ಶೀರ್ಷಿಕೆ : ಮದರಸಾಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣಕ್ಕೆ ಅರ್ಜಿ ಆಹ್ವಾನ
ಲಿಂಕ್ : ಮದರಸಾಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣಕ್ಕೆ ಅರ್ಜಿ ಆಹ್ವಾನ
ಮದರಸಾಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, ಜೂ. 03 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ಮದರಸಾಗಳಿಗೆ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅನುದಾನ ಬಿಡುಗಡೆ ಮಾಡಲು ಮುಸ್ಲಿಂ ಮದರಸಾಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಅರ್ಹ ಮದರಸಾಗಳ ಆಡಳಿತ ಮಂಡಳಿಗಳು ರಾಜ್ಯದ ಯಾವುದೇ ನೋಂದಾಯಿತ ಕಾಯ್ದೆಯಡಿಯಲ್ಲಿ, ನೋಂದಾಯಿತವಾಗಿರಬೇಕು. ಹಾಗೂ ಪ್ರಮುಖ ಮದರಸಾಗಳಲ್ಲಿ ಒಂದಾಗಿರಬೇಕು. ಅಥವಾ ರಾಷ್ಟ್ರೀಯ ಮಟ್ಟದ ಇತರೆ ಸಂಸ್ಥೆಗಳಲ್ಲಿ ಸದಸ್ಯತ್ವವನ್ನು (ಅಪ್ಲಿಕೇಶನ್/ ರಿಕಗ್ನೈಜ್ಡ್) ಹೊಂದಿರಬೇಕು. ಅಥವಾ ನೋಂದಾಯಿತವಾಗಿರಬೇಕು. ಈ ಸಂಸ್ಥೆ ಅಥವಾ ಸಂಘಗಳು ನೋಂದಾಯಿತಗೊಂಡು ಮೂರು ವರ್ಷಗಳ ಅವಧಿಯನ್ನು ಪೂರೈಸಿರಬೇಕು. ಕನಿಷ್ಠ 25 ವಿದ್ಯಾರ್ಥಿಗಳ ದಾಖಲಾತಿಗಳನ್ನು ಹೊಂದಿದ, ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಎಸ್.ಪಿ.ಕ್ಯೂ.ಇ.ಎಂ ಮತ್ತು ಐ.ಡಿ.ಎಂ.ಐ ನಿಂದ ಅನುದಾನ ಪಡೆಯದ ಮುಸ್ಲಿಂ ಮದರಸಾ ನಡೆಸುತ್ತಿರುವ ಸಂಸ್ಥೆಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ವ್ಯವಸ್ಥಾಪಕ ಮಂಡಳಿಯವರು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿಗದಿತ ನಮೂನೆಯ ಅರ್ಜಿಗಳನ್ನು ಉಚಿತವಾಗಿ ಪಡೆದು ಜೂ. 30 ರೊಳಗಾಗಿ ಸಲ್ಲಿಸಬಹುದು.
ಕೊಪ್ಪಳ ಜಿಲ್ಲೆಯಲ್ಲಿನ ಮದರಸಾಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅರ್ಹ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಿಸಿದ್ದು, ಮದರಸಾದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎನ್‍ಐಓಎಸ್/ ಐಜಿಎನ್‍ಓಯು/ ಭಾರತ/ ಕರ್ನಾಟಕ ರಾಜ್ಯದ ಶಾಸನ ಬಧ್ದ್ದ ಅಂಗೀಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ದೂರ ಶಿಕ್ಷಣ ಕೋರ್ಸ ಪಡೆಯುತ್ತಿರುವ ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಡಿಗ್ರಿ/ ಪಿ.ಜಿ ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮತ್ತು ವಿದ್ಯಾರ್ಥಿವೇತನ ನೀಡಲಾಗುವುದು. ಆಲಿಮ್, ಫಾಝಿಲ್, ಹಾಫೀಜ್, ನಾಜಿರಾ, ಮೌಲ್‍ವಿ, ಮುಫ್ತಿ ಮತ್ತು ಇತರೆ ತತ್ಸಮಾನ ಕೋರ್ಸಗಳಲ್ಲಿ ವಿದ್ಯಾಬ್ಯಾಸ ಮಾಡುತ್ತಿರುವ ಮದರಸಾದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ ವಿದ್ಯಾರ್ಥಿವೇತನ ರೂ. 6000/- ನೀಡಲಾಗುವುದು.
ಮದರಸಾದಲ್ಲಿ ಓದುತ್ತಿರುವ ವಿದ್ಯಾರ್ಥಿಯು ಸರ್ಕಾರದಿಂದ ಇತರೆ ಯಾವುದೇ ವಿದ್ಯಾರ್ಥಿವೇತನವನ್ನು ಪಡೆದಿರಬಾರದು. ಈ ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿಯು ಮದರಸಾದಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ ವಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ http://ift.tt/2qNawkv ನಲ್ಲಿ ಮಾಹಿತಿಯನ್ನು ಪಡೆಯಬಹುದು ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಮದರಸಾಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣಕ್ಕೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಮದರಸಾಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣಕ್ಕೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮದರಸಾಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣಕ್ಕೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_29.html
0 Response to "ಮದರಸಾಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣಕ್ಕೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ