ಶೀರ್ಷಿಕೆ : ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕರಿಸಿ : ರಾಜೀವ ಗುರುನಾಥ ಜೋಷಿ
ಲಿಂಕ್ : ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕರಿಸಿ : ರಾಜೀವ ಗುರುನಾಥ ಜೋಷಿ
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕರಿಸಿ : ರಾಜೀವ ಗುರುನಾಥ ಜೋಷಿ
ಕೊಪ್ಪಳ, ಜೂ. 12 (ಕರ್ನಾಟಕ ವಾರ್ತೆ): ಬಾಲಕಾರ್ಮಿಕ ಪದ್ಧತಿಯು ಒಂದು ಸಾಮಾಜಿಕ ಪೀಡುಗಾಗಿದ್ದು, ಇದರ ನಿರ್ಮೂಲನೆಗೆ ಸಾರ್ವಜನಿಕರೂ ಸೇರಿದಂತೆ ಎಲ್ಲರೂ ಸಹಕರಿಸಿ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜೀವ ಗುರುನಾಥ ಜೋಷಿ ಅವರು ಕರೆ ನೀಡಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಮಕ್ಕಳ ಸಹಾಯವಾಣಿ ಇವರ ವತಿಯಿಂದ ಸೋಮವಾರದಂದು ಜಿಲ್ಲಾ ನ್ಯಾಯಾಲಯ ಆವರಣದ ಸಾಕ್ಷಿದಾರರ ಮೊಗಸಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕ ವ್ಯವಸ್ಥೆಗೆ ಒಳಪಟ್ಟ ಮಕ್ಕಳು, ಮಾನಸಿಕ ಹಾಗೂ ದೈಹಿಕವಾಗಿ ಸದೃಡವಾಗಿರುವುದಿಲ್ಲ. ಇದರ ನಿರ್ಮೂಲನೆ ನಿಟ್ಟಿನಲ್ಲಿ ಸರ್ಕಾರವು ಎಲ್ಲರೂ ವಿದ್ಯಾವಂತರಾಗಬೇಕೆಂಬ ಸದುದ್ದೇಶದಿಂದ ವಿವಿಧ ಕಾಯ್ದೆಗಳನ್ನು ಜಾರಿಗೊಳಿಸಿದ್ದು, ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆಯ ನಿಷೇಧ ಮತ್ತು ನಿಯಂತ್ರಣ ಕಾಯ್ದೆ-2016 ಜಾರಿಯಲ್ಲಿದೆ. 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಂಡಲ್ಲಿ 2 ವರ್ಷ ಜೈಲು ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗುದು. ಹತ್ತಿ ಬಿಡಿಸುವುದು, ತಂಬಾಕು ಹೊಲ ಗದ್ದೆ, ಜೀತ, ಇಟ್ಟಂಗಿ ಬಟ್ಟಿ ಹಾಗೂ ಇತ್ಯಾದಿ ಕೃಷಿ ಆಧಾರಿತ ಯಾವುದೇ ಕೆಲಸಕ್ಕಾಗಿ ಮಕ್ಕಳನ್ನು ದುಡಿಮೆಗೆ ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಹೋಟೆಲ್, ಗ್ಯಾರೇಜ, ಅಂಗಡಿ, ಬಾರ್ & ರೆಸ್ಟೋರೆಟ್ ಹಾಗೂ ಇತರೆ ಯಾವುದೇ ಕ್ಷೇತ್ರಗಳಲ್ಲಿ ಮಕ್ಕಳಿಗೆ ಕೆಲಸಕ್ಕೆ ಇಟ್ಟುಕೊಂಡಿದ್ದು ಹಾಗೂ ಯಾವುದೆ ರೀತಿಯ ದೌರ್ಜನ್ಯ ಕಂಡುಬಂದಲ್ಲಿ ಕೂಡಲೇ ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು.
ವಿಶ್ವ ಕಾರ್ಮಿಕ ಸಂಸ್ಥೆ 2002 ರಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಪ್ರಾರಂಭಿಸಿದ್ದು, ನಾವು ಪ್ರತಿ ವರ್ಷ ಜೂನ್. 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಇದರ ಮುಖ್ಯ ಉದ್ದೇಶ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು. ದೇಶದ ಅಭಿವೃದ್ಧಿಗಾಗಿ ಶಿಕ್ಷಣ ಬಹು ಮುಖ್ಯವಾಗಿದ್ದು, ಮಕ್ಕಳು ಒಳ್ಳೆಯ ಶಿಕ್ಷಣವನ್ನು ಕಲಿತು ಉತ್ತಮ ನಾಗರಿಕರಾಗಬೇಕು. ಎಲ್ಲರೂ ಅಕ್ಷರವಂತರಾದಾಗ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ. ಮಕ್ಕಳ ಹಕ್ಕುಗಳ ಬಗ್ಗೆ ಮಕ್ಕಳಲ್ಲಿ ಹಾಗೂ ಪಾಲಕರಿಗೆ ಅರಿವು ಮೂಡಿಸಿ, ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರಲು ಎಲ್ಲರೂ ಶ್ರಮಿಸಬೇಕು. ಅಂದಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಮಹತ್ವ ಬರುತ್ತದೆ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆಗೆ ಎಲ್ಲರೂ ಪಣತೊಡಿ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜೀವ ಗುರುನಾಥ ಜೋಷಿ ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಎಸ್. ಕಂಪ್ಲಿ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಸೀನಿಯರ್ ಸಿವಿಲ್ ಜಡ್ಜ್ ಟಿ. ಶ್ರೀನಿವಾಸ ಅವರು ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸಿವಿಲ್ ಜಡ್ಜ್ ಹಾಗೂ ಜೆ.ಎಂ,ಎಫ್.ಸಿ ವಿಜಯ ಕುಮಾರ ಕನ್ನೂರು, ಜಿಲ್ಲಾ ಸರ್ಕಾರಿ ವಕೀಲ ಆಸಿಫ್ ಅಲಿ, ವಕೀಲರ ಸಂಘದ ಉಪಾಧ್ಯಕ್ಷ ಶೇಖರಪ್ಪ ಹೆಚ್. ಇಂಗಳದಾಳ, ಕಾರ್ಯದರ್ಶಿ ಕೊಟ್ರೇಶ ಯು.ಪೋಚಗುಂಡಿ, ಕಾರ್ಮಿಕ ಅಧಿಕಾರಿ ಶ್ಯಾಮರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀದೇವಿ ಗದ್ದನಕೇರಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ-ಯುನಿಸೆಫ್ ತರಬೇತಿ ಸಂಯೋಜಕರಾದ ಹರೀಶ ಜೋಗಿ ಅವರು “ಮಕ್ಕಳ ಹಕ್ಕು ಮತ್ತು ರಕ್ಷಣೆ” ಕುರಿತು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಅವರು “ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇದ ಮತ್ತು ನಿಯಂತ್ರಣ ಕಾಯ್ದೆ-2016” ಕುರಿತು ವಿಶೇಷ ಉಪನ್ಯಾಸ ನೀಡಿದರು. ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥ ನಗರದಲ್ಲಿ ಯಶಸ್ವಿಯಾಗಿ ಜರುಗಿತು.
ಹೀಗಾಗಿ ಲೇಖನಗಳು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕರಿಸಿ : ರಾಜೀವ ಗುರುನಾಥ ಜೋಷಿ
ಎಲ್ಲಾ ಲೇಖನಗಳು ಆಗಿದೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕರಿಸಿ : ರಾಜೀವ ಗುರುನಾಥ ಜೋಷಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕರಿಸಿ : ರಾಜೀವ ಗುರುನಾಥ ಜೋಷಿ ಲಿಂಕ್ ವಿಳಾಸ https://dekalungi.blogspot.com/2017/06/blog-post_79.html
0 Response to "ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕರಿಸಿ : ರಾಜೀವ ಗುರುನಾಥ ಜೋಷಿ"
ಕಾಮೆಂಟ್ ಪೋಸ್ಟ್ ಮಾಡಿ