ಶೀರ್ಷಿಕೆ : ಅಡುಗೆಯವರು, ಸಹಾಯಕರಿಗೆ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ
ಲಿಂಕ್ : ಅಡುಗೆಯವರು, ಸಹಾಯಕರಿಗೆ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ
ಅಡುಗೆಯವರು, ಸಹಾಯಕರಿಗೆ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ
ಕೊಪ್ಪಳ ಜೂ. 27 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು ಮತ್ತು ಅಡುಗೆ ಸಹಾಯಕರ ನೇರ ನೇಮಕಾತಿಗಾಗಿ ಏರ್ಪಡಿಸಲಾಗಿದ್ದ ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿದೆ.
ಅಡುಗೆಯವರು-41 ಮತ್ತು ಅಡುಗೆ ಸಹಾಯಕರ-92 ಹುದ್ದೆಗಳ ನೇರ ನೇಮಕಾತಿಗಾಗಿ ಈಗಾಗಲೆ ಅರ್ಹತೆಯ ಆಧಾರದಲ್ಲಿ 1:5 ರಂತೆ ದಾಖಲಾತಿ ಪರಿಶೀಲನೆ ಮಾಡಲಾಗಿದೆ. ದಾಖಲಾತಿ ಪರಿಶೀಲನೆಯಲ್ಲಿ ಅರ್ಹರಾದ ಅಭ್ಯರ್ಥಿಗಳಲ್ಲಿ 1:3 ರಂತೆ ಪಟ್ಟಿಯನ್ನು ತಯಾರಿಸಿದ್ದು, www.koppal.nic.in ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳು ವೆಬ್‍ಸೈಟ್‍ನಿಂದ ತಮ್ಮ ಪ್ರವೇಶ ಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಬೇಕು.
ಅಡುಗೆಯವರ ಹುದ್ದೆಗೆ ಅಡುಗೆ ತಯಾರಿಕೆಯ ಪ್ರಾಯೋಗಿಕ ಪರೀಕ್ಷೆಯನ್ನು ಜೂ. 28 ರ ಬದಲಿಗೆ ಜುಲೈ 03 ರಂದು ಬೆಳಿಗ್ಗೆ 09 ಗಂಟೆಗೆ ನಡೆಸಲಾಗುವುದು. ಅದೇ ರೀತಿ ಅಡುಗೆ ಸಹಾಯಕರ ಹುದ್ದೆಗೆ ಅಡುಗೆ ತಯಾರಿಕೆಯ ಪ್ರಾಯೋಗಿಕ ಪರೀಕ್ಷೆಯನ್ನು ಜೂ. 29 ರ ಬದಲಿಗೆ ಜುಲೈ 04 ರಂದು ಬೆಳಿಗ್ಗೆ 09 ಗಂಟೆಗೆ ಕೊಪ್ಪಳದ ಕವಲೂರು ನಗರ ಹರಿಪ್ರಿಯಾ ಎಕ್ಸ್‍ಟೆನ್ಷನ್ ಏರಿಯಾದಲ್ಲಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿನಿಲಯಗಳ ಸಂಕೀರ್ಣದಲ್ಲಿ ಏರ್ಪಡಿಸಲಾಗಿದೆ.
ಅಡುಗೆಯವರು ಮತ್ತು ಅಡುಗೆ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿ ಜು. 07 ರಂದು ಪ್ರಕಟಿಸಲಾಗುವುದು. ಆಕ್ಷೇಪಣೆಗಳಿಗೆ ಸಮಜಾಯಿಷಿ ನೀಡಿದ ನಂತರ ಜುಲೈ 22 ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ವಿಜಯಲಕ್ಷ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಅಡುಗೆಯವರು, ಸಹಾಯಕರಿಗೆ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ
ಎಲ್ಲಾ ಲೇಖನಗಳು ಆಗಿದೆ ಅಡುಗೆಯವರು, ಸಹಾಯಕರಿಗೆ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಡುಗೆಯವರು, ಸಹಾಯಕರಿಗೆ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ ಲಿಂಕ್ ವಿಳಾಸ https://dekalungi.blogspot.com/2017/06/blog-post_929.html
0 Response to "ಅಡುಗೆಯವರು, ಸಹಾಯಕರಿಗೆ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ"
ಕಾಮೆಂಟ್ ಪೋಸ್ಟ್ ಮಾಡಿ