ಸ್ವಚ್ಛ ಭಾರತ ಮಿಷನ್‍ನಡಿ ಶೌಚಾಲಯ ನಿರ್ಮಾಣ : ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ

ಸ್ವಚ್ಛ ಭಾರತ ಮಿಷನ್‍ನಡಿ ಶೌಚಾಲಯ ನಿರ್ಮಾಣ : ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸ್ವಚ್ಛ ಭಾರತ ಮಿಷನ್‍ನಡಿ ಶೌಚಾಲಯ ನಿರ್ಮಾಣ : ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸ್ವಚ್ಛ ಭಾರತ ಮಿಷನ್‍ನಡಿ ಶೌಚಾಲಯ ನಿರ್ಮಾಣ : ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ
ಲಿಂಕ್ : ಸ್ವಚ್ಛ ಭಾರತ ಮಿಷನ್‍ನಡಿ ಶೌಚಾಲಯ ನಿರ್ಮಾಣ : ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ

ಓದಿ


ಸ್ವಚ್ಛ ಭಾರತ ಮಿಷನ್‍ನಡಿ ಶೌಚಾಲಯ ನಿರ್ಮಾಣ : ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ


ಕೊಪ್ಪಳ, ಜೂ. 03 (ಕರ್ನಾಟಕ ವಾರ್ತೆ): ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಅತಿ ಹೆಚ್ಚು ವೈಯಕ್ತಿಕ ಶೌಚಾಲಯಗಳನ್ನು ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಿಸಲು ಶ್ರಮಿಸಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕೊಪ್ಪಳ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಹಾಗೂ ತಾಲೂಕ ಮಟ್ಟದಲ್ಲಿ ಪ್ರಶಸ್ತಿಯನ್ನು ನೀಡಲಾಗಿದೆ.
     ಗ್ರಾಮೀಣಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಗ್ರಾ.ಪಂ. ಪಿಡಿಒ, ಕಾರ್ಯದರ್ಶಿ, ತಾಂತ್ರಿಕ ಸಹಾಯಕರು ಮತ್ತು ಗಣಕಯಂತ್ರ ನಿರ್ವಾಹಕರಿಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಗಾರದ ಸಂದರ್ಭದಲ್ಲಿ ಪ್ರಶಸ್ತಿ ಪಡೆದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಒ ಗಳಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು.
    ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತೀ ಹೆಚ್ಚು ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿದ್ದನ್ನು ಪರಿಗಣಿಸಿ ಕೊಪ್ಪಳ ಜಿಲ್ಲೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಡಿಸೆಂಬರ್-2016, ಜನೇವರಿ, ಫೆಬ್ರವರಿ ಹಾಗೂ ಮಾರ್ಚ-2017 ತಿಂಗಳುಗಳ ಪ್ರಗತಿಯನ್ನು ಯೋಜನೆಯ ತಂತ್ರಾಂಶದಲ್ಲಿ ಐಎಂಐಎಂ ನಲ್ಲಿ ಅತೀ ಹೆಚ್ಚು ಫಲಾನುಭವಿಗಳ ಮಾಹಿತಿಯನ್ನು ಅಳವಡಿಸಿದಕ್ಕಾಗಿ  ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಜಿಲ್ಲಾ ಹಾಗೂ ತಾಲೂಕ ಮಟ್ಟದಲ್ಲಿ ಮಾಹೆವಾರು ಸಾಧಿಸಿದ ಪ್ರಗತಿಗೆ ಅನುಗುಣವಾಗಿ ದಾಖಲಿಸಿದ್ದಕ್ಕಾಗಿ ಪ್ರಶಸ್ತಿ ನೀಡಲಾಗಿದ್ದು, ಕ್ರಮವಾಗಿ ಡಿಸೆಂಬರ್, ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಪ್ರಶಸ್ತಿ ಪಡೆದವರ ವಿವರಗಳು ಈ ಕೆಳಗಿನಂತಿದೆ. 
ಜಿಲ್ಲಾ ಮಟ್ಟದ ಪ್ರಶಸ್ತಿ :
******ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವೆಂಕಟೇಶ ವಂದಾಲ.  ಗಂಗಾವತಿ ತಾಲೂಕಿನ ಬರಗೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನಾಗೇಶ ಕುರಡಿ.  ಗಂಗಾವತಿ ತಾಲೂಕಿನ ಮುಸಲಾಪೂರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶರಣೇಗೌಡ ಪಟೀಲ್.  ಹಾಗೂ ಕೊಪ್ಪಳ ತಾಲೂಕಿನ ವನಬಳ್ಳಾರಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗ್ಯಾನಪ್ಪ ಬಿಡನಾಳ ಇವರನ್ನು ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲಾಗಿದೆ.
ತಾಲೂಕ ಮಟ್ಟದ ಪ್ರಶಸ್ತಿ :
*********** ಕೊಪ್ಪಳ ತಾಲೂಕಿನ ಹಿರೇಬಗನಾಳ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗುರುಸಿದ್ದಪ್ಪ, ಗಂಗಾವತಿ ತಾಲೂಕಿನ ಜೀರಾಳ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಬಸವರಾಜ ಬಯ್ಯಾಪುರ, ಕುಷ್ಟಗಿ ತಾಲೂಕಿನ ಯರಗೇರಾ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಮೂಲಿಮನಿ, ಹಾಗೂ ಯಲಬುರ್ಗಾ ತಾಲೂಕಿನ ಭಾನಾಪುರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಿದ್ದನಗೌಡ ಇವರಿಗೆ ಡಿಸೆಂಬರ್-2016 ಮಾಹೆಯ ತಾಲೂಕ ಮಟ್ಟದ ಪ್ರಶಸ್ತಿ ನೀಡಲಾಗಿದೆ.
    ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಂಬಣ್ಣ ನಂದಾಪೂರ, ಗಂಗಾವತಿ ತಾಲೂಕಿನ ಹುಲಿಹೈದರ್ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಾಮುನಾಯಕ್, ಕುಷ್ಟಗಿ ತಾಲೂಕಿನ ಕಂದಕೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶೇಖ್‍ದಾದಾ, ಹಾಗೂ ಯಲಬುರ್ಗಾ ತಾಲೂಕಿನ ಮಂಡಲಗೇರಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುರೇಶ ದಶರಥ ಇವರಿಗೆ ಜನೇವರಿ ಮಾಹೆಯ ತಾಲೂಕ ಮಟ್ಟದ ಪ್ರಶಸ್ತಿ ಲಭಿಸಿದೆ.
    ಕೊಪ್ಪಳ ತಾಲೂಕಿನ ಬೇವಿನಹಳ್ಳಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗೀತಾ ಕುಮಾರಿ, ಗಂಗಾವತಿ ತಾಲೂಕಿನ ಚಿಕ್ಕಮಾದಿನಾಳ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನಾಗೇಶ, ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವೆಂಕಟೇಶ ವಂದಾಲ, ಹಾಗೂ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಚನ್ನಬಸನಗೌಡ ಇವರಿಗೆ ಫೆಬ್ರವರಿ ಮಾಹೆಯ ತಾಲೂಕ ಮಟ್ಟದ ಪ್ರಶಸ್ತಿ ನೀಡಲಾಗಿದೆ.
    ಕೊಪ್ಪಳ ತಾಲೂಕಿನ ಅಳವಂಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗೌಸುಸಾಬ ಎಂ.ಮುಲ್ಲಾ, ಗಂಗಾವತಿ ತಾಲೂಕಿನ ಮುಸಲಾಪೂರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶರಣೇಗೌಡ ಪಟೀಲ್, ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವೆಂಕಟೇಶ ವಂದಾಲ, ಹಾಗೂ ಯಲಬುರ್ಗಾ ತಾಲೂಕಿನ ತುಮರಗುದ್ದಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಹನಮಂತಗೌಡ ಪೊ.ಪಾಟೀಲ್ ಇವರಿಗೆ ಮಾರ್ಚ್ ಮಾಹೆಯ ತಾಲೂಕ ಮಟ್ಟದ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಕೊಪ್ಪಳ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಹೀಗಾಗಿ ಲೇಖನಗಳು ಸ್ವಚ್ಛ ಭಾರತ ಮಿಷನ್‍ನಡಿ ಶೌಚಾಲಯ ನಿರ್ಮಾಣ : ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ

ಎಲ್ಲಾ ಲೇಖನಗಳು ಆಗಿದೆ ಸ್ವಚ್ಛ ಭಾರತ ಮಿಷನ್‍ನಡಿ ಶೌಚಾಲಯ ನಿರ್ಮಾಣ : ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸ್ವಚ್ಛ ಭಾರತ ಮಿಷನ್‍ನಡಿ ಶೌಚಾಲಯ ನಿರ್ಮಾಣ : ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ ಲಿಂಕ್ ವಿಳಾಸ https://dekalungi.blogspot.com/2017/06/blog-post_30.html

Subscribe to receive free email updates:

0 Response to "ಸ್ವಚ್ಛ ಭಾರತ ಮಿಷನ್‍ನಡಿ ಶೌಚಾಲಯ ನಿರ್ಮಾಣ : ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ