ಶೀರ್ಷಿಕೆ : ವೈದ್ಯಕೀಯ/ ಶಸ್ತ್ರ ಚಿಕಿತ್ಸೆಗೆ ಸಹಾಯ ಧನ : ಅರ್ಜಿ ಆಹ್ವಾನ
ಲಿಂಕ್ : ವೈದ್ಯಕೀಯ/ ಶಸ್ತ್ರ ಚಿಕಿತ್ಸೆಗೆ ಸಹಾಯ ಧನ : ಅರ್ಜಿ ಆಹ್ವಾನ
ವೈದ್ಯಕೀಯ/ ಶಸ್ತ್ರ ಚಿಕಿತ್ಸೆಗೆ ಸಹಾಯ ಧನ : ಅರ್ಜಿ ಆಹ್ವಾನ
ಕೊಪ್ಪಳ, ಜೂ. 01 (ಕರ್ನಾಟಕ ವಾರ್ತೆ): ಕೊಪ್ಪಳ ನಗರಸಭೆಯಿಂದ ಪ್ರಸಕ್ತ ಸಾಲಿನಲ್ಲಿ ಶೇ.24.10 ಹಾಗೂ ಶೇ.7.25ರ ಯೋಜನೆ ನಗರಸಭೆ ನಿಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಬಡ ಜನರ ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ವೈದ್ಯಕೀಯ/ ಶಸ್ತ್ರ ಚಿಕಿತ್ಸೆಗೆ ಸಹಾಯಧನ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊಪ್ಪಳ ನಗರ ವಾಸಿಯಾಗಿರುವ ಬಗ್ಗೆ ಕುಟುಂಬ ಪಡಿತರ ಚೀಟಿ, ಆಧಾರ್ ಕಾರ್ಡ, ಚುನಾವಣಾ ಆಯೋಗದ ಗುರುತಿನ ಚೀಟಿ ಲಗತ್ತಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ನೀರಿನ ಕರ ಹಾಗೂ ಚಾಲ್ತಿ ಸಾಲಿನ ಆಸ್ತಿಕರ ಪಾವತಿಸಿದ ರಶೀದಿ, ನಮೂನೆ-3ನ್ನು ಲಗತ್ತಿಸಬೇಕು. ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿರುವ ಬಗ್ಗೆ ಯಶಸ್ವಿನಿ ಯೋಜನೆ ಅಡಿಯಲ್ಲಿ ನಿಗದಿ ಪಡಿಸಿದ ಆಸ್ಪತ್ರೆಯಲ್ಲಿ ತೋರಿಸಿದ ದಾಖಲಾತಿಗಳ ದೃಢೀಕೃತ ಪ್ರತಿಗಳನ್ನು ಜಿಲ್ಲಾ ಆಸ್ಪತ್ರೆಯಿಂದ ದೃಢೀಕರಿಸಿ, ರೋಗಿಯ ಪಾಸ್‍ಪೋರ್ಟ ಅಳತೆಯ 2 ಭಾವಚಿತ್ರ ಲಗತ್ತಿಸಿ ಜೂ. 30 ರೊಳಗಾಗಿ ಸಲ್ಲಿಸಬೇಕು ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ವೈದ್ಯಕೀಯ/ ಶಸ್ತ್ರ ಚಿಕಿತ್ಸೆಗೆ ಸಹಾಯ ಧನ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ವೈದ್ಯಕೀಯ/ ಶಸ್ತ್ರ ಚಿಕಿತ್ಸೆಗೆ ಸಹಾಯ ಧನ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವೈದ್ಯಕೀಯ/ ಶಸ್ತ್ರ ಚಿಕಿತ್ಸೆಗೆ ಸಹಾಯ ಧನ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_13.html
0 Response to "ವೈದ್ಯಕೀಯ/ ಶಸ್ತ್ರ ಚಿಕಿತ್ಸೆಗೆ ಸಹಾಯ ಧನ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ