News and photos Date: 27--05--2017

News and photos Date: 27--05--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News and photos Date: 27--05--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News and photos Date: 27--05--2017
ಲಿಂಕ್ : News and photos Date: 27--05--2017

ಓದಿ


News and photos Date: 27--05--2017

ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಸರ್ಕಾರ ಬದ್ಧ
*******************************************************
ಕಲಬುರಗಿ,ಮೇ.27.(ಕ.ವಾ.)-ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಡಾ. ನಂಜುಂಡಪ್ಪ ವರದಿಯನ್ವಯ ಗುರುತಿಸಿದ ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿರುವ ಅತ್ಯಂತ ಹಿಂದುಳಿದ ತಾಲೂಕುಗಳು ಸೇರಿದಂತೆ ಒಟ್ಟು 114 ತಾಲೂಕುಗಳ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳ ವಿಶೇಷ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಒದಗಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಶನಿವಾರ ಕಲಬುರಗಿಯಲ್ಲಿ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಬೋಧನಾ ಆಸ್ಪತ್ರೆ ಕಟ್ಟಡದ ಹಿಂಭಾಗದಲ್ಲಿ ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಿಂದ 80 ಹಾಸಿಗೆಗಳ ಸಾಮಥ್ರ್ಯದ ನವೀಕರಿಸಿದ ವಿ.ಟಿ.ಎಸ್.ಎಂ. ಫೆರಿಫರೆಲ್ ಕ್ಯಾನ್ಸರ್ ಕೇಂದ್ರದ ಹಾಗೂ ಲಿನಿಯರ್ ಎಕ್ಸೆಲರೇಟರ್ ಯಂತ್ರದ ಲೋಕಾರ್ಪಣೆ ಮತ್ತು ಇನ್ಫೋಸಿಸ್ ಫೌಂಡೇಶನ್‍ದಿಂದ ದೇಣಿಗೆಯಾಗಿ ನೀಡುತ್ತಿರುವ ಧರ್ಮಶಾಲೆಯ ಶಿಲ್ಯಾನಾಸ ನೆರವೇರಿಸಿ, ರಾಜ್ಯದ ಎಲ್ಲ ಪ್ರದೇಶ, ಜಾತಿ ಜನಾಂಗಕ್ಕೂ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಕಲ್ಪಿಸಬೇಕೆಂಬುದೇ ಸರ್ಕಾರದ ಪ್ರಮುಖ ಧ್ಯೇಯವಾಗಿದೆ ಎಂದರು.
ಹೈದ್ರಾಬಾದ್ ಕರ್ನಾಟಕ ಪ್ರದೇಶ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿರುವ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದ ಅಸಮಾನತೆ ಹಾಗೂ ತಾರತಮ್ಯ ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿಶೇಷ ಗಮನ ನೀಡಲಿದೆ. ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹಾಗೂ ಪದವಿಪೂರ್ವ ಕಾಲೇಜುಗಳನ್ನು ಮಂಜೂರು ಮಾಡುವಾಗ ಈ ಭಾಗಕ್ಕೆ ಪ್ರಥಮಾಧ್ಯತೆ ನೀಡಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಬಲವರ್ಧನೆಗೆ ಪ್ರಯತ್ನಿಸಲಾಗುವುದು. ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರಸಕ್ತ ಸಾಲಿನ 1500 ಕೋಟಿ ರೂ. ಸೇರಿದಂತೆ ಈವರೆಗೆ ಒಟ್ಟು 4500 ಕೋಟಿ ರೂ. ಅನುದಾನ ಒದಗಿಸಿದ್ದು, ಈ ಭಾಗದಲ್ಲಿನ ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೂ ವಿಶೇಷ ಅನುದಾನ ನೀಡಲಾಗುತ್ತಿದೆ ಎಂದು ನುಡಿದರು.
ಕ್ಯಾನ್ಸರ್ ಎಂದರೆ ಭಯಪಡುವ ರೋಗವಲ್ಲ. ಈಗ ಈ ರೋಗದ ಬಗ್ಗೆ ಅನೇಕ ಸಂಶೋಧನೆಗಳು ನಡೆದಿದ್ದÀಲ್ಲದೇ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ಲಭ್ಯವಿರುವುದರಿಂದ ಇದನ್ನು ಮುಂಚಿತವಾಗಿಯೇ ಗುರುತಿಸಿ ಚಿಕಿತ್ಸೆ ನೀಡಿದರೆ ಸಂಪೂರ್ಣವಾಗಿ ಗುಣಪಡಿಸಬಹುದು. ಸದ್ಯಕ್ಕೆ ಶೇ. 8ರಷ್ಟು ಕ್ಯಾನ್ಸರ್ ಬೆಳವಣಿಗೆ ಕಂಡು ಬಂದಿದೆ. ವಿಶೇಷವಾಗಿ ತಂಬಾಕು ಸೇವನೆಯ ಪ್ರತಿ 5 ಜನರಲ್ಲಿ ಒಬ್ಬರು ಈ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇದಕ್ಕೆಲ್ಲ ಆಹಾರ ಮತ್ತು ಜೀವನ ಪದ್ಧತಿಗಳು ಮೂಲ ಕಾರಣವಾಗಿದ್ದು, ಜನರಲ್ಲಿ ಹೆಚ್ಚಿನ ಜಾಗೃತಿ ಬರಬೇಕಾಗಿದೆ. “ಶೀಘ್ರ ಪತ್ತೆ, ಕ್ಯಾನ್ಸರ್ ನಾಪತ್ತೆ” ಎಂಬ ಘೋಷ ವಾಕ್ಯದ ಪ್ರಚಾರವನ್ನು ಈ ಭಾಗದ ಎಲ್ಲ
ಜಿಲ್ಲೆಗಳಲ್ಲಿ ವಿಶೇಷ ಅಭಿಯಾನದ ಮೂಲಕ ಕೈಗೊಳ್ಳಬೇಕು. ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿರುವ ಎಲ್ಲ ಅತ್ಯಾಧುನಿಕ ಚಿಕಿತ್ಸೆ ಸೌಲಭ್ಯಗಳು ಕಲಬುರಗಿಯಲ್ಲಿ ಇಂದು ಲೋಕಾರ್ಪಣೆ ಮಾಡಿದ ಕ್ಯಾನ್ಸರ್ ಆಸ್ಪತ್ರೆಯಲ್ಲಿಯೂ ಲಭ್ಯವಿದ್ದು, ಈ ಭಾಗದ ಜನರು ಇದರ ಪ್ರಯೋಜನ ಪಡೆಯಬೇಕು. ಕಲಬುರಗಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಇನ್ಫೋಸಿಸ್ ಸಂಸ್ಥೆಯಿಂದ ಪ್ರಾರಂಭಿಸಲಾದ ಧರ್ಮಶಾಲೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದರು.
ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿರುವ ತಾರತಮ್ಯವನ್ನು ಸರಿಪಡಿಸಲು ಸರ್ಕಾರ ವಿಶೇಷ ಗಮನ ಹರಿಸಬೇಕು. ಮೈಸೂರು ಭಾಗದಲ್ಲಿ ಪ್ರತಿ 15000 ಜನಸಂಖ್ಯೆಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದರೆ ಜನಸಂಖ್ಯೆಗೆ ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪ್ರತಿ 20000 ಜನಸಂಖ್ಯೆಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಅದೇ ರೀತಿ ಈ ಭಾಗದಲ್ಲಿ ಪದವಿಪೂರ್ವ ಕಾಲೇಜುಗಳ ಸಂಖ್ಯೆಯೂ ಕಡಿಮೆಯಿದೆ. ಇದನ್ನು ಸರಿಪಡಿಸಲು ಮುಖ್ಯಮಂತ್ರಿಗಳು ವಿಶೇಷ ಗಮನ ಹರಿಸಬೇಕೆಂದರು.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಮಾತನಾಡಿ, ಕಲಬುರಗಿ ನಗರದಲ್ಲಿ 80 ಹಾಸಿಗೆಗಳ ಪೂರ್ಣ ಪ್ರಮಾಣದ ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನವೀಕೃತ ಹಾಗೂ ಮೇಲ್ದರ್ಜೆಗೇರಿಸಿದ ವಿ.ಟಿ.ಎಸ್.ಎಂ. ಫೆರಿಫರಲ್ ಕ್ಯಾನ್ಸರ್ ಕೇಂದ್ರವನ್ನು 50 ಕೋಟಿ ರೂ. ವೆಚ್ಚದಿಂದ ಎರಡು ಹಂತಗಳಲ್ಲಿ ಮೇಲ್ದರ್ಜೆಗೇರಿಸಲಾಗಿದೆ. ಈ ಕೇಂದ್ರದಲ್ಲಿ ಎಲ್ಲ ತರಹÀದ ಕ್ಯಾನ್ಸರ್ ರೋಗಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಿ.ಪಿ.ಎಲ್. ಕುಟುಂಬಗಳಿಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕುಟುಂಬಗಳಿಗೆ ಶೇ. 70 ರಷ್ಟು ಮತ್ತು ಕಡಿಮೆ ಆದಾಯ ಹೊಂದಿದ ಕುಟುಂಬಗಳಿಗೆ ಶೇ. 50ರಷ್ಟು ರಿಯಾಯಿತಿಯಲ್ಲಿ ಚಿಕಿತ್ಸೆ ನೀಡಲಾಗುವುದು. ಇದರಿಂದ ಈ ಭಾಗದ ಆರು ಜಿಲ್ಲೆಗಳ ಹಾಗೂ ನೆರೆಯ ರಾಜ್ಯಗಳ ಬಡ ಕ್ಯಾನ್ಸರ್ ಹೊರ ರೋಗಿಗಳು ಅತ್ಯಾಧುನಿಕ ಚಿಕಿತ್ಸೆ ಪಡೆಯಲು ಅನುಕೂಲವಾಗಿದೆ. ಕಲಬುರಗಿ ನಗರದಲ್ಲಿ ಕಳೆದ ವರ್ಷ ಪ್ರಾರಂಭಿಸಲಾದ ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆಯಲ್ಲಿ ಈವರೆಗೆ 30000 ಹೃದ್ರೋಗಿಗಳಿಗೆ ಓಪಿಡಿ ಮತ್ತು 3200 ರೋಗಿಗಳಿಗೆ ಒಳರೋಗಿ ಚಿಕಿತ್ಸೆ ನೀಡಲಾಗಿದೆ. ಇದಲ್ಲದೇ 15000 ಜನರ ಇ.ಸಿ.ಜಿ. ತಪಾಸಣೆ ಮಾಡಲಾಗಿದೆಯಲ್ಲದೇ 50 ಜನರ ಓಪನ್ ಹಾರ್ಟ್ ಸರ್ಜರಿ ಮಾಡಲಾಗಿದೆ. ಇದೇ ಮಾದರಿಯಲ್ಲಿ ಕ್ಯಾನ್ಸರ್ ಆಸ್ಪತ್ರೆಯು ಸಹ ಜನಸ್ನೇಹಿಯಾಗಿ ಬೆಳವಣಿಗೆಯಾಗಲಿ. ರಾಜ್ಯ ಸರ್ಕಾರವು ಮೈಸೂರು ಮತ್ತು ಕಲಬುರಗಿಗಳಲ್ಲಿ ಟ್ರಾಮಾ ಸೆಂಟರ್ ಮಂಜೂರು ಮಾಡಿದ್ದು, ಬರುವ 6 ತಿಂಗಳೊಳಗೆ ಕಲಬುರಗಿಯಲ್ಲಿ ಟ್ರಾಮಾ ಸೆಂಟರ್ ಕಾರ್ಯ ಪ್ರಾರಂಭವಾಗಲಿದೆ. ಮೈಸೂರು, ಕಲಬುರಗಿ ಮತ್ತು ಬೆಳಗಾವಿಗಳಲ್ಲಿ ರಾಜ್ಯ ಸರ್ಕಾರ ಸೂಪರ್ ಸ್ಪೆಶಾಲಿಟಿ ಹಾಸ್ಟಿಟಲ್ ಪ್ರಾರಂಭಿಸಲಿದೆ ಎಂದು ಹೇಳಿದರು.
ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ್ ಅಧÀ್ಯಕ್ಷತೆ ವಹಿಸಿದ್ದರು. ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವ್ಹಿ.ಗುತ್ತೇದಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ವಿಧಾನಸಭಾ ಶಾಸಕರುಗಳಾದ ಡಾ. ಖಮರುಲ್ ಇಸ್ಲಾಂ, ಜಿ.ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಬಿ.ಜಿ. ಪಾಟೀಲ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಮಹಾನಗರ ಪಾಲಿಕೆ ಸದಸ್ಯ ವಿಶಾಲ ದರ್ಗಿ, ರಮಾನಂದ ಉಪಾಧ್ಯ ಹಾಗೂ ಇನ್ಫೋಸಿಸ್ ಫೌಂಡೇಶನ್ ಟ್ರಸ್ಟಿ ಬಿನೋದ್ ಹಂಪಾಪುರ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಅಲೋಕ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದರು.
ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಡಾ|| ಕೆ.ಎಸ್. ರವೀಂದ್ರನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು 1996ರಿಂದ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ರಾಜ್ಯದಲ್ಲಿರುವ ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ನ್ಯಾಚುರೋಪತಿ, ಯುನಾನಿ, ಹೋಮಿಯೋಪತಿ, ಫಾರ್ಮಸಿ, ನರ್ಸಿಂಗ್, ಫಿಜಿಯೋಥೆರಪಿ ಸೇರಿದಂತೆ ಒಟ್ಟು 650 ಕಾಲೇಜುಗಳು ವಿಶ್ವವಿದ್ಯಾಲಯಗಳೊಂದಿಗೆ ಅಫಿಲಿಯೇಶನ್ ಪಡೆದಿವೆ. ಕಲಬುರಗಿ ಕಂದಾಯ ವಿಭಾಗದ ಆರು ಜಿಲ್ಲೆಗಳಲ್ಲಿರುವ 9 ವೈದ್ಯಕೀಯ, 8 ದಂತ ವೈದ್ಯಕೀಯ, 8 ಆಯುರ್ವೇದ, 11 ಫಾರ್ಮಸಿ, 30 ನರ್ಸಿಂಗ್, ತಲಾ 1 ಫಿಜಿಯೋಥೆರಫಿ ಮತ್ತು ಹೋಮಿಯೋಪತಿ ಕಾಲೇಜುಗಳು ಸೇರಿದಂತೆ ಒಟ್ಟು 70 ಕಾಲೇಜುಗಳು
ವಿಶ್ವವಿದ್ಯಾಲಯದ ಅಫಿಲಿಯೇಶನ್‍ಗೆ ಒಳಪಟ್ಟಿವೆ. ರಾಜ್ಯ ಸರ್ಕಾರದ ಆದೇಶದನ್ವಯ ಕಲಬುರಗಿ ಮತ್ತು ಬೆಳಗಾವಿಗಳಲ್ಲಿ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಗಳನ್ನು 2002ರಲ್ಲಿಯೇ ಪ್ರಾರಂಭಿಸಲಾಗಿದೆ. ಈಗ ವಿಶ್ವವಿದ್ಯಾಲಯದ ಪ್ರಪ್ರಥಮ ಪ್ರಾದೇಶಿಕ ಕೇಂದ್ರದ ಕಟ್ಟಡ ಕಾಮಗಾರಿಗೆ ಕಲಬುರಗಿಯಲ್ಲಿ ಶಿಲಾನ್ಯಾಸ ಇಂದು ನೆರವೇರಿಸಲಾಗಿದೆ ಎಂದರು. ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕ ಡಾ|| ಕೆ.ಬಿ. ಲಿಂಗೇಗೌಡ ಸ್ವಾಗತಿಸಿದರು.

ಪರಿಶಿಷ್ಟರ ಶ್ರೇಯೋಭಿವೃದ್ಧಿಗಾಗಿ ಈ ವರ್ಷ 27702 ಕೋಟಿ ರೂ. ಮೀಸಲು
************************************************************************
ಕಲಬುರಗಿ,ಮೇ.27.(ಕ.ವಾ.)-ರಾಜ್ಯ ಸರ್ಕಾರ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಜನಸಂಖ್ಯೆಗೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿಡುವ ವಿಶೇಷ ಕಾಯ್ದೆಯನ್ನು ಜಾರಿಗೆ ತಂದಿದ್ದು, ಇದರನ್ವಯ ರಾಜ್ಯ ಸರ್ಕಾರ ಕಳೆದ ವರ್ಷ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ 19500 ಕೋಟಿ ರೂ. ಒದಗಿಸಿದ್ದು, 2017-18ನೇ ಸಾಲಿನ ಆಯವ್ಯಯದಲ್ಲಿ 27702 ಕೋಟಿ ರೂ. ಮೀಸಲಿಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಶನಿವಾರ ಕಲಬುರಗಿ ಇಂದಿರಾ ಸ್ಮಾರಕ ಭವನದ ಆವರಣದಲ್ಲಿ ಡಾ. ಬಾಬು ಜಗಜೀವನರಾಂ ಅವರ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿ, ರಾಜ್ಯದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗಿದ್ದು, ಈ ಸಮೀಕ್ಷಾ ವರದಿಯು ಬಂದ ಬಳಿಕ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ಎಲ್ಲ ಜಾತಿ, ವರ್ಗದವರ ಹಾಗೂ ಸಾಮಾಜಿಕ ನ್ಯಾಯದ ಪರವಾಗಿದೆ ಎಂದರು.
ಡಾ. ಬಾಬು ಜಗಜೀವನರಾಂ ದೇಶ ಕಂಡಂತಹ ಮಹಾನ್ ನಾಯಕರಲ್ಲೊಬ್ಬರು. ಅವರು ಸಮರ್ಥ ಆಡಳಿತಗಾರರಾಗಿ ಬಡ ಮತ್ತು ಶೋಷಿತರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದರು. ಅವರು ಜಾರಿಗೊಳಿಸಿದ ಹಸಿರು ಕ್ರಾಂತಿಯ ಬಳಿಕವೇ ಭಾರತವು ಆಹಾರ ಸ್ವಾವಲಂಬನೆ ಪಡೆಯಲು ಸಾಧ್ಯವಾಯಿತು ಎಂದರು.
ಮಾಜಿ ಲೋಕಸಭಾ ಸದಸ್ಯೆ ಮೀರಾ ಕುಮಾರ ವಿಶೇಷ ಆಹ್ವಾನಿತರಾಗಿ ಮಾತನಾಡಿ, ಡಾ. ಬಾಬು ಜಗಜೀವನರಾಂ ಅವರ ತತ್ವಾದರ್ಶಗಳು ಹಾಗೂ ವಿಚಾರ ಧಾರೆಗಳು ಇಂದಿಗೂ ಪ್ರಸ್ತುತವಾಗಿವೆ. ಬಡತನ ನಿರ್ಮೂಲನೆಯ ಹೋರಾಟ ನಿರಂತರವಾಗಿ ಮುಂದುವರೆಯಬೇಕು. ಭಾರತ ದೇಶವು ಮಹಾನ್ ದೇಶವಾಗಬೇಕಾದರೆ ಸಾಮಾಜಿಕ ಮತ್ತು ಆರ್ಥಿಕ ಶೋಷಣೆ ಹಾಗೂ ಜಾತಿ ವ್ಯವಸ್ಥೆ ನಿರ್ಮೂಲನೆಯಾಗಬೇಕೆಂದು ನುಡಿದರು.
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಡಾ. ಬಾಬು ಜಗಜೀವನರಾಂ ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ಕೊಟ್ಟಿದ್ದು, ದೇಶದಲ್ಲಿ ಒಡೆದಾಳುವ ನೀತಿಯನ್ನು ಸಹಿಸಲಾಗದು. ದಲಿತರ ವಿರುದ್ಧ ನಡೆಯುತ್ತಿರುವ ಸಂಚನ್ನು ಹಾಗೂ ಅನ್ಯಾಯವನ್ನು ಒಗ್ಗಟ್ಟಿನಿಂದ ಹೋರಾಡುವ ಶಕ್ತಿ ತಂದುಕೊಳ್ಳಬೇಕಲ್ಲದೇ ಸ್ವಾಭಿಮಾನದಿಂದ ಬದುಕುವ ಕೆಲಸ ಮಾಡಬೇಕಾಗಿದೆ ಎಂದರು.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್.ಆಂಜನೇಯ, ಅವರ ಘನ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ್ ವಹಿಸಿದ್ದರು.
ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ವ್ಹಿ.ಗುತ್ತೇದಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭಾ ಶಾಸಕರುಗಳಾದ ಡಾ. ಖಮರುಲ್ ಇಸ್ಲಾಂ, ಜಿ.ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಇಕ್ಬಾಲ್ ಅಹ್ಮದ್ ಸರಡಗಿ, ಬಿ.ಜಿ. ಪಾಟೀಲ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಮಹಾನಗರ ಪಾಲಿಕೆ ಉಪ ಮಹಾಪೌರ್ ಪುತಲಿ ಬೇಗಂ, ಮಹಾನಗರ ಪಾಲಿಕೆ ಸದಸ್ಯರುಗಳಾದ ಜಗದೇವಿ ಮಲ್ಲು ಸೋಮ, ನಾಗರಾಜ ಗುಂಡಗುರ್ತಿ, ಗೀತಾ ರಾಜು ವಾಡೇಕರ್, ಡಾ|| ಬಾಜು ಜಗಜೀವರಾಂ ಪ್ರತಿಮೆ ಅನಾವರಣ ಸಮಿತಿ ಗೌರವಾಧ್ಯಕ್ಷ ಭೀಮಣ್ಣ ಟಿ. ಬಿಲವ್, ಅಧ್ಯಕ್ಷ ಶ್ಯಾಮ ನಾಟೀಕರ ಹಾಗೂ ಕಾರ್ಯಾಧ್ಯಕ್ಷ ರಾಜು ವಾಡೇಕರ್, ಮಾಜಿ ಮಹಾಪೌರರು ಹಾಗೂ ಡಾ|| ಬಾಜು ಜಗಜೀವರಾಂ ಪ್ರತಿಮೆ ಅನಾವರಣ ಸಮಿತಿ ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ವಿಶೇಷ ಆಹ್ವಾನಿತರಾಗಿದ್ದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್. ರಾಜಪ್ಪ ಸ್ವಾಗತಿಸಿದರು. ಮಹಿಪಾಲರೆಡ್ಡಿ ಮುನ್ನೂರ ಕಾರ್ಯಕ್ರಮ ನಿರೂಪಿಸಿದರು.

ವಸತಿ ರಹಿತ ಪ.ಜಾ./ಪ.ಪಂ. ಕುಟುಂಬಗಳಿಗೆ ಮನೆ ಜಾರಿಗೆ ಸೂಚನೆ
******************************************************************
ಕಲಬುರಗಿ,ಮೇ.27.(ಕ.ವಾ.)-ರಾಜ್ಯ ಸರ್ಕಾರವು 2017-18ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ವಸತಿ ರಹಿತ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಡಿ ಬೇಡಿಕೆ ಆಧಾರದ ಮೇಲೆ ಮನೆ ಯೋಜನೆ ಜಾರಿಗೆ ತರಲು ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮನೀಷ್ ಮೌದ್ಗಿಲ್ ಸೂಚಿಸಿದ್ದಾರೆ.
ಈಗಾಗಲೇ ಜಾರಿಯಲ್ಲಿರುವ ವಾರ್ಷಿಕ ಆದಾಯ ಮತ್ತು ಇತರೆ ಷರತ್ತುಗಳ ಪ್ರಕಾರ ಮತ್ತು ಹಾಗೂ ನಿಗಮದ ವೆಬ್‍ಸೈಟಿನ ತಂತ್ರಾಂಶದಲ್ಲಿ ಬೇಡಿಕೆ ಅನುಗುಣವಾಗಿ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಕಾರ್ಯಾದೇಶ ನೀಡಲು ಅವಕಾಶ ಕಲ್ಪಿಸಲಾಗಿದೆ. ಬೇಡಿಕೆ ಮೇಲೆ ಮನೆ ಒದಗಿಸುವ ಯೋಜನೆ ಇದಾಗಿರುವುದರಿಂದ ಯಾವುದೇ ಗುರಿಯ ಗರಿಷ್ಠ ಮಿತಿ ಇಲ್ಲದೇ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ನಿವೇಶನ ಹೊಂದಿದ ಎಲ್ಲ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳನ್ನು ಗ್ರಾಮ ಸಭೆ ಮೂಲಕ ಆಯ್ಕೆ ಮಾಡಲು ಸೂಚಿಸಿದೆ.
ಫಲಾನುಭವಿಗಳ ಆಯ್ಕೆ ಪಟ್ಟಿ ತಯಾರಿಸಿ ನಿಯಮಾನುಸಾರ ಅರ್ಹತೆ ಪರಿಶೀಲಿಸಿಕೊಂಡು ತಂತ್ರಾಂಶದಲ್ಲಿ ಅಳವಡಿಸಲು ಸೂಚಿಸಲಾಗಿದೆ. ಆಯ್ಕೆ ಹೆಸರುಗಳನ್ನು ಅಳವಡಿಸುವಾಗ ತಾನಾಗಿಯೇ ತಂತ್ರಾಂಶದಲ್ಲಿ ಹೆಚ್ಚುವರಿ ಗುರಿ ಸಿಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ತಮ್ಮ ಬೇಡಿಕೆಗನುಗುಣವಾಗಿ ಗ್ರಾಮ ಪಂಚಾಯಿತಿ/ ನಗರ ಸ್ಥಳೀಯ ಸಂಸ್ಥೆಗಳು ಅಥವಾ ಆನ್‍ಲೈನ್‍ನಲ್ಲಿ ಅಥವಾ ಮೊಬೈಲ್ ಆ್ಯಪ್‍ನಿಂದ ಅರ್ಜಿ ಸಲ್ಲಿಸಬಹುದಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ನಗರ ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು, ಪೌರಾಯುಕ್ತರು, ಆಯುಕ್ತರುಗಳ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವಂತೆ ಅವರು ಸೂಚಿಸಿದ್ದಾರೆ. ಸುತ್ತೋಲೆ ಪ್ರತಿಯನ್ನು ಎಲ್ಲ ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ನೀಡಲು ತಿಳಿಸಿದ್ದಾರೆ.

ಚಿತ್ತಾಪುರ ಐ.ಟಿ.ಐ. ಪ್ರವೇಶಕ್ಕೆ ಅರ್ಜಿ ಆಹ್ವಾನ
**********************************************
ಕಲಬುರಗಿ,ಮೇ.27.(ಕ.ವಾ.)-ಕಲಬುರಗಿ ಜಿಲ್ಲೆಯ ಚಿತ್ತಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಸಿ.ವಿ.ಟಿ. ಯೋಜನೆಯಡಿ 2017-18ನೇ ಸಾಲಿನ ತರಬೇತಿಗೆ ಲಭ್ಯವಿರುವ ಫಿಟ್ಟರ್-21 ಮತ್ತು ಎಲೆಕ್ಟ್ರಿಷಿಯನ್-21 ವೃತ್ತಿಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ಭೀಮಾಶಂಕರ ಹೊರಕೇರಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳು ಇಲಾಖೆಯ ತಿತಿತಿ.emಠಿಣಡಿg.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ತಮ್ಮ ಹತ್ತಿರದ ಯಾವುದೇ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಥವಾ ಇಂಟರ್‍ನೆಟ್ ಕೇಫೆಯಲ್ಲಿ ಆನ್‍ಲೈನ್ ಮೂಲಕ ಜೂನ್ 12ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಸಂಸ್ಥೆಯ ಪ್ರಾಚಾರ್ಯರು ಅಥವಾ ಮೊಬೈಲ್ ಸಂ. 7483060265ನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರಥಮ ಬಿ.ಎಫ್.ಎ. ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
************************************************
ಕಲಬುರಗಿ,ಮೇ.27.(ಕ.ವಾ.)-ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ 2017-18ನೇ ಶೈಕ್ಷಣಿಕ ಸಾಲಿನ ಪ್ರಥಮ ಮೂಲ ತರಗತಿ/ಪ್ರಥಮ ಬಿ.ಎಫ್.ಎ. ತರಗತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಮೂಲ ತರಗತಿಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ. ಆಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ್ದು, ಗರಿಷ್ಠ ವಯೋಮಿತಿ 22 ವರ್ಷದೊಳಗಿರಬೇಕು.
ಆಸಕ್ತರು ಪ್ರವೇಶದ ಬಗ್ಗೆ ಅರ್ಜಿ ಮತ್ತು ವಿವರಣಾ ಪತ್ರಿಕೆಯನ್ನು 230ರೂ. ನಗದು ಪಾವತಿಸಿ ಖುದ್ದಾಗಿ ಅಥವಾ 270 ರೂ.ಗಳ ಡಿ.ಡಿ.ಯನ್ನು ಡೀನ್, ಕಾವಾ, ಮೈಸೂರು ಇವರ ಹೆಸರಿನಲ್ಲಿ ಪಡೆದು ಅಂಚೆ ಮೂಲಕ ಕಳುಹಿಸಿ ಪಡೆದು ಭರ್ತಿ ಮಾಡಿ 2017ರ ಜೂನ್ 8ರೊಳಗಾಗಿ ಸಲ್ಲಿಸುವುದು. ಶುಲ್ಕ ಪಾವತಿಗೆ ಜೂನ್ 13 ಕೊನೆಯ ದಿನವಾಗಿದೆ.
ಜೂನ್ 9ರಂದು ಬೆಳಿಗ್ಗೆ 11 ಅರ್ಹತಾ ಪರೀಕ್ಷೆ ಹಾಗೂ ಅಂದು ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನವು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಾಲೇಜು, ಭಾರತ ಸರ್ಕಾರ ಪಠ್ಯಪುಸ್ತಕ ಮುದ್ರಣಾಲಯದ ಆವರಣ, ಸಿದ್ದಾರ್ಥನಗರ ಮೈಸೂರು-570011 ರಲ್ಲಿ ನಡೆಯಲಿದೆ. ಜೂನ್ 19ರಿಂದ ತರಗತಿಗಳು ಪ್ರಾರಂಭವಾಗಲಿವೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ವರ್ಗಾವಣೆ ಪತ್ರ, ಆದಾಯ ಪ್ರಮಾಣಪತ್ರಗಳ ಮೂಲ ದಾಖಲಾತಿಗಳ ಪರಿಶೀಲನೆಗಾಗಿ ಕಡ್ಡಾಯವಾಗಿ ಹಾಜರಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಾಲೇಜಿನ ಡೀನ್ ಅಥವಾ ದೂರವಾಣಿ ಸಂಖ್ಯೆ 0821-2438931ನ್ನು ಸಂಪರ್ಕಿಸಲು ಕೋರಿದೆ.

ಮೇ 29ರಿಂದ ಜೂನ್ 3ರವರೆಗೆ
*******************************
ಜಿಲ್ಲೆಯ ಎಲ್ಲ ಹೋಬಳಿಗಳಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ
**********************************************************
ಕಲಬುರಗಿ,ಮೇ.27.(ಕ.ವಾ.)-ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಗ್ರಾಮ ಮಟ್ಟದಲ್ಲಿ ರೈತರಿಗೆ ಅರಿವು ಮೂಡಿಸಲು ಕಲಬುರಗಿ ಜಿಲ್ಲೆಯ ಎಲ್ಲ 32 ಹೋಬಳಿಗಳಲ್ಲಿ 2017ರ ಮೇ 29 ರಿಂದ ಜೂನ್ 03ರವರೆಗೆ ಹೋಬಳಿ ಮಟ್ಟದಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಜಿಲಾನಿ ಹೆಚ್. ಮೊಕಾಶಿ ತಿಳಿಸಿದ್ದಾರೆ.
2017-18ನೇ ವರ್ಷವನ್ನು “ಜಲ ಜಾಗೃತಿ ವóರ್ಷ” ವೆಂದು ಆಚರಿಸಲಾಗುತ್ತಿದ್ದು, ಗ್ರಾಮ ಮಟ್ಟದಲ್ಲಿ ರೈತರಿಗೆ ಕೃಷಿಯಲ್ಲಿ ನೀರಿನ ಸದ್ಬಳಕೆ ಮತ್ತು ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ರೂಪಿಸಲಾಗಿದೆ. ಕೃಷಿ ಅಭಿಯಾನ ಕಾರ್ಯಕ್ರಮವನ್ನು ಹೋಬಳಿ ಮಟ್ಟದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗುವುದು. ಸದರಿ ಕಾರ್ಯಕ್ರಮದ ವಿವರ ಇಂತಿದೆ.
ಮೊದಲನೇ ಮತ್ತು ಎರಡನೇ ದಿನ: ಪ್ರತಿ ಹೋಬಳಿಯಲ್ಲಿ, ಗ್ರಾಮ ಪಂಚಾಯಿತಿವಾರು ಕಾರ್ಯತಂಡವನ್ನು ರಚಿಸಿಕೊಂಡು, ಆಯಾ ಪಂಚಾಯಿತಿಗೆ ಸಿದ್ಧಪಡಿಸಿದ ವೇಳಾಪಟ್ಟಿಯಂತೆ ಎಲ್ಲ ಗ್ರಾಮ ಪಂಚಾಯಿತಿಗಳು ಒಳಗೊಂಡಂತೆ ಎರಡು ದಿನಗಳ ಕಾಲ ತೀವ್ರ ಪ್ರಚಾರ ಕಾರ್ಯದ ಜೊತೆಗೆ ವಿಜ್ಞಾನಿಗಳು ಹಾಗೂ ಅಧಿಕಾರಿಗಳನ್ನೊಳಗೊಂಡ ತಂಡಗಳು ರೈತರೊಂದಿಗೆ ಸಂವಾದ ಕಾರ್ಯಕ್ರಮ ನಡೆಸುವರು. ಸದರಿ ಸಂವಾದ ಕಾರ್ಯಕ್ರಮದಲ್ಲಿ ರೈತರ ಸ್ಥಳೀಯ ಅವಶ್ಯಕತೆಗಳ ಮತ್ತು ಸಮಸ್ಯೆಗಳ ಬಗ್ಗೆ ಚರ್ಚೆಯನ್ನು ಕೈಗೊಳ್ಳುವುದರ ಮೂಲಕ ಅವುಗಳ ನಿವಾರಣೆಗೆ ಸ್ಥಳದಲ್ಲಿಯೇ ಪರಿಹಾರಕ್ಕೆ ಸೂಚಿಸಲಾಗುತ್ತದೆ.
ಮೂರನೇ ದಿನ: ಹೋಬಳಿ ಕೇಂದ್ರ ಸ್ಥಾನದಲ್ಲಿ ಕೃಷಿ ವಸ್ತು ಪ್ರದರ್ಶನ, ರೈತರ ಸಂವಾದದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಲು ಅನುವಾಗುವಂತೆ ಕೃಷಿ ಅಭಿಯಾನ ಸಮಾರಂಭವನ್ನು ಏರ್ಪಡಿಸಲಾಗುವುದು. ಆಯಾ ಹೋಬಳಿಗೆ ಸಂಬಂಧಿಸಿದಂತೆ ವಿವರವಾಗಿ ಬೆಳೆವಾರು ಸಮಸ್ಯೆಗಳ ಚರ್ಚೆ ಹಾಗೂ ಪರಿಹಾರವನ್ನು ಕ್ರಮ ಕೈಗೊಳ್ಳಲಾಗುವುದು. ಇದಲ್ಲದೆ ಇತರೆ ಕೃಷಿ ಸಂಬಂಧಿತ ಇಲಾಖೆಗಳಾದ ಪಶುಸಂಗೋಪನೆ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ರೈತರ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಸೂಚಿಸುವರು. ಇದರ ಜೊತೆಗೆ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ವಿವಿಧ ಯೋಜನೆಗಳನ್ನು ಬಿಂಬಿಸುವ ಪ್ರದರ್ಶಿಕೆಗಳು, ಮಾದರಿಗಳು, ಪ್ರಾತ್ಯಕ್ಷಿಕೆಗಳನ್ನು ಒಳಗೊಂಡ ಕೃಷಿ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗುತ್ತದೆ. ಜಿಲ್ಲೆಯ ಎಲ್ಲ ರೈತ ಬಾಂಧವರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮದ ಸಂಪೂರ್ಣ ಲಾಭ ಪಡೆಯಬೇಕೆಂದು ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.
ಜಿಲ್ಲಾ ಸಚಿವರಿಂದ ಕೃಷಿ ಅಭಿಯಾನಕ್ಕೆ ಚಾಲನೆ: ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ 2017ರ ಮೇ 29ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಯ ಮಿನಿ ವಿಧಾನಸೌಧದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಈ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕಲಬುರಗಿ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಮತ್ತು ರೈತರು ಉಪಸ್ಥಿತರಿರುವರು. ಅಂದು ಸಚಿವರು ಬೆಳಗಿನ 10.30 ಗಂಟೆಗೆ ಕೋಟನೂರ(ಡಿ)ಯಲ್ಲಿ ನೂತನವಾಗಿ ನಿರ್ಮಿಸಿರುವ ರೈತ ಸಂಪರ್ಕ ಕೇಂದ್ರದ ಕಟ್ಟಡವನ್ನು ಉದ್ಘಾಟಿಸುವರು.























2017-18ನೇ ಸಾಲಿನಲ್ಲಿ ಕಲಬುರಗಿ ತಾಲೂಕಿನ ರೈತರಿಗೆ ಸಮಗ್ರ ಕೃಷಿ ಮಾಹಿತಿಯನ್ನು ನೀಡುವ ಕೃಷಿ ಅಭಿಯಾನ ಮೂರು ದಿನದ ಕಾರ್ಯಕ್ರಮವು ಎರಡು ಹಂತದಲ್ಲಿ ಹಮ್ಮಿಕೊಂಡಿದ್ದು, ಮೊದಲನೇ ಹಂತದ ಕಾರ್ಯಕ್ರಮವು ಮೇ 29ರಿಂದ 31ರವರೆಗೆ ರೈತ ಸಂಪರ್ಕ ಕೇಂದ್ರ ಕಲಬುರಗಿ, ಪಟ್ಟಣ ಮತ್ತು ಮಹಾಗಾಂವ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಲ್ಲಿ ಪ್ರಚಾರ ಆಂದೋಲನ ಕೈಗೊಳ್ಳಲಾಗುವುದು. ಕಲಬುರಗಿ ತಾಲೂಕಿನ ಪ್ರಚಾರ ಆಂದೋಲನದ ಹಾಗೂ ಕೃಷಿ ವಸ್ತು ಪ್ರದರ್ಶನದ ದಿನಾಂಕ ಹಾಗೂ ಸ್ಥಳಗಳ ವಿವರ ಇಂತಿದೆ. ಮೇ 29 ರಿಂದ 31ರವರೆಗೆ: ಕಲಬುರಗಿ, ಮಹಾಗಾಂವ, ಪಟ್ಟಣ. ಜೂನ್ 1 ರಿಂದ 3ರವರೆಗೆ: ಫರತಾಬಾದ್, ಕಮಲಾಪುರ, ಅವರಾದ(ಬಿ).


ಹೀಗಾಗಿ ಲೇಖನಗಳು News and photos Date: 27--05--2017

ಎಲ್ಲಾ ಲೇಖನಗಳು ಆಗಿದೆ News and photos Date: 27--05--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News and photos Date: 27--05--2017 ಲಿಂಕ್ ವಿಳಾಸ https://dekalungi.blogspot.com/2017/05/news-and-photos-date-27-05-2017.html

Subscribe to receive free email updates:

0 Response to "News and photos Date: 27--05--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ