NEWS AND PHOTO DATE: 16--06--2017

NEWS AND PHOTO DATE: 16--06--2017 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು NEWS AND PHOTO DATE: 16--06--2017, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : NEWS AND PHOTO DATE: 16--06--2017
ಲಿಂಕ್ : NEWS AND PHOTO DATE: 16--06--2017

ಓದಿ


NEWS AND PHOTO DATE: 16--06--2017

ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
*************************************************
ಕಲಬುರಗಿ,ಜೂ.16.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ರಸ್ತೆ ಮೂಲಕ ಹೈದ್ರಾಬಾದಿನಿಂದ ಕಲಬುರಗಿಗೆ ಜೂನ್ 17ರಂದು ಬೆಳಿಗ್ಗೆ 11 ಗಂಟೆಗೆ ಆಗಮಿಸುವರು.
ಅಂದು ಸಚಿವರು ಕಲಬುರಗಿಯಿಂದ ಸೇಡಂಗೆ ಪ್ರಯಾಣಿಸಿ, ಸೇಡಂ ಮತ್ತು ಕಲಬುರಗಿಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಜೂನ್ 18ರಂದು ಕಲಬುರಗಿ ಮತ್ತು ಸೇಡಂ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಅಂದು ರಾತ್ರಿ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ಮೂಢನಂಬಿಕೆಯಿಂದ ಹೆಣ್ಣಿನ ಹಕ್ಕಿಗೆ ಚ್ಯುತಿ
*****************************************
ಕಲಬುರಗಿ,ಜೂ.16.(ಕ.ವಾ.)-ಹೆಣ್ಣು ಮಕ್ಕಳ ಹಕ್ಕುಗಳು ಮೂಢನಂಬಿಕೆಯಿಂದ ಆಚರಣೆಗೆ ಬರುತ್ತಿಲ್ಲ. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳಿಗೆ ಹೆಚ್ಚಿನ ಕಾಳಜಿವಹಿಸಿ ಅವರ ಹಕ್ಕುಗಳನ್ನು ದೊರಕಿಸಿಕೊಡುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಉಜ್ವಲ್‍ಕುಮಾರ ಘೋಷ್ ತಿಳಿಸಿದರು.
ಅವರು ಶುಕ್ರವಾರ ಕಲಬುರಗಿ ತಾಲೂಕು ಪಂಚಾಯಿತಿ ವ್ಯಾಪ್ತಿಯ ಡೊಂಗರಗಾಂವ ಗ್ರಾಮ ಪಂಚಾಯಿತಿಯಲ್ಲಿ ಕೂಸು ಕಾರ್ಯಕ್ರಮದಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳಿಗೆ ಆರೋಗ್ಯ, ಶಿಕ್ಷಣ, ಪೌಷ್ಠಿಕ ಆಹಾರ, ಶೌಚಾಲಯದ ವ್ಯವಸ್ಥೆ ಕಲ್ಪಿಸುವುದರ ಮೂಲಕ ಒಳ್ಳೆಯ ರೀತಿಯಲ್ಲಿ ನೋಡಿಕೊಳ್ಳಬೇಕೆಂದರು.
ಗ್ರಾಮ ಮಟ್ಟದ ಅಧಿಕಾರಿಗಳು ಗ್ರಾಮಗಳಲ್ಲಿ ವಾಸವಾಗಿ ಗ್ರಾಮದ ಸಮಸ್ಯೆಗಳನ್ನು ಸಾರ್ವಜನಿಕರೊಂದಿಗೆ ಸಮಾಲೋಚಿಸಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಹೆಚ್ಚಿನ ಸಹಾಯ ಬೇಕಾದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಸಂಪರ್ಕಿಸಬೇಕು. ಡೊಂಗರಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷರು ಗ್ರಾಮದ ರಸ್ತೆ, ಚರಂಡಿ, ಮನೆ ನಿರ್ಮಾಣದ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಈ ಸಮಸ್ಯೆಯನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಯೋಜನೆ ರೂಪಿಸಿ ನಿವಾರಿಸಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ಮಹಿಳೆ ಮತ್ತು ಕಿಶೋರಿಯರಿಗಾಗಿ ವಿನೂತನವಾಗಿ “ಉಷಾ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಂದಾಯ, ಗ್ರಾಮೀಣ ಅಭಿವೃದ್ಧಿ, ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಒಳಪಡಿಸಿಕೊಂಡು ಕಾರ್ಯಕ್ರಮ ರೂಪಿಸಲಾಗುವುದು ಎಂದರು.
ಜಿಲ್ಲೆಯ 254 ಗ್ರಾಮ ಪಂಚಾಯಿತಿಗಳಿಗೆ ತಲಾ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ 40 ಗರ್ಭಿಣಿಯರಿಗಾಗಿ ಶೌಚಾಲಯಗಳನ್ನು ನಿರ್ಮಿಸಿಕೊಳ್ಳುವಂತೆ ಗುರಿ ನೀಡಲಾಗಿತ್ತು. ಒಂದೇ ವಾರದಲ್ಲಿ 40ಕ್ಕಿಂತ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿದ ಡೊಂಗರಗಾಂವ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಈ ಗ್ರಾಮ ಪಂಚಾಯಿತಿಯ ನೈರ್ಮಲ್ಯ ಕಾಪಾಡಿಕೊಳ್ಳುವಲ್ಲಿ ಸಹಕಾರಿಯಾಗಲು 6 ಲಕ್ಷ ರೂ.ಗಳ ಆಟೋ ಟಿಪ್ಪರ್ ಕೊಡುಗೆಯಾಗಿ ನೀಡಲಾಗುತ್ತಿದೆ ಎಂದರು.
ಗರ್ಭಿಣಿಯರಿರುವ ಮನೆಯಲ್ಲಿ ಗುಂಡಿ ತೆಗೆಯಬಾರದೆಂಬ ಮೂಢನಂಬಿಕೆ ಇದೆ. ಈ ಮೂಢನಂಬಿಕೆಯ ಮಾನಸಿಕತೆಯಿಂದ ಹೊರಬಂದು ಎಲ್ಲ ಗರ್ಭಿಣಿಯರಿಗೆ ಅನುಕೂಲ ಕಲ್ಪಿಸಲು ಮನೆಯಲ್ಲಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಬೇಕು. ಗರ್ಭಿಣಿಯರು ಸಮತೋಲನ ಪೌಷ್ಠಿಕ ಆಹಾರ ಸೇವಿಸಿದರೆ ಹುಟ್ಟುವ ಮಗುವು ಪೌಷ್ಠಿಕವಾಗಿದ್ದು ಆರೋಗ್ಯದಿಂದ ಕೂಡಿರುತ್ತದೆ. ಮಗು ಹುಟ್ಟಿದ ತಕ್ಷಣ ಎದೆಹಾಲು ಕಡ್ಡಾಯವಾಗಿ ಕುಡಿಸಬೇಕು ಎಂದು ತಿಳಿಸಿದರು.
ಡೊಂಗರಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಎನ್. ಗೊಳೇದ ಮಾತನಾಡಿ, ಡೊಂಗರಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡಾಗಳಲ್ಲಿ ಸುಮಾರು ಶೇ. 80 ರಷ್ಟು ಮನೆಗಳಿಗೆ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಮುಂದಿನ ಆರು ತಿಂಗಳಲ್ಲಿ ಎಲ್ಲ ತಾಂಡಾಗಳನ್ನು ಬಯಲು ಬಹಿರ್ದೆಸೆ ಮುಕ್ತ ತಾಂಡಾಗಳೆಂದು ಘೋಷಿಸಬಹುದಾಗಿದೆ. 2016-17ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನಗೊಳಿಸುವ ಮೂಲಕ ಕೂಲಿ ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸುವುದರ ಮೂಲಕ ಗಾಂಧಿ ಗ್ರಾಮ ಪುರಸ್ಕಾರ ಪಡೆಯಲಾಗಿದೆ ಎಂದು ತಿಳಿಸಿದ ಅವರು ಗ್ರಾಮದಲ್ಲಿರುವ ಪಶು ಆಸ್ಪತ್ರೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮಾಡುವುದರ ಜೊತೆಗೆ ರೈತರ ಹೊಲಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲು ನಮ್ಮ ಹೊಲ ನಮ್ಮ ರಸ್ತೆ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೆವಿಡ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೀರಮ್ಮ ಎನ್. ಜಂಗಮಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಶಿವರಾಜ ಸಜ್ಜನಶೆಟ್ಟಿ, ತಾಲೂಕು ವೈದ್ಯಾಧಿಕಾರಿ ಡಾ|| ರಾಜಕುಮಾರ, ಸ್ವಚ್ಛ ಭಾರತ ಕಾರ್ಯಕ್ರಮದ ನೋಡಲ್ ಅಧಿಕಾರಿ ಶಾಂತಲಾ ಬಿಲ್ಲವ, ಕಲಬುರಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಕಾಂತ ಜೇವಣಗಿ, ಡೊಂಗರಗಾಂವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆನಂದ ದೊಡಮನಿ, ಕಮಲಾಪುರ ಉಪ ತಹಶೀಲ್ದಾರ ಬಲರಾಮ ಕಟ್ಟಿಮನಿ, ಗಣ್ಯರಾದ ಜಯರಾಂ ಕುಲಕರ್ಣಿ, ನಾಗೇಂದ್ರಪ್ಪ ಅವರಾದಿ, ಬಸವರಾಜ ಪಾಟೀಲ, ಮಹೇಶ ಪಾಟೀಲ ಡೊಂಗರಗಾಂವ, ಸ್ವಚ್ಛ ಭಾರತ ಮಿಷನ್ ಸಂಯೋಜಕರಾದ ಗುರುಬಾಯಿ ಪಾಟೀಲ, ಅನ್ನಪೂರ್ಣ ಉಪ್ಪಿನ್, ಪಾಪರೆಡ್ಡಿ ಬಿ. ಸೇರಿಕಾರ, ಅನೀಲ ಬೆಡಗೆ, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮ ಮುಖ್ಯಸ್ಥರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ವೈಯಕ್ತಿಕ ಶೌಚಾಲಯವನ್ನು ನಿರ್ಮಿಸಿಕೊಂಡಿರುವ 40 ಗರ್ಭಿಣಿಯರಿಗೆ ಸೀಮಂತ ನೆರವೇರಿಸಲಾಯಿತು. ಬಾಣಂತಿಯರಿಗೆ ಮಡಿಲು ಕಿಟ್ ವಿತರಿಸಲಾಯಿತು. ಕೂಸು ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಿದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ: ನಿಷೇಧಾಜ್ಞೆ
***********************************************
ಕಲಬುರಗಿ,ಜೂ.16.(ಕ.ವಾ.)-ಕಲಬುರಗಿ ಜಿಲ್ಲೆಯಾದ್ಯಂತ ಜೂನ್ 22ರವರೆಗೆ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಳು ಒಟ್ಟು 50 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪ್ರಯುಕ್ತ 1973ರ ಸಿಆರ್.ಪಿ.ಸಿ. ಕಲಂ 144ರ ಅನ್ವಯ ಸದರಿ ದಿನಗಳಂದು ಕಲಬುರಗಿ ಜಿಲ್ಲೆಯಲ್ಲಿನ ಎಲ್ಲ 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಮಯದಲ್ಲಿ ಸಂಬಂಧಪಟ್ಟ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿಗಳು ಸದರಿ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಉಜ್ವಲ್‍ಕುಮಾರ ಘೋಷ್ ಅವರು ಆದೇಶ ಹೊರಡಿಸಿದ್ದಾರೆ.
ಅದೇ ರೀತಿ ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ-35(ಸಿ)ರಡಿ ಈ 50 ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಎಲ್ಲ ಜಿರಾಕ್ಸ್, ಪುಸ್ತಕ ಅಂಗಡಿ ಮುಂತಾದವನ್ನು ಮುಚ್ಚುವಂತೆ ಆದೇಶಿಸಿದ್ದಾರೆ. ಪರೀಕ್ಷಾ ಸಮಯದಲ್ಲಿ ಸಂಬಂಧಪಟ್ಟ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಬೇರೇ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಯಾವುದೇ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್ ಹಾಗೂ ವೈರಲೇಸ್ ಸೆಟ್‍ಗಳು ಸೇರಿದಂತೆ ಇತರ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಿದ್ದಾರೆ.

ತೋಟಗಾರಿಕೆ ತರಕಾರಿ ಬೆಳೆಗಳ ಬೇಸಾಯ ಕ್ರಮ
***********************************************
ಕಲಬುರಗಿ,ಜೂ.16.(ಕ.ವಾ.)-ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಕಲಬುರಗಿ ಜಿಲ್ಲೆಯ ರೈತರು ಮುಂಗಾರು ತೋಟಗಾರಿಕೆ ತರಕಾರಿ ಬೆಳೆಗಳಿಗೆ ಕೆಳಕಂಡ ಬೇಸಾಯ ಕ್ರಮ ಕೈಗೊಳ್ಳಬೇಕೆಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕ ಮಹ್ಮದ್ ಅಲಿ ತಿಳಿಸಿದ್ದಾರೆ.
ರೈತರು ಮುಂಗಾರಿಗೆ ಸೂಕ್ತವಾದ ತರಕಾರಿ ಬೆಳೆಗಳಾದ ಟೊಮ್ಯಾಟೋ, ಬದನೆ, ಮೆಣಸಿನಕಾಯಿ ಪ್ರತಿ ಕೆ.ಜಿ. ಬೀಜಕ್ಕೆ 50 ಗ್ರಾಂ. ಟ್ರೈಕೋಡರ್ಮಾ (ಸೀಡ್ ಪ್ರೊ) ಅಥವಾ 1.25 ಗ್ರಾಂ. ಥೈರಾನ್‍ನಿಂದ ಉಪಚರಿಸಿ ಪ್ರೊ ಟ್ರೇಗಳಲ್ಲಿ/ಸಸಿ ಮಡಿಗಳಲ್ಲಿ (1-2 ಮೀ. ಅಗಲ ಮತ್ತು 10 ಸೆ.ಮೀ. ಎತ್ತರ) ತಯಾರಿಸಬೇಕು.
ಸಸಿ ಮಡಿಯಿಂದ 45 ದಿನಗಳ ನಂತರ ಹೊಲದಲ್ಲಿ ಟೊಮ್ಯಾಟೋಗೆ (60óಘಿ60 ಸೆ.ಮೀ.) ಅಂತರದಲ್ಲಿ ಪ್ರತಿ ಎಕರೆಗೆ 10000 ಸಸಿಗಳು ಅಥವಾ 0.2 ಕೆ.ಜಿ. ಬೀಜ ಮತ್ತು (90ಘಿ60 ಸೆ.ಮೀ.) ಅಂತರದಲ್ಲಿ 6600 ಸಸಿಗಳು ಅಥವಾ 0.08 ಕೆ.ಜಿ. ಬೀಜ ನಾಟಿ ಮಾಡಬೇಕು.
ಬದನೆ (75ಘಿ60 ಸೆ.ಮೀ.) ಅಂತರಕ್ಕೆ ಪ್ರತಿ ಎಕರೆಗೆ 8000 ಸಸಿಗಳು ಅಥವಾ 0.2 ಕೆ.ಜಿ. ಬೀಜವನ್ನು ಹಾಗೂ ಮೆಣಸಿನಕಾಯಿ (45ಘಿ45 ಸೆ.ಮೀ.) ಅಂತರಕ್ಕೆ ಪ್ರತಿ ಎಕರೆಗೆ 17800 ಸಸಿಗಳು ಅಥವಾ 0.4 ಕೆ.ಜಿ. ಬೀಜವನ್ನು ನಾಟಿ ಮಾಡಬಹುದು ಹಾಗೂ ಬೆಂಡಿ, ಚವಳಿ, ಹೀರೆ, ಹಾಗಲಕಾಯಿ, ಸೋರೆಕಾಯಿ, ತುಪ್ಪದ ಹಿರೇಕಾಯಿ ಬೀಜಗಳನ್ನು ನೇರವಾಗಿ ಸಸಿ ಮಡಿಗಳಲ್ಲಿ ಬಿತ್ತಬೇಕು. ಬಳ್ಳಿಯ ಬೆಳೆಗಳಿಗೆ ಕೋಲಿನಿಂದ ಆಸರೆ ಕೊಡುವುದರಿಂದ ಒಳ್ಳೆಯ ಇಳುವರಿ ಪಡೆಯಬಹುದಾಗಿದೆ.
ಮಾವಿನ ಬೆಳೆಯಲ್ಲಿ ಹಳೆಯ ಗಿಡ ಮತ್ತು ನಿರುಪಯುಕ್ತ ಮರಗಳಲ್ಲಿ ಮೂರನೇ ಹಂತದ ರೆಂಬೆಗಳನ್ನು ಭೂಮಿಯ ಮೇಲ್ಮಟ್ಟದಿಂದ 5 ಮೀ. ಎತ್ತರದಲ್ಲಿ ಚಾಟನಿ ಮಾಡಿ ಕತ್ತರಿಸಿ ತೆಗೆಯಬೇಕು. ಕತ್ತರಿಸಿದ ಭಾಗವನ್ನು ಶೇ. 1.0 ರ ಬೋಡೋ ಮೊಲಾಮ/ಬ್ಲೈಟಾಕ್ಸ್‍ನಿಂದ ಉಪಚರಿಸಬೇಕು ಅಥವಾ ಲೇಪಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 19ರಂದು ಮಹಿಳಾ ನಿಲಯದ ನಿವಾಸಿಗೆ ಕಂಕಣಬಲ
*********************************************************
ಕಲಬುರಗಿ,ಜೂ.16.(ಕ.ವಾ.)-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದ ಕಲಬುರಗಿ ನಗರದ ಆಳಂದ ರಸ್ತೆಯಲ್ಲಿರುವ ರಾಜ್ಯ ಮಹಿಳಾ ನಿಲಯದ ನಿವಾಸಿ ಊರ್ಮಿಳಾಗೆ ಕಂಕಣಬಲ ಕೂಡಿ ಬಂದಿದೆ. ಊರ್ಮಿಳಾನ ವಿವಾಹವು ಶಶಿಕಲಾ ಮತ್ತು ದಿ. ವೀರುಪಾಕ್ಷಯ್ಯ ಮಠಪತಿ ಅವರ ದ್ವಿತೀಯ ಪುತ್ರ ಶಿವಲಿಂಗಯ್ಯಾ ಅವರೊಂದಿಗೆ 2017ರ ಜೂನ್ 19ರಂದು ಮಧ್ಯಾಹ್ನ 12-30 ನಿಮಿಷಕ್ಕೆ ಆಳಂದ ಕಾಲೋನಿಯ ರಾಜ್ಯ ಮಹಿಳಾ ನಿಲಯದಲ್ಲಿ ನಡೆಯಲಿದೆ ಎಂದು ನಿಲಯದ ಅಧೀಕ್ಷಕಿ ಶಿಲ್ಪಾ ಎಸ್. ಹಿರೇಮಠ ತಿಳಿಸಿದ್ದಾರೆ.

ಎನ್.ಎನ್. ತಾಂಡಾ: ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
*******************************************************************
ಕಲಬುರಗಿ,ಜೂ.16.(ಕ.ವಾ.)-ಆಳಂದ ತಾಲೂಕಿನ ಎನ್.ಎನ್. ತಾಂಡಾ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 2017-18ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಆಂಗ್ಲ-01 ಮತ್ತು ವಿಜ್ಞಾನ-01 ವಿಷಯಗಳ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಂಗ್ಲ ಭಾಷೆ ವಿಷಯದ ಶಿಕ್ಷಕರ ಹುದ್ದೆಗೆ ಬಿ.ಎ., ಬಿ.ಎಡ್. ಮತ್ತು ವಿಜ್ಞಾನ ವಿಷಯದ ಶಿಕ್ಷಕರ ಹುದ್ದೆಗೆ ಬಿ.ಎಸ್‍ಸಿ., ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು. ಪ್ರತಿ ಮಾಹೆ 6000 ರೂ. ಗೌರವಧನ ನೀಡಲಾಗುತ್ತದೆ. ಸ್ಥಳೀಯ ಶಿಕ್ಷಕರನ್ನು ಪ್ರಥಮಾಧ್ಯತೆ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ತಮ್ಮ ದೃಢೀಕೃತ ದಾಖಲಾತಿಗಳೊಂದಿಗೆ ಜೂನ್ 22ರೊಳಗಾಗಿ ಎನ್.ಎನ್. ತಾಂಡಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ವಸತಿ ಶಾಲೆಯನ್ನು ಹಾಗೂ ಪ್ರಾಚಾರ್ಯರ ಮೊಬೈಲ್ ಸಂಖ್ಯೆ 8747924789ನ್ನು ಸಂಪರ್ಕಿಸಲು ಕೋರಿದೆ.

ಆಳಂದ: ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
******************************************************
ಕಲಬುರಗಿ,ಜೂ.16.(ಕ.ವಾ.)-ಹೊಸದಾಗಿ ಪ್ರಾರಂಭವಾದ ಆಳಂದ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ 2017-18ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಕನ್ನಡ-01, ಆಂಗ್ಲ-01, ಹಿಂದಿ-01 ಮತ್ತು ಗಣಿತ-01 ವಿಷಯಗಳ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ, ಆಂಗ್ಲ, ಮತ್ತು ಹಿಂದಿ ವಿಷಯಗಳ ಶಿಕ್ಷಕರ ಹುದ್ದೆಗೆ ಬಿ.ಎ., ಬಿ.ಎಡ್. ಮತ್ತು ಗಣಿತ ವಿಷಯದ ಶಿಕ್ಷಕರ ಹುದ್ದೆಗೆ ಬಿ.ಎಸ್‍ಸಿ., ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು. ಪ್ರತಿ ಮಾಹೆ 6000 ರೂ. ಗೌರವಧನ ನೀಡಲಾಗುತ್ತದೆ. ಸ್ಥಳೀಯ ಶಿಕ್ಷಕರನ್ನು ಪ್ರಥಮಾಧ್ಯತೆ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ತಮ್ಮ ದೃಢೀಕೃತ ದಾಖಲಾತಿಗಳೊಂದಿಗೆ ಜೂನ್ 22ರೊಳಗಾಗಿ ಎನ್.ಎನ್.ತಾಂಡಾ ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ಅರ್ಜಿ ಸಲ್ಲಿಸಬೇಕು.
ಹೊಸದಾಗಿ ಪ್ರಾರಂಭವಾದ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯು 2017-18ನೇ ಸಾಲಿಗೆ ಎನ್.ಎನ್.ತಾಂಡಾ ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಎನ್.ಎನ್. ತಾಂಡಾ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಹಾಗೂ ಪ್ರಾಚಾರ್ಯರ ಮೊಬೈಲ್ ಸಂಖ್ಯೆ 8747924789ನ್ನು ಸಂಪರ್ಕಿಸಲು ಕೋರಿದೆ.

ಚಿತ್ತಾಪುರ: ಮೆಟ್ರಿಕ್ ನಂತರ ವಿದ್ಯಾರ್ಥಿ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ
**********************************************************************
ಕಲಬುರಗಿ,ಜೂ.16.(ಕ.ವಾ.)-ಅಲ್ಪಸಂಖಾತರ ಕಲ್ಯಾಣ ಇಲಾಖೆಯಿಂದ ಚಿತ್ತಾಪೂರ ತಾಲೂಕಿನಲ್ಲಿ ನಡೆಯುತ್ತಿರುವ ಕೆಳಕಂಡ ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಸತಿ ನಿಲಯಕ್ಕೆ 2017-18ನೇ ಸಾಲಿನ ಖಾಲಿ ಇರುವ ವಿದ್ಯಾರ್ಥಿಗಳ ಸ್ಥಾನಗಳ ಪ್ರವೇಶಕ್ಕಾಗಿ ಪಿಯುಸಿಯಿಂದ ಪದವಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಮತ್ತು ಪ್ರವರ್ಗ-1, 2ಎ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿಯನ್ನು ಚಿತ್ತಾಪುರ ತಾಲೂಕು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ ಅಥವಾ ಸಂಬಂಧಪಟ್ಟ ವಸತಿ ನಿಲಯಗಳ ಮೇಲ್ವಿಚಾರಕರಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಆಧಾರ ಕಾರ್ಡ್, ಬ್ಯಾಂಕ್ ಪಾಸ್‍ಬುಕ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಎಸ್.ಎಸ್.ಎಲ್.ಸಿ. ಮತ್ತು ಹಿಂದಿನ ತರಗತಿಯ ಅಂಕಪಟ್ಟಿ ದೃಢೀಕೃತ ಪ್ರತಿ, ಗ್ರಾಮ ಪಂಚಾಯತಿ ಮತ್ತು ಸ್ಥಳೀಯ ಸಂಸ್ಥೆಗಳಿಂದ ಪಡೆದ ವಾಸಸ್ಥಳ ಪ್ರಮಾಣಪತ್ರ, ವಿದ್ಯಾರ್ಥಿಯು ಅಂಗವಿಕಲರಿದ್ದಲ್ಲಿ ವೈದ್ಯಾಧಿಕಾರಿಗಳ ಪ್ರಮಾಣಪತ್ರಗಳ ಜಿರಾಕ್ಸ್ ಪ್ರತಿಯನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಚಿತ್ತಾಪುರ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯ ಅಥವಾ ಸಂಬಂಧಪಟ್ಟ ವಸತಿ ನಿಲಯಗಳಿಗೆ ಜುಲೈ 15ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಿತ್ತಾಪುರ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯವನ್ನು ಹಾಗೂ ಮೊಬೈಲ್ ಸಂಖ್ಯೆ 9019491939, 7019222242, 9845597679, 8861604752, 9740237554, 7899755427ಗಳನ್ನು ಸಂಪರ್ಕಿಸಲು ಕೋರಿದೆ.
ವಸತಿ ನಿಲಯಗಳ ವಿವರ ಇಂತಿವೆ: ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಚಿತ್ತಾಪುರ ಟೌನ್, ಶಹಾಬಾದ, ಕಾಳಗಿ ಮತ್ತು ಬಾಲಕರ ವಸತಿ ನಿಲಯ ಇಂದಿರಾನಗರ, ವಾಡಿ ಕ್ರಾಸ್, ಚಿತ್ತಾಪುರ ಟೌನ್, ಶಹಾಬಾದ, ವಾಡಿ (ಜಂ).

ಜೂನ್ 17ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
**************************************************
ಕಲಬುರಗಿ,ಜೂ.16.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ 11ಕೆ.ವಿ. ಮಹಾವೀರ ನಗರ ವ್ಯಾಪ್ತಿಯಲ್ಲಿ ಮೋಹನ ಲಾಜಿನಿಂದ ಅಂಡರ್ ಬ್ರಿಡ್ಜ್‍ವರೆಗಿನ ರಸ್ತೆ ಅಗಲೀಕರಣ ಹಾಗೂ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸ ಕೈಗೊಳ್ಳುವ ಪ್ರಯುಕ್ತ ಜೂನ್ 17ರಂದು ಬೆಳಗಿನ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ಫೀಡರುಗಳ ವ್ಯಾಪ್ತಿಯ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ. ವಿದ್ಯುತ್ ವ್ಯತ್ಯಯವಾಗುವ ಬಡಾವಣೆಗಳ ವಿವರ ಇಂತಿದೆ.
11 ಕೆ.ವಿ. ಮಹಾವೀರ ನಗರ: ಮಹಾವೀರ ನಗರ, ಶಾಸ್ತ್ರೀ ನಗರ, ಹನುಮಾನ ನಗರ, ಪಂಚಶೀಲ ನಗರ, ವೆಂಕಟೇಶ ನಗರ. ಕೆ.ಇ.ಬಿ. ಸ್ಟೋರ್, ಕೆ.ಇ.ಬಿ. ಕ್ವಾರ್ಟರ್ಸ್, ಪಿ.ಡಬ್ಲ್ಯೂ.ಡಿ. ಕಚೇರಿ, ಅಮಲ್‍ವಾಡಿ ಸ್ಟೇಶನ್ ಬಜಾರ್ ಅಪ್ಪರಲೇನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಅದರಂತೆ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗ-1ರಿಂದ 110 ಕೆ.ವಿ. ಮೋರಟಗಿ ಮಾರ್ಗದ ಕಾಮಗಾರಿ ಕೈಗೊಂಡಿರುವ ಪ್ರಯುಕ್ತ ಜೂನ್ 17ರಂದು 110 ಕೆ.ವಿ ಮೊರಟಗಿ, 110 ಕೆ.ವಿ ಅಫಜಲಪುರ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಎಲ್ಲ ಗ್ರಾಮಗಳಲ್ಲಿ ಅಂದು ಬೆಳಗಿನ 7 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸದರಿ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಹಾಗೂ ಇತರೆ ಸುತ್ತಮುತ್ತಲಿನ ಗ್ರಾಮಗಳ ಎಲ್ಲ ಗ್ರಾಹಕರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಜೆಸ್ಕಾಂ ವಿಭಾಗ-1ರ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಗ್ರಾಮಗಳ ವಿವರ ಇಂತಿದೆ. ಅಫಜಲಪುರ ನಗರ ಹಾಗೂ ಗ್ರಾಮೀಣ ಪ್ರದೇಶ, ಘತ್ತರಗಾ, ಶಿರವಾಳ, ಹಳಿಯಾಳ, ಬಳ್ಳೂರಗಿ, ಅಳಗಿ(ಬಿ), ಕುಲಾಲಿ, ಕಲ್ಲೂರ, ಚೌಡಾಪುರ, ದೇವಲಗಾಣಗಾಪುರ, ಬಂದರವಾಡ, ಧನ್ನೂರ, ಚಿಣಮಗೇರಾ, ರೇವೂರ, ಆತನೂರ, ಮಲ್ಲಾಬಾದ, ಬಡದಾಳ ಹಾಗೂ 110 ಕೆ.ವಿ ಕರಜಗಿ ಉಪ-ವಿತರಣಾ ಕೇಂದ್ರದ ಮೇಲೆ ಬರುವ ಕರಜಗಿ, ಮಣ್ಣೂರ, ಮಾಶ್ಯಾಳ, ಉಡಚÀಣ, ಗೌರ(ಬಿ), ಭೋಸಗಾ, ನಂದರಗಾ ಮತ್ತು ಹಸರಗುಂಡಗಿ ಗ್ರಾಮಗಳಿಗೆ ಹಾಗೂ ಸುತ್ತಮುತ್ತಲಿನ ಇತರೆ ಗ್ರಾಮಗಳಲ್ಲದೇ ಮೆ. ರೇಣುಕಾ ಶುಗರ್ಸ್ ಪ್ರೈವೆಟ್ ಲಿಮಿಟೆಡ್ ಘಟಕ.

ಜಿ.ಟಿ.ಟಿ.ಸಿ.ಯಲ್ಲಿ ಡಿಪ್ಲೋಮಾ ತರಬೇತಿಗಳಿಗೆ ಚಾಲನೆ
***************************************************
ಕಲಬುರಗಿ,ಜೂ.16.(ಕ.ವಾ.)-ಕಲಬುರಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ.) ದಲ್ಲಿ 2017-18 ನೇ ಸಾಲಿನ 24ನೇ ಬ್ಯಾಚೀನ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ 7ನೇ ಬ್ಯಾಚೀನ ಡಿಪ್ಲೋಮಾ ಇನ್ ಪ್ರೇಸಿಷನ್ ಮ್ಯಾನುಫ್ಯಾಕ್ಚರಿಂಗ್ ತರಬೇತಿಗಳ ಸಮಾರಂಭವನ್ನು ಶುಕ್ರವಾರ ಕಾಲೇಜಿನ ಪ್ರಾಂಶುಪಾಲ ಮೋಹನ ರಾಠೋಡ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಸದಸ್ಯೆ ಲತಾ ರವಿ ರಾಠೋಡ ಅವರು ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಮಹಾನಗರ ಪಾಲಿಕೆಯ ಆಯುಕ್ತ ಪಿ. ಸುನೀಲಕುಮಾರ ಅವರು 600 ಸಸಿಗಳನ್ನು ನೀಡಿರುತ್ತಾರೆ. ಜಯರಾಜ ಟಿ. ನರಗುಂದ ಅವರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ನೀಡುವ ತರಬೇತಿ ಹಾಗೂ ಉದ್ಯೋಗಾವಕಾಶದ ಕುರಿತು ವಿವರಿಸಿದರು.
ಕಾಲೇಜಿನ ಸಿಬ್ಬಂದಿಗಳಾದ ಮಾನಪ್ಪ ಮೇಟಿ, ಬಸಪ್ಪ ತಂಗನೋರ, ಗುರುರಾಜ ಕುಂಬಾರ, ಸುನೀಲಕುಮಾರ, ಪ್ರಶಾಂತ ಎಚ್, ಜಗದೇವಪ್ಪ, ಅಬ್ದುಲ್ ನಾಸೀರ, ರಾಜು ಪಾಟೀಲ, ಸಮೀರ, ವಿಧ್ಯಾಶ್ರೀ, ಸಂತೋಷಕುಮಾರ ಮಡಿವಾಳ, ಪ್ರಭುಲಿಂಗ ಪಾಟೀಲ, ನರೇಶ ರಾಠೋಡ ವಿಧ್ಯಾರ್ಥಿಗಳು, ಪಾಲಕರು ಹಾಗೂ ಪೋಷಕರು ಪಾಲ್ಗೊಂಡಿದ್ದರು. ಇರ್ಫಾನ ಅಹಮದ ವಂದಿಸಿದರು. ನಿಂಗರಾಜ ಯಂಕಂಚಿ ಕಾರ್ಯಕ್ರಮ ನಿರೂಪಿಸಿದರು.






ಹೀಗಾಗಿ ಲೇಖನಗಳು NEWS AND PHOTO DATE: 16--06--2017

ಎಲ್ಲಾ ಲೇಖನಗಳು ಆಗಿದೆ NEWS AND PHOTO DATE: 16--06--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS AND PHOTO DATE: 16--06--2017 ಲಿಂಕ್ ವಿಳಾಸ https://dekalungi.blogspot.com/2017/06/news-and-photo-date-16-06-2017.html

Subscribe to receive free email updates:

0 Response to "NEWS AND PHOTO DATE: 16--06--2017"

ಕಾಮೆಂಟ್‌‌ ಪೋಸ್ಟ್‌ ಮಾಡಿ