ಶೀರ್ಷಿಕೆ : News and photo Date: 26--05---2017
ಲಿಂಕ್ : News and photo Date: 26--05---2017
News and photo Date: 26--05---2017
ಕಲಬುರಗಿಯಲ್ಲಿ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆಗೆ ಸಜ್ಜು
***************************************************************
ಕಲಬುರಗಿ,ಮೇ.26.(ಕ.ವಾ.)-ಕಲಬುರಗಿ ನಗರದಲ್ಲಿ 80 ಹಾಸಿಗೆಗಳ ಪೂರ್ಣ ಪ್ರಮಾಣದ ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನವೀಕೃತ ಹಾಗೂ ಮೇಲ್ದರ್ಜೆಗೇರಿಸಿದ ವಿ.ಟಿ.ಎಸ್.ಎಂ. ಫೆರಿಫರಲ್ ಕ್ಯಾನ್ಸರ್ ಕೇಂದ್ರವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಲೋಕಾರ್ಪಣೆ ಮಾಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಹೇಳಿದರು.
ಅವರು ಶುಕ್ರವಾರ ಕಲಬುರಗಿ ನೂತನ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸದರಿ ಆಸ್ಪತೆಯನ್ನು 50 ಕೋಟಿ ರೂ. ವೆಚ್ಚದಿಂದ ಎರಡು ಹಂತಗಳಲ್ಲಿ ಮೇಲ್ದರ್ಜೆಗೇರಿಸಲಾಗಿದೆ ಎಂದರು.
ಹೈದ್ರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳ ಹಾಗೂ ನೆರೆಯ ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದ ಬಡ ಕ್ಯಾನ್ಸರ್ ಹೊರ ರೋಗಿಗಳ ಅನುಕೂಲಕ್ಕಾಗಿ ಕಲಬುರಗಿಯಲ್ಲಿ ಪ್ರಾರಂಭಿಸಲಾದ ವಿ.ಟಿ.ಎಸ್.ಎಂ. ಫೆರಿಫರಲ್ ಕ್ಯಾನ್ಸರ್ ವಿಕಿರಣ ಚಿಕಿತ್ಸಾ ಘಟಕವನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈ ಪ್ರಸ್ತಾವನೆ ಪರಿಶೀಲನಾ ಹಂತದಲ್ಲಿರುವುದರಿಂದ ಈ ಭಾಗದ ಜನರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವೇ ಪೂರ್ಣ ಪ್ರಮಾಣದ ಸುಸಜ್ಜಿತ ಫೆರಿಫೆರಲ್ ಕ್ಯಾನ್ಸರ್ ಕೇಂದ್ರವನ್ನು ಪ್ರಾರಂಭಿಸುತ್ತಿದೆ ಎಂದು ತಿಳಿಸಿದರು.
ಈ ಕೇಂದ್ರದಲ್ಲಿ ಈಗಾಗಲೇ ಲೀನಿಯರ್ ಎಕ್ಸಲೇಟರ್ ಅಳವಡಿಸಿ ಕಿಮೋಥೆರೆಫಿ, ಮೆಡಿಕಲ್ ಮತ್ತು ಅಂಕಾಲಾಜಿ ಶಸ್ತ್ರ ಚಿಕಿತ್ಸಾ ಮತ್ತು ವಿಕಿರಣ ಚಿಕಿತ್ಸಾ ಘಟಕಗಳನ್ನು ಪ್ರಾರಂಭಿಸಲಾಗಿದೆ. ತಜ್ಞ ವೈದ್ಯರ ಹಾಗೂ ಸಿಬ್ಬಂದಿಗಳ ನೇಮಕಾತಿ ಸಹ ಮಾಡಲಾಗಿದ್ದು, ಎಲ್ಲ ತರಹÀದ ಕ್ಯಾನ್ಸರ್ ರೋಗಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಿ.ಪಿ.ಎಲ್. ಕುಟುಂಬಗಳಿಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕುಟುಂಬಗಳಿಗೆ ಶೇ. 70 ರಷ್ಟು ಮತ್ತು ಕಡಿಮೆ ಆದಾಯ ಹೊಂದಿದ ಕುಟುಂಬಗಳಿಗೆ ಶೇ. 50ರಷ್ಟು ರಿಯಾಯಿತಿಯಲ್ಲಿ ಚಿಕಿತ್ಸೆ ನೀಡಲಾಗುವುದು.
ಕ್ಯಾನ್ಸರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರೋಗಿಗಳೊಂದಿಗೆ ಆಗಮಿಸುವ ಸಹಾಯಕರ ವಾಸ್ತವ್ಯಕ್ಕೆ ಅನುವಾಗುವಂತೆ ಇನ್ಫೋಸಿಸ್ ಸಂಸ್ಥೆಯು 6 ಕೋಟಿ ರೂ. ವೆಚ್ಚದಿಂದ ಧರ್ಮಶಾಲೆ ನಿರ್ಮಿಸಲು ಮುಂದೆ ಬಂದಿದ್ದು, ಈ ಧರ್ಮಶಾಲೆಯ ಶಿಲಾನ್ಯಾಸ ಸಹ ಶನಿವಾರ ಮಾಡಲಾಗುವುದು. ಇದಲ್ಲದೇ ಕಲಬುರಗಿಗೆ ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ಮಂಜೂರಾಗಿದ್ದು, ಕಾಮಗಾರಿ ಟೆಂಡರ್ ಪ್ರಕ್ರಿಯೆಯಲ್ಲಿದೆ. ಇದರ ಶಿಲಾನ್ಯಾಸ ಸಹ ಮುಖ್ಯಮಂತ್ರಿಗಳು ಶನಿವಾರ ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ನಂತರ ಸಚಿವರು ಕ್ಯಾನ್ಸರ್ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಆರ್ಥಿಕ ಸಲಹೆಗಾರ ನಿಶ್ಬಿತ್, ಕಲಬುರಗಿ ಸಂಸ್ಥೆ ಪ್ರಭಾರಿ ಅಧಿಕಾರಿ ಡಾ|| ವಿಶಾಲ ಹರಸೂರ, ಸಾರ್ವಜನಿಕ ಸಂಪರ್ಕಾಧಿಕಾರಿ ಸ್ವಾಮಿ, ವೈದ್ಯರುಗಳಾದ ಡಾ|| ಗುರುರಾಜ ದೇಶಪಾಂಡೆ, ಡಾ|| ಅಭಯ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಸಚಿವರ ಪ್ರವಾಸ
**********************************
ಕಲಬುರಗಿ,ಮೇ.26.(ಕ.ವಾ.)-ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್. ಆಂಜನೇಯ ಅವರು ಹೈದ್ರಾಬಾದಿನಿಂದ ಹೆಲಿಕಾಪ್ಟರ್ ಮೂಲಕ ಮೇ 27ರಂದು ಮಧ್ಯಾಹ್ನ 2.15 ಗಂಟೆಗೆ ಕಲಬುರಗಿಗೆ ಆಗಮಿಸುವರು. ಮಧ್ಯಾಹ್ನ 2.30 ಗಂಟೆಗೆ ಕಲಬುರಗಿ ನಗರದ ಇಂದಿರಾ ಸ್ಮಾರಕ ಭವನದ ಎದುರುಗಡೆಯಲ್ಲಿ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ಪುತ್ಥಳಿಯ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಚಿವರು ಸಂಜೆ 4.30 ಗಂಟೆಗೆ ಕಲಬುರಗಿಯಿಂದ ಹೆಲಿಕಾಪ್ಟರ್ ಹೈದ್ರಾಬಾದಿಗೆ ಪ್ರಯಾಣ ಬೆಳೆಸುವರು.

ಮೇ 27ರಂದು ಡಾ. ಬಾಬು ಜಗಜೀವನರಾಂ ಅವರ ಪುತ್ಥಳಿ ಅನಾವರಣ
********************************************************************
ಕಲಬುರಗಿ,ಮೇ.26.(ಕ.ವಾ.)-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 27ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಕಲಬುರಗಿ ಇಂದಿರಾ ಸ್ಮಾರಕ ಭವನದ ಆವರಣದಲ್ಲಿ ಡಾ. ಬಾಬು ಜಗಜೀವನರಾಂ ಅವರ ಪುತ್ಥಳಿ ಅನಾವರಣಗೊಳಿಸುವರು. ನಂತರ ಸಾರ್ವಜನಿಕ ಸಮಾರಂಭವು ಮಧ್ಯಾಹ್ನ 2.30 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜರುಗಲಿದೆ.
ಕುಡಿಯುವ ನೀರು ಮತ್ತು ನೈರ್ಮಲ್ಯೀಕರಣ ಕೇಂದ್ರ ರಾಜ್ಯ ಸಚಿವ ರಮೇಶ ಜಿಗಜಿಣಗಿ, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ, ನಗರಾಭಿವೃದ್ಧಿ ಸಚಿವ ರೋಷನ್ ಬೇಗ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್.ಆಂಜನೇಯ, ಇಂಧನ ಸಚಿವ ಡಿ.ಕೆ. ಶಿವಕುಮಾರ, ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ರಾಜ್ಯ ಸಚಿವ ಈಶ್ವರ ಖಂಡ್ರೆ ಅವರ ಘನ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ್ ವಹಿಸಲಿದ್ದಾರೆ.
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಕೋಲಾರ ಲೋಕಸಭಾ ಸದಸ್ಯ ಕೆ.ಹೆಚ್. ಮುನಿಯಪ್ಪ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಬಳ್ಳಾರಿ ಲೋಕಸಭಾ ಸದಸ್ಯ ಬಿ. ಶ್ರೀರಾಮಲು, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವ್ಹಿ.ಗುತ್ತೇದಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭಾ ಶಾಸಕರುಗಳಾದ ಡಾ. ಖಮರುಲ್ ಇಸ್ಲಾಂ, ಜಿ.ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ಮುಧೋಳ ಶಾಸಕ ಗೋವಿಂದ ಕಾರಜೋಳ, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್, ಮಾಜಿ ಲೋಕಸಭಾ ಸದಸ್ಯೆ ಮೀರಾ ಕುಮಾರಿ, ಮಾಜಿ ಸಚಿವರಾದ ಹಣಮಂತಪ್ಪ ಆಲಕೋಡ್, ಮಾಜಿ ಲೋಕಸಭಾ ಸದಸ್ಯ ನರಸಿಂಗ್‍ರಾವ ಸೂರ್ಯವಂಶಿ, ಮಹಾನಗರ ಪಾಲಿಕೆ ಉಪ ಮಹಾಪೌರ್ ಪುತಲಿ ಬೇಗಂ, ಮಹಾನಗರ ಪಾಲಿಕೆ ಸದಸ್ಯರುಗಳಾದ ಜಗದೇವಿ ಮಲ್ಲು ಸೋಮ, ನಾಗರಾಜ ಗುಂಡಗುರ್ತಿ, ಗೀತಾ ರಾಜು ವಾಡೇಕರ್, ಡಾ|| ಬಾಜು ಜಗಜೀವರಾಂ ಪ್ರತಿಮೆ ಅನಾವರಣ ಸಮಿತಿ ಗೌರವಾಧ್ಯಕ್ಷ ಭೀಮಣ್ಣ ಟಿ. ಬಿಲವ್, ಅಧ್ಯಕ್ಷ ಶ್ಯಾಮ ನಾಟೀಕರ ಹಾಗೂ ಕಾರ್ಯಾಧ್ಯಕ್ಷ ರಾಜು ವಾಡೇಕರ್, ಮಾಜಿ ಮಹಾಪೌರರು ಹಾಗೂ ಡಾ|| ಬಾಜು ಜಗಜೀವರಾಂ ಪ್ರತಿಮೆ ಅನಾವರಣ ಸಮಿತಿ ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಜಿಲ್ಲೆಯ 6349 ಸ್ತ್ರೀಶಕ್ತಿ ಗುಂಪುಗಳಿಗೆ 8.07 ಕೋಟಿ ರೂ. ಸುತ್ತುನಿಧಿ ಪಾವತಿ
*************************************************************************
ಕಲಬುರಗಿ,ಮೇ.26.(ಕ.ವಾ.)-ಕಲಬುರಗಿ ಜಿಲ್ಲೆಯಲ್ಲಿ ರಚನೆಯಾದ 6349 ಸ್ತ್ರೀಶಕ್ತಿ ಸ್ವ-ಸಹಾಯ ಗುಂಪುಗಳಿಗೆ ಕಳೆದ ನಾಲ್ಕು ವರ್ಷಗಳಲ್ಲಿ 5000 ರೂ.ದಂತೆ ಒಟ್ಟು 8.07 ಕೋಟಿ ರೂ. ಸುತ್ತುನಿಧಿ ಪಾವತಿಸಲಾಗಿದೆ. ಸ್ತ್ರೀಶಕ್ತಿ ಗುಂಪುಗಳಿಗೆ ಪಾವತಿಸುವ ಸುತ್ತುನಿಧಿ ಮೊತ್ತವನ್ನು ರಾಜ್ಯ ಸರ್ಕಾರ 5000 ರೂ.ದಿಂದ 25000 ರೂ.ಗೆ ಹೆಚ್ಚಿಸಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಕಾಂತ ಕುಲಕರ್ಣಿ ತಿಳಿಸಿದ್ದಾರೆ.
ವಿವಿಧ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಜಿಲ್ಲೆಯ ಒಟ್ಟು 711 ಸ್ತ್ರೀಶಕ್ತಿ ಸ್ವ-ಸಹಾಯ ಗುಂಪುಗಳಿಗೆ ತಲಾ 5000 ರೂ.ದಂತೆ ಒಟ್ಟು 36.05 ಲಕ್ಷ ರೂ. ಪ್ರೋತ್ಸಾಹಧನ ಹಾಗೂ ಅಧಿಕ ಉಳಿತಾಯ ಮಾಡಿದ 604 ಸ್ತ್ರೀಶಕ್ತಿ ಗುಂಪುಗಳಿಗೆ ತಲಾ 15000 ರೂ.ದಂತೆ ಒಟ್ಟು 3.22 ಕೋಟಿ ರೂ. ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ. ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ 97 ಸ್ತ್ರೀಶಕ್ತಿ ಗುಂಪುಗಳಿಗೆ ಶೇ. 6ರಂತೆ ಬಡ್ಡಿ ಮರುಪಾವತಿಗಾಗಿ 5 ಕೋಟಿ ರೂ. ಅನುದಾನ ಪಾವತಿಸಲಾಗಿದೆ.
ಆಳಂದ ತಾಲೂಕಿನ ಬೋಧನ ಗ್ರಾಮದ ಭವಾನಿ ಸ್ತ್ರೀಶಕ್ತಿ ಸ್ವ-ಸಹಾಯ ಗುಂಪು ಉತ್ತಮ ಕಾರ್ಯನಿರ್ವಹಣೆಗಾಗಿ 2016-17ನೇ ಸಾಲಿನ ವಿಭಾಗೀಯ ಮಟ್ಟದ ಸ್ತ್ರೀಶಕ್ತಿ ಸ್ವಸಹಾಯ ಗುಂಪು ಪ್ರಶಸ್ತಿ ಹಾಗೂ 25000ರೂ. ಪ್ರೋತ್ಸಾಹಧನ ಪಡೆದಿದೆ. ಈ ಗುಂಪು 3.50 ಲಕ್ಷ ರೂ. ಬ್ಯಾಂಕ್ ಸಾಲ ಪಡೆದಿದ್ದು, ಈವರಗೆ 3.36 ಲಕ್ಷ ರೂ. ಸಾಲ ಮರುಪಾವತಿ ಮಾಡಿದೆ. ಸಂಘದ ಸದಸ್ಯರು ಹೈನುಗಾರಿಕೆ, ಕಿರಾಣಿ ಅಂಗಡಿ, ಟೇಲರಿಂಗ್, ಕೃಷಿ ಮತ್ತು ಗೃಹೋಪಯೋಗಿ ವಸ್ತುಗಳ ಮಾರಾಟದ ಚಟುವಟಿಕೆಗಳಿಂದ ವಾರ್ಷಿಕ 50000 ರೂ. ಲಾಭ ಪಡೆದಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ರಚಿಸಲಾದ ಹಲವಾರು ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು ಹೈನುಗಾರಿಕೆ, ರಾಶಿಯಂತ್ರ, ಕುರಿ ಸಾಕಾಣಿಕೆ, ಹಿಟ್ಟಿನ ಗಿರಣಿ, ಖಾರ ಕುಟ್ಟುವ ಯಂತ್ರ, ಕಿರಾಣಿ ಮತ್ತು ಹಣ್ಣು ಮಾರಾಟ ಅಂಗಡಿ, ಹೊಲಿಗೆ, ಕಸೂತಿ, ಪತ್ರೋಳಿ ತಯಾರಿಕೆ, ಲೇಡೀಜ್ ಕಾರ್ನರ್, ಸಿದ್ಧ ಉಡುಪು ಮಾರಾಟ, ಉಣ್ಣೆ ತಯಾರಿಕೆ, ಹೂವಿನ ವ್ಯಾಪಾರ, ಅಗರಬತ್ತಿ, ಕರಕುಶಲ ವಸ್ತು, ಬಿದಿರು ಬುಟ್ಟಿ ಮತ್ತು ಶ್ಯಾವಿಗೆ, ಲಂಬಾಣಿ ಉಡುಪು ತಯಾರಿಕೆಯಂತಹ ವಿವಿಧ ಆರ್ಥಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಆರ್ಥಿಕ ಸ್ವಾವಲಂಬಿಯತ್ತ ದಾಪುಗಾಲು ಇಡುತ್ತಿವೆ.

ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*************************************************************
ಕಲಬುರಗಿ,ಮೇ.26.(ಕ.ವಾ.)-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜೇವರ್ಗಿ ತಾಲೂಕಿನಲ್ಲಿ ನಡೆಸಲಾಗುತ್ತಿರುವ ಕೆಳಕಂಡ ಮೆಟ್ರಿಕ್ ಪೂರ್ವ ಸರ್ಕಾರಿ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯ ವಸತಿ ನಿಲಯಗಳಿಗೆ 2017-18ನೇ ಸಾಲಿನಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಅರ್ಹ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗಕ್ಕೆ ಸೇರಿದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಸತಿ ನಿಲಯಗಳಿಗೆ ಪ್ರವೇಶ ಪಡೆಯಲು 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇಚ್ಛೆಯುಳ್ಳ ಅರ್ಹ ವಿದ್ಯಾರ್ಥಿಗಳು ಆಯಾ ವಸತಿ ನಿಲಯದ ಮೇಲ್ವಿಚಾರಕರಿಂದ ಉಚಿತವಾಗಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2017ರ ಜೂನ್ 15ರೊಳಗಾಗಿ ಸಂಬಂಧಿಸಿದ ವಸತಿ ನಿಲಯಗಳ ಮೇಲ್ವಿಚಾರಕರಿಗೆ ಅಥವಾ ಜೇವರ್ಗಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತೀರ್ಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕು.
ಸರ್ಕಾರಿ ಮೆಟ್ರಿಕ್ ಪೂರ್ವ ವಸತಿ ನಿಲಯಗಳ ವಿವರ ಇಂತಿವೆ: ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಜೇವರ್ಗಿ, ಕೋಳಕೂರ, ನರಬೋಳ, ಆಂದೋಲಾ, ಬಿಳವಾರ, ವಡಗೇರಾ, ಇಜೇರಿ, ಯಡ್ರಾಮಿ, ಅರಳಗುಂಡಗಿ, ಅಂಕಲಗಾ, ನೆಲೋಗಿ, ಆಲೂರ. ಬಾಲಕಿಯರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಜೇವರ್ಗಿ ಮತ್ತು ನಲೋಗಿ. ಹೆಚ್ಚಿನ ಮಾಹಿತಿಗಾಗಿ ಚಿತ್ತಾಪುರ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.

ಹೊಲಿಗೆ ತರಬೇತಿಗಾಗಿ ಅರ್ಜಿ ಆಹ್ವಾನ
**************************************
ಕಲಬುರಗಿ,ಮೇ.26.(ಕ.ವಾ.)-ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮಹಿಳಾ ಹೊಲಿಗೆ ಕೇಂದ್ರದಲ್ಲಿ 2017-18ನೇ ಸಾಲಿನ ಹೊಲಿಗೆ ತರಬೇತಿಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಪ್ರವರ್ಗದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಪ್ರವರ್ಗದ ಅಭ್ಯರ್ಥಿಗಳ ಆದಾಯ ಮಿತಿ 15,000 ರೂ. ಇರಬೇಕು ಹಾಗೂ 7ನೇ ತರಗತಿ ಉತ್ತೀರ್ಣರಾಗಿರಬೇಕು. ಈ ತರಬೇತಿಗೆ ವಿಧವಾ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಮಾಹೆ 310ರೂ. ತರಬೇತಿ ಭತ್ಯೆ ನೀಡಲಾಗುತ್ತದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಜೇವರ್ಗಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯಕ್ಕೆ ಜೂನ್ 10ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಹಲ್ಲೆ ಮಾಡಿದ ಆರೋಪಿಗೆ 2 ವರ್ಷದ ಕಾರಾಗೃಹ ಶಿಕ್ಷೆ
***************************************************
ಕಲಬುರಗಿ,ಮೇ.26.(ಕ.ವಾ.)-ಹೊಲ ಪಾಲು ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿ, ಆವಾಚ್ಯ ಶಬ್ದಗಳಿಂದ ನಿಂದಿಸಿದ್ದ ಆರೋಪಿ ಚಂದ್ರಶೇಖರ @ ಚಂದ್ರಕಾಂತ ಚನ್ನಮಲ್ಲಪ್ಪ ಕಾಡಾದಿಗೆ ಎರಡನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶೆ ಸೌಭಾಗ್ಯ ಭೂಸೇರ್ ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 8000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ಆರೋಪಿಯು ಕಲಬುರಗಿ ವ್ಯಾಪ್ತಿಯ ಫರತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2013ರ ನವೆಂಬರ್ 8ರಂದು ರಾತ್ರಿ 8 ಗಂಟೆಗೆ ಫಿರ್ಯಾದಿಯ ಮನೆಗೆ ಬಂದು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ. ಈ ಕುರಿತು ಫರತಾಬಾದ್ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದರು.
ಎರಡನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶೆ ಸೌಭಾಗ್ಯ ಭೂಸೇರ್ ಅವರು ಸದರಿ ಪ್ರಕರಣದ ವಿಚಾರಣೆಯನ್ನು ನಡೆಸಿ ಅಪರಾಧ ಮಾಡಿದ ಬಗ್ಗೆ ರುಜುವಾತು ಪಟ್ಟಿದ್ದರಿಂದ ಅಪರಾಧಿಗೆ 2 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 8000 ರೂ. ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ಶ್ರೀಮಂತ ತೇಲಿ ವಾದ ಮಂಡಿಸಿದರು.

ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
*******************************************
ಕಲಬುರಗಿ,ಮೇ.26.(ಕ.ವಾ.)-ಸರ್ಕಾರಿ/ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ 2017-18ನೇ ಸಾಲಿನ (ಎನ್.ಸಿ.ವಿ.ಟಿ./ಎಸ್.ಸಿ.ವಿ.ಟಿ.) ಅಗಸ್ಟ್-2017ನೇ ಶೈಕ್ಷಣಿಕ ಸಾಲಿನಲ್ಲಿ ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಉದ್ಯೋಗ ಮತ್ತು ತರಬೇತಿ ಇಲಾಖೆಯ ವಿಭಾಗೀಯ ಕಚೇರಿಯ ಪದನಿಮಿತ್ತ ಜಂಟಿ ಶಿಶಿಕ್ಷು ಸಲಹೆಗಾರರು ಹಾಗೂ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಅಭ್ಯರ್ಥಿಗಳ ಆಯ್ಕೆಯನ್ನು ಮೆರಿಟ್ ಆಧಾರದ ಮೇಲೆ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ತಮ್ಮ ಹತ್ತಿರದ ಸರ್ಕಾರಿ/ಖಾಸಗಿ ಅನುದಾನಿತ ಕೈಗಾರಿಕ ತರಬೇತಿ ಸಂಸ್ಥೆಗಳ ಮೂಲಕ ಅರ್ಜಿಗಳನ್ನು ಮೇ 27 ರಿಂದ ಜೂನ್ 27ರವರೆಗೆ ಆನ್‍ಲೈನ್ ಮೂಲಕ ಇಲಾಖೆಯ http://ift.tt/2r3FHopಮತ್ತು http://ift.tt/2qjeeCg ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರ್ಕಾರಿ/ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಸಂಪರ್ಕಿಸಿ ಪಡೆಯಲು ಕೋರಿದೆ.

ಜೂನ್ 3ರಿಂದ ವಸತಿ ಶಾಲೆಗಳ ಪ್ರವೇಶ ಕೌನ್ಸೆಲಿಂಗ್
***************************************************
ಕಲಬುರಗಿ,ಮೇ.26.(ಕ.ವಾ.)-ಕಲಬುರಗಿ ಜಿಲ್ಲೆಯ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ 2017-18ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶಕ್ಕಾಗಿ ನಡೆಸಲಾದ ಪ್ರವೇಶ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಆಯ್ಕೆಯಾದ ಅಭ್ಯರ್ಥಿಗಳಿಗೆ 2017ರ ಜೂನ್ 3 ರಿಂದ 7ರವರೆಗೆ ಕಲಬುರಗಿ ನಗರದ ಸಿದ್ದಿ ಭಾಷಾ ದರ್ಗಾ ಹಿಂದುಗಡೆಯಿರುವ ಜಗತ್ ಪರಿಶಿಷ್ಟ ಜಾತಿ: ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಕಲಬುರಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್. ರಾಜಪ್ಪ ತಿಳಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಈಗಾಗಲೇ ಕೌನ್ಸೆಲಿಂಗಿಗೆ ಹಾಜರಾಗಲು ಸೂಚನಾ ಪತ್ರ ಅಂಚೆ ಮೂಲಕ ರವಾನಿಸಲಾಗಿದೆ. ಆಯ್ಕೆಯಾದ ಪ್ರವರ್ಗವಾರು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಖುದ್ದಾಗಿ ಪಾಲಕರೊಂದಿಗೆ ನಿಗದಿತ ದಿನಾಂಕದಂದು ಎಲ್ಲ ಮೂಲ ದಾಖಲಾತಿಗಳೊಂದಿಗೆ ನಿಗದಿತ ಸಮಯಕ್ಕೆ ಕಡ್ಡಾಯವಾಗಿ ಕೌನ್ಸೆಲಿಂಗ್ ಸ್ಥಳದಲ್ಲಿ ಹಾಜರಿರಬೇಕು. ನಿಗದಿತ ಸಮಯಕ್ಕೆ ಹಾಜರಾತಿ ಪತ್ರ ತಲುಪದೇ ಇದ್ದಲ್ಲಿ ನಿಗದಿತ ದಿನಾಂಕದಂದು ತಮ್ಮ ಹಾಲ್ ಟಿಕೇಟ್ ಮತ್ತು ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು. ವಿದ್ಯಾರ್ಥಿ/ವಿದ್ಯಾರ್ಥಿನಿಯರು ತಾವು ಪಡೆದ ಅಂಕಗಳನ್ನುwww.kreis.kar.nic.in ವೆಬ್‍ಸೈಟ್ ಮೂಲಕ ತಿಳಿದುಕೊಳ್ಳಬಹುದಾಗಿದೆ.
ಮೊದಲನೇ ಆಯ್ಕೆ ಪಟ್ಟಿಯ ಪ್ರವರ್ಗವಾರು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ವಿವರ ಇಂತಿದೆ. ಎಸ್.ಸಿ.: ವಿದ್ಯಾರ್ಥಿ-29 ಮತ್ತು ವಿದ್ಯಾರ್ಥಿನಿಯರು-17. ಎಸ್.ಟಿ.: ವಿದ್ಯಾರ್ಥಿ-07 ಮತ್ತು ವಿದ್ಯಾರ್ಥಿನಿಯರು-03. ಪ್ರವರ್ಗ-1.: ವಿದ್ಯಾರ್ಥಿ-52 ಮತ್ತು ವಿದ್ಯಾರ್ಥಿನಿಯರು-49. ಪ್ರವರ್ಗ-2ಎ.: ವಿದ್ಯಾರ್ಥಿ-51 ಮತ್ತು ವಿದ್ಯಾರ್ಥಿನಿಯರು-45. ಪ್ರವರ್ಗ 2ಬಿ: ವಿದ್ಯಾರ್ಥಿ 48 ಮತ್ತು ವಿದ್ಯಾರ್ಥಿನಿಯರು-39. ಪ್ರವರ್ಗ 3ಎ.: ವಿದ್ಯಾರ್ಥಿ-41 ಮತ್ತು ವಿದ್ಯಾರ್ಥಿನಿಯರು-39. ಪ್ರವರ್ಗ 3ಬಿ.: ವಿದ್ಯಾರ್ಥಿ-58 ಮತ್ತು ವಿದ್ಯಾರ್ಥಿನಿಯರು-55.
ಪ್ರವರ್ಗವಾರು ವಿದ್ಯಾರ್ಥಿಗಳ ಕೌನ್ಸೆಲಿಂಗ್ ದಿನಾಂಕ ಮತ್ತು ಸಮಯದ ವಿವರ ಇಂತಿದೆ. ಜೂನ್ 3ರಂದು ಬೆಳಿಗ್ಗೆ 10 ಗಂಟೆಗೆ ವಿಶೇಷ ವರ್ಗದ ವಿದ್ಯಾರ್ಥಿಗಳು ಮತ್ತು ದೈಹಿಕ ಅಂಗವಿಕಲರು. ಮಧ್ಯಾಹ್ನ 2 ಗಂಟೆಗೆ ಎಸ್.ಟಿ. ಬಾಲಕರು ಮತ್ತು ಬಾಲಕಿಯರು ಮತ್ತು ಪ್ರವರ್ಗ-1. ಜೂನ್ 4ರಂದು ಬೆಳಿಗ್ಗೆ 10 ಗಂಟೆಗೆ ಎಸ್.ಸಿ. ಬಾಲಕಿಯರು ಮತ್ತು ಮಧ್ಯಾಹ್ನ 2 ಗಂಟೆಗೆ ಎಸ್.ಸಿ. ಬಾಲಕಿಯರು. ಜೂನ್ 5ರಂದು ಬೆಳಿಗ್ಗೆ 10 ಗಂಟೆಗೆ ಎಸ್.ಸಿ. ಬಾಲಕರು ಮತ್ತು ಮಧ್ಯಾಹ್ನ 2 ಗಂಟೆಗೆ ಎಸ್.ಸಿ. ಬಾಲಕರು. ಜೂನ್ 6ರಂದು ಬೆಳಿಗ್ಗೆ 10 ಗಂಟೆಗೆ ಪ್ರವರ್ಗ-2ಎ, 2ಬಿ ಮತ್ತು ಮಧ್ಯಾಹ್ನ 2 ಗಂಟೆಗೆ ಪ್ರವರ್ಗ-3ಎ, 3ಬಿ. ಜೂನ್ 7ರಂದು ವೇಟಿಂಗ್ ಲಿಸ್ಟಿನಲ್ಲಿರುವ ಬಾಲಕ ಬಾಲಕಿಯರು ಭಾಗವಹಿಸಬಹುದಾಗಿದೆ.
ಹೆಚ್ಚುವರಿ ಪಟ್ಟಿಯಲ್ಲಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರವರ್ಗವಾರು ಸ್ಥಾನಗಳು ಲಭ್ಯವಿದ್ದಲ್ಲಿ ಮಾತ್ರ ಆದ್ಯತಾನುಸಾರ ಕೌನ್ಸಲಿಂಗ್‍ಗಾಗಿ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9538988452, 9741182727, 9448650647, 9986688865 ಮತ್ತು 8123270150ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಹೀಗಾಗಿ ಲೇಖನಗಳು News and photo Date: 26--05---2017
ಎಲ್ಲಾ ಲೇಖನಗಳು ಆಗಿದೆ News and photo Date: 26--05---2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News and photo Date: 26--05---2017 ಲಿಂಕ್ ವಿಳಾಸ https://dekalungi.blogspot.com/2017/05/news-and-photo-date-26-05-2017.html
0 Response to "News and photo Date: 26--05---2017"
ಕಾಮೆಂಟ್ ಪೋಸ್ಟ್ ಮಾಡಿ