ಶೀರ್ಷಿಕೆ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ರಾಷ್ಟ್ರೀಯ ಸಮ್ಮೇಳನ
ಲಿಂಕ್ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ರಾಷ್ಟ್ರೀಯ ಸಮ್ಮೇಳನ
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ರಾಷ್ಟ್ರೀಯ ಸಮ್ಮೇಳನ
ಕೊಪ್ಪಳ, ಜೂ. 15 (ಕರ್ನಾಟಕ ವಾರ್ತೆ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ “ವಿಜ್ಞಾನ, ತಂತ್ರಜ್ಞಾನ ಮತ್ತು ಶಿಕ್ಷಣ” (ಸೈನ್ಸ್, ಟೆಕ್ನಾಲೊಜೀ & ಏಜುಕೇಶನ್) ಎಂಬ ಕೇಂದ್ರ ವಿಷಯದಡಿ ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ರಾಷ್ಟ್ರೀಯ ಸಮ್ಮೇಳನವನ್ನು ಜುಲೈ. 21 ಮತ್ತು 22 ರಂದು ಎರಡು ದಿನಗಳ ಕಾಲ ಆಯೋಜಿಸಲಾಗುತ್ತಿದೆ.
ಸಮ್ಮೇಳನದ ತಾಂತ್ರಿಕ ಅಧಿವೇಶನದಲ್ಲಿ ಖ್ಯಾತ ವಿಜ್ಞಾನಿಗಳಿಂದ ಮತ್ತು ಸಂಶೋಧಕರಿಂದ ಶ್ರೇಷ್ಠ ಉಪನ್ಯಾಸಗಳನ್ನು ಏರ್ಪಡಿಸಲಾಗಿದೆ. ಸಮ್ಮೇಳನದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳ ಸ್ನಾತಕೋತ್ತರ/ ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು/ ಪ್ರಾಧ್ಯಾಪಕರುಗಳು, ವಿಜ್ಞಾನಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿಜ್ಞಾನಾಸಕ್ತರು ಒಳಗೊಂಡಂತೆ ಸುಮಾರು 600 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅಲ್ಲದೇ, ಭೌತ ಮತ್ತು ಗಣಿತ ವಿಜ್ಞಾನ; ರಸಾಯನ ಮತ್ತು ಜೀವ ವಿಜ್ಞಾನ; ಇಂಜಿನಿಯರಿಂಗ್ ಹಾಗೂ ಅಂತರ್ ಶಾಸ್ತ್ರೀಯ ವಿಜ್ಞಾನಗಳಿಗೆ ಸಂಭಂಧಿಸಿದ ಪೋಸ್ಟರ್ ಪ್ರಸ್ತುತಿ (ಪೋಸ್ಟರ್ ಪ್ರೇಜೆಂಟೇಶನ್) ಸಹ ಮಂಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ತಜ್ಞರ ಸಮಿತಿಯು ಆಯ್ಕೆ ಮಾಡಿದ ಪ್ರತಿ ವಿಷಯದ 2 ಅತ್ಯುತ್ತಮವಾದ ಪ್ರಾತ್ಯಕ್ಷಿಕೆಗಳಿಗೆ ಬಹುಮಾನವನ್ನು ನೀಡಲಾಗುವುದು.
ಸಮ್ಮೇಳನಕ್ಕೆ ಪ್ರತಿನಿಧಿಗಳಾಗಿ ನೋಂದಾಯಿಸಿಕೊಳ್ಳಲು ಹಾಗೂ ಸಂಶೋಧನಾ ಪ್ರಸ್ತುತಿಯ ಸಾರಾಂಶವನ್ನು ಕಳುಹಿಸಲು ಜುಲೈ. 01 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗೆ ಅಕಾಡಮಿಯ ಅಂತರ್ಜಾಲ ತಾಣ raichurconference.kstacademy.in ನಲ್ಲಿ ಪಡೆಯಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ರಾಷ್ಟ್ರೀಯ ಸಮ್ಮೇಳನ
ಎಲ್ಲಾ ಲೇಖನಗಳು ಆಗಿದೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ರಾಷ್ಟ್ರೀಯ ಸಮ್ಮೇಳನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ರಾಷ್ಟ್ರೀಯ ಸಮ್ಮೇಳನ ಲಿಂಕ್ ವಿಳಾಸ https://dekalungi.blogspot.com/2017/06/blog-post_39.html
0 Response to "ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ರಾಷ್ಟ್ರೀಯ ಸಮ್ಮೇಳನ"
ಕಾಮೆಂಟ್ ಪೋಸ್ಟ್ ಮಾಡಿ