ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ- ವೆಂಕಟರಾಜಾ

ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ- ವೆಂಕಟರಾಜಾ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ- ವೆಂಕಟರಾಜಾ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ- ವೆಂಕಟರಾಜಾ
ಲಿಂಕ್ : ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ- ವೆಂಕಟರಾಜಾ

ಓದಿ


ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ- ವೆಂಕಟರಾಜಾ

ಕೊಪ್ಪಳ, ಜೂ. 03 (ಕರ್ನಾಟಕ ವಾರ್ತೆ): ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ, ಸ್ವಚ್ಛತೆ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಭುತ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಗುಳೆ ಹೋಗುವುದನ್ನು ತಡೆಯಲು, ಕೂಲಿಕಾರರಿಗೆ ಸಮರ್ಪಕ ಉದ್ಯೋಗ ಕಲ್ಪಿಸುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ತಾ.ಪಂ. ಮತ್ತು ಗ್ರಾ.ಪಂ. ಅಧಿಕಾರಿಗಳಿಗೆ ತಾಕೀತು ಮಾಡಿದರು.

     ಗ್ರಾಮೀಣಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಗ್ರಾ.ಪಂ. ಪಿಡಿಒ, ಕಾರ್ಯದರ್ಶಿ, ತಾಂತ್ರಿಕ ಸಹಾಯಕರು ಮತ್ತು ಗಣಕಯಂತ್ರ ನಿರ್ವಾಹಕರಿಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
     ಗ್ರಾಮೀಣಾಭಿವೃದ್ಧಿ ಯೋಜನೆಗಳಾದ ಮಹಾತ್ಮಗಾಂಧಿ ನರೇಗಾ, ಸ್ವಚ್ಛ ಭಾರತ್ ಮಿಷನ್, ವಸತಿ ಯೋಜನೆ, ಪಂಚತಂತ್ರದ ಮಾಹಿತಿ ಅಳವಡಿಕೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ರಾಜೀವಗಾಂಧಿ ಚೈತನ್ಯ ಯೋಜನೆ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಗ್ರಾಮೀಣ ಪ್ರದೇಶಗಳ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.  ಕಳೆದೆರಡು ವರ್ಷಗಳಿಂದ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತೀವ್ರವಾಗಿ ಕಾಡಿದ್ದು, ಜನರಿಗೆ ಕುಡಿಯುವ ನೀರು ಮತ್ತು ಕೂಲಿಕಾರರಿಗೆ ಉದ್ಯೋಗ ಒದಗಿಸುವುದು ಸವಾಲಿನ ವಿಷಯವಾಗಿದೆ.  ಪ್ರಮುಖವಾಗಿ ಈ ಎರಡೂ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಮಾತ್ರ, ಗ್ರಾಮೀಣರ ಬದುಕು ಹಸನಾಗಲಿದೆ.  ಬರದ ಕಾರಣದಿಂದ ಶೌಚಾಲಯ ನಿರ್ಮಾಣದ ಪ್ರಗತಿಯಲ್ಲಿ ಕುಂಠಿತವಾಗಿದೆ.  ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಸ್ಥಳೀಯ ಸಮಸ್ಯೆಗಳಿದ್ದಲ್ಲಿ, ತಮ್ಮ ಗಮನಕ್ಕೆ ತಂದು, ಪರಿಹರಿಸಲು ಯತ್ನಿಸಬೇಕು.  ಈ ನಿಟ್ಟಿನಲ್ಲಿ ಇನ್ನುಮುಂದೆ ಪ್ರತಿ ಗುರುವಾರ ಆಯಾ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಒ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗುವುದು.  ಈ ಸಂದರ್ಭದಲ್ಲಿ ಯೋಜನೆಗಳ ಅನುಷ್ಠಾನದ ಪ್ರತಿಯೊಂದು ಅಂಶಗಳ ಕುರಿತು ಪರಿಶೀಲನೆ ನಡೆಸಲಾಗುವುದು.  ಪ್ರಸಕ್ತ ಆರ್ಥಿಕ ವರ್ಷ ಈಗಾಗಲೆ ಪ್ರಾರಂಭವಾಗಿದ್ದು, ಯಾವುದೇ ಯೋಜನೆಗಳ ಅನುಷ್ಠಾನವನ್ನು ಮುಂದೂಡದೆ, ಯೋಜನೆಗಳ ಅನುಷ್ಠಾನ ಕಾರ್ಯವನ್ನು ಈಗಿನಿಂದಲೆ ಪ್ರಾರಂಭಿಸಬೇಕು. ಉದ್ಯೋಗಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಉದ್ಯೋಗವನ್ನು ಕಲ್ಪಿಸಿ, ಮಾನವ ದಿನಗಳ ಸೃಜನೆಯನ್ನು ಹೆಚ್ಚಿಸಬೇಕು.  ಉದ್ಯೋಗಖಾತ್ರಿ ಯೋಜನೆಯಡಿ ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಿದ ನೋಂದಾಯಿತ ಕೂಲಿಕಾರರಿಗೆ ಸಮುದಾಯ ಮತ್ತು ವಯಕ್ತಿಕ ಕಾಮಗಾರಿಗಳಲ್ಲಿ ಕೆಲಸ ನೀಡಿದ್ದು, ಒಟ್ಟು 443475 ಮಾನವ ದಿನಗಳನ್ನು ಸೃಜಿಸಿ, ಮೇಂ ಅಂತ್ಯದವರೆಗೆ ಶೇ. 92 ರಷ್ಟು ಪ್ರಗತಿ ಸಾಧಿಸಲಾಗಿದೆ.  ವಿಶೇಷವಾಗಿ ಕೂಲಿಕಾರರು ಕೆಲಸಕ್ಕಾಗಿ ಬೇರೆ ಜಿಲ್ಲೆಗಳಿಗೆ ಗುಳೆ ಹೋಗದಂತೆ ತಡೆದು, ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಲ್ಲಿ ಸಮುದಾಯ ಮತ್ತು ವಯಕ್ತಿಕ ಕಾಮಗಾರಿಗಳಲ್ಲಿ ಕೆಲಸವನ್ನು ನೀಡಿ, ಸಕಾಲದಲ್ಲಿ ಕೂಲಿಕಾರರಿಗೆ E-FMS ಮುಖಾಂತರ ಅವರ ಬ್ಯಾಂಕ ಖಾತೆಗೆ ನೇರವಾಗಿ ಕೂಲಿ ಹಣ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಿ :
*-*********ಯುವ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮಹತ್ವಾಂಕ್ಷಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದು, ತರಬೇತಿಗಾಗಿ ನೋಂದಣಿ ಕಾರ್ಯ ಭರದಿಂದ ಸಾಗಿದೆ.  ಕೊಪ್ಪಳ ಜಿಲ್ಲೆಗೆ 12200 ಜನರ ನೋಂದಣಿಗೆ ಸರ್ಕಾರ ಗುರಿ ನಿಗದಿಪಡಿಸಿತ್ತು.  ಆದರೆ ಜಿಲ್ಲೆಯಲ್ಲಿ ಈವರೆಗೆ 14808 ಜನರು ನೋಂದಣಿ ಮಾಡಿಸುವ ಮೂಲಕ ಗುರಿ ಮೀರಿ ಸಾಧನೆ ಮಾಡಲಾಗಿದೆ.  ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಪ್ರಚಾರ ನೀಡಿ, ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
 ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ ಅವರು ಮಾತನಾಡಿ, ಜಿಲ್ಲೆಯಲ್ಲಿನ ತಾಲೂಕಾ ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಉತ್ತಮ ಅಧಿಕಾರಿಗಳಿದ್ದು, ಯಾವುದೇ ಯೋಜನೆಗಳ ಅನುಷ್ಠಾನದಲ್ಲಿ ಒಳ್ಳೆಯ ಸಾಧನೆ ತೋರುವ ಕಾರ್ಯಕ್ಷಮತೆ ಇದೆ.  ಹೀಗಾಗಿಯೇ ವಸತಿ ಯೋಜನೆಯ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆ ಇಡೀ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ.  ಇದು ಎಲ್ಲರ ಪ್ರಶಂಸೆಗೂ ಪಾತ್ರವಾಗಿದೆ.  ಇದೇ ರೀತಿ ಶೌಚಾಲಯ ನಿರ್ಮಾನ, ಉದ್ಯೋಗಖಾತ್ರಿ ಸೇರಿದಂತೆ ಎಲ್ಲ ಯೋಜನೆಗಳಲ್ಲೂ ಅಧಿಕಾರಿಗಳು ತಮ್ಮ ಕಾರ್ಯಕ್ಷಮತೆ ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.
 ಕಾರ್ಯಗಾರದಲ್ಲಿ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ತುಕಾರಾಂರಾವ್ ಬಿ.ವಿ ಸೇರಿದಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾ.ಪಂ. ಪಿಡಿಒ, ಕಾರ್ಯದರ್ಶಿ, ತಾಂತ್ರಿಕ ಸಹಾಯಕರು ಮತ್ತು ಗಣಕಯಂತ್ರ ನಿರ್ವಾಹಕರು ಭಾಗವಹಿಸಿದ್ದರು.  .  ವಸತಿ ಯೋಜನೆ ಅನುಷ್ಠಾನದಲ್ಲಿ ಉತ್ತಮ ಸಾಧನೆ ತೋರಲು ಕಾರಣರಾದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಒ ಗಳು ಹಾಗೂ ಗಣಕಯಂತ್ರ ನಿರ್ವಾಹಕರುಗಳಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು.


ಹೀಗಾಗಿ ಲೇಖನಗಳು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ- ವೆಂಕಟರಾಜಾ

ಎಲ್ಲಾ ಲೇಖನಗಳು ಆಗಿದೆ ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ- ವೆಂಕಟರಾಜಾ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ- ವೆಂಕಟರಾಜಾ ಲಿಂಕ್ ವಿಳಾಸ https://dekalungi.blogspot.com/2017/06/blog-post_94.html

Subscribe to receive free email updates:

0 Response to "ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ- ವೆಂಕಟರಾಜಾ"

ಕಾಮೆಂಟ್‌‌ ಪೋಸ್ಟ್‌ ಮಾಡಿ