ಶೀರ್ಷಿಕೆ : ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ
ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ, ಜೂ. 17 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ವರ್ಗದ ಅಲೆಮಾರಿ/ಅರೆ ಅಲೆಮಾರಿ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ಭಾರಿ ವಾಹನ ಚಾಲನಾ ತರಬೇತಿ ಹಾಗೂ ಲಘು ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ವರ್ಗದ ಅಲೆಮಾರಿ/ಅರೆ ಅಲೆಮಾರಿ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯದ ಕೊಪ್ಪಳ ಜಿಲ್ಲೆಯ 40 ಅಭ್ಯರ್ಥಿಗಳಿಗೆ ಭಾರಿ ವಾಹನ ಚಾಲನಾ ತರಬೇತಿ ಕಾರ್ಯಕ್ರಮವನ್ನು ವ್ಯವಸ್ಥಾಪಕ ನಿರ್ದೇಶಕ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬೆಂಗಳೂರು ರವರ ಮೂಲಕ ಅನುಷ್ಠಾನಗೊಳಿಸಲು ಹಾಗೂ 40 ಅಭ್ಯರ್ಥಿಗಳಿಗೆ ಲಘು ವಾಹನ ಚಾಲನಾ ತರಬೇತಿಯನ್ನು ಜಿಲ್ಲಾ ಮಟ್ಟದ ಅಧಿಕೃತ ಪರವಾನಿಗೆ ಪಡೆದ ಚಾಲನಾ ತರಬೇತಿ ಸಂಸ್ಥೆಯಿಂದ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪರಿಶಿಷ್ಟ ವರ್ಗದ ಅಲೆಮಾರಿ/ಅರೆ ಅಲೆಮಾರಿ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳಿಗೆ ಸೇರಿದವರಾಗಿರಬೇಕು. ಲಘು ವಾಹನ ತರಬೇತಿಗಾಗಿ ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ದಿನಾಂಕಕ್ಕೆ 18 ವರ್ಷ ತುಂಬಿರಬೇಕು. ದೇಹದಾಢ್ರ್ಯತೆ ತೂಕ-50 ಕೆಜಿ ಕನಿಷ್ಠ ಮತ್ತು ಎತ್ತರ 160 ಸೆಂ.ಮೀ ಹೊಂದಿರಬೇಕು. ವಿಳಾಸ, ಛಾಯಾ ಚಿತ್ರ ಹಾಗೂ ಧೃಢೀಕರಣ ದಾಖಲೆಗಳನ್ನು ಲಗತ್ತಿಸಬೇಕು. ಭಾರಿ ವಾಹನ ತರಬೇತಿಗಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಲಘು ವಾಹನ ಚಾಲನಾ ಪರವಾನಿಗೆಯನ್ನು ಪಡೆದು ಕನಿಷ್ಠ ಒಂದು ವರ್ಷ ಪೂರೈಸಿರಬೇಕು. ಅರ್ಜಿ ಸಲ್ಲಿಸುವ ದಿನಾಂಕಕ್ಕೆ 21 ವರ್ಷ ತುಂಬಿರಬೇಕು. ದೇಹದಾಢ್ರ್ಯತೆ ತೂಕ-50 ಕೆಜಿ ಕನಿಷ್ಠ ಮತ್ತು ಎತ್ತರ 160 ಸೆಂ.ಮೀ ಹೊಂದಿರಬೇಕು. ವಿಳಾಸ, ಛಾಯಾ ಚಿತ್ರ ಹಾಗೂ ಧೃಢೀಕರಣ ದಾಖಲೆಗಳನ್ನು ಲಗತ್ತಿಸಿ ಜೂನ್. 30 ರೊಳಗಾಗಿ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಛೇರಿಗೆ ಸಲ್ಲಿಸಲು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_50.html
0 Response to "ವಾಹನ ಚಾಲನಾ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ