ಶೀರ್ಷಿಕೆ : ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಲಿಂಕ್ : ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಕೊಪ್ಪಳ, ಜೂ. 12 (ಕರ್ನಾಟಕ ವಾರ್ತೆ): ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಕ್ಕೆ ಸೇರಿದ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ.2.50 ಲಕ್ಷ, ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷಗಳ ಮಿತಿಯಲ್ಲಿರಬೇಕು. ಆನ್‍ಲೈನ್ ಅರ್ಜಿಯಲ್ಲಿ ಎಸ್.ಎಸ್.ಎಲ್.ಸಿ ರಿಜಿಸ್ಟರ್ ಸಂಖ್ಯೆ, ಪಾಸಾದ ವರ್ಷ, ಹುಟ್ಟಿದ ದಿನಾಂಕವನ್ನು ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿರುವಂತೆ ನಮೂದಿಸಬೇಕು. ವಿದ್ಯಾರ್ಥಿ ಪ್ರವೇಶ ಪಡೆದಿರುವ ಕಾಲೇಜು, ತಾಲೂಕು, ಜಿಲ್ಲೆ, ವಿಶ್ವವಿದ್ಯಾನಿಲಯ, ಬೋರ್ಡ್/ ಮಂಡಳಿ, ಪ್ರವೇಶದ ವಿಧಾನ ಕೋರ್ಸಿನ ಹಾಗೂ ಪ್ರವೇಶದ ವಿವರ ಮತ್ತು ಹಿಂದಿನ ತರಗತಿಯಲ್ಲಿ ಪಡೆದ ಅಂಕಗಳ ವಿವರವನ್ನು ಸಲ್ಲಿಸಬೇಕು. ಇದುವರೆಗೆ ಫಲಿತಾಂಶ ಪ್ರಕಟಗೊಳ್ಳದೇ ಇರುವ ಕೋರ್ಸುಗಳ ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್ ಅರ್ಜಿಯಲ್ಲಿ “ಕಂಪ್ಲೇಂಟ ರೀಜಲ್ಟ್ ಅವೈಟೆಟ್” ಬಟನ್ ಕ್ಲಿಕ್ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಫಲಿತಾಂಶ ಬಂದ ತಕ್ಷಣವೇ ಅರ್ಜಿಯ ಇನ್ನೊಂದು ಪ್ರತಿಯೊಂದಿಗೆ ಅಂಕಪಟ್ಟಿಯನ್ನು ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಛೇರಿಗೆ ತಲುಪಿಸಿ ಸ್ವೀಕೃತಿ ಪಡೆಯಬೇಕು.
ವಿದ್ಯಾರ್ಥಿ ಪ್ರವೇಶ ಪಡೆದಿರುವ ಕಾಲೇಜಿನಿಂದ ಸ್ವಂತ ಸ್ಥಳಕ್ಕೆ ಕನಿಷ್ಠ 5 ಕಿ.ಮೀ ಅಂತರ ಇರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿ ಸಂಖ್ಯೆಯನ್ನು ನಮೂದಿಸಿ, “ವೀವ್ ಬಟನ್” ಕ್ಲಿಕ್ ಮಾಡಿ, ಪಡೆದಿರುವ ಪ್ರಮಾಣ ಪ್ರದಲ್ಲಿರುವ ಅಂಕಿ ಅಂಶಗಳಂತೆ ಇರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ಐಎಫ್‍ಎಸ್‍ಸಿ ಕೋಡ್ ಹೊಂದಿದ ರಾಷ್ಟ್ರೀಕೃತ ಬ್ಯಾಂಕ್ ಖಾತೆ ಸಂಖ್ಯೆ, ಪತ್ರ ವ್ಯವಹಾರಕ್ಕಾಗಿ ಖಾಯಂ ವಿಳಾಸ, ಮೊಬೈಲ್ ಸಂಖ್ಯೆ ಇ-ಮೇಲ್ ಇತ್ಯಾದಿ ವಿವರಗಳನ್ನು ನಮೂದುಸಬೇಕು. http://ift.tt/1pXtg5j ನಲ್ಲಿ ಆನ್‍ಲೈನ್ ಮೂಲಕ ಜುಲೈ. 12 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೈಬ್ ಸೈಟ್‍ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwhosteladmissinon@gmail.com ಗೆ ಇ-ಮೇಲ್ ಮುಖಾತರ ಅಥವಾ ಜಿಲ್ಲಾ/ ತಾಲೂಕ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಆನ್‍ಲೈನ್ ಅರ್ಜಿಯ ಪ್ರತಿ ಹಾಗೂ ಅಪ್‍ಲೋಡ್ ಮಾಡಲಾದ ದಾಖಲಾತಿಗಳ ಸ್ವಯಂ ದೃಢೀಕೃತ ಪ್ರತಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಶುಂಪಾಲಕರಿಂದ ದೃಢೀಕರಿಸಿ, ಸಂಬಂಧಪಟ್ಟ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಜುಲೈ. 15 ರೊಳಗಾಗಿ ಕಡ್ಡಾಯವಾಗಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು ಎಂದು ಕೊಪ್ಪಳ ತಾಲೂಕ ಹಿಂದುಳಿದ ವರ್ಗಗಳ ವಿಸ್ತೀರ್ಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_12.html
0 Response to "ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ