ಶೀರ್ಷಿಕೆ : ಜೂ. 11 ರಂದು ವಿಜಯಪುರದಲ್ಲಿ ಮಹಿಳಾ ಜಾಗೃತಿ ಹಾಗೂ ಕೌಶಲ್ಯಾಭಿವೃದ್ಧಿ ಬೃಹತ್ ಕಾರ್ಯಕ್ರಮ : ಕೊಪ್ಪಳ ಜಿಲ್ಲೆಯಿಂದ ಸುಮಾರು 5000 ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿ- ಬಸವರಾಜ ರಾಯರಡ್ಡಿ
ಲಿಂಕ್ : ಜೂ. 11 ರಂದು ವಿಜಯಪುರದಲ್ಲಿ ಮಹಿಳಾ ಜಾಗೃತಿ ಹಾಗೂ ಕೌಶಲ್ಯಾಭಿವೃದ್ಧಿ ಬೃಹತ್ ಕಾರ್ಯಕ್ರಮ : ಕೊಪ್ಪಳ ಜಿಲ್ಲೆಯಿಂದ ಸುಮಾರು 5000 ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿ- ಬಸವರಾಜ ರಾಯರಡ್ಡಿ
ಜೂ. 11 ರಂದು ವಿಜಯಪುರದಲ್ಲಿ ಮಹಿಳಾ ಜಾಗೃತಿ ಹಾಗೂ ಕೌಶಲ್ಯಾಭಿವೃದ್ಧಿ ಬೃಹತ್ ಕಾರ್ಯಕ್ರಮ : ಕೊಪ್ಪಳ ಜಿಲ್ಲೆಯಿಂದ ಸುಮಾರು 5000 ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿ- ಬಸವರಾಜ ರಾಯರಡ್ಡಿ
ಕೊಪ್ಪಳ ಜೂ. 01 (ಕರ್ನಾಟಕ ವಾರ್ತೆ): ವಿಜಯಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಜೂ. 11 ರಂದು ಅಕ್ಕಮಹಾದೇವಿ ಮಹಿಳಾ ವಿವಿ ಎಂದು ನಾಮಕರಣ ಮಾಡುವುದರ ಜೊತೆಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಮಹಿಳಾ ಜಾಗೃತಿ ಹಾಗೂ ಕೌಶಲ್ಯಾಭಿವೃದ್ಧಿ ಬೃಹತ್ ಕಾರ್ಯಕ್ರಮವನ್ನು ವಿಜಯಪುರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕೊಪ್ಪಳ ಜಿಲ್ಲೆಯ ಸುಮಾರು 5000 ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.
ವಿಜಯಪುರದಲ್ಲಿ ಜೂ. 11 ರಂದು ಆಯೋಜಿಸಲಾಗಿರುವ ಅಕ್ಕಮಹಾದೇವಿ ಮಹಿಳಾ ವಿವಿ ನಾಮಕರಣ, ಮಹಿಳಾ ಜಾಗೃತಿ ಹಾಗೂ ಕೌಶಲ್ಯಾಭಿವೃದ್ಧಿ ಬೃಹತ್ ಕಾರ್ಯಕ್ರಮ ಸಂಬಂಧ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳೆಯರಿಗೆ ಸಂಪೂರ್ಣ ಉಚಿತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕಲ್ಪಿಸುವುದು ನಮ್ಮ ಸರ್ಕಾರದ ಹೆಬ್ಬಯಕೆಯಾಗಿದೆ. ವಿಜಯಪುರ ಮಹಿಳಾ ವಿವಿ ಗೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡುವ ಸಂಬಂಧ ಜೂ. 11 ರಂದು ವಿಜಯಪುರದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಮಹಿಳಾ ಕೇಂದ್ರಿತ ಕಾರ್ಯಕ್ರಮ ಮಾಡುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ದಾವಣಗೆರೆ, ಚಿತ್ರದುರ್ಗ ಜಿಲ್ಲೆಯೂ ಸೇರಿದಂತೆ ಉತ್ತರ ಕರ್ನಾಟಕದ ಸುಮಾರು 13 ಜಿಲ್ಲೆಗಳ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ರಾಜ್ಯದ ಹಿರಿ,ಕಿರಿಯ ಸಾಹಿತಿಗಳು, ಸುಮಾರು 40 ಸ್ವಾಮೀಜಿಗಳು, ಸಮಾಜ ಸುಧಾರಕರುಗಳು, ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದ ಧಾರ್ಮಿಕ ಮುಖಂಡರುಗಳುಗಳನ್ನು ಆಹ್ವಾನಿಸಲಾಗಿದ್ದು, ಭಾಗವಹಿಸಲು ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮಹಿಳಾ ಸಾಹಿತಿಗಳು, ಸಾಧಕಿಯರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮದ ಸಂದರ್ಭದಲ್ಲಿ ಸಂಗೀತ, ಚಲನಚಿತ್ರ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕಿಯರಿಗೆ ಸನ್ಮಾನವನ್ನು ಆಯೋಜಿಸಲಾಗಿದೆ. ರಾಜ್ಯದ ಸುಮಾರು 20 ಸಚಿವರುಗಳು ಸಮಾರಂಭದಲ್ಲಿ ಪಾಲ್ಗೊಳ್ಳುವರು. ವಿಜಯಪುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದಕ್ಕಾಗಿ ಸುವ್ಯವಸ್ಥೆಯ 800 * 400 ಅಡಿ ಅಳತೆಯ ಬೃಹತ್ ಪೆಂಡಾಲ್ ಸಹಿತದ ವೇದಿಕೆಯನ್ನು ನಿರ್ಮಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.
ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ತಹಸಿಲ್ದಾರ್ ನೇತೃತ್ವದಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿಯನ್ನು ಎಲ್ಲ 13 ಜಿಲ್ಲೆಗಳಲ್ಲಿಯೂ ರಚಿಸಲಾಗಿದೆ. ಈ ಜಿಲ್ಲೆಗಳಿಂದ ಮಹಿಳೆಯರು ಪಾಲ್ಗೊಳ್ಳಲು ಸುಮಾರು 1300 ಬಸ್ ಗಳ ವ್ಯವಸ್ಥೆಯನ್ನು ಮಾಡಲಾಗಿದ್ದು, ವಿಶ್ವವಿದ್ಯಾನಿಲಯಗಳಿಂದ ಸುಮಾರು 300 ಬಸ್‍ಗಳ ವ್ಯವಸ್ಥೆ ಕೈಗೊಳ್ಳಲಾಗಿದೆ. ಕೊಪ್ಪಳ ಜಿಲ್ಲೆಯೂ ಸಹ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದು, ಜಿಲ್ಲೆಯಿಂದ ಸುಮಾರು 5000 ಮಹಿಳೆಯರು ಭಾಗವಹಿಸಲಿದ್ದಾರೆ. ಜಿಲ್ಲೆಯಿಂದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ., ತಾ.ಪಂ., ಜಿ.ಪಂ. ಸೇರಿದಂತೆ ಎಲ್ಲ ಮಹಿಳಾ ಜನಪ್ರತಿನಿಧಿಗಳು, ಪದವಿ ಕಾಲೇಜುಗಳ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಇದಕ್ಕಾಗಿ ಜಿಲ್ಲೆಯಿಂದ 80 ಬಸ್‍ಗಳ ವ್ಯವಸ್ಥೆ ಕೈಗೊಳ್ಳಲಾಗಿದೆ. ಜಿಲ್ಲೆಯಿಂದ ಕಾರ್ಯಕ್ರಮದಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಸಮನ್ವಯ ಸಮಿತಿ ಅಧಿಕಾರಿಗಳು ತಮಗೆ ವಹಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಬಸವರಾಜ ರಾಯರಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೌಶಲ್ಯಾಭಿವೃದ್ಧಿ ವಿವಿ ಇದೇ ವರ್ಷ ಪ್ರಾರಂಭ :
****************ಮಹಿಳೆಯರಿಗೆ ಎಲ್ಲ ಹಂತಗಳಲ್ಲಿ ಶಿಕ್ಷಣ ಉಚಿತವಾಗಿ ದೊರೆಯಬೇಕು ಎಂಬುದು ತಮ್ಮ ಬಯಕೆಯಾಗಿದ್ದು, ರಾಜ್ಯದಲ್ಲಿ ಇದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುತ್ತಿದೆ. ಇದರ ಜೊತೆಗೆ ಯುವ ಪೀಳಿಗೆಗೆ ಕೌಶಲ್ಯಾಭಿವೃದ್ಧಿ ತರಬೇತಿ ದೊರಕಿಸಬೇಕು ಎನ್ನುವುದು ಮುಖ್ಯಮಂತ್ರಿಗಳ ಮಹತ್ವಕಾಂಕ್ಷೆಯಾಗಿದೆ. ಈಗಾಗಲೆ ಈ ಯೋಜನೆ ಜಾರಿಗೊಳಿಸಲಾಗಿದೆ. ಸುಮಾರು 500 ಬಗೆಯ ಕೌಶಲ್ಯ ತರಬೇತಿಗೆ ಅವಕಾಶವಿದ್ದು, ಯುವ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ. ಇದನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ನೂತನವಾಗಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಈಗಾಗಲೆ ಕ್ರಮ ಕೈಗೊಂಡಿದ್ದು, ಇದೇ ವರ್ಷದಿಂದಲೇ ಪ್ರಾರಂಭಿಸಲು ಎಲ್ಲ ಅಗತ್ಯ ಕ್ರಮ ಜರುಗಿಸಲಾಗುವುದು. ಜಿಲ್ಲೆಯ ಯಲಬುರ್ಗಾ ತಾಲೂಕು ತಳಕಲ್‍ನಲ್ಲಿ ಇಂಜಿನಿಯರಿಂಗ್ ಕಾಲೇಜಿನ ಜೊತೆ, ಜೊತೆಗೆ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರ ಪ್ರಾರಂಭಿಸಲಾಗುವುದು. ಇದಕ್ಕಾಗಿ ಪ್ರತ್ಯೇಕವಾಗಿ 90 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳ ಕಟ್ಟಡ ಹಾಗೂ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಇದೇ ತಿಂಗಳು ಅಗತ್ಯ ಅನುದಾನ ಒದಗಿಸಲಾಗುವುದು. ರಾಜ್ಯದ ಉನ್ನತ ಶಿಕ್ಷಣ ಕಾಲೇಜುಗಳ ಮೂಲಭೂತ ಅಗತ್ಯಗಳಾದ ಗ್ರಂಥಾಲಯ, ಬೋಧನಾ ಕೊಠಡಿಗಳು, ಆಡಿಟೋರಿಯಂ ಹಾಲ್ ಮುಂತಾದ ಕಾರ್ಯಗಳಿಗೆ 3500 ಕೋಟಿ ರೂ. ನೆರವು ವಿಶ್ವಬ್ಯಾಂಕ್ ಒದಗಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರಥಮ ದರ್ಜೆ ಕಾಲೇಜುಗಳ ಪ್ರಾಚಾರ್ಯರು ಪಾಲ್ಗೊಂಡಿದ್ದರು.
ಹೀಗಾಗಿ ಲೇಖನಗಳು ಜೂ. 11 ರಂದು ವಿಜಯಪುರದಲ್ಲಿ ಮಹಿಳಾ ಜಾಗೃತಿ ಹಾಗೂ ಕೌಶಲ್ಯಾಭಿವೃದ್ಧಿ ಬೃಹತ್ ಕಾರ್ಯಕ್ರಮ : ಕೊಪ್ಪಳ ಜಿಲ್ಲೆಯಿಂದ ಸುಮಾರು 5000 ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿ- ಬಸವರಾಜ ರಾಯರಡ್ಡಿ
ಎಲ್ಲಾ ಲೇಖನಗಳು ಆಗಿದೆ ಜೂ. 11 ರಂದು ವಿಜಯಪುರದಲ್ಲಿ ಮಹಿಳಾ ಜಾಗೃತಿ ಹಾಗೂ ಕೌಶಲ್ಯಾಭಿವೃದ್ಧಿ ಬೃಹತ್ ಕಾರ್ಯಕ್ರಮ : ಕೊಪ್ಪಳ ಜಿಲ್ಲೆಯಿಂದ ಸುಮಾರು 5000 ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿ- ಬಸವರಾಜ ರಾಯರಡ್ಡಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 11 ರಂದು ವಿಜಯಪುರದಲ್ಲಿ ಮಹಿಳಾ ಜಾಗೃತಿ ಹಾಗೂ ಕೌಶಲ್ಯಾಭಿವೃದ್ಧಿ ಬೃಹತ್ ಕಾರ್ಯಕ್ರಮ : ಕೊಪ್ಪಳ ಜಿಲ್ಲೆಯಿಂದ ಸುಮಾರು 5000 ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿ- ಬಸವರಾಜ ರಾಯರಡ್ಡಿ ಲಿಂಕ್ ವಿಳಾಸ https://dekalungi.blogspot.com/2017/06/11-5000.html
0 Response to "ಜೂ. 11 ರಂದು ವಿಜಯಪುರದಲ್ಲಿ ಮಹಿಳಾ ಜಾಗೃತಿ ಹಾಗೂ ಕೌಶಲ್ಯಾಭಿವೃದ್ಧಿ ಬೃಹತ್ ಕಾರ್ಯಕ್ರಮ : ಕೊಪ್ಪಳ ಜಿಲ್ಲೆಯಿಂದ ಸುಮಾರು 5000 ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿ- ಬಸವರಾಜ ರಾಯರಡ್ಡಿ"
ಕಾಮೆಂಟ್ ಪೋಸ್ಟ್ ಮಾಡಿ