ಶೀರ್ಷಿಕೆ : ಜೂ. 15 ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ
ಲಿಂಕ್ : ಜೂ. 15 ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ
ಜೂ. 15 ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ
ಕೊಪ್ಪಳ, ಜೂ. 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಜೂ. 15 ರಿಂದ 22 ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಜೂ. 15 ರಿಂದ 22 ರವರೆಗೆ ಜಿಲ್ಲೆಯ 16 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಬೆ. 09 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ಎಸ್‍ಟಿಡಿ, ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು, ನಿಯೋಜಿತ ಶಿಕ್ಷಕರು, ಸಿಬ್ಬಂದಿ, ಜಾಗೃತ ದಳದವರನ್ನು ಹೊರತುಪಡಿಸಿ, ಉಳಿದವರ ಪ್ರವೇಶ ನಿಷೇಧಿಸಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರ ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ವೇಳಾಪಟ್ಟಿ :
*********ಜೂ. 15 ರಂದು ಪ್ರಥಮ ಭಾಷೆ- ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕøತ ಪರೀಕ್ಷೆಗಳು ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 12-30 ರ ವರೆಗೆ. ಜೂ. 16 ರಂದು ಕೋರ್ ಸಬ್ಜೆಕ್ಟ್- ಗಣಿತ ಹಾಗೂ ಸಮಾಜ ಶಾಸ್ತ್ರ ಪರೀಕ್ಷೆ ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 12-30 ರ ವರೆಗೆ. ಜೂ. 17 ರಂದು ಕೋರ್ ಸಬ್ಜೆಕ್ಟ್- ಎಲಿಮೆಂಟ್ಸ್ ಆಫ್ ಇಂಜಿನಿಯರಿಂಗ್ ಪರೀಕ್ಷೆ ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 12-30 ರ ವರೆಗೆ, ಇಂಜಿನಿಯರಿಂಗ್ ಡ್ರಾಯಿಂಗ್ ಪರೀಕ್ಷೆ ಮಧ್ಯಾಹ್ನ 02 ರಿಂದ ಸಂಜೆ 5-15 ರ ವರೆಗೆ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪರೀಕ್ಷೆ ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 12-45 ರ ವರೆಗೆ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ ಪರೀಕ್ಷೆ ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 12-45 ರ ವರೆಗೆ., ಅರ್ಥಶಾಸ್ತ್ರ ಪರೀಕ್ಷೆ ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 12-30 ರ ವರೆಗೆ. ಜೂನ್. 19 ರಂದು ಕೋರ್ ಸಬ್ಜೆಕ್ಟ್- ಸಮಾಜ ವಿಜ್ಞಾನ ಪರೀಕ್ಷೆ ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 12-30 ರ ವರೆಗೆ. ಜೂನ್. 20 ರಂದು ದ್ವಿತೀಯ ಭಾಷೆ- ಇಂಗ್ಲೀಷ್ ಹಾಗೂ ಕನ್ನಡ ಪರೀಕ್ಷೆ ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 12-00 ರ ವರೆಗೆ. ಜೂನ್. 21 ರಂದು ಕೋರ್ ಸಬ್ಜೆಕ್ಟ್- ವಿಜ್ಞಾನ ಪರೀಕ್ಷೆ ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 12-30 ರ ವರೆಗೆ, ರಾಜ್ಯಶಾಸ್ತ್ರ ಪರೀಕ್ಷೆ ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 12-30 ರ ವರೆಗೆ, ಕರ್ನಾಟಕ ಸಂಗೀತ/ ಹಿಂದುಸ್ಥಾನಿ ಸಂಗೀತ ಪರೀಕ್ಷೆ ಮಧ್ಯಾಹ್ನ 02 ರಿಂದ ಸಂಜೆ 5-15 ರ ವರೆಗೆ. ಜೂನ್. 22 ರಂದು ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕøತ, ಕೊಂಕಣಿ ಹಾಗೂ ತುಳು ಪರೀಕ್ಷೆ ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 12-00 ರ ವರೆಗೆ ಮತ್ತು ಎನ್.ಎಸ್.ಕ್ಯೂ.ಎಫ್ ಪರೀಕ್ಷೆ- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ & ವೆಲ್‍ನೆಸ್ ಪರೀಕ್ಷೆ ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 11-45 ರ ವರೆಗೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಜೂ. 15 ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ
ಎಲ್ಲಾ ಲೇಖನಗಳು ಆಗಿದೆ ಜೂ. 15 ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 15 ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ ಲಿಂಕ್ ವಿಳಾಸ https://dekalungi.blogspot.com/2017/06/15.html
0 Response to "ಜೂ. 15 ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ"
ಕಾಮೆಂಟ್ ಪೋಸ್ಟ್ ಮಾಡಿ