ಅಗತ್ಯಕ್ಕನುಗುಣವಾಗಿ ಗೋಶಾಲೆ, ಟ್ಯಾಂಕರ್ ನೀರು ಮುಂದುವರಿಕೆ- ಬಸವರಾಜ ರಾಯರಡ್ಡಿ

ಅಗತ್ಯಕ್ಕನುಗುಣವಾಗಿ ಗೋಶಾಲೆ, ಟ್ಯಾಂಕರ್ ನೀರು ಮುಂದುವರಿಕೆ- ಬಸವರಾಜ ರಾಯರಡ್ಡಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅಗತ್ಯಕ್ಕನುಗುಣವಾಗಿ ಗೋಶಾಲೆ, ಟ್ಯಾಂಕರ್ ನೀರು ಮುಂದುವರಿಕೆ- ಬಸವರಾಜ ರಾಯರಡ್ಡಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅಗತ್ಯಕ್ಕನುಗುಣವಾಗಿ ಗೋಶಾಲೆ, ಟ್ಯಾಂಕರ್ ನೀರು ಮುಂದುವರಿಕೆ- ಬಸವರಾಜ ರಾಯರಡ್ಡಿ
ಲಿಂಕ್ : ಅಗತ್ಯಕ್ಕನುಗುಣವಾಗಿ ಗೋಶಾಲೆ, ಟ್ಯಾಂಕರ್ ನೀರು ಮುಂದುವರಿಕೆ- ಬಸವರಾಜ ರಾಯರಡ್ಡಿ

ಓದಿ


ಅಗತ್ಯಕ್ಕನುಗುಣವಾಗಿ ಗೋಶಾಲೆ, ಟ್ಯಾಂಕರ್ ನೀರು ಮುಂದುವರಿಕೆ- ಬಸವರಾಜ ರಾಯರಡ್ಡಿ

ಕೊಪ್ಪಳ, ಜೂ.24 (ಕರ್ನಾಟಕ ವಾರ್ತೆ) : ಕೊಪ್ಪಳ ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹತ್ತು ದಿನಗಳ ವಿಳಂಬವಾಗಿರುವುದರಿಂದ, ಅಗತ್ಯಕ್ಕೆ ಅನುಗುಣವಾಗಿ ಸದ್ಯ ಚಾಲನೆಯಲ್ಲಿರುವ ಗೋಶಾಲೆಗಳು ಹಾಗೂ ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಯನ್ನು ಜುಲೈ 15 ರವರೆಗೂ ಮುಂದುವರೆಸುವಂತೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

     ಹೆಚ್‍ಕೆಆರ್‍ಡಿಬಿ ಯೋಜನೆ, ಕುಡಿಯುವ ನೀರು ಹಾಗೂ ಕೃಷಿ ಇಲಾಖೆಗೆ ಸಂಬಂಧಿತ ಯೋಜನೆಗಳ ಪ್ರಗತಿ ಪರಿಶೀಲನೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಮುಂಗಾರು ಮಳೆ ಹತ್ತು ದಿನಗಳ ಕಾಲ ತಡವಾಗಿ ಪ್ರಾರಂಭವಾಗಿದೆ.  ಜಿಲ್ಲೆಯಾದ್ಯಂತ ಎಲ್ಲೆಡೆಯೂ ನಿರೀಕ್ಷೆಯಂತೆ ಉತ್ತಮ ಮಳೆಯಾಗಿಲ್ಲ.  ಕೆಲವೆಡೆ ಹೆಚ್ಚು ಮಳೆಯಾದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಮಳೆಯ ಕೊರತೆಯಾಗಿದೆ.  ಹೀಗಾಗಿ ತಕ್ಷಣವೇ ಗೋಶಾಲೆಗಳನ್ನು ನಿಲ್ಲಿಸುವುದು ಸಮಂಜಸವಲ್ಲ.  ಮಳೆಗಾಲ ಇದೀಗ ತಾನೆ ಆರಂಭವಾಗಿರುವುದರಿಂದ, ಸದ್ಯ ಜಾನುವಾರುಗಳಿಗೆ ಇನ್ನೂ ಮೇವು ಲಭ್ಯತೆಯಾಗುವುದು ವಿಳಂಬವಾಗುವುದರಿಂದ, ಜಿಲ್ಲೆಯಲ್ಲಿ ಸದ್ಯ ಚಾಲನೆಯಲ್ಲಿರುವ ಗೋಶಾಲೆಗಳನ್ನು ಜುಲೈ 15 ರವರೆಗೂ ಮುಂದುವರೆಸಬೇಕು.   ನಂತರದ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಗೋಶಾಲೆ ಮುಂದುವರಿಕೆ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.  ಅದೇ ರೀತಿ ಕಳೆದೆರಡು ವರ್ಷಗಳಿಂದ ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ತೀವ್ರ ಕುಸಿದ ಪರಿಣಾಮ, ಕೊಳವೆ ಬಾವಿಗಳಲ್ಲಿ ನೀರು ಇಲ್ಲದಂತಾಗಿದೆ.  ನೀರಿನ ಮೂಲ ಲಭ್ಯವಿಲ್ಲದಿರುವ ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿತ್ತು.  ಪರಿಸ್ಥಿತಿಯನ್ನು ಪರಿಶೀಲಿಸಿ, ಅಗತ್ಯವಿದ್ದರೆ, ಟ್ಯಾಂಕರ್ ಮೂಲಕ ನೀರು ಪೂರೈಸುವ ಕಾರ್ಯವನ್ನು ಜು. 15 ರವರೆಗೂ ಮುಂದುವರೆಸಬೇಕು.  ಮಳೆಯ ಪರಿಸ್ಥಿತಿ ಹಾಗೂ ನೀರಿನ ಲಭ್ಯತೆಗೆ ಅನುಗುಣವಾಗಿ ನಂತರದ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೈ-ಕ ಅಭಿವೃದ್ಧಿ ಯೋಜನೆಯ ಕಾಮಗಾರಿ ಪ್ರಾರಂಭಿಸಿ :
*************** ಹೈದ್ರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕಳೆದ 2013-14 ನೇ ವರ್ಷದಿಂದ ಈವರೆಗೆ ಅನುದಾನ ಬಿಡುಗಡೆ, ಕಾಮಗಾರಿಗಳ ಸ್ಥಿತಿ-ಗತಿ ಕುರಿತು ಜಿಲ್ಲಾ ಉಸ್ತುವಾರಿ ಮಂತ್ರಿಗಳು ಪ್ರಗತಿ ಪರಿಶೀಲನೆ ನಡೆಸಿದರು.  2013-14 ರಲ್ಲಿ ಮೈಕ್ರೋ ಯೋಜನೆಯಡಿ 13. 50 ಕೋಟಿ ರೂ. ಬಿಡುಗಡೆಯಾಗಿ ಎಲ್ಲ 100 ಕಾಮಗಾರಿಗಳು ಪೂರ್ಣಗೊಂಡಿವೆ.  2014-15 ರಲ್ಲಿ 60. 91 ಕೋಟಿ ರೂ. ಅನುದಾನ ಜಿಲ್ಲೆಗೆ ಬಿಡುಗಡೆಯಾಗಿದ್ದು, 261 ರಲ್ಲಿ 246 ಕಾಮಗಾರಿಗಳು ಪೂರ್ಣಗೊಂಡಿವೆ.  2015-16 ರಲ್ಲಿ 55 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, 328 ರಲ್ಲಿ 220 ಕಾಮಗಾರಿಗಳು ಪೂರ್ಣಗೊಂಡಿವೆ.  2016-17 ರಲ್ಲಿ 57 ಕೋಟಿ ರೂ. ಬಿಡುಗಡೆಯಾಗಿದ್ದು, 170 ಕಾಮಗಾರಿಗಳು ಅನುಮೋದನೆಗೊಂಡಿವೆ.  ಈ ಸಾಲಿನಲ್ಲಿ ಇನ್ನೂ 42 ಕಾಮಗಾರಿಗಳು ಪ್ರಾರಂಭವಾಗಿಲ್ಲ.  ಹೀಗಾಗಿ ತಾಲೂಕುವಾರು ಕಾಮಗಾರಿಗಳ ಸಂಪೂರ್ಣ ವಿವರ, ಏಜೆನ್ಸಿ ವಿವರ, ಕಾಮಗಾರಿ ಪ್ರಾರಂಭಕ್ಕೆ ಇರುವ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕೂಡಲೆ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಾಮರ್ಶೆ ನಡೆಸಬೇಕು.  2017-18 ನೇ ಸಾಲಿನಲ್ಲಿ ಜಿಲ್ಲೆಗೆ 87 ಕೋಟಿ ರೂ. ಗಳ ಅನುದಾನ ನಿಗದಿಪಡಿಸಿದೆ.  ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿ ಆಧಾರದಲ್ಲಿ ಅನುದಾನ ನಿಗದಿಪಡಿಸಿದ್ದು, ಈ ಪೈಕಿ ಗಂಗಾವತಿ ತಾಲೂಕು- 6.20 ಕೋಟಿ ರೂ., ಕೊಪ್ಪಳ-16. 84 ಕೋಟಿ, ಕುಷ್ಟಗಿ-31. 91 ಕೋಟಿ ಹಾಗೂ ಯಲಬುರ್ಗಾ ತಾಲೂಕಿಗೆ 32. 80 ಕೋಟಿ ರೂ. ನಿಗದಿಪಡಿಸಲಾಗಿದೆ.  ಈಗಾಗಲೆ ಕಾಮಗಾರಿ ಕೈಗೊಳ್ಳಲು ಏಜೆನ್ಸಿಗಳನ್ನು ಸಹ ನಿಗದಿಪಡಿಸಲಾಗಿದೆ.  ಲೋಕೋಪಯೋಗಿ, ನಿರ್ಮಿತಿ, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಸೇರಿದಂತೆ ಸಂಬಂಧಪಟ್ಟ ಏಜೆನ್ಸಿಗಳು, ತಮಗೆ ಹಂಚಿಕೆಯಾಗಿರುವ ಕಾಮಗಾರಿಗಳನ್ನು ಕೂಡಲೆ ಪ್ರಾರಂಭಿಸಬೇಕು.  ಯಾವುದೇ ಕಾರಣಕ್ಕೂ ವಿಳಂಬ ಮಾಡುವಂತಿಲ್ಲ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪ್ರತ್ಯೇಕ  ನೀರು ಪೂರೈಕೆ ಯೋಜನೆ :
************** ಕೊಪ್ಪಳ ಜಿಲ್ಲಾಡಳಿತ ಭವನ, ಜಿಲ್ಲಾ ಆಸ್ಪತ್ರೆ ಹಾಗೂ ಕೊಪ್ಪಳದ ಸರ್ಕಾರಿ ಮೆಡಿಕಲ್ ಕಾಲೇಜಿಗೆ ನೀರಿನ ತೊಂದರೆ ಕಂಡುಬಂದಿದ್ದು, ಈ ಮೂರೂ ಕಟ್ಟಡಗಳಿಗಾಗಿ ತುಂಗಭದ್ರಾ ಯೋಜನೆಯಿಂದ ಪ್ರತ್ಯೇಕ ನೀರು ಪೂರೈಕೆ ಯೋಜನೆ ಸಿದ್ಧಪಡಿಸಬೇಕು.  ಇದಕ್ಕಾಗಿ 10 ಕೋಟಿ ರೂ. ಅನುದಾನವನ್ನು ಕಂದಾಯ ಇಲಾಖೆ ಹಾಗೂ ಹೆಚ್‍ಕೆಆರ್‍ಡಿಬಿ ಯೋಜನೆಯಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.  ಯೋಜನಾ ವರದಿ ಕೂಡಲೆ ಸಿದ್ಧಪಡಿಸಿ ಸಲ್ಲಿಸುವಂತೆ ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳಿಗೆ ಮಂತ್ರಿಗಳೂ ಸೂಚನೆ ನೀಡಿದರು.
ಮುಂಗಾರು ಬೆಳೆ ವಿಮೆ ವಿವರ ಸಲ್ಲಿಸಿ :
************** ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ 43395 ರೈತರು ಬೆಳೆ ವಿಮೆಗಾಗಿ ನೋಂದಣಿ ಮಾಡಿಸಿದ್ದು, ಜಿಲ್ಲೆಯಲ್ಲಿ ಮಳೆಯ ವೈಫಲ್ಯದಿಂದಾಗಿ ಮುಂಗಾರು ಬೆಳೆ ಬಹುತೇಕ ನಷ್ಟವಾಗಿತ್ತು.  ಜಿಲ್ಲೆಯಲ್ಲಿ ಈವರೆಗೆ 15630 ರೈತರಿಗೆ 35. 78 ಕೋಟಿ ರೂ. ಬೆಳೆ ವಿಮೆ ಪಾವತಿಯಾಗಿದೆ.  ಇನ್ನೂ ಹಂತ ಹಂತವಾಗಿ ವಿಮಾ ಕಂಪನಿಯು ರೈತರಿಗೆ ಬೆಳೆ ವಿಮೆ ಪಾವತಿಸಲಿದೆ ಎಂದು ಜಂಟಿಕೃಷಿ ನಿರ್ದೇಶಕ ವಿರೇಶ್ ಹುನಗುಂದ ಅವರು ಸಭೆಗೆ ಮಾಹಿತಿ ನೀಡಿದರು.  ಇದಕ್ಕೆ ಪ್ರತಿಕ್ರಿಯಿಸಿದ ಮಂತ್ರಿಗಳು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ನೋಂದಣಿ ಮಾಡಿಸಿದ ರೈತರ ಪೈಕಿ, ಎಷ್ಟು ರೈತರು ಬೆಳೆ ವಿಮೆ ಪರಿಹಾರ ಪಡೆಯಲು ಅರ್ಹರಿದ್ದಾರೆ.  ಈ ಕುರಿತಂತೆ ಸಮಗ್ರ ವಿವರವನ್ನು ಸಂಗ್ರಹಿಸಬೇಕು.  ವಿಮಾ ಕಂಪನಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ಕೈಗೊಂಡು, ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.  ಅದೇ ರೀತಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರಿಗೆ ಯಾವುದೇ ರೀತಿಯ ಬಿತ್ತನೆ ಬೀಜ ಅಥವಾ ರಸಗೊಬ್ಬರದ ಕೊರತೆಯಾಗದಂತೆ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
     ಸಭೆಯಲ್ಲಿ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್, ಜಿ.ಪಂ. ಹಂಗಾಮಿ ಅಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು ಅಗತ್ಯಕ್ಕನುಗುಣವಾಗಿ ಗೋಶಾಲೆ, ಟ್ಯಾಂಕರ್ ನೀರು ಮುಂದುವರಿಕೆ- ಬಸವರಾಜ ರಾಯರಡ್ಡಿ

ಎಲ್ಲಾ ಲೇಖನಗಳು ಆಗಿದೆ ಅಗತ್ಯಕ್ಕನುಗುಣವಾಗಿ ಗೋಶಾಲೆ, ಟ್ಯಾಂಕರ್ ನೀರು ಮುಂದುವರಿಕೆ- ಬಸವರಾಜ ರಾಯರಡ್ಡಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಗತ್ಯಕ್ಕನುಗುಣವಾಗಿ ಗೋಶಾಲೆ, ಟ್ಯಾಂಕರ್ ನೀರು ಮುಂದುವರಿಕೆ- ಬಸವರಾಜ ರಾಯರಡ್ಡಿ ಲಿಂಕ್ ವಿಳಾಸ https://dekalungi.blogspot.com/2017/06/blog-post_707.html

Subscribe to receive free email updates:

0 Response to "ಅಗತ್ಯಕ್ಕನುಗುಣವಾಗಿ ಗೋಶಾಲೆ, ಟ್ಯಾಂಕರ್ ನೀರು ಮುಂದುವರಿಕೆ- ಬಸವರಾಜ ರಾಯರಡ್ಡಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ