿ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಅನುದಾನಿತ ವಸತಿ ನಿಲಯಗಳಿಗೆ 2017-18ನೇ ಸಾಲಿನಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಅರ್ಹ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗಕ್ಕೆ ಸೇರಿದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಸತಿ ನಿಲಯಗಳಿಗೆ ಪ್ರವೇಶ ಪಡೆಯಲು 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇಚ್ಛೆಯುಳ್ಳ ಅರ್ಹ ವಿದ್ಯಾರ್ಥಿಗಳು ಆಯಾ ವಸತಿ ನಿಲಯ/ವಸತಿ ಶಾಲೆಗಳ ಮೇಲ್ವಿಚಾರಕರಿಂದ ಉಚಿತವಾಗಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2017ರ ಜೂನ್ 15ರೊಳಗಾಗಿ ಸಂಬಂಧಿಸಿದ ವಸತಿ ನಿಲಯಗಳ ಮೇಲ್ವಿಚಾರಕರಿಗೆ ಸಲ್ಲಿಸಬೇಕು.
ಸರ್ಕಾರಿ ಮೆಟ್ರಿಕ್ ಪೂರ್ವ ವಸತಿ ನಿಲಯಗಳ ವಿವರ ಇಂತಿವೆ: ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಚಿತ್ತಾಪುರ, ಅಲಹಳ್ಳಿ, ಭೀಮನಳ್ಳಿ, ನಾಲವಾರ, ಕೊಲ್ಲೂರ, ಕಾಳಗಿ, ನಿಪ್ಪಾಣಿ, ರೇವಗ್ಗಿ, ಮಂಗಲಗಿ, ಟೇಂಗಳಿ. ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಚಿತ್ತಾಪುರ ಮತ್ತು ನಾಲವಾರ. ಅನುದಾನಿತ ವಸತಿ ನಿಲಯಗಳ ವಿವರ: ಶ್ರೀ ಸಿದ್ದಲಿಂಗೇಶ್ವರ ವಸತಿ ನಿಲಯ ರಾವೂರ, ಕೋರಿಸಿದ್ದೇಶ್ವರ ಬಿ.ಸಿ.ಎಂ. ವಸತಿ ನಿಲಯ ನಾಲವಾರ, ಗುರುನಂಜೇಶ್ವರ ವಸತಿ ನಿಲಯ ಭರತನೂರ. ಹೆಚ್ಚಿನ ಮಾಹಿತಿಗಾಗಿ ಚಿತ್ತಾಪುರ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
ವಿಜಯಕುಮಾರ ಭೀಮರಾವಗೆ ಪಿಹೆಚ್.ಡಿ.
***************************************
ಕಲಬುರಗಿ,ಮೇ.25.(ಕ.ವಾ.)-ಗುಲಬರ್ಗಾ ವಿಶ್ವವಿದ್ಯಾಲಯವು ಲೈಬ್ರೆರಿ ಆ್ಯಂಡ್ ಇನ್‍ಫಾರ್ಮೇಶನ್ ಸೈನ್ಸ್ ವಿಷಯದಲ್ಲಿ ವಿಜಯಕುಮಾರ ಭೀಮರಾವ ಅವರಿಗೆ ಪಿಹೆಚ್.ಡಿ. ಪದವಿ ಪ್ರಕಟಿಸಿದೆ.
ಡಾ. ವಿ.ಟಿ. ಕಾಂಬಳೆ ಅವರ ಮಾರ್ಗದರ್ಶನದಲ್ಲಿ “ಕಲೆಕ್ಷನ್ ಡೆವಲಪ್ಮೆಂಟ್ ಆಂಡ್ ಮ್ಯಾನೇಜ್‍ಮೆಂಟ್ ಆಫ್ ಇ-ರಿಸೋರ್ಸೆಸ್ ಆಫ್ ಸೆಂಟ್ರಲ್ ಯುನಿವರ್ಸಿಟಿ ಲೈಬ್ರೆರಿಸ್ ಇನ್ ಸೌತ್ ಇಂಡಿಯಾ: ಎ ಸ್ಟಡಿ” ಕುರಿತು ವಿಜಯಕುಮಾರ ಭೀಮರಾವ ಪ್ರಬಂಧವನ್ನು ಮಂಡಿಸಿದ್ದರು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
 ಕಲಬುರಗಿ,ಮೇ.25.(ಕ.ವಾ.)-ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್-ಎ ಮತ್ತು ಗ್ರೂಪ್-ಬಿ ತಾಂತ್ರಿಕ/ತಾಂತ್ರಿಕೇತರ ಮತ್ತು ಗ್ರೂಪ್-ಸಿ ತಾಂತ್ರಿಕ ಹುದ್ದೆಗಳಿಗೆ ಸ್ಪರ್ಧಾತ್ಮಕ/ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು 2017ರ ಮೇ 25 ರಿಂದ 31 ರವರೆಗೆ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಕಲಬುರಗಿ ನಗರದ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
 ಈ ಪರೀಕ್ಷೆಗಳಲ್ಲಿ ಅಕ್ರಮ ಮತ್ತು ನಕಲು ಅವ್ಯವಹಾರ ತಡೆಯಲು ಹಾಗೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶÀದಲ್ಲಿ 1973ರ ಸಿಆರ್.ಪಿ.ಸಿ. ಕಾಯ್ದೆಯ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಶಾಂತಿ ಭಂಗವನ್ನುಂಟು ಮಾಡುವ ಮೆರವಣಿಗೆ/ಧರಣಿ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಆಸ್ಪದ ಇರುವುದಿಲ್ಲ ಹಾಗೂ ಜಿರಾಕ್ಸ್/ಪುಸ್ತಕ ಅಂಗಡಿಗಳನ್ನು ಮುಚ್ಚುವಂತೆ ಕಲಬುರಗಿ ತಹಸೀಲ್ದಾರ್ ಅಶೋಕ ಹಿರೋಳ್ಳೆ ಅವರು ಆದೇಶ ಹೊರಡಿಸಿದ್ದಾರೆ.
 ಪರೀಕ್ಷಾ ಕೋಣೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮೊಬೈಲ್ ಹಾಗೂ ಇತರೆ ಚಿಕ್ಕ ಎಲೆಕ್ಟ್ರಾನಿಕ್ಸ್ ಸೇರಿದಂತೆ ಮತ್ತಿತರ ಯಾವುದೇ ವಸ್ತುಗಳನ್ನು ತರಕೂಡದು ಎಂದು ಸೂಚಿಸಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಾಗಿ ಅರ್ಜಿ ಆಹ್ವಾನ
*************************************************
ಕಲಬುರಗಿ,ಮೇ.25.(ಕ.ವಾ.)-ಕಲಬುರಗಿ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿಯಿರುವ 32 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್ ತಿಳಿಸಿದ್ದಾರೆ.
ಎಲ್ಲ 32 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಅಭ್ಯರ್ಥಿಗಳು ಪಿ.ಯು.ಸಿ. ಪರೀಕ್ಷೆ ಅಥವಾ ಸಿ.ಬಿ.ಎಸ್.ಸಿ. ಅಥವಾ ಐ.ಸಿ.ಎಸ್.ಇ. ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಅರ್ಜಿಗಳನ್ನು ಞಚಿಟಚಿbuಡಿಚಿgi-vಚಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮುಖಾಂತರ ಮೇ 24 ರಿಂದ ಜೂನ್ 24ರ ಸಂಜೆ 5.30 ಗಂಟೆಯೊಳಗಾಗಿ ಸಲ್ಲಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 200ರೂ. ಶುಲ್ಕ ಹಾಗೂ ಇತರೆ ಅಭ್ಯರ್ಥಿಗಳಿಗೆ 400ರೂ. ಶುಲ್ಕ ವಿರುತ್ತದೆ. ಶುಲ್ಕವನ್ನು ಆನ್‍ಲೈನ್ ಮೂಲಕ ಪಾವತಿಸಲು ಹಾಗೂ ಚಲನ್ ಸೃಷ್ಟಿಸಲು http://ift.tt/2r09mkq ಉಪಯೋಗಿಸಬೇಕು. ವೇತನ ಶ್ರೇಣಿ, ಹುದ್ದೆಗಳ ವರ್ಗೀಕರಣ, ಅಧಿಸೂಚನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಞಚಿಟಚಿbuಡಿಚಿgi-vಚಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*****************************************************
ಕಲಬುರಗಿ,ಮೇ.25.(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಚಿಂಚೋಳಿ ತಾಲೂಕಿನಲ್ಲಿ ನಡೆಸಲಾಗುತ್ತಿರುವ ಕೆಳಕಂಡ ಮೆಟ್ರಿಕ್ ಪೂರ್ವ ಸರ್ಕಾರಿ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2017-18ನೇ ಸಾಲಿನಲ್ಲಿ ಹೊಸದಾಗಿ ಪ್ರವೇಶಕ್ಕಾಗಿ ಅರ್ಹ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗಕ್ಕೆ ಸೇರಿದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಸತಿ ನಿಲಯಗಳಿಗೆ ಪ್ರವೇಶ ಪಡೆಯಲು 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇಚ್ಛೆಯುಳ್ಳ ಅರ್ಹ ವಿದ್ಯಾರ್ಥಿಗಳು ಆಯಾ ವಸತಿ ನಿಲಯ/ವಸತಿ ಶಾಲೆಗಳ ಮೇಲ್ವಿಚಾರಕರಿಂದ ಉಚಿತವಾಗಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2017ರ ಜೂನ್ 15ರೊಳಗಾಗಿ ಸಂಬಂಧಿಸಿದ ವಸತಿ ನಿಲಯಗಳ ಮೇಲ್ವಿಚಾರಕರಿಗೆ ಸಲ್ಲಿಸಬೇಕು. ಕಳೆದ ಸಾಲಿನಲ್ಲಿ ವಿದ್ಯಾರ್ಥಿನಿಲಯದಲ್ಲಿದ್ದು, ಉತ್ತೀರ್ಣರಾದ 5 ರಿಂದ 9 ತರಗತಿಯ ವಿದ್ಯಾರ್ಥಿಗಳು ಮರು ಪ್ರವೇಶಕ್ಕಾಗಿ ನವೀಕರಣ ಅರ್ಜಿಯನ್ನು ಸಂಬಂಧಪಟ್ಟ ವಸತಿ ನಿಲಯದ ಮೇಲ್ವಿಚಾಕರಿಗೆ ಅರ್ಜಿ ಸಲ್ಲಿಸಿ ಜೂನ್ 5ರೊಳಗಾಗಿ ಪ್ರವೇಶ ಪಡೆಯಬೇಕು. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಮೆಟ್ರಿಕ್ ಪೂರ್ವ ವಸತಿ ನಿಲಯಗಳ ವಿವರ ಇಂತಿವೆ: ಬಾಲಕರ ಮೆಟ್ರಿಕ್ ಪೂರ್ವ ವಸತಿ ನಿಲಯ ಚಿಂಚೋಳಿ, ಚಂದಾಪುರ, ಚಿಮ್ಮನಚೋಡ, ಕೋಡ್ಲಿ, ರಟಕಲ್, ರಾಯಕೋಡ್. ಬಾಲಕಿಯರ ಮೆಟ್ರಿಕ್ ಪೂರ್ವ ವಸತಿ ನಿಲಯ ಸಾಲೇಬೀರನಳ್ಳಿ, ಚಿಂಚೋಳಿ, ಕೋಡ್ಲಿ, ರಟಕಲ್. ಹೆಚ್ಚಿನ ಮಾಹಿತಿಗಾಗಿ ಚಿಂಚೋಳಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08475-273055ನ್ನು ಸಂಪರ್ಕಿಸಲು ಕೋರಿದೆ.
ಮೇ 26ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ಮೇ.25.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11ಕೆ.ವಿ. ಸುಪರ ಮಾರ್ಕೆಟ್ ಫೀಡರ್ ವ್ಯಾಪ್ತಿಯ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಯು.ಜಿ.ಡಿ. ಮಾರ್ಗ ಕಾಮಗಾರಿ ಕೈಗೊಳ್ಳುವ ಪ್ರಯುಕ್ತ ಮೇ 26ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಫೀಡರುಗಳ ವ್ಯಾಪ್ತಿಯ ಬಡಾವಣೆಗಳಲ್ಲಿ ಅಂದು ಬೆಳಗಿನ 9 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ. ವಿದ್ಯುತ್ ವ್ಯತ್ಯಯವಾಗುವ ಬಡಾವಣೆಗಳ ವಿವರ ಇಂತಿದೆ.
11 ಕೆ.ವಿ. ಸುಪರ ಮಾರ್ಕೆಟ್ ಫೀಡರ್: ಶಿವಾಜಿ ಖಾನಾವಳಿ, ಪ್ರಕಾಶ ಟಾಕೀಸ್, ಲೋಹಾರಗಲ್ಲಿ, ಕಿರಾಣಾ ಬಜಾರ್, ಫೋರ್ಟ್ ರಸ್ತೆ, ಮಹಾದೇವ ಟೆಂಪಲ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.








ಹೀಗಾಗಿ ಲೇಖನಗಳು NEWS AND PHOTO DATE: 25--05--2017

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 25--05--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 25--05--2017 ಲಿಂಕ್ ವಿಳಾಸ https://dekalungi.blogspot.com/2017/05/news-and-photo-date-25-05-2017.html

Subscribe to receive free email updates:

0 Response to "NEWS AND PHOTO DATE: 25--05--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ