ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗಾವಕಾಶ ಹೆಚ್ಚಳ- ಬಸವರಾಜ ರಾಯರಡ್ಡಿ

ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗಾವಕಾಶ ಹೆಚ್ಚಳ- ಬಸವರಾಜ ರಾಯರಡ್ಡಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗಾವಕಾಶ ಹೆಚ್ಚಳ- ಬಸವರಾಜ ರಾಯರಡ್ಡಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗಾವಕಾಶ ಹೆಚ್ಚಳ- ಬಸವರಾಜ ರಾಯರಡ್ಡಿ
ಲಿಂಕ್ : ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗಾವಕಾಶ ಹೆಚ್ಚಳ- ಬಸವರಾಜ ರಾಯರಡ್ಡಿ

ಓದಿ


ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗಾವಕಾಶ ಹೆಚ್ಚಳ- ಬಸವರಾಜ ರಾಯರಡ್ಡಿ

 ಕೊಪ್ಪಳ, ಜೂ.24 (ಕರ್ನಾಟಕ ವಾರ್ತೆ) : ಶಿಕ್ಷಣವನ್ನು ಕೇವಲ ಸರ್ಕಾರಿ ಉದ್ಯೋಗದ ದೃಷ್ಟಿಕೋನದಿಂದ ನೋಡದೆ, ಸ್ವಾಭಿಮಾನದ ಬದುಕು ಕಟ್ಟಿಕೊಡುವ ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ.  ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗದ ಅವಕಾಶ ಹೆಚ್ಚಾಗಲಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.
 
     ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ‘ಸಂಜೀವಿನಿ’ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಇವರ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ದೀನ್‍ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಹಾಗೂ ರಾಜೀವ್ ಗಾಂಧಿ ಜೈತನ್ಯ ಯೋಜನೆಯಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಅಭ್ಯರ್ಥಿಗಳ ಒಗ್ಗೂಡಿಸುವಿಕೆ, ಆಯ್ಕೆ ಮತ್ತು ಉದ್ಯೋಗ ಮೇಳ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
 
      ಯುವಜನರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಅವರಿಗೆ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನಮ್ಮ ಸರ್ಕಾರ ನೀಡುತ್ತಿದೆ.  ಇದಕ್ಕೆಂದೇ ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ಇಲಾಖೆಯನ್ನು ಪ್ರಾರಂಭಿಸಲಾಗಿದೆ.  ಯುವಜನರು, ಶಿಕ್ಷಣವನ್ನು ಕೇವಲ ಸರ್ಕಾರಿ ಉದ್ಯೋಗ ಪಡೆಯುವ ದೃಷ್ಟಿಕೋನದಿಂದ ನೋಡಬಾರದು.  ಪ್ರತಿಯೊಬ್ಬರು ಸರಕಾರಿ ನೌಕರಿಯನ್ನು ಅವಲಂಬಿಸದೇ ಕೌಶಲ್ಯ ತರಬೇತಿಗಳನ್ನು ಪಡೆದುಕೊಂಡು ಖಾಸಗಿ ರಂಗದಲ್ಲಿ ಉದ್ಯೋಗವನ್ನು ಪಡೆದುಕೊಂಡು ಹಾಗೂ ಸ್ವ ಉದ್ಯೋಗಗಳನ್ನು ಮಾಡುವುದರ ಮೂಲಕ ಸ್ವಾವಲಂಬಿಗಳಾಗಬೇಕು.  ದೇಶದ ಜನಸಂಖ್ಯೆ 130 ಕೋಟಿ ತಲುಪಿದ್ದರೆ, ಕರ್ನಾಟಕದ ಜನಸಂಖ್ಯೆ 6.5 ಕೋಟಿ ದಾಟಿದೆ.  ಈ ಜನಸಂಖ್ಯೆಯಲ್ಲಿ ಯುವ ಜನರ ಸಂಖ್ಯೆ ಹೆಚ್ಚಾಗಿದ್ದು, ಯುವಶಕ್ತಿಯನ್ನು ದೇಶಕ್ಕೆ ವಿನಿಯೋಗಿಸುವ ಅವಶ್ಯಕತೆ ಇದೆ.  ಈ ನಿಟ್ಟಿನಲ್ಲಿ ಅವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕೊಡುವುದು ಅಗತ್ಯವಾಗಿದೆ.  ದೇಶದಲ್ಲಿ ಕಳೆದ ಮೂರು ವರ್ಷಗಳಲ್ಲಿ ನಿರೀಕ್ಷೆಯಂತೆ ಉದ್ಯೋಗ ಸೃಷ್ಟಿಯಾಗುತ್ತಿಲ್ಲ.  ಔದ್ಯೋಗಿಕ ನೀತಿ ಬದಲಾಗಬೇಕಿದೆ.  ಜಾಗತೀಕರಣದ ನಂತರ ವಿದೇಶ ಬಂಡವಾಳ ಹರಿದುಬಂದರೂ, ಉದ್ಯೋಗ ಸೃಷ್ಟಿ ನಿರೀಕ್ಷೆಯಷ್ಟು ಆಗಿಲ್ಲ.  ಉದ್ಯೋಗ ಸೃಷ್ಟಿ ನಿರೀಕ್ಷೆಯ ಹಂತ ತಲುಪದಿರಲು ದ್ವಂದ್ವ ರಾಜಕೀಯ ನೀತಿಗಳು ಕಾರಣವಾಗಿದೆ. ಚೀನಾ ದೇಶದಲ್ಲಿ ಆದಂತಹ ಉದ್ಯೋಗ ಸೃಷ್ಟಿಯ ಕ್ರಾಂತಿ ನಮ್ಮ ದೇಶದಲ್ಲೂ ಆಗಬೇಕಿದೆ.  ಕರ್ನಾಟಕದಲ್ಲಿ ಇದೀಗ ನಮ್ಮ ಸರ್ಕಾರ ಯುವಶಕ್ತಿಯ ಸದ್ಬಳಕೆ ಹಾಗೂ ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ.  ಪ್ರತಿ ಜಿಲ್ಲೆಯಲ್ಲಿ ಕೌಶಲ್ಯಾಬಿವೃದ್ಧಿ ಕೇಂದ್ರ ಪ್ರಾರಂಭಿಸಬೇಕಿದೆ.  ಕೊಪ್ಪಳ ಜಿಲ್ಲೆಯಲ್ಲಿ ತಳಕಲ್‍ನಲ್ಲಿ ಪ್ರಾರಂಭಿಸಲಾಗುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಹೊಂದಿಕೊಂಡಂತೆ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಪ್ರಾರಂಭಿಸಲಾಗುವುದು.  ಇದಕ್ಕೆಂದೇ 85 ಕೋಟಿ ರೂ. ಅನುದಾನವನ್ನು ಪ್ರತ್ಯೇಕವಾಗಿ ಒದಗಿಸಲಾಗುತ್ತಿದೆ.  ಗ್ರಾಮೀಣ ಪ್ರದೇಶದಲ್ಲಿ ಪರಂಪರಾಗತವಾಗಿ ಬಂದ ಕಸುಬುಗಳು ಮಾಯವಾಗುತ್ತಿದ್ದು, ಅದರ ಕಡೆ ನಮ್ಮ ಯುವಕರು ಆಸಕ್ತಿಯನ್ನು ತೋರಿಸುತ್ತಿಲ್ಲದಿರುವುದು ಕಳವಳಕಾರಿ ಸಂಗತಿಯಾಗಿದೆ.  ಗ್ರಾಮೀಣ ಪ್ರದೇಶದ ಕಸಬುಗಳನ್ನು ಉತ್ತೇಜಿಸಿ ಅವುಗಳು ಪುನಃ ಜೀವ ತುಂಬಿಕೊಳ್ಳಲು ಯುವ ಪೀಳಿಗೆ ಗಮನಹರಿಸಬೇಕಾಗಿರುವುದು ಇಂದಿನ ಅವಶ್ಯಕತೆಗಳಲ್ಲೊಂದಾಗಿದೆ. ಜಾಗತೀಕರಣ ಹಾಗೂ ಆಧುನಿಕ ಜೀವನಶೈಲಿಯಿಂದಾಗಿ ಹಳ್ಳಿಗಳಲ್ಲಿನ ಗುಡಿ ಕೈಗಾರಿಕೆಗಳು, ಕರ-ಕುಶಲ ಕೌಶಲ್ಯಗಳು ನೇಪಥ್ಯಕ್ಕೆ ಸರಿದಿದೆ.  ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ-ಕುಶಲ ಕಲೆಗಳು, ಗುಡಿಕೈಗಾರಿಕೆಗಳ ಉತ್ಪನ್ನಗಳಿಗೆ ವ್ಯಾಪಕ ಬೇಡಿಕೆ ಇದೆ.  ಆದರೆ ನಮ್ಮವರು ಮಾರ್ಕೆಟಿಂಗ್ ಕಲೆಗಾರಿಕೆ, ವ್ಯಾಪಾರಿ ತಂತ್ರಗಳನ್ನು ಕಲಿಯಬೇಕಿದೆ.  ರಾಜ್ಯದಲ್ಲಿ ಉದ್ಯೋಗಾವಕಾಶ ನೀಡುವ 500 ಕ್ಕೂ ಹೆಚ್ಚಿನ ಕೌಶಲ್ಯ ಕಲೆಗಳ ತರಬೇತಿ ಕಲಿಯಲು ಅವಕಾಶ ಕಲ್ಪಿಸಲಾಗುತ್ತಿದೆ.  ಗುಡಿ ಕೈಗಾರಿಕೆ, ಕರ-ಕುಶಲ ಕಲೆಗಳನ್ನು ಮಾಡಬಯಸುವವರಿಗೆ ಸರ್ಕಾರ ಸಹಕಾರ ಹಾಗೂ ಉತ್ತೇಜನ ನೀಡುತ್ತಿದ್ದು, ಸಾರ್ವಜನಿಕರು, ಯುವಜನರು, ಕೌಶಲ್ಯಾಬಿವೃದ್ಧಿ ತರಬೇತಿ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕರೆ ನೀಡಿದರು.
    ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಶಿಕ್ಷಣದ ಗುಣಮಟ್ಟ ನಮ್ಮ ರಾಜ್ಯದಲ್ಲಿ ಪ್ರಾದೇಶಿಕವಾಗಿ ಬೇರೆ ಬೇರೆ ಇದೆ.  371(ಜೆ) ಕಲಂ ತಿದ್ದುಪಡಿಯ ಜಾರಿಯಿಂದಾಗಿ ಹೈ-ಕ ಪ್ರದೇಶದ ಜಿಲ್ಲೆಗಳ ಅಭ್ಯರ್ಥಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಿಂದ ಮೀಸಲಾತಿ ಕಲ್ಪಿಸಲಾಗಿದೆ.  ಹೀಗಾಗಿ ಈ ಭಾಗದ ಅಭ್ಯರ್ಥಿಗಳಿಗೆ ಹೆಚ್ಚು, ಹೆಚ್ಚು, ಉದ್ಯೋಗಾವಕಾಶ ಲಭಿಸುತ್ತಿದೆ.  ಬಡವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಹಲವು ಜನಪರ ಯೋಜನೆಗಳ ಜಾರಿ ಮೂಲಕ ಮಾಡುತ್ತಿದೆ.  ಕೌಶಲ್ಯಾಭಿವೃದ್ಧಿ ತರಬೇತಿಯಿಂದ ನಿರುದ್ಯೋಗಿಗಳಲ್ಲಿ ದುಡಿಯುವ ವಿಶ್ವಾಸ ಬರಲಿದೆ.  ತೀವ್ರ ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ನಮ್ಮ ಸರ್ಕಾರ 50000 ರೂ. ವರೆಗಿನ ರೈತರ ಸಾಲ ಮನ್ನ ಮಾಡಿದ್ದು, ಇದಕ್ಕಾಗಿ 8100 ಕೋಟಿ ರೂ. ಅನುದಾನವನ್ನು ಒದಗಿಸಿದೆ.  ಬಡವರನ್ನು ಮುಖ್ಯ ವಾಹಿನಿಗೆ ತರುವ ಕಾರ್ಯವನ್ನು ಸರ್ಕಾರ ಕೈಗೊಂಡಿದೆ ಎಂದರು.
     ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಮಾತನಾಡಿ, ಶಿಕ್ಷಣ ಸ್ವಾಭಿಮಾನದ ಪ್ರತೀಕವಾಗಿದ್ದು, ಯುವಕರು ಶಿಕ್ಷಣ ಎಂದರೆ ಸರ್ಕಾರಿ ಉದ್ಯೋಗಕ್ಕಾಗಿ ಎಂಬ ತಪ್ಪು ಕಲ್ಪನೆ ಹೊಂದಿದ್ದಾರೆ.  ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೌಶಲ್ಯಾಬಿವೃದ್ಧಿ ತರಬೇತಿ ಕಾರ್ಯಕ್ರಮ ಉತ್ತಮವಾಗಿದೆ.  ತರಬೇತಿ ನೀಡುವ ಮೂಲಕ ಬದು ಕಟ್ಟಿಕೊರ್ಳಳುವ ಕೆಲಸ ಆಗುತ್ತಿರುವುದು ಶ್ಲಾಘನೀಯವಾಗಿದೆ.  ಕುಷ್ಟಗಿ ತಾಲೂಕಿನಲ್ಲಿ ಬರುವ ದಿನಗಳಲ್ಲಿ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದರು.
     ಕೌಶಲ್ಯಭಿವೃದ್ಧಿ ಮತ್ತು ಉದ್ಯೋಗಮೇಳ ಕಾರ್ಯಕ್ರಮದಲ್ಲಿ ಜಿಲ್ಲೆಯ 780 ಅಭ್ಯರ್ಥಿಗಳು ಯೋಜನಾ ಅನುಷ್ಠಾನ ಸಂಸ್ಥೆಗಳಾದ ರೂರಲ್ ಶೋರ್ಸ್ ಸ್ಕಿಲ್ ಅಕ್ಯಾಡೆಮಿ ಪ್ರೈ.ಲಿ., ಬೆಂಗಳೂರು, ಸಾಹಿತಿ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್, ಬೆಂಗಳೂರು, ಶ್ರೀ ಅಮರೇಶ್ವರ ಗ್ರಾಮೀಣಾಭಿವೃದ್ದಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ (ರಿ), ಕೊಪ್ಪಳ, ಹಾಗೂ ವಿನೂತನ ಶಿಕ್ಷಣ ಸೇವಾ ಸಂಸ್ಥೆ (ರಿ), ಅಳವಂಡಿ, ಕೊಪ್ಪಳ ರವರಲ್ಲಿ ವೃತ್ತಿ ಕೌಶಲ್ಯ ತರಬೇತಿ ಹಾಗೂ ಉದ್ಯೋಗಕ್ಕಾಗಿ ನೊಂದಣಿ ಮಾಡಿಕೊಂಡರು. 
     ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  ಸಮಾರಂಭದಲ್ಲಿ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ, ಜಿ.ಪಂ. ಹಂಗಾಮಿ ಅಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಕೊಪ್ಪಳ ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ಜಿ.ಪಂ. ಸದಸ್ಯರುಗಳಾದ ಕೆ. ಮಹೇಶ್, ಭೀಮಪ್ಪ ಅಗಸಿಮುಂದಿನ, ರಾಮಣ್ಣ ಚೌಡ್ಕಿ, ಹನುಮಂತಪ್ಪಗೌಡ ಪಾಟೀಲ, ಗವಿಸಿದ್ದಪ್ಪ ಕರಡಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿ, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರ ಉಪಸ್ಥಿತರಿದ್ದರು.  ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಪರಸಪ್ಪ ಭಜಂತ್ರಿ ವಂದಿಸಿದರು.  ಸಿ.ವಿ. ಜಡಿಯವರ್ ನಿರೂಪಿಸಿದರು.


ಹೀಗಾಗಿ ಲೇಖನಗಳು ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗಾವಕಾಶ ಹೆಚ್ಚಳ- ಬಸವರಾಜ ರಾಯರಡ್ಡಿ

ಎಲ್ಲಾ ಲೇಖನಗಳು ಆಗಿದೆ ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗಾವಕಾಶ ಹೆಚ್ಚಳ- ಬಸವರಾಜ ರಾಯರಡ್ಡಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗಾವಕಾಶ ಹೆಚ್ಚಳ- ಬಸವರಾಜ ರಾಯರಡ್ಡಿ ಲಿಂಕ್ ವಿಳಾಸ https://dekalungi.blogspot.com/2017/06/blog-post_721.html

Subscribe to receive free email updates:

0 Response to "ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗಾವಕಾಶ ಹೆಚ್ಚಳ- ಬಸವರಾಜ ರಾಯರಡ್ಡಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ