ಶೀರ್ಷಿಕೆ : ಗ್ರಾಮ ಪಂಚಾಯತ್ ಉಪಚುನಾವಣೆ : ಮದ್ಯ ಮಾರಾಟ ನಿಷೇಧ
ಲಿಂಕ್ : ಗ್ರಾಮ ಪಂಚಾಯತ್ ಉಪಚುನಾವಣೆ : ಮದ್ಯ ಮಾರಾಟ ನಿಷೇಧ
ಗ್ರಾಮ ಪಂಚಾಯತ್ ಉಪಚುನಾವಣೆ : ಮದ್ಯ ಮಾರಾಟ ನಿಷೇಧ
ಕೊಪ್ಪಳ, ಜೂ. 14 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೆನಕನಾಳ, ಹನಮಸಾಗರ ಮತ್ತು ಹಿರೇಗೊಣ್ಣಾಗರ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರೆವಾಗಿರುವ ಸದಸ್ಯ ಸ್ಥಾನಗಳಿಗೆ ಜೂ. 16 ರಿಂದ ಜುಲೈ. 05 ರವರೆಗೆ ಉಪಚುನಾವಣೆ ನಡೆಯಲಿದ್ದು, ಗ್ರಾ.ಪಂ. ವ್ಯಾಪ್ತಿಯಲ್ಲಿ ಮದ್ಯ ಮಾರಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 308ಎಎ ಮತ್ತು 308ಎಬಿ ರನ್ವಯ ಚುನಾವಣಾ ವೇಳಾಪಟ್ಟಿ ಘೋಷಿಸಿದೆ. ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೂ. 16 ರ ಮಧ್ಯರಾತ್ರಿಯಿಂದ ಜುಲೈ. 05 ರ ಮಧ್ಯರಾತ್ರಿವರೆಗೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಮದ್ಯ ಮಾರಾಟವನ್ನು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಕುಷ್ಟಗಿ ತಾಲೂಕಿನ ಬೆನಕನಾಳ, ಹನಮಸಾಗರ ಮತ್ತು ಹಿರೇಗೊಣ್ಣಾಗರ ಗ್ರಾಮ ಪಂಚಾಯಿತಿಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ನಿಷೇಧಿತ ಅವಧಿಯಲ್ಲಿ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚಬೇಕು. ಹಾಗೂ ಮೊಹರು ಮಾಡಿ ಅದರ ಕೀಯನ್ನು ಅಧಿಕಾರ ವ್ಯಾಪ್ತಿಯುಳ್ಳ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸಬೇಕು. ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಯಾರಾದರೂ ಮದ್ಯವನ್ನು ಸ್ವಾಧೀನದಲ್ಲಿಟ್ಟುಕೊಂಡಿರುವುದು ಅಥವಾ ಮದ್ಯವನ್ನು ಸೇವಿಸಿ ಬೀದಿಯಲ್ಲಿ ರಂಪಾಟ ಮಾಡುವುದು ಕಂಡು ಬಂದರೆ ಮುನ್ನೆಚ್ಚರಿಕೆ ಕ್ರಮವಾಗಿ ಚುನಾವಣೆ ಮುಕ್ತಾಯವಾಗುವವರೆಗೆ ಅಂತಹವರನ್ನು ಕಸ್ಟಡಿಯಲ್ಲಿ ಇಡಲಾಗುವುದು.
ಈ ಸಂಬಂಧಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗ್ರಾಮ ಪಂಚಾಯತ್ ಉಪಚುನಾವಣೆ : ಮದ್ಯ ಮಾರಾಟ ನಿಷೇಧ
ಎಲ್ಲಾ ಲೇಖನಗಳು ಆಗಿದೆ ಗ್ರಾಮ ಪಂಚಾಯತ್ ಉಪಚುನಾವಣೆ : ಮದ್ಯ ಮಾರಾಟ ನಿಷೇಧ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗ್ರಾಮ ಪಂಚಾಯತ್ ಉಪಚುನಾವಣೆ : ಮದ್ಯ ಮಾರಾಟ ನಿಷೇಧ ಲಿಂಕ್ ವಿಳಾಸ https://dekalungi.blogspot.com/2017/06/blog-post_14.html
0 Response to "ಗ್ರಾಮ ಪಂಚಾಯತ್ ಉಪಚುನಾವಣೆ : ಮದ್ಯ ಮಾರಾಟ ನಿಷೇಧ"
ಕಾಮೆಂಟ್ ಪೋಸ್ಟ್ ಮಾಡಿ