ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ
ಲಿಂಕ್ : ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ

ಓದಿ


ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ


ಕೊಪ್ಪಳ ಜೂ. 08 (ಕರ್ನಾಟಕ ವಾರ್ತೆ): ಪೊಲೀಸ್ ಮಹಾನಿರ್ದೇಶಕರು ಹಾಗೂ ಗೃಹರಕ್ಷಕದಳದ ಮಹಾ ಸಮಾದೇಷ್ಟರು, ಬೆಂಗಳೂರು ಇವರು, ಖಾಲಿ ಇರುವ ಕೊಪ್ಪಳ ಜಿಲ್ಲೆಯ ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದ್ದಾರೆ.
     ಗೃಹರಕ್ಷಕದಳವು ಒಂದು ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಜಿಲ್ಲಾ ಮಟ್ಟದಲ್ಲಿ ಗೃಹರಕ್ಷಕದಳದ ಕಚೇರಿಗಳು ಎಲ್ಲ ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಕಾರ್ಯನಿರತವಾಗಿವೆ.  ಈ ಗೃಹರಕ್ಷಕದಳದ ಜಿಲ್ಲಾ ಕಚೇರಿಯಲ್ಲಿನ ಆಡಳಿತ ನಿರ್ವಹಣೆಯನ್ನು ನೋಡಿಕೊಳ್ಳಲು ಸ್ಥಳೀಯ ಗೌರವಾನ್ವಿತ ವ್ಯಕ್ತಿಗಳನ್ನು ಸರ್ಕಾರವು ಗೃಹರಕ್ಷಕದಳದ ಸಮಾದೇಷ್ಟರುಗಳನ್ನಾಗಿ ನಿಯಮಾನುಸಾರ ನೇಮಕ ಮಾಡುತ್ತಿದೆ.  ಕೊಪ್ಪಳ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯು ಖಾಲಿ ಇದ್ದು, ತುರ್ತಾಗಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿ, ಅರ್ಹತೆ ಆಧಾರದ ಮೇಲೆ ತುಂಬಬೇಕಾಗಿದೆ.  ಈ ಹುದ್ದೆ ಸೇವೆಗೆ ಯಾವುದೇ ವೇತನ ಇರುವುದಿಲ್ಲ.  ಇದು ಸಂಪೂರ್ಣ ಗೌರವಾಧಾರಿತ ಸ್ವಯಂ ಸೇವೆಯಾಗಿರುತ್ತದೆ.  ಅರ್ಜಿ ಸಲ್ಲಿಸುವವರು ಕನಿಷ್ಟ ಪದವಿ ವಿದ್ಯಾರ್ಹತೆ ಹೊಂದಿರಬೇಕು.  ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಾಗಿರಬಾರದು.  ಜಿಲ್ಲಾ ಕೇಂದ್ರದಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸವಿರಬೇಕು.  ಮಿಲಿಟರಿ ಸೇವೆ, ಪ್ಯಾರಾ ಮಿಲಿಟರಿ ಸೇವೆ, ಪೊಲೀಸ್, ಎನ್‍ಸಿಸಿ-ಸಿ ಸರ್ಟಿಫಿಕೇಟ್ ಹೊಂದಿದವರಿಗೆ ಆದ್ಯತೆ ಇರುತ್ತದೆ.  ಆಸಕ್ತರು ತಮ್ಮ ಹೆಸರು, ಜನ್ಮ ದಿನಾಂಕ, ವಿದ್ಯಾರ್ಹತೆ, ವಿಳಾಸ, ಸಂಪರ್ಕ ಸಂಖ್ಯೆ ವಿವರವುಳ್ಳ ಬಯೋಡೇಟಾ ತಯಾರಿಸಿ, ಕನಿಷ್ಟ 2 ಜನರ ಶಿಫಾರಸು ಪತ್ರ ಲಗತ್ತಿಸಿ ಜಿಲ್ಲಾಧಿಕಾರಿಗಳು, ಕೊಪ್ಪಳ ಇವರಿಗೆ ಜೂ. 30 ರ ಒಳಗಾಗಿ ಸಲ್ಲಿಸಬೇಕು.  ಅರ್ಜಿಯ ಪ್ರತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಕೊಪ್ಪಳ ಇವರಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರು ಮತ್ತು ಗೃಹರಕ್ಷಕ ದಳದ ಮಹಾ ಸಮಾದೇಷ್ಟರು, ನಂ. 1, ಅಣ್ಣಾಸ್ವಾಮಿ ಮೊದಲಿಯಾರ್ ರಸ್ತೆ, ಬೆಂಗಳೂರು-02 ಇವರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_53.html

Subscribe to receive free email updates:

0 Response to "ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ